ಸುದ್ದಿ

ರಾಜ್ಯಕ್ಕೆ ಹೆಚ್ಚುವರಿಯಾಗಿ ಬರಲಿದೆ 1,000 ಕಮರ್ಷಿಯಲ್ ಗ್ಯಾಸ್‌ ಸಿಲಿಂಡರ್‌

ಕಮರ್ಷಿಯಲ್ ಗ್ಯಾಸ್ ಬಳಕೆದಾರರು ರಿಜಿಸ್ಟ್ರರ್ ಮಾಡಿಕೊಳ್ಳುವುದು ಕಡ್ಡಾಯ ಬೆಂಗಳೂರು: ರಾಜ್ಯಕ್ಕೆ ಹೆಚ್ಚುವರಿಯಾಗಿ 1 ಸಾವಿರ ಕಮರ್ಷಿಯಲ್ ಗ್ಯಾಸ್‌ ಸಿಲಿಂಡರ್ ಪೂರೈಕೆ ಮಾಡಲಾಗುವುದು ಎಂದು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು. ಗ್ಯಾಸ್ ಕಂಪನಿಗಳು ಮತ್ತು ಹೋಟೆಲ್ ಸಂಘದ ಜೊತೆ ಸಚಿವ ಮುನಿಯಪ್ಪ ಇಂದು ಸಭೆ ನಡೆಸಿದರು. ರಾಜ್ಯದಲ್ಲಿ ಹೆಚ್ಚುವರಿಯಾಗಿ ಕಮರ್ಷಿಯಲ್ ಸಿಲಿಂಡರ್ ಪೂರೈಕೆ ಮಾಡಲಾಗುವುದು. ಹೆಚ್ಚುವರಿಯಾಗಿ 1,000 ಸಿಲಿಂಡರ್ ಸೇರಿಸಿ ಒಟ್ಟು 10,000 ಸಿಲಿಂಡರ್ ಪೂರೈಕೆ ಆಗಲಿದೆ. ಕಮರ್ಷಿಯಲ್ ಗ್ಯಾಸ್ ಬಳಕೆದಾರರು ಕಡ್ಡಾಯವಾಗಿ ರಿಜಿಸ್ಟ್ರರ್ ಮಾಡಿಸಬೇಕು. ಗೇಲ್ ಕಂಪನಿಗೆ ರಿಜಿಸ್ಟ್ರರ್ […]

ರಾಜ್ಯಕ್ಕೆ ಹೆಚ್ಚುವರಿಯಾಗಿ ಬರಲಿದೆ 1,000 ಕಮರ್ಷಿಯಲ್ ಗ್ಯಾಸ್‌ ಸಿಲಿಂಡರ್‌ Read More »

ನಿವೃತ್ತ ಸಂಶೋಧಕನನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 5 ಕೋಟಿ ರೂ. ಲೂಟಿ

ಬೆಂಗಳೂರು: ನಗರದ ನಿವೃತ್ತ ಸಂಶೋಧಕರೊಬ್ಬರಿಗೆ ಬರೋಬ್ಬರಿ 5 ಕೋಟಿ ರೂ. ಸೈಬರ್ ವಂಚನೆ ಮಾಡಿದ್ದು, ವೃದ್ಧನನ್ನು ಬೆದರಿಸಿ ಹಣ ವರ್ಗಾಯಿಸಿಕೊಳ್ಳಲಾಗಿದೆ ಎನ್ನಲಾಗಿದೆ. 94 ವರ್ಷದ ನಿವೃತ್ತ ಸಂಶೋಧಕರಿಗೆ ಅಪರಿಚಿತ ವ್ಯಕ್ತಿಯೊಬ್ಬ ಲ್ಯಾಂಡ್ ಲೈನ್‌ಗೆ ಕರೆ ಮಾಡಿ, ನಿಮ್ಮ ವಿರುದ್ಧ ಬಳ್ಳಾರಿಯಲ್ಲಿ ಮಾನವ ಕಳ್ಳ ಸಾಗಾಣಿಕೆ ಪ್ರಕರಣ ದಾಖಲಾಗಿದೆ ಎಂದು ಹೇಳಿ ಬೆದರಿಕೆ ಹಾಕಿದ್ದಾನೆ. ನಂತರ ತಾನು ಸಿಬಿಐ ಅಧಿಕಾರಿ ಎಂದು ಹೇಳಿಕೊಂಡ ಮತ್ತೊಬ್ಬ ವ್ಯಕ್ತಿ ಸಂದೀಪ್ ರಾವ್ ಎಂಬ ಹೆಸರಿನಲ್ಲಿ ಕರೆ ಮಾಡಿ, ಆಧಾರ್ ಕಾರ್ಡ್ ವಿವರಗಳನ್ನು

