ಸುದ್ದಿ

ಸ್ಕೂಟರ್ ಗೆ ಸರಕಾರಿ ಬಸ್ ಡಿಕ್ಕಿ | ವಿದ್ಯಾರ್ಥಿನಿಗೆ ಗಂಭೀರ ಗಾಯ !

ಪುಂಜಾಲಕಟ್ಟೆ: ಸ್ಕೂಟರ್ ಗೆ ಸರಕಾರಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರೆ, ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡ ಘಟನೆ ವಗ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ನಡೆದಿದೆ. ಅಲ್ಲಿಪಾದೆ ಪೆರಿಯಾರ್ ದೋಟ ನಿವಾಸಿ ಗೋಪಾಲ ಸಫಲ್ಯರ ಪುತ್ರಿ, ವಾಮದಪದವು ಕಾಲೇಜು ವಿದ್ಯಾರ್ಥಿನಿ ಪಲ್ಲವಿ ಗಂಭೀರ ಗಾಯಗೊಂಡವರು. ಧರ್ಮಸ್ಥಳದಿಂದ ಮಂಗಳೂರಿಗೆ ಹೋಗುತ್ತಿದ್ದ ಸರಕಾರಿ ಬಸ್ ಇನ್ನೊಂದು ಬಸ್ ನ್ನು ಓವರ್ ಟೇಕ್ ಮಾಡುವ ಭರದಲ್ಲಿ ಸ್ಕೂಟರ್ ಗೆ ಡಿಕ್ಕಿಯಾದ ಪರಿಣಾಮ ಪಲ್ಲವಿ ಗಂಭೀರ ಗಾಯಗೊಂಡರೆನ್ನಲಾಗಿದೆ. ಅವರನ್ನು ಮಂಗಳೂರು ಫಾದ‌ರ್ ಮುಲ್ಲರ್ […]

ಸ್ಕೂಟರ್ ಗೆ ಸರಕಾರಿ ಬಸ್ ಡಿಕ್ಕಿ | ವಿದ್ಯಾರ್ಥಿನಿಗೆ ಗಂಭೀರ ಗಾಯ ! Read More »

ತೋಟಕ್ಕೆ ನುಗ್ಗಿದ ಕಾಡಾನೆ : ಕೃಷಿ ಹಾನಿ !

ಬೆಳ್ತಂಗಡಿ: ಒಂಟಿಸಲಗವೊಂದು ಕೃಷಿ ಭೂಮಿಗೆ ನುಗ್ಗಿ ಕೃಷಿಗೆ ಹಾನಿಯುಂಟುಮಾಡಿದ ಘಟನೆ ಧರ್ಮಸ್ಥಳ ಗ್ರಾಮದ ಮುಳಿಕಾರಿನಲ್ಲಿ ನಡೆದಿದೆ. ಬುಧವಾರ ಬೆಳಗ್ಗಿನ ಜಾವ ಮುಳಿಕಾರು ನಿವಾಸಿ ಡೀಕಯ್ಯ ಮಲೆಕುಡಿಯ ಎಂಬವರ ತೋಟಕ್ಕೆ ನುಗ್ಗಿ ತೆಂಗಿನ ಮರವನ್ನು ನೆಲಕ್ಕುರುಳಿಸಿ ಪುಡಿಗೈದ ಕಾಡಾನೆ, ಅಡಿಕೆ, ಬಾಳೆ ಗಿಡಗಳಿಗೂ ಹಾನಿಯುಂಟುಮಾಡಿದೆ. ಕಳೆದ ಕೆಲದಿನಗಳಿಂದ ಕಾಡಾನೆಯೊಂದು ಇದೇ ಪರಿಸರದ ಅರಣ್ಯದಲ್ಲಿ ತಿರುಗಾಟ ನಡೆಸುತ್ತಿತ್ತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಮುಳಿಕಾರಿನ ಅರಣ್ಯದಲ್ಲಿಯೇ ತಿರುಗಾಡುತ್ತಿರುವ ಆನೆ ರಾತ್ರಿ ಮತ್ತೆ ಕೃಷಿ ಭೂಮಿಗೆ ಹಾನಿ ಮಾಡುವ ಅಪಾಯವಿದ್ದು ಸ್ಥಳೀಯರಲ್ಲಿ

ತೋಟಕ್ಕೆ ನುಗ್ಗಿದ ಕಾಡಾನೆ : ಕೃಷಿ ಹಾನಿ ! Read More »

ಫಲಪುಷ್ಪ ಪ್ರದರ್ಶನಕ್ಕೆ ಸಜ್ಜಾಗುತ್ತಿದೆ ಲಾಲ್ ಬಾಗ್!

