ಸುದ್ದಿ

ಮಂಗಳೂರು: ರಾಜೀವ್‌ ಗೌಡ ತಂಗಿದ್ದ ಫಾರ್ಮ್‌ ಹೌಸ್‌ನಲ್ಲಿ ಪೊಲೀಸ್‌ ಶೋಧ

ಪೌರಾಯುಕ್ತಗೆ ನಿಂದಿಸಿ ಮಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ಕಾಂಗ್ರಸ್‌ ಮುಖಂಡ ಮಂಗಳೂರು: ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡಗೆ ಬೆದರಿಕೆ ಹಾಕಿ ತಲೆಮರೆಸಿಕೊಂಡಿದ್ದ ಕಾಂಗ್ರೆಸ್‌ ಮುಖಂಡ ರಾಜೀವ್ ಗೌಡ ತಂಗಿದ್ದ ರೆಸಾರ್ಟ್, ಆತನ ಕಾರು ಪತ್ತೆಯಾಗಿದ್ದ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಗುರುವಾರ ಸಂಜೆ ಶಿಡ್ಲಘಟ್ಟದ ಪೊಲೀಸರು ಮಹಜರು ನಡೆಸಿದ್ದಾರೆ. ಗುರುವಾರ ಸಂಜೆ ಸುಮಾರು 5 ಗಂಟೆಯ ವೇಳೆಗೆ ಪೊಲೀಸ್ ವಾಹನದಲ್ಲಿ ಪಚ್ಚನಾಡಿಗೆ ಬಂದು ಒಂದು ಗಂಟೆಗೂ ಹೆಚ್ಚು ಕಾಲ ಮಹಜರು ನಡೆಸಿ ಆತ ವಾಸ್ತವ್ಯ ಇದ್ದುದಕ್ಕೆ ಪೂರಕ ಸಾಕ್ಷಿ […]

ಮಂಗಳೂರು: ರಾಜೀವ್‌ ಗೌಡ ತಂಗಿದ್ದ ಫಾರ್ಮ್‌ ಹೌಸ್‌ನಲ್ಲಿ ಪೊಲೀಸ್‌ ಶೋಧ Read More »

4 ಲ.ರೂ. ಲಂಚ ಸ್ವೀಕರಿಸಿ ಲೋಕಾಯುಕ್ತ ಬಲೆಗೆ ಬಿದ್ದ ಇನ್‌ಸ್ಪೆಕ್ಟರ್‌

ಬೆಂಗಳೂರು: ರಾಜ್ಯದ ಪೊಲೀಸರು ತಲೆತಗ್ಗಿಸುವಂಥ ಇನ್ನೊಂದು ಪ್ರಕರಣ ಸಂಭವಿಸಿದೆ. 4 ಲಕ್ಷ ರೂ. ಲಂಚ ಸ್ವೀಕರಿಸುವಾಗ ಇನ್ಸ್‌ಪೆಕ್ಟರ್‌ ಒಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್‌ಹ್ಯಾಂಡ್‌ ಆಗಿ ಹಿಡಿದಿದ್ದಾರೆ. ಬೆಂಗಳೂರಿನ ಕೆ.ಪಿ.ಅಗ್ರಹಾರ ಠಾಣೆ ಇನ್‌ಸ್ಪೆಕ್ಟರ್ ಗೋವಿಂದರಾಜು ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್‌ಪೆಕ್ಟರ್‌. ಲೋಕಾಯುಕ್ತ ಎಸ್.​ಪಿ ಶಿವಪ್ರಕಾಶ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದೆ. ಚೀಟಿ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಪ್ರಕರಣದಲ್ಲಿ ಸೇರಿಸುವುದಾಗಿ ಬೆದರಿಸಿ ಇನ್‌ಸ್ಪೆಕ್ಟರ್ ಗೋವಿಂದರಾಜು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 4 ಲಕ್ಷ ರೂ. ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದ ಇನ್‌ಸ್ಪೆಕ್ಟರ್

4 ಲ.ರೂ. ಲಂಚ ಸ್ವೀಕರಿಸಿ ಲೋಕಾಯುಕ್ತ ಬಲೆಗೆ ಬಿದ್ದ ಇನ್‌ಸ್ಪೆಕ್ಟರ್‌ Read More »

ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಯ 177 ಕೋ. ರೂ. ಆಸ್ತಿ ಮುಟ್ಟುಗೋಲು

ಆನ್‌ಲೈನ್‌ ಬೆಟ್ಟಿಂಗ್‌ ಮೂಲಕ 2,300 ಕೋ. ರೂ. ಅಕ್ರಮ ಎಸಗಿರುವ ಶಾಸಕ ಬೆಂಗಳೂರು: ಅಕ್ರಮ ಬೆಟ್ಟಿಂಗ್ ವ್ಯವಹಾರ ಮತ್ತು ಹಣ ವರ್ಗಾವಣೆ ಪ್ರಕರಣಗಳಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಗೆ ಸೇರಿದ 177 ಕೋ. ರೂ. ಮೌಲ್ಯದ ಆಸ್ತಿಯನ್ನುಜಾರಿ ನಿರ್ದೇಶನಾಲಯ (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ. ಈ ಹಿಂದೆ ದಾಳಿ ವೇಳೆ ಸಿಕ್ಕಿದ್ದ ಕೋಟ್ಯಾಂತರ ರೂಪಾಯಿ ನಗದು ಹಣ ಹಾಗೂ ಚಿನ್ನ, ಬೆಳ್ಳಿ ವಶಕ್ಕೆ ಪಡೆದುಕೊಂಡಿತ್ತು. ವಿರೇಂದ್ರ ಪಪ್ಪಿಗೆ ಸೇರಿದ ಕೃಷಿ ಜಮೀನು, ನಿವೇಶನ ಸೇರಿ ಇತರ

ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಯ 177 ಕೋ. ರೂ. ಆಸ್ತಿ ಮುಟ್ಟುಗೋಲು Read More »

ಸಂಸತ್ ಬಜೆಟ್ ಅಧಿವೇಶನ: ಪ್ರಧಾನಿ ಮೋದಿ ಭಾಷಣ

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ಚಾಲನೆ ದೊರೆತಿದೆ. ಪ್ರಧಾನಿ ಮೋದಿ ಅವರು ಇಂದು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ್ದು, ದೇಶದ ಅಭಿವೃದ್ಧಿಯ ದಿಕ್ಸೂಚಿಯನ್ನು ಬಿಚ್ಚಿಟ್ಟಿದ್ದಾರೆ. ನಮ್ಮ ಸರ್ಕಾರದ ಮೂಲಮಂತ್ರ ‘ಸುಧಾರಣೆ, ಕಾರ್ಯಕ್ಷಮತೆ ಮತ್ತು ಬದಲಾವಣೆ’. ಭಾರತ ಈಗ ವೇಗವಾಗಿ ಚಲಿಸುತ್ತಿರುವ ಸುಧಾರಣಾ ಎಕ್ಸ್‌ಪ್ರೆಸ್‌ನಲ್ಲಿದೆ ಎಂಬುದಾಗಿ ಭರವಸೆ ವ್ಯಕ್ತಪಡಿಸಿದ್ದಾರೆ. ರಾಷ್ಟ್ರಪತಿಗಳ ಭಾಷಣದ ಬಗೆಗೂ ಮಾತನಾಡಿರುವ ಅವರು, ಅವರದ್ದು ಕೇವಲ ಭಾಷಣವಲ್ಲ. 140 ಕೋಟಿ ಭಾರತೀಯರ ಆತ್ಮವಿಶ್ವಾಸ ಮತ್ತು ಯುವ ಶಕ್ತಿಯ ಆಕಾಂಕ್ಷೆಗಳ ಪ್ರತಿಬಿಂಬ ಎಂದು ಹೇಳಿದ್ದಾರೆ.

