ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯದ ಮಾಮೇಶ್ವರ ಜ್ಞಾನವಿಕಾಸದ ವಾರ್ಷಿಕೋತ್ಸವ
ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ ) ವಿಟ್ಲ ತಾಲೂಕಿನ ಕಲ್ಲಡ್ಕ ವಲಯದ ಮಮೇಶ್ವರ ಕಾರ್ಯಕ್ಷೇತ್ರದ ನಂದ ದೀಪಾ ಜ್ಞಾನವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಕೇಂದ್ರದ ಸದಸ್ಯೆ ಲಕ್ಷ್ಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರದ ಸದಸ್ಯರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ತಾಲೂಕಿನ ನಿಕಟಪೂರ್ವ ಯೋಜನಾಧಿಕಾರಿಯಾದ ರಮೇಶ್ ಇವರು ಜ್ಞಾನವಿಕಾಸ ಹಾಗೂ ವಾತ್ಸಲ್ಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಕೇಂದ್ರದ ಸದಸ್ಯರಿಗೆ ಆಟೋಟ ನಡೆಸಿದ್ದು, ಬಳಿಕ ಬಹುಮಾನ ವಿತರಣೆ ಮಾಡಲಾಯಿತು. […]