ಗಣರಾಜ್ಯೋತ್ಸವದ ಅಂಗವಾಗಿ ತೋಟಗಾರಿಕೆ ಇಲಾಖೆ ವತಿಯಿಂದ ಜ. 18ರಿಂದ 28ರವರೆಗೆ ಬೆಂಗಳೂರಿನ ಲಾಲ್‍ ಭಾಗ್‍ನಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಈ ಬಾರಿಯ ಫಲಪುಷ್ಪ ಪ್ರದರ್ಶನದಲ್ಲಿ ‘ವಿಶ್ವಗುರು ಬಸವಣ್ಣ’ ಅವರ ಹೂವಿನ ಪ್ರತಿಕೃತಿ ಕಣ್ಮನ ಸೆಳೆಯಲಿದೆ. ವಚನ ಸಾಹಿತ್ಯವನ್ನು ಪುಷ್ಪಗಳಲ್ಲಿ ಅರಳಿಸಲು ತೋಟಗಾರಿಕೆ ಇಲಾಖೆ ಸಿದ್ದತೆ ನಡೆಸುತ್ತಿದೆ ಎಂದು ಲಾಲ್ಬಾಗ್ನ ಜಂಟಿ ನಿರ್ದೇಶಕ ಎಂ. ಜಗದೀಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಫಲಪುಷ್ಪ ಪ್ರದರ್ಶನಕ್ಕೆ ಒಟ್ಟು ವೆಚ್ಚ 2.75 ಕೋಟಿ ರೂ. ಆಗುತ್ತಿದ್ದು, ಪುಷ್ಪ ಪ್ರದರ್ಶನದ ವೆಚ್ಚ, ಪ್ರವೇಶ ಶುಲ್ಕವನ್ನು ಇನ್ನೂ

ಫಲಪುಷ್ಪ ಪ್ರದರ್ಶನಕ್ಕೆ ಸಜ್ಜಾಗುತ್ತಿದೆ ಲಾಲ್ ಬಾಗ್! Read More »

ಸುಳ್ಯ ಸಹಕಾರಿ ಬ್ಯಾಂಕ್‍ ಅಧ್ಯಕ್ಷರಾಗಿ ವಿಕ್ರಂ ಎ.ವಿ.ಅಡ್ಪಂಗಾಯ, ಉಪಾಧ್ಯಕ್ಷರಾಗಿ ಚಂದ್ರಶೇಖರ ಆಯ್ಕೆ

ಸುಳ್ಯ: ಸುಳ್ಯದ ಪ್ರತಿಷ್ಠಿತ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾಗಿ ವಿಕ್ರಂ ಎ.ವಿ.ಅಡ್ಪಂಗಾಯ, ಉಪಾಧ್ಯಕ್ಷರಾಗಿ ನ್ಯಾಯವಾದಿ ಚಂದ್ರಶೇಖರ ಆಯ್ಕೆಯಾಗಿದ್ದಾರೆ. ಬುಧವಾರ ನಡೆದ ಚುನಾವಣೆಯಲ್ಲಿ ಬ್ಯಾಂಕ್‍ ನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ನಡೆಯಿತು. ಈ ಸಂದರ್ಭದಲ್ಲಿ ನಿರ್ದೇಶಕರು, ಚುನಾವಣಾ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

ಸುಳ್ಯ ಸಹಕಾರಿ ಬ್ಯಾಂಕ್‍ ಅಧ್ಯಕ್ಷರಾಗಿ ವಿಕ್ರಂ ಎ.ವಿ.ಅಡ್ಪಂಗಾಯ, ಉಪಾಧ್ಯಕ್ಷರಾಗಿ ಚಂದ್ರಶೇಖರ ಆಯ್ಕೆ Read More »