ಸಂಸತ್ ಬಜೆಟ್ ಅಧಿವೇಶನ: ಪ್ರಧಾನಿ ಮೋದಿ ಭಾಷಣ Read More »

ಇನ್ಸ್ಟಾಗ್ರಾಮ್ ಪ್ರೀತಿ: ಮದುವೆಗೆ ವಿರೋಧಿಸಿದ ಹೆತ್ತವರನ್ನೇ ಕೊಂದ ಪಾಪಿ ಮಗಳು

ಹೈದರಾಬಾದ್: ಇನ್‌ಸ್ಟಾ‌ಗ್ರಾಮಿನಲ್ಲಿ ಪರಿಚಯವಾಗಿ, ಪ್ರೀತಿಸಿದ ಹುಡುಗನನ್ನು ಮದುವೆಯಾಗಲು ಸಮ್ಮತಿಸದ ಹೆತ್ತವರ ಜೀವವನ್ನೇ ಪಾಪಿ ಪುತ್ರಿಯೊಬ್ಬಳು ತೆಗೆದ ಘಟನೆ ನಡೆದಿದೆ. ಆರೋಪಿಯನ್ನು ಸುರೇಖಾ ಎಂದು ಗುರುತಿಸಲಾಗಿದೆ. ನಕ್ಕಲಿ ದಶರಥಂ(59) ಮತ್ತು ಲಕ್ಷ್ಮೀ (54) ಎಂಬವರೇ ಮಗಳ ಕ್ರೂರತೆಗೆ ಬಲಿಯಾದ ನತದೃಷ್ಟ ಹೆತ್ತವರು. ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದ ಸುರೇಖಾ ಸೋಷಿಯಲ್ ಮೀಡಿಯಾದಲ್ಲಿ ಪರಿಚಯವಾದ ಒಬ್ಬ ಯುವಕನನ್ನು ಪ್ರೀತಿಸುತ್ತಿದ್ದಳು. ಅವನನ್ನು ಮದುವೆಯಾಗುವುದಾಗಿ ಮನೆಯಲ್ಲಿ ಹೇಳಿದ್ದು, ಈ ವೇಳೆ ಹೆತ್ತವರು ವಿರೋಧಿಸಿದ್ದಾರೆ. ಇದರಿಂದ ಕೋಪಗೊಂಡ ಆಕೆ ಮೋಸದಿಂದ ಅವರಿಗೆ ಹೆಚ್ಚಿನ ಡೋಸೇಜ್

ಇನ್ಸ್ಟಾಗ್ರಾಮ್ ಪ್ರೀತಿ: ಮದುವೆಗೆ ವಿರೋಧಿಸಿದ ಹೆತ್ತವರನ್ನೇ ಕೊಂದ ಪಾಪಿ ಮಗಳು Read More »

ಪಂಚಭೂತಗಳಲ್ಲಿ ಲೀನರಾದ ರಾಜಕೀಯ ಧುರೀಣ ಅಜಿತ್ ಪವಾರ್

ಮುಂಬೈ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ‌ವಿಮಾನ ಅವಘಡದಲ್ಲಿ ಮೃತಪಟ್ಟ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಇಂದು ನೂರಾರು ಗಣ್ಯರ ಸಮ್ಮುಖದಲ್ಲಿ, ಸಕಲ ಸರ್ಕಾರಿ ಗೌರವದ ಜೊತೆಗೆ ನಡೆಯಿತು. ಅಜಿತ್ ಪವಾರ್ ಅವರ ಪಾರ್ಥಿವ ಶರೀರಕ್ಕೆ ರಾಷ್ಟ್ರಧ್ವಜ ಹೊದಿಸಲಾಗಿತ್ತು. ಮೃತದೇಹವನ್ನು ಅವರ ಹುಟ್ಟೂರಾದ ಕಟೇವಾಡಿಯಿಂದ ಬಾರಾಮತಿಗೆ ಅಂತಿಮ ವಿಧಿವಿಧಾನಗಳನ್ನು ನೆರವೇರಿಸುವ ಸಲುವಾಗಿ ತರಲಾಗಿತ್ತು. ಅವರ ಚಿತೆಗೆ ಪುತ್ರರಾದ ಪಾರ್ಥ್ ಪವಾರ್ ಮತ್ತು ಜೇ ಪವಾರ್ ಅವರು ಅಗ್ನಿಸ್ಪರ್ಶ ಮಾಡಿದರು. ಈ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ

ಪಂಚಭೂತಗಳಲ್ಲಿ ಲೀನರಾದ ರಾಜಕೀಯ ಧುರೀಣ ಅಜಿತ್ ಪವಾರ್ Read More »

