ನೇಣು ಬಿಗಿದು ಮಹಿಳೆ ಆತ್ಮಹತ್ಯೆ !
ಬೆಳ್ತಂಗಡಿ: ಉದ್ಯಮಿಯೋರ್ವರ ಪತ್ನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಅಳದಂಗಡಿಯಲ್ಲಿ ಗುರುವಾರ ನಡೆದಿದೆ. ಬೆಳ್ತಂಗಡಿ ತಾಲೂಕಿನ ಅಳದಂಗಡಿ ಸಮೀಪದ ಕುಬಲಾಜೆ ನಿವಾಸಿ ಉದ್ಯಮಿ ಸುನಿಲ್ ಎಂಬವರ ಪತ್ನಿ ಕಾವ್ಯ (32) ಆತ್ಮಹತ್ಯೆ ಮಾಡಿಕೊಂಡವರು. ಗುರುವಾರ ಮಧ್ಯಾಹ್ನ ಮನೆಯಲ್ಲಿ ಈ ಘಟನೆ ನಡೆದಿದೆ. ಮೃತರಿಗೆ ಪತಿ, ಪುತ್ರ, ಪುತ್ರಿ ಇದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ವೇಣೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಕೇಸು ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.
ನೇಣು ಬಿಗಿದು ಮಹಿಳೆ ಆತ್ಮಹತ್ಯೆ ! Read More »