ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಿಗೆ ವಿದ್ಯುತ್, ಕುಡಿಯುವ ನೀರು ಉಚಿತ | 68ನೇ ಕನ್ನಡ ರಾಜ್ಯೋತ್ಸವದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೊಷಣೆ
ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಇಂದಿನಿಂದ ವಿದ್ಯುತ್ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಉಚಿತ. ಹೀಗೆಂದು ಘೋಷಿಸಿದ್ದಾರೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿಂದು ಶಿಕ್ಷಣ ಇಲಾಖೆ ಆಯೋಜಿಸಿದ್ದ 68ನೇ ಕನ್ನಡ ರಾಜ್ಯೋತ್ಸವದಲ್ಲಿ ಪಾಲ್ಗೊಂಡು ಧ್ವಜಾರೋಹಣ ನೆರವೇರಿಸಿ ಈ ಘೋಷಣೆ ಮಾಡಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಉಚಿತ ವಿದ್ಯುತ್, ಕುಡಿಯುವ ನೀರು ಸೌಲಭ್ಯಕ್ಕೆ ಶಿಕ್ಷಕರು ಮನವಿ ಮಾಡಿದ್ದಾರೆ. ಅದನ್ನು ಪರಿಗಣಿಸಿ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಉಚಿತವಾಗಿ ವಿದ್ಯುತ್ ಮತ್ತು ಕುಡಿಯುವ ನೀರನ್ನು ಕೊಡುತ್ತೇವೆ ಎಂದು ಭರವಸೆ […]