ಸುಚನಾ ಸೇಠ್ ಪೊಲೀಸ್ ಕಸ್ಟಡಿಗೆ! | ಮಗುವಿನ ಪೋಸ್ಟ್ ಮಾರ್ಟಂ ವರದಿಯ ಮಾಹಿತಿ ನೀಡಿರುವ ವೈದ್ಯರು

ಸ್ಟಾರ್ಟ್ ಅಪ್ ಕಂಪೆನಿಯ ಮಹಿಳಾ ಸಿಇಒ ಸುಚನಾ ಸೇಠ್ ತನ್ನ ನಾಲ್ಕು ವರ್ಷದ ಮುದ್ದಾದ ಮಗು ಚಿನ್ಮಯ್ ನನ್ನು ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ  ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇನ್ನೊಂದೆಡೆ ಮಗುವಿನ ಮರಣೋತ್ತರ ಪರೀಕ್ಷೆ ಚಿತ್ರದುರ್ಗದ ಹಿರಿಯೂರಿನಲ್ಲಿ ನಡೆಸಿದ್ದು, ಬೆಂಗಳೂರಿಗೆ ಬುಧವಾರ ಕಳುಹಿಸಲಾಗುತ್ತಿದೆ. ಗೋವಾದ ಸರ್ವಿಸ್ ಅಪಾರ್ಟ್ ಮೆಂಟ್ ನಲ್ಲಿ ಮಗುವನ್ನು ಕೊಂದು ಸೂಟ್ ಕೇಸ್ ನಲ್ಲಿ ಹಾಕಿ ಬೆಂಗಳೂರಿಗೆ ಟ್ಯಾಕ್ಸಿಯಲ್ಲಿ ಸಾಗಿಸುತ್ತಿದ್ದಾಗ ಸಿಕ್ಕಿಬಿದ್ದ ಸುಚನಾ ಸೇಠ್ ಳನ್ನು ನಿನ್ನೆ ಚಿತ್ರದುರ್ಗದ ಪೊಲೀಸರು ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಿದ್ದರು.

ಸುಚನಾ ಸೇಠ್ ಪೊಲೀಸ್ ಕಸ್ಟಡಿಗೆ! | ಮಗುವಿನ ಪೋಸ್ಟ್ ಮಾರ್ಟಂ ವರದಿಯ ಮಾಹಿತಿ ನೀಡಿರುವ ವೈದ್ಯರು Read More »

ಬಳ್ಪ ‘ಸಂಸದರ ಆದರ್ಶ ಗ್ರಾಮ’ ಕಾರ್ಯಕ್ರಮಕ್ಕೆ ಚಾಲನೆ

ಬಳ್ಪ: ಬಳ್ಪ-ಕೇನ್ಯ ಗ್ರಾಮ ವಿಕಾಸ ಪ್ರತಿಷ್ಠಾನದ ಹಾಗೂ ಗ್ರಾಮ ಉತ್ಸವ ಸಮಿತಿ ವತಿಯಿಂದ ಸಂಸದರ ಆದರ್ಶ ಗ್ರಾಮದ ಗ್ರಾಮೋತ್ಸವ-2024 ಕಾರ್ಯಕ್ರಮಗಳಿಗೆ ಬುಧವಾರ ಚಾಲನೆ ನೀಡಲಾಯಿತು. ಸಂಸದ ನಳಿನ ಕುಮಾರ್ ಕಟೀಲ್ ಅವರು ಅಡಕೆ ಟ್ರಾಲಿಗೆ ಚಾಲನೆ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಆಶಯವಾಗಿ ಬಳ್ಪ ಗ್ರಾಮವನ್ನು ಸಂಸದರ ಆದರ್ಶ ಗ್ರಾಮ ಯೋಜನೆಯಡಿ ಅಭಿವೃದ್ಧಿಪಡಿಸಿದ್ದು, ರಾಜ್ಯದಲ್ಲಿ ಅತೀ ಹೆಚ್ಚುನ ಅನುದಾನ ಬಳಕೆಯ ಗ್ರಾಮವಾಗಿ ಬಳ್ಪ ಗ್ರಾಮ ಹೆಗ್ಗಳಿಕೆಗೆ ಪಾತ್ರವಾಗಿದೆ. ಕಾರ್ಯಕ್ರಮದಲ್ಲಿ ಬಾಲಕೃಷ್ಣ

ಬಳ್ಪ ‘ಸಂಸದರ ಆದರ್ಶ ಗ್ರಾಮ’ ಕಾರ್ಯಕ್ರಮಕ್ಕೆ ಚಾಲನೆ Read More »

ಗಣರಾಜ್ಯೋತ್ಸವ ಪರೇಡ್: ರಾಜ್ಯದ ಮನವಿ ತಿರಸ್ಕರಿಸಿದ ಕೇಂದ್ರ!!