ಸರ್ಕಾರಿ ವೈದ್ಯರುಗಳು ಖಾಸಗಿ ಸೇವೆಯಲ್ಲಿ ಒಳರೋಗಿಗಳಿಗೆ ಚಿಕಿತ್ಸೆ ನೀಡುವಂತಿಲ್ಲ

ಬೆಂಗಳೂರು: ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರಿ ವೈದ್ಯರುಗಳು ಒಳರೋಗಿಗಳಿಗೆ ‌ಚಿಕಿತ್ಸೆ ನೀಡುವುದನ್ನು ನಿಷೇಧಿಸುವಂತಹ ಮಹತ್ವದ ನಿರ್ಧಾರವನ್ನು ಕರ್ನಾಟಕ ಸರ್ಕಾರ ತೆಗೆದುಕೊಂಡಿದೆ. ಈ ಬಗ್ಗೆ ಸಚಿವ ದಿನೇಶ್ ಗುಂಡೂರಾವ್ ಅವರು ವಿಧಾನಸಭೆಯಲ್ಲಿ ಮಾಹಿತಿ ನೀಡಿದ್ದು, ಸರ್ಕಾರದ ಅದೇಶದ ಪ್ರಕಾರ ಪ್ರಸ್ತುತ ಸರ್ಕಾರಿ ವೈದ್ಯರು ತಮ್ಮ ಕೆಲಸದ ಅವಧಿ ಮುಗಿದ ಬಳಿಕ ಖಾಸಗಿಯಾಗಿಯೂ ಸೇವೆ ಸಲ್ಲಿಸುವ ಅವಕಾಶ ಇದೆ. ಆದರೆ ಈಗ ಈ‌ ಆದೇಶವನ್ನು ಮಾರ್ಪಾಡು ಮಾಡಲಾಗಿದ್ದು, ಸರ್ಕಾರಿ ವೈದ್ಯರು ಕೇವಲ ಹೊರ ರೋಗಿಗಳಿಗೆ ಮಾತ್ರವೇ ಚಿಕಿತ್ಸೆ ನೀಡಬಹುದು ಎಂದು ಹೇಳಲಾಗಿದೆ.

ಸರ್ಕಾರಿ ವೈದ್ಯರುಗಳು ಖಾಸಗಿ ಸೇವೆಯಲ್ಲಿ ಒಳರೋಗಿಗಳಿಗೆ ಚಿಕಿತ್ಸೆ ನೀಡುವಂತಿಲ್ಲ Read More »

ಇಲಾಖೆ ವರ್ಗಾವಣೆಯಲ್ಲಿ ಯತೀಂದ್ರ ಕೈವಾಡ : ಬೇಸತ್ತು ರಾಜೀನಾಮೆಗೆ ಮುಂದಾಗಿದ್ದ ಸಚಿವ

ಮುಖ್ಯಮಂತ್ರಿ ಮಗನ ಕಾರುಬಾರಿನಿಂದ ಪ್ರಭಾವಿ ಸಚಿವರೇ ಕಂಗಾಲಾಗಿದ್ದ ಮಾಹಿತಿ ಬಹಿರಂಗ ಬೆಂಗಳೂರು : ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪಕ್ಕೆ ಬೇಸತ್ತು ಸಚಿವ ಕೆ.ಜೆ ಜಾರ್ಜ್ ರಾಜೀನಾಮೆ ನೀಡಲು ಮುಂದಾಗಿದ್ದರು ಎಂಬ ಮಾಹಿತಿ ಇದೀಗ ಬಹಿರಂಗವಾಗಿ ಸಿದ್ದರಾಮಯ್ಯನವರಿಗೆ ಇನ್ನೊಂದು ಸಂಕಷ್ಟ ಎದುರಾಗಿದೆ. ವಿಸೆಷ ಅಧಿವೇಶನ ನಡೆಯುತ್ತಿರುವಾಗಲೇ ಕಂಗ್ರೆಸ್‌ ತಾನಾಗಿ ವಿಪಕ್ಷಕ್ಕೆ ದಾಳಿ ಮಾಡಲು ಹೊಸ ಅಸ್ತ್ರವೊಂದನ್ನು ಕೊಟ್ಟಂತಾಗಿದೆ. ಈ ವಿಚಾರ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇಂಧನ ಇಲಾಖೆಯಲ್ಲಿ ಯತೀಂದ್ರ ಹಸ್ತಕ್ಷೇಪದಿಂದ