ನಿವೃತ್ತ ಸಂಶೋಧಕನನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 5 ಕೋಟಿ ರೂ. ಲೂಟಿ Read More »

ಕೋರ್ಟ್‌ ಕೆಲಸದ ಆಮಿಷವೊಡ್ಡಿ 500 ಜನರಿಗೆ ವಂಚನೆ : ದಂಪತಿ ಸೆರೆ

ನಿರುದ್ಯೋಗಿಗಳಿಗೆ 25 ಕೋಟಿಗೂ ಅಧಿಕ ಮೊತ್ತ ವಂಚಿಸಿದ್ದ ದಂಪತಿ ಬೆಂಗಳೂರು: ಕೋರ್ಟ್‍ನಲ್ಲಿ ಕೆಲಸ ಕೊಡಿಸುವುದಾಗಿ 500ಕ್ಕೂ ಹೆಚ್ಚು ಜನರಿಗೆ ವಂಚಿಸಿದ ದಂಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಜೈಸನ್ ಡಿಸೋಜಾ ಮತ್ತು ಲವೀನಾ ಬಂಧಿತ ಆರೋಪಿಗಳು. ಈ ದಂಪತಿ ನಿರೋದ್ಯೋಗಿಗಳು ಮತ್ತು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಮಾಯಕರನ್ನು ಟಾರ್ಗೆಟ್ ಮಾಡಿ ವಂಚಿಸುತ್ತಿದ್ದರು. ಕೋರ್ಟ್‍ನಲ್ಲಿ `ಡಿ’ ಗ್ರೂಪ್ ಕೆಲಸ ಕೊಡಿಸುವುದಾಗಿ ಒಬ್ಬೊಬ್ಬರಿಂದ 10 ರಿಂದ 25 ಲಕ್ಷ ರೂ. ವರೆಗೆ ಪಡೆದು ವಂಚಿಸಿದ್ದಾರೆ. ಹೀಗೆ ಸುಮಾರು ಐನೂರಕ್ಕೂ ಹೆಚ್ಚು ಜನರಿಂದ

ಕೋರ್ಟ್‌ ಕೆಲಸದ ಆಮಿಷವೊಡ್ಡಿ 500 ಜನರಿಗೆ ವಂಚನೆ : ದಂಪತಿ ಸೆರೆ Read More »