ಜನವರಿ 26ರಂದು ದಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಭಾಗವಹಿಸುವಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಕೇಂದ್ರ ಸರಕಾರ ತಿರಸ್ಕರಿಸಿದೆ. ಗಣರಾಜ್ಯೋತ್ಸವದ ಪರೇಡ್‌ನಲ್ಲಿ ವಿವಿಧ ರಾಜ್ಯಗಳ ಸ್ತಬ್ಧ ಚಿತ್ರಗಳು ಪಾಲ್ಗೊಳ್ಳುತ್ತವೆ. ಈ ಬಾರಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ನಗರದ ಅಣ್ಣಮ್ಮ ದೇವಿಯ ಪ್ರತಿಕೃತಿಗಳ ಸ್ತಬ್ಧ ಚಿತ್ರಕ್ಕೆ ಅವಕಾಶ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರ ರಾಜ್ಯದ ಮನವಿಯನ್ನು ತಳ್ಳಿ ಹಾಕಿದೆ. ಕಳೆದ ವರ್ಷವೂ ಇದೇ ರೀತಿ ಸ್ತಬ್ಧ ಚಿತ್ರ ಮೆರವಣಿಗೆಗೆ ಅನುಮತಿ

ಗಣರಾಜ್ಯೋತ್ಸವ ಪರೇಡ್: ರಾಜ್ಯದ ಮನವಿ ತಿರಸ್ಕರಿಸಿದ ಕೇಂದ್ರ!! Read More »

ಚುನಾವಣೆ ಹಿನ್ನೆಲೆಯಲ್ಲಿ ಸೆಂಟ್ರಲ್ ವಾರ್ ರೂಂ ರಚಿಸಿದ ಕಾಂಗ್ರೆಸ್! | ದ.ಕ. ಡಿಸಿಯಾಗಿದ್ದ ಶಶಿಕಾಂತ್ ಸೆಂಥಿಲ್ ಹೆಗಲಿಗೆ ಮತ್ತೆ ವಾರ್ ರೂಂ ನೇತೃತ್ವದ ಹೊಣೆ!

2024ರ ಸಾರ್ವತ್ರಿಕ ಚುನಾವಣೆಗಾಗಿ ಕಾಂಗ್ರೆಸ್ ತನ್ನ ‘ಸೆಂಟ್ರಲ್ ವಾರ್ ರೂಮ್’ ಅನ್ನು ರಚಿಸಿದೆ. ಇದರ ಅಧ್ಯಕ್ಷರಾಗಿ ಶಶಿಕಾಂತ್ ಸೆಂಥಿಲ್ ಅವರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಮಾಡಿದ್ದಾರೆ. 2023ರಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನಲ್ಲಿ ವಾರ್ ರೂಮ್ ಪಾತ್ರ ಪ್ರಮುಖವಾಗಿತ್ತು. ಇದನ್ನು ಗಮನದಲ್ಲಿಟ್ಟುಕೊಂಡು ಮತ್ತೆ ಮುಂದಿನ ಚುನಾವಣೆಗೆ ವಾರ್ ರೂಂ ತೆರೆಯಲಾಗಿದೆ. ಅಂದ ಹಾಗೇ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಬಳಿಕ ರಾಜೀನಾಮೆ ನೀಡಿದ್ದ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂಥಿಲ್ ಅವರೇ ಸೆಂಟ್ರಲ್ ವಾರ್

ಚುನಾವಣೆ ಹಿನ್ನೆಲೆಯಲ್ಲಿ ಸೆಂಟ್ರಲ್ ವಾರ್ ರೂಂ ರಚಿಸಿದ ಕಾಂಗ್ರೆಸ್! | ದ.ಕ. ಡಿಸಿಯಾಗಿದ್ದ ಶಶಿಕಾಂತ್ ಸೆಂಥಿಲ್ ಹೆಗಲಿಗೆ ಮತ್ತೆ ವಾರ್ ರೂಂ ನೇತೃತ್ವದ ಹೊಣೆ! Read More »