ಇಲಾಖೆ ವರ್ಗಾವಣೆಯಲ್ಲಿ ಯತೀಂದ್ರ ಕೈವಾಡ : ಬೇಸತ್ತು ರಾಜೀನಾಮೆಗೆ ಮುಂದಾಗಿದ್ದ ಸಚಿವ Read More »

ಅಸಭ್ಯ ವೀಡಿಯೊ ವೈರಲ್‌ : ಕಾಲೇಜು ವಿದ್ಯಾರ್ಥಿ ಬಂಧನ

ಬೆಂಗಳೂರು: ಕೊಡಗು ಜಿಲ್ಲೆಯಲ್ಲಿ ಯುವಕನೊಬ್ಬ ಹಲವು ಯುವತಿಯರೊಂದಿಗೆ ಅಸಭ್ಯವಾಗಿ ವರ್ತಿಸಿ, ರಾಸಲೀಲೆ ನಡೆಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಭಾರಿ ಸಂಚಲನ ಮೂಡಿಸಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿ ತಾಲೂಕಿನ ನಾಪೋಕ್ಲು ಗ್ರಾಮದ ಮೊಹಮ್ಮದ್ ಸವದ್ ಎಂಬ ಯುವಕನನ್ನು ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮೊಹಮ್ಮದ್ ಸವದ್ ಬೆಂಗಳೂರಿನ ಸಂಪಿಗೆಹಳ್ಳಿಯ ಯೇನೆಪೊಯ ಕಾಲೇಜಿನಲ್ಲಿ ಬಿಬಿಎ ವಿದ್ಯಾರ್ಥಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಆರೋಪಿಯು ವಿವಿಧ ಯುವತಿಯರೊಂದಿಗೆ ಚಕ್ಕಂದವಾಡಿ ಖಾಸಗಿ ಕ್ಷಣಗಳನ್ನು ಸ್ವತಃ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾನೆ ಎನ್ನಲಾಗಿದೆ.

ಅಸಭ್ಯ ವೀಡಿಯೊ ವೈರಲ್‌ : ಕಾಲೇಜು ವಿದ್ಯಾರ್ಥಿ ಬಂಧನ Read More »

ಅಜಿತ್‌ ಪವಾರ್‌ ಅಂತ್ಯಕ್ರಿಯೆ ಇಂದು : ಮೋದಿ, ಅಮಿತ್‌ ಶಾ ಆಗಮಿಸುವ ಸಾಧ್ಯತೆ

ವಿಮಾನ ಅವಘಡದಲ್ಲಿ ದುರ್ಮರಣವನ್ನಪ್ಪಿರುವ ಮಹಾರಾಷ್ಟ್ರದ ಡಿಸಿಎಂ ಮುಂಬೈ: ವಿಮಾನ ಅವಘಡದಲ್ಲಿ ದುರ್ಮರಣವನ್ನಪ್ಪಿರುವ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಅವರ ಅಂತ್ಯಕ್ರಿಯೆ ಇಂದು ಬಾರಾಮತಿಯಲ್ಲಿ ನೆರವೇರಲಿದೆ. ಗುರುವಾರ ಬೆಳಗ್ಗೆ 11 ಗಂಟೆಗೆ ಪವಾರ್ ಕುಟುಂಬ ಸ್ಥಾಪಿಸಿದ ಶಿಕ್ಷಣ ಸಂಸ್ಥೆಯಾದ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ಎನ್‌ಸಿಪಿ ಅಧ್ಯಕ್ಷ ಅಜಿತ್ ಪವಾರ್ ಅಂತ್ಯಕ್ರಿಯೆಯನ್ನು ಪೂರ್ಣ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುವುದು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜಕೀಯ ರಂಗದ ನಾಯಕರು ಮತ್ತು ಎಲ್ಲ ವರ್ಗದ ಜನರು ಅಂತ್ಯಕ್ರಿಯೆಯಲ್ಲಿ

ಅಜಿತ್‌ ಪವಾರ್‌ ಅಂತ್ಯಕ್ರಿಯೆ ಇಂದು : ಮೋದಿ, ಅಮಿತ್‌ ಶಾ ಆಗಮಿಸುವ ಸಾಧ್ಯತೆ Read More »

error: Content is protected !!
Scroll to Top