ಕಟ್ ಕನ್ವರ್ಶನ್ ಮತ್ತು ಅನಧಿಕೃತ ಕಟ್ಟಡಗಳಿಗೆ ಬಿ ಖಾತಾ ನೀಡಲು ಸರಕಾರದ ಆದೇಶ | ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ
ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಕಟ್‌ಕನ್ವರ್ಶನ್ ಮತ್ತು ಅನಧಿಕೃತವಾಗಿ ನಿರ್ಮಾಣ ಮಾಡಿರುವ ಮನೆ ಮತ್ತು ಕಟ್ಟಡಗಳಿಗೆ ಬಿ ಖಾತಾ ನೀಡಲು ರಾಜ್ಯ ಸರಕಾರ ಆದೇಶ ನೀಡಿದ್ದು ,ಪುತ್ತೂರು ಶಾಸಕರು ಈ ಹಿಂದೆ ನೀಡಿದ್ದ ಮನವಿಗೆ ಸರಕಾರ ಸ್ಪಂದನೆ ನೀಡಿದೆ. 2024 ಸೆಪ್ಟಂಬರ್ ತಿಂಗಳ ಮೊದಲು ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಕಟ್ಟಡ, ಮನೆ ಮತ್ತು ಕಟ್ ಕನ್ವರ್ಶನ್ ಆಗಿರುವ ಅರ್ಜಿದಾರರಿಗೆ ಬಿ ಖಾತೆ ನೀಡಲು ನಿರ್ಧರಿಸಿದೆ. ಈಗಾಗಲೇ ಈ ಅನಧಿಕೃತ ಮನೆಗಳ ಪೈಕಿ ಕೆಲವೊಂದನ್ನು ಕೆಡವಲು ನಗರಸಭೆ […]