ಅರ್ಜುನ ಪ್ರಶಸ್ತಿ ಪಡೆದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ

ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಶಮಿ ಅವರಿಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅರ್ಜುನ ಪ್ರಶಸ್ತಿಯನ್ನು ನೀಡಿದರು. 2023ರ ಏಕದಿನ ವಿಶ್ವಕಪ್‌ನಲ್ಲಿನ ಅವರ ಸಾಧನೆಯನ್ನು ಗಣನೆಗೆ ತೆಗೆದುಕೊಂಡ ನಂತರ ಬಿಸಿಸಿಐ ಶಮಿ ಹೆಸರನ್ನು ಪ್ರಶಸ್ತಿಗಾಗಿ ಶಿಫಾರಸು ಮಾಡಿತ್ತು. ಕೇವಲ 7 ಪಂದ್ಯಗಳಿಂದ 24 ವಿಕೆಟ್ ಕಬಳಿಸುವ ಮೂಲಕ ಶಮಿ 2023ರ ವಿಶ್ವಕಪ್ ಪಂದ್ಯಾವಳಿಯಲ್ಲಿ ಅತ್ಯುತ್ತಮ ಬೌಲರ್ ಆಗಿ ಮಿಂಚಿದ್ದರು. ನಾನು ಈ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಕ್ಕೆ ಸಂತೋಷವಾಗಿದೆ. ನನ್ನ ಜೀವನದಲ್ಲಿ ಈ ಪ್ರಶಸ್ತಿಯನ್ನು ಪಡೆದ ಅನೇಕರನ್ನು ನೋಡಿದ್ದೇನೆ.

ಅರ್ಜುನ ಪ್ರಶಸ್ತಿ ಪಡೆದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ Read More »

ರಾಮಮಂದಿರ ಉದ್ಘಾಟನೆಯಂದು ಮೌನ ವ್ರತ ಮುರಿಯಲಿದ್ದಾರೆ ಮೌನಿ ಮಾತಾ!!

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ನಂತರ ಮೌನ ಮುರಿಯುತ್ತೇನೆ ಎಂದು ಶಪಥಗೈದಿದ್ದ ಮಹಿಳೆಯೊಬ್ಬರು ಬರೋಬ್ಬರಿ 30 ವರ್ಷದ ನಂತರ ಮಾತನಾಡಲಿದ್ದಾರೆ. ಜಾರ್ಖಂಡ್ನ 85 ವರ್ಷದ ಸರಸ್ವತಿ ದೇವಿ 1992ರ ಡಿ. 6ರಂದು ಜನ್ಮಸ್ಥಾನದಲ್ಲಿ ದಾಳಿಕೋರರು ನಿರ್ಮಿಸಿದ್ದ ಕಟ್ಟಡ ಕರಸೇವಕರಿಂದ ನೆಲಸಮವಾಗಿದ್ದು, ಅಂದು ಸರಸ್ವತಿ ದೇವಿ ಮೌನವ್ರತ ಕೈಗೊಂಡಿದ್ದರು. ಜ.22 ರಂದು ಸರಸ್ವತಿ ದೇವಿ ಅಗರ್ವಾಲ್ ತಮ್ಮ ಕನಸು ನನಸಾಗುತ್ತಿರುವುದರಿಂದ ಅಂದಿನಿಂದ ಮತ್ತೆ ಮಾತನಾಡಲು ತೀರ್ಮಾನಿಸಿದ್ದಾರೆ. 30 ವರ್ಷದ ಅವರ ಮೌನ ದೀಕ್ಷೆ ಕೊನೆಗೊಳ್ಳುವ ಕಾಲ ರಾಮಮಂದಿರ ನಿರ್ಮಾಣದೊಂದಿಗೆ ಸನ್ನಿಹಿತವಾಗಿದೆ.

ರಾಮಮಂದಿರ ಉದ್ಘಾಟನೆಯಂದು ಮೌನ ವ್ರತ ಮುರಿಯಲಿದ್ದಾರೆ ಮೌನಿ ಮಾತಾ!! Read More »

error: Content is protected !!
Scroll to Top