ಸ್ಥಳೀಯ ಸುದ್ದಿ

ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಮಳಿಗೆಯಲ್ಲಿ ವಜ್ರಾಭರಣ ಪ್ರದರ್ಶನ, ಮಾರಾಟಕ್ಕೆ ಚಾಲನೆ

ಪುತ್ತೂರು: ಸಮಾಜಮುಖಿ ಚಿಂತನೆಯೊಂದಿಗೆ ಸ್ಪಂದನೆ ನೀಡುವ ಮುಳಿಯ ಸಂಸ್ಥೆಯು ಗ್ರಾಹಕರ ನಂಬಿಕೆ, ವಿಶ್ವಾಸದ ನೆಲೆ ಎಂದು ಪುತ್ತೂರು