ಬಿಜೆಪಿ ಸೇರಿದ ಮುಸ್ಲಿಂ ಮುಖಂಡರು : ಕಾಂಗ್ರೆಸ್‌ಗೆ ಬಂಡಾಯದ ಬಿಸಿ

ಟಿಕೆಟ್‌ ಸಿಗದಿರುವುದರಿಂದ ಭುಗಿಲೆದ್ದ ಅಲ್ಪಸಂಖ್ಯಾತರ ಆಕ್ರೋಶ ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್‌ ಟಿಕೆಟ್‌ ಸಿಗದ ಹಿನ್ನೆಲೆಯಲ್ಲಿ ನಿರಾಶರಾಗಿರುವ ಮುಸ್ಲಿಮ್‌ ಸಮುದಾಯದವರು ಈಗ ಪಕ್ಷಾಂತರ ಪರ್ವ ಆರಂಭಿಸಿದ್ದಾರೆ. 20ಕ್ಕೂ ಹೆಚ್ಚು ಅಲ್ಪಸಂಖ್ಯಾತ ಮುಖಂಡರು ಮತ್ತು ಯುವನಾಯಕರು ಭಾನುವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪನವರ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗಿ ಮುಂದಿನ ದಿನಗಳಲ್ಲಿ ಇನ್ನಷ್ಟು ಅಲ್ಪಸಂಖ್ಯಾತರನ್ನ ಬಿಜೆಪಿಗೆ ಸೇರಿಸುವುದಾಗಿ ವಾಗ್ದಾನ ಮಾಡಿದ್ದಾರೆ. ಜೊತೆಗೆ ಒಟ್ಟಾಗಿ ಕೆಲಸ ಮಾಡಿ ಕಾಂಗ್ರೆಸ್‌ ಅಭ್ಯರ್ಥಿಯನ್ನು

ಬಿಜೆಪಿ ಸೇರಿದ ಮುಸ್ಲಿಂ ಮುಖಂಡರು : ಕಾಂಗ್ರೆಸ್‌ಗೆ ಬಂಡಾಯದ ಬಿಸಿ Read More »

ಶ್ರೀಮತಿ ಲೇಖಲತಾ ದಿನೇಶ್ ಮೆದು ಅವರಿಗೆ ಚಿನ್ನದ ಪದಕ

ಸವಣೂರು: ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಗುಮಾಸ್ತೆಯಾಗಿರುವ ಶ್ರೀಮತಿ ಲೇಖಲತಾ ದಿನೇಶ್ ಮೆದು ಅವರು ಇತ್ತೀಚೆಗೆ ಕೃಷಿ ವಿಸ್ತರಣಾ ಸೇವೆಯ ಡಿಪ್ಲೊಮಾ ಪದವಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಚಿನ್ನದ ಪದಕ ಗಳಿಸಿಕೊಂಡಿದ್ದಾರೆ. ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ್, ಕೃಷಿ ವಿಜ್ಞಾನ ಕೇಂದ್ರ (ದ.ಕ.) ಮಂಗಳೂರು ಸಮೇತಿ (ದಕ್ಷಿಣ) ಕೃಷಿ ವಿಶ್ವವಿದ್ಯಾಲಯ ಜಿಕೆವಿಕೆ ಬೆಂಗಳೂರು, ರಾಷ್ಟ್ರೀಯ ಕೃಷಿ ವಿಸ್ತರಣಾ ನಿರ್ವಹಣಾ ಸಂಸ್ಥೆ ಹೈದರಾಬಾದ್ ಮತ್ತು ಕೃಷಿ ಇಲಾಖೆ ದಕ್ಷಿಣ ಕನ್ನಡ

ಶ್ರೀಮತಿ ಲೇಖಲತಾ ದಿನೇಶ್ ಮೆದು ಅವರಿಗೆ ಚಿನ್ನದ ಪದಕ Read More »

ಪುತ್ತೂರು : ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಪುತ್ತೂರು: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದು, ಈ ಹಿನ್ನೆಲೆಯಲ್ಲಿ ಮತ್ತೊಂದು ಪ್ರಕರಣವನ್ನು ದಾಖಲಿಸಿದ್ದಾರೆ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ.169/2018ರ ಕಲಂ 323, 504, 506, 406, 424 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿದ್ದ ಕೇರಳದ ಮಲಪ್ಪುರಂ ನಿವಾಸಿ ನಿಖಿಲ್ ಕೆ (36) ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಈತನನ್ನು ಪುತ್ತೂರು ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಜನಾರ್ದನ ಕೆ.ಎಂ ಹಾಗೂ ಸಿಬ್ಬಂದಿ ತಂಡ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಶಿಲುವೈಪುರದಲ್ಲಿ

ಪುತ್ತೂರು : ತಲೆಮರೆಸಿಕೊಂಡಿದ್ದ ಆರೋಪಿ ಸೆರೆ Read More »

ಜೇಬಿನಲ್ಲೇ ಸ್ಫೋಟಿಸಿದ ಮೊಬೈಲ್‌ : ಯುವಕನಿಗೆ ಗಾಯ

ಸುಳ್ಯ: ಮೊಬೈಲ್‌ ಫೋನ್‌ ಜೇಬಿನಲ್ಲೇ ಸ್ಫೋಟಿಸಿದ ಪರಿಣಾಮ ಯುವಕ ಗಾಯಗೊಂಡ ಘಟನೆ ಸುಳ್ಯದಲ್ಲಿ ಸಂಭವಿಸಿದೆ. ಸುಳ್ಯದ ಕಲ್ಮಕಾರಿನ ಗುರುಪ್ರಸಾದ್ ನಿಡುಬೆ ಗಾಯಗೊಂಡವರು. ಗುರುಪ್ರಸಾದ್ ಒಂದು ವರ್ಷ ಹಿಂದೆ ಖರೀದಿಸಿದ್ದ ಮೊಬೈಲನ್ನು ತನ್ನ ಪ್ಯಾಂಟ್‌ನ ಜೇಬಿನೊಳಗೆ ಹಾಕಿಕೊಂಡಿದ್ದರು. ಈ ವೇಳೆ ಮೊಬೈಲ್‌ ಸ್ಫೋಟಗೊಂಡಿದೆ. ಪ್ಯಾಂಟ್‌ ಜೇಬಿನೊಳಗಿದ್ದ ಕಾರಣ ತೊಡೆಯ ಚರ್ಮ ಬೆಂದು ಹೋಗಿದೆ. ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ.

ಜೇಬಿನಲ್ಲೇ ಸ್ಫೋಟಿಸಿದ ಮೊಬೈಲ್‌ : ಯುವಕನಿಗೆ ಗಾಯ Read More »

ಬೆಂಕಿ ಅವಘಡ : ಟಯರ್‌ ಪಂಕ್ಚರ್‌ ಅಂಗಡಿ ನಾಶ

ಟ್ರಾನ್ಸ್‌ಫಾರ್ಮರ್‌ನಿಂದ ಕಿಡಿ ಸಿಡಿದು ಅನಾಹುತ ಉಡುಪಿ : ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಟೋಲ್ ಪ್ಲಾಜಾ ಸಮೀಪವಿರುವ ಟೈರ್ ಪಂಕ್ಚರ್ ಅಂಗಡಿಯೊಂದು ಭಾನುವಾರ ಮಧ್ಯಾಹ್ನ ಸಂಭವಿಸಿದ ಭೀಕರ ಬೆಂಕಿಗೆ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಹತ್ತಿರದ ಇಲೆಕ್ಟ್ರಿಕ್ ಟ್ರಾನ್ಸ್‌ಫಾರ್ಮರ್‌ನಿಂದ ಹೊರಬಂದ ಕಿಡಿಗಳು ಒಣ ಹುಲ್ಲಿಗೆ ತಗುಲಿ ಬೆಂಕಿ ಹತ್ತಿಕೊಂಡಿದೆ ಎಂದು ಹೇಳಲಾಗಿದೆ. ಈ ಬೆಂಕಿ ಕ್ಷಣಾರ್ಧದಲ್ಲಿ ಹರಡಿ, ಬಿಹಾರ ಮೂಲದ ಸೈಫುಲ್ಲಾ ಎಂಬುವವರಿಗೆ ಸೇರಿದ ಅಂಗಡಿಗೆ ತಗುಲಿದೆ. ಅಂಗಡಿಯಲ್ಲಿದ್ದ ಕಂಪ್ರೆಸರ್, ಜನರೇಟರ್, ಟೂಲ್ ಕಿಟ್‌ಗಳು ಮತ್ತು ದಾಸ್ತಾನು ಮಾಡಲಾಗಿದ್ದ

ಬೆಂಕಿ ಅವಘಡ : ಟಯರ್‌ ಪಂಕ್ಚರ್‌ ಅಂಗಡಿ ನಾಶ Read More »

ಬಸ್‌ ಡಿವೈಡರ್‌ಗೆ ಡಿಕ್ಕಿ : ನಾಲ್ವರು ಸ್ಥಳದಲ್ಲೇ ಸಾವು

ಚಾಲಕನ ನಿದ್ರೆಯ ಮಂಪರಿನಿಂದ ಸಂಭವಿಸಿದ ಭೀಕರ ಅಪಘಾತ ಬೆಂಗಳೂರು: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಚನ್ನಪಟ್ಟಣ ಬಳಿ ಬೆಳ್ಳಂಬೆಳಗ್ಗೆ ಡಿವೈಡರ್‌ಗೆ ಬಸ್‌ ಡಿಕ್ಕಿಯಾಗಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಕೇರಳಂ ಮೂಲದ ಟ್ರಾವೆಲ್ಸ್ ಕಂಪನಿಗೆ ಸೇರಿದ ಬಸ್‌ ಕೇರಳದಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಗ್ರಾಮದ ಪುಟ್ಟಪ್ಪನದೊಡ್ಡಿ ಬಳಿ ಬಸ್‌ ಡಿವೈಡರ್‌ಗೆ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಚಾಲಕ ನಿದ್ದೆ ಮಂಪರಿನಲ್ಲಿ ಇದ್ದಿದ್ದರಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಬಸ್‌ ಡಿವೈಡರ್‌ಗೆ ಡಿಕ್ಕಿ : ನಾಲ್ವರು ಸ್ಥಳದಲ್ಲೇ ಸಾವು Read More »

ಅತ್ಯಾಚಾರ ದೂರು ದಾಖಲಿಸಿದ ಶಿಕ್ಷಕಿಗೆ ಬೆದರಿಕೆ?

ಇನ್‌ಸ್ಪೆಕ್ಟರ್‌ ಸಂದೇಶ್‌ ಪರವಾಗಿ ಮಹಿಳೆಯರಿಬ್ಬರಿಂದ ಬೆದರಿಕೆ ಎಂದು ಆರೋಪ ಮಂಗಳೂರು: ಅಮಾನತಿನಲ್ಲಿರುವ ಮೂಡುಬಿದಿರೆ ಇನ್‌ಸ್ಪೆಕ್ಟರ್​​​ ಸಂದೇಶ್ ವಿರುದ್ಧ ಬೆಳ್ತಂಗಡಿ ತಾಲೂಕಿನ ವೇಣೂರು ಠಾಣೆಯಲ್ಲಿ ಅತ್ಯಾಚಾರ ದೂರು ದಾಖಲಿಸಿದ್ದ ಸಂತ್ರಸ್ತ ಶಿಕ್ಷಕಿಗೆ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಪ್ರಕರಣ ಬಯಲಾಗುತ್ತಲೇ ಸಂತ್ರಸ್ತೆಗೆ ಮಾ.19ರಂದು ಸ್ಮಿತಾ ಮತ್ತು ಸುನೀತಾ ಲೋಬೊ ಎಂಬಿಬ್ಬರು ಮಹಿಳೆಯರ ಮೂಲಕ ಸಂದೇಶ್​​ ಬೆದರಿಕೆ ಹಾಕಿರುವುದಾಗಿ ದೂರಲಾಗಿದೆ. ಇಬ್ಬರು ಮಹಿಳೆಯರನ್ನು ಸಂತ್ರಸ್ತೆ ಶಿಕ್ಷಕಿಯ ಮನೆಗೆ ಕಳುಹಿಸಿ ಇಲ್ಲಿಯವರೆಗೂ ನಡೆದ ವಿಚಾರಗಳ ಬಗ್ಗೆ ಬಾಯಿ ಬಿಡಬಾರದು. ಬಾಯಿ

ಅತ್ಯಾಚಾರ ದೂರು ದಾಖಲಿಸಿದ ಶಿಕ್ಷಕಿಗೆ ಬೆದರಿಕೆ? Read More »

error: Content is protected !!
Scroll to Top