ಸುದ್ದಿ

ಧರ್ಮಸ್ಥಳದಲ್ಲಿ ತಿರುಗಾಡುತ್ತಿದ್ದ ಅನ್ಯಕೋಮಿನ ಜೋಡಿ | ಪೊಲೀಸರಿಂದ ವಿಚಾರಣೆ

ಧರ್ಮಸ್ಥಳ: ಅನ್ಯ ಕೋಮಿನ ಜೋಡಿಯೊಂದು ಧರ್ಮಸ್ಥಳದಲ್ಲಿ ತಿರುಗಾಡುತ್ತಿದ್ದಾಗ ಸಾರ್ವಜನಿಕರು ಹಿಡಿದು ಪೊಲೀಸರಿಗೆ ಮಾಹಿತಿ ನೀಡಿದ ಘಟನೆ ಮಂಗಳವಾರ ನಡೆದಿದೆ. ಬೆಂಗಳೂರು ಮೂಲದ ಅನ್ಯಕೋಮಿನ ಯುವಕ ಹಾಗೂ ಹಿಂದೂ ಯುವತಿ ಎಂದು ಗೊತ್ತಾಗಿದ್ದು, ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಯುವಕ-ಯುವತಿಯನ್ನು ಠಾಣೆಗೆ ಕರೆದೊಯ್ದಿದ್ದು, ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಧರ್ಮಸ್ಥಳದಲ್ಲಿ ತಿರುಗಾಡುತ್ತಿದ್ದ ಅನ್ಯಕೋಮಿನ ಜೋಡಿ | ಪೊಲೀಸರಿಂದ ವಿಚಾರಣೆ Read More »

ಮಗ ಆತ್ಮಹತ್ಯೆ ಮಾಡಿಕೊಂಡ 13ನೇ ದಿನಕ್ಕೆ ತಂದೆಯೂ ಆತ್ಮಹತ್ಯೆ !

ಬೆಳ್ತಂಗಡಿ: ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ನೇಣು ಬಿಗಿದು ಆತ್ಚಹತ್ಯೆ ಮಾಡಿಕೊಂಡ ಘಟನೆ ಉಜಿರೆಯ ಪೆರ್ಲದಲ್ಲಿ ನಡೆದಿದೆ. ಉಜಿರೆ ಗ್ರಾಮದ ಪೆರ್ಲ ನಿವಾಸಿ ಯೋಗೀಶ್ ಪೂಜಾರಿ (41) ಆತ್ಮಹತ್ಯೆ ಮಾಡಿಕೊಂಡವರು. ಯೋಗೀಶ್ ಪೂಜಾರಿ ಅವರ ಮಗ ಯಶ್ಚಿತ್ (14) ಕ್ಷುಲ್ಲಕ ವಿಚಾರದಲ್ಲಿ 13 ದಿನಗಳ ಹಿಂದೆ ತಾಯಿಯ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಜ.14 ರಂದು ಆತನ ಉತ್ತರಕ್ರಿಯೆ ನಡೆದಿತ್ತು. ಇದೀಗ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದು, ಮಗನ ಆತ್ಮಹತ್ಯೆಯಿಂದ ನೊಂದು ತಂದೆಯೂ

ಮಗ ಆತ್ಮಹತ್ಯೆ ಮಾಡಿಕೊಂಡ 13ನೇ ದಿನಕ್ಕೆ ತಂದೆಯೂ ಆತ್ಮಹತ್ಯೆ ! Read More »

ಕಟ್ಟೆ ಇಲ್ಲದ ಬಾವಿಗೆ ಬಿದ್ದು ಬಾಲಕ ಮೃತ್ಯು ! | ಪಕ್ಕದ ಮನೆಗೆ ಆಡಲು ಹೊದಾಗ ನಡೆಯಿತು ಘಟನೆ

ಬೆಳ್ತಂಗಡಿ: ಪಕ್ಕದ ಮನೆಗೆ ಹೋದ ಬಾಲಕ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿಯ ಪಣಕಜೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಸೋಣಂದೂರು ಗ್ರಾಮದ ಪಣಕಜೆ ಮೊಹಮ್ಮದ್ ಹನೀಫ್ ಎಂಬವರ ಪುತ್ರ ಮಹಮ್ಮದ್ ಅನಾಸ್‍ (7) ಮೃತಪಟ್ಟ ಬಾಲಕ. ಎರಡನೇ ತರಗತಿ ವಿದ್ಯಾರ್ಥಿಯಾಗಿರುವ ಅನಾಸ್ ಇಂದು ಪಕ್ಕದ ಮನೆಗೆ ಆಟವಾಡಲು ತೆರಳಿದ್ದ, ಅಲ್ಲಿರುವ ಕಟ್ಟೆ ಇಲ್ಲದ ಬಾವಿಗೆ ಆಕಸ್ಮಿಕವಾಗಿ ಬಿದ್ದಿದ್ದಾನೆ. ಮನೆಯವರು ತಕ್ಷಣ ಮಗುವನ್ನು ಬಾವಿಯಿಂದ ಮೇಲೆತ್ತಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆತಂದಿದ್ದಾರೆ. ಆದಾಗಲೇ ಬಾಲಕ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಕಟ್ಟೆ ಇಲ್ಲದ ಬಾವಿಗೆ ಬಿದ್ದು ಬಾಲಕ ಮೃತ್ಯು ! | ಪಕ್ಕದ ಮನೆಗೆ ಆಡಲು ಹೊದಾಗ ನಡೆಯಿತು ಘಟನೆ Read More »

ಬಂಟ್ವಾಳ ಶಾಸಕರಿಗೆ ಮಂಗಳೂರಿನಲ್ಲಿ ಕಾರು ಡಿಕ್ಕಿ -ಶಾಸಕರು ಪವಾಡಸದೃಶ ಪಾರು – ಚಾಲಕ ಪೊಲೀಸ್ ವಶಕ್ಕೆ

ವಿಟ್ಲ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರಿಗೆ ಕಾರೊಂದು ಡಿಕ್ಕಿಯಾಗಿ ಪರಾರಿಯಾದ ಘಟನೆ ಜ.14ರಂದು ಮಧ್ಯಾಹ್ನ ಮಂಗಳೂರು ಹೊರವಲಯದ ತೆಂಕ ಎಡಪದವು ಎಂಬಲ್ಲಿ ನಡೆದಿದೆ.ಘಟನೆಯಿಂದಾಗಿ ಶಾಸಕರು ಪವಾಡಸದೃಶವಾಗಿ ಅಪಾಯದಿಂದ ಪಾರಾಗಿದ್ದಾರೆ ಎಂದು ಮಾಹಿತಿ ಲಭಿಸಿದೆ. ಶಾಸಕ ರಾಜೇಶ್ ನಾಯ್ಕ್ ಅವರು ಜ.14ರಂದು ಸಂಕ್ರಮಣದ ಅಂಗವಾಗಿ ಎಡಪದವು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪೂಜೆ ಮುಗಿಸಿ ವಾಪಾಸು ತನ್ನ ಕಾರಿನತ್ತ ನಡೆದುಕೊಂಡು ಬರುತ್ತಿರುವ ವೇಳೆ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.ಮೂಡಬಿದಿರೆ ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರೊಂದು ಶಾಸಕರು ಕಾರಿನತ್ತ ಹೆಜ್ಜೆ

ಬಂಟ್ವಾಳ ಶಾಸಕರಿಗೆ ಮಂಗಳೂರಿನಲ್ಲಿ ಕಾರು ಡಿಕ್ಕಿ -ಶಾಸಕರು ಪವಾಡಸದೃಶ ಪಾರು – ಚಾಲಕ ಪೊಲೀಸ್ ವಶಕ್ಕೆ Read More »

ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಲಾರಿ ಪ್ರಪಾತಕ್ಕೆ !

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಲಾರಿಯೊಂದು ಪ್ರಪಾತಕ್ಕೆ ಬಿದ್ದಿದ್ದು, ಚಾಲಕ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂಡಿಗೆರೆಯಿಂದ ಮಂಗಳೂರಿಗೆ ಹೋಗುತ್ತಿದ್ದ ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಉರುಳಿದೆ. ಟಿಪ್ಪರ್ ಉರುಳಿ ಬಿಳುತ್ತಿದ್ದಂತೆ ಚಾಲಕ ಲಾರಿಯಿಂದ ಜಿಗಿದಿದ್ದಾನೆ ಎನ್ನಲಾಗಿದೆ. ಬಣಕಲ್ ಪೊಲೀಸರು ಹಾಗೂ ಸ್ಥಳೀಯರು ಪ್ರಪಾತಕ್ಕೆ ಇಳಿದು ಲಾರಿಗಾಗಿ ಶೋಧ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಲಾರಿ ಪ್ರಪಾತಕ್ಕೆ ! Read More »

ನಾಳೆ ಭಾರತದ ಅತಿ ಉದ್ದದ ಸಮುದ್ರ ಸೇತು ಲೋಕಾರ್ಪಣೆ | ಪ್ರಧಾನಿ ಉದ್ಘಾಟಿಸಲಿರುವ ಈ ಅಟಲ್ ಸೇತು ಹಲವು ವೈಶಿಷ್ಟ್ಯಗಳ ಕೇಂದ್ರ ಬಿಂದು

ಭಾರತದ ಅತಿ ಉದ್ದದ  ಸಮುದ್ರ ಸೇತುವೆ (ಟ್ರಾನ್ಸ್ ಹಾರ್ಬರ್ ಲಿಂಕ್) ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಜ.12ರಂದು ಉದ್ಘಾಟಿಸಲಿದ್ದಾರೆ. ಈ ಸೇತುವೆ ಮಾರ್ಗಕ್ಕೆ ‘ಅಟಲ್ ಸೇತು’ ಎಂದು ನಾಮಕರಣ ಮಾಡಲಾಗಿದೆ. ಭಾರತದಲ್ಲಿ ನಿರ್ಮಿಸಲಾದ ಅತಿ ಉದ್ದದ ಸಮುದ್ರ ಸೇತುವೆ ಇದಾಗಿದ್ದು, ಸಮುದ್ರದ ಮೇಲೆ 16.5 ಕಿ.ಮೀ. ಮತ್ತು ನೆಲದ ಮೇಲೆ 5.5 ಕಿ.ಮೀ. ಉದ್ದವಿದ್ದು ಒಟ್ಟು 21.8 ಕಿ.ಮೀ. ಉದ್ದ ಹೊಂದಿದೆ. ಈ ಸೇತುವೆ ಮುಂಬೈನ ಸೆವ್ರಿಯಿಂದ ಆರಂಭಗೊಂಡು ರಾಯಗಡ ಜಿಲ್ಲೆಯ ಉರಾನ್ ತಾಲೂಕಿನಲ್ಲಿ ಕೊನೆಗೊಳ್ಳುತ್ತದೆ. ಸೇತುವೆ

ನಾಳೆ ಭಾರತದ ಅತಿ ಉದ್ದದ ಸಮುದ್ರ ಸೇತು ಲೋಕಾರ್ಪಣೆ | ಪ್ರಧಾನಿ ಉದ್ಘಾಟಿಸಲಿರುವ ಈ ಅಟಲ್ ಸೇತು ಹಲವು ವೈಶಿಷ್ಟ್ಯಗಳ ಕೇಂದ್ರ ಬಿಂದು Read More »

ಅಯೋಧ್ಯೆ ಕಾರ್ಯಕ್ರಮದ ಬ್ಯಾನರ್ ಹರಿದ ಕಿಡಿಗೇಡಿಗಳು !

ಸುಳ್ಯ: ಕಳೆದ ವಾರವಷ್ಟೇ ಸದ್ದು ಮಾಡಿದ ಬ್ಯಾನ್ ಹರಿದ ವಿಚಾರ ಮಾಸುವ ಮುನ್ನವೇ ಇದೀಗ ಮತ್ತೊಂದು ಅಯೋಧ್ಯೆ ಕಾರ್ಯಕ್ರಮಕ್ಕೆ ಶುಭಕೋರಿ ಹಾಕಿದ ಬ್ಯಾನರನ್ನು ಕಿಡಿಗೇಡಿಗಳು ಹರಿದು ಹಾಕಿದ ಘಟನೆ ಸುಳ್ಯ ತಾಲೂಕಿನ ಅಡ್ಕಾರು ಬಳಿ ಗುರುವಾರ ನಡೆದಿದೆ. ಅಡ್ಕಾರು ಕಾರ್ತಿಕೇಯ ಯುವ ಸೇವಾ ಸಮಿತಿಯವರು ಜ.22 ರಂದು ಅಯೋಧ್ಯೆ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಶುಭಕೋರಿ ಬ್ಯಾನರ್ ಅಳವಡಿಸಿದ್ದರು. ಬುಧವಾರ ರಾತ್ರಿ ಯಾರೋ ಕಿಡಿಗೇಡಿಗಳು ಬ್ಯಾನರ್‍ ನ ಮಧ್ಯಭಾಗವನ್ನು ಹರಿದು ಹಾಕಿದ್ದಾರೆ. ಇದೀಗ ಈ ಘಟನೆಯಿಂದ ಆಕ್ರೋಶ

ಅಯೋಧ್ಯೆ ಕಾರ್ಯಕ್ರಮದ ಬ್ಯಾನರ್ ಹರಿದ ಕಿಡಿಗೇಡಿಗಳು ! Read More »

ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿದ ದರೋಡೆಕೋರರು | ಲಕ್ಷಾಂತರ ರೂ. ನಗ-ನಗದು ದೋಚಿ ಪರಾರಿ!!

ಬಂಟ್ವಾಳ: ಬೆಳ್ಳಂಬೆಳಗ್ಗೆ ಮನೆಯೊಂದಕ್ಕೆ ನುಗ್ಗಿದ  ನಾಲ್ವರು ಮುಸುಕುಧಾರಿ ತಂಡ ಮನೆಯಲ್ಲಿದ್ದ ತಾಯಿ ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ರೂ ನಗ-ನಗದನ್ನು ದೋಚಿದ ಘಟನೆ ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕನ ಟೀ ಪಾರ್ಕ್ ಮುಂಭಾಗದಲ್ಲಿ ಗುರುವಾರ ನಡೆದಿದೆ. ಮನೆಯಲ್ಲಿ ತಾಯಿ ಪ್ಲೋರಿನಾ ಪಿಂಟೋ ಹಾಗೂ ಮಗಳು ಮರಿನಾ ಪಿಂಟೋ ಇಬ್ಬರೇ ಇದ್ದ ಸಂದರ್ಭ ಮನೆಗೆ ನುಗ್ಗಿದ ಕಳ್ಳರು ತಾಯಿ-ಮಗಳಿಗೆ ಚಾಕು ತೋರಿಸಿ ಕಪಾಟಿನಲ್ಲಿದ್ದ ಸುಮಾರು 2.90 ಲಕ್ಷ ರೂ. ಮೌಲ್ಯದ ಚಿನ್ನಾಭರಣ, 30 ಸಾವಿರ ನಗದು ಹಾಗೂ

ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿದ ದರೋಡೆಕೋರರು | ಲಕ್ಷಾಂತರ ರೂ. ನಗ-ನಗದು ದೋಚಿ ಪರಾರಿ!! Read More »

ವಿಕಸಿತ ಭಾರತ ನನಸಾಗುವ ನಿಟ್ಟಿನಲ್ಲಿ ಸಂಘಟಿತ ಪ್ರಯತ್ನ ನಡೆಯುತ್ತಿದೆ | ಬಳ್ಪ ಗ್ರಾಮೋತ್ಸವ – 2024 ಕಾರ್ಯಕ್ರಮದಲ್ಲಿ ಸಚಿವ ಖೂಬ ಮೆಚ್ಚುಗೆ

ಬಳ್ಪ; ಬಳ್ಪ ಗ್ರಾಮ ಪಂಚಾಯಿತಿಯಲ್ಲಿ ಸಂಸದರ ಆದರ್ಶ ಗ್ರಾಮ ಯೋಜನೆಯ ಮೂಲಕ 58 ಕೋಟಿ ರೂ. ವೆಚ್ಚದಲ್ಲಿ ಗ್ರಾಮದ ಅಭಿವೃದ್ಧಿ ನಡೆದಿರುವುದು ದೇಶಕ್ಕೆ ಮಾದರಿ ಎಂದು ಕೇಂದ್ರ ರಾಸಾಯನಿಕ, ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ಖಾತೆಯ ಸಚಿವ ಭಗವಂತ ಖೂಬ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬುಧವಾರ ಬಳ್ಪ – ಕೇನ್ಯದ ಗ್ರಾಮ ಉತ್ಸವ ಸಮಿತಿ ಆಶ್ರಯದಲ್ಲಿ ನಡೆದ ಸಂಸದರ ಆದರ್ಶ ಗ್ರಾಮದ ಗ್ರಾಮೋತ್ಸವ -2024 ಕಾರ್ಯಕ್ರಮದಲ್ಲಿ ಮಾತನಾಡಿದರು. ಕುಗ್ರಾಮದಲ್ಲೂ ಕಡುಬಡವರ ಅಭಿವೃದ್ಧಿಗಾಗಿ ಸಂಸದರ ಆದರ್ಶ ಗ್ರಾಮದ ಜೊತೆ ಹಲವು

ವಿಕಸಿತ ಭಾರತ ನನಸಾಗುವ ನಿಟ್ಟಿನಲ್ಲಿ ಸಂಘಟಿತ ಪ್ರಯತ್ನ ನಡೆಯುತ್ತಿದೆ | ಬಳ್ಪ ಗ್ರಾಮೋತ್ಸವ – 2024 ಕಾರ್ಯಕ್ರಮದಲ್ಲಿ ಸಚಿವ ಖೂಬ ಮೆಚ್ಚುಗೆ Read More »

ಸ್ಕೂಟರ್ ಗೆ ಸರಕಾರಿ ಬಸ್ ಡಿಕ್ಕಿ | ವಿದ್ಯಾರ್ಥಿನಿಗೆ ಗಂಭೀರ ಗಾಯ !

ಪುಂಜಾಲಕಟ್ಟೆ: ಸ್ಕೂಟರ್ ಗೆ ಸರಕಾರಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರೆ, ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡ ಘಟನೆ ವಗ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ನಡೆದಿದೆ. ಅಲ್ಲಿಪಾದೆ ಪೆರಿಯಾರ್ ದೋಟ ನಿವಾಸಿ ಗೋಪಾಲ ಸಫಲ್ಯರ ಪುತ್ರಿ, ವಾಮದಪದವು ಕಾಲೇಜು ವಿದ್ಯಾರ್ಥಿನಿ ಪಲ್ಲವಿ ಗಂಭೀರ ಗಾಯಗೊಂಡವರು. ಧರ್ಮಸ್ಥಳದಿಂದ ಮಂಗಳೂರಿಗೆ ಹೋಗುತ್ತಿದ್ದ ಸರಕಾರಿ ಬಸ್ ಇನ್ನೊಂದು ಬಸ್ ನ್ನು ಓವರ್ ಟೇಕ್ ಮಾಡುವ ಭರದಲ್ಲಿ ಸ್ಕೂಟರ್ ಗೆ ಡಿಕ್ಕಿಯಾದ ಪರಿಣಾಮ ಪಲ್ಲವಿ ಗಂಭೀರ ಗಾಯಗೊಂಡರೆನ್ನಲಾಗಿದೆ. ಅವರನ್ನು ಮಂಗಳೂರು ಫಾದ‌ರ್ ಮುಲ್ಲರ್

ಸ್ಕೂಟರ್ ಗೆ ಸರಕಾರಿ ಬಸ್ ಡಿಕ್ಕಿ | ವಿದ್ಯಾರ್ಥಿನಿಗೆ ಗಂಭೀರ ಗಾಯ ! Read More »

error: Content is protected !!
Scroll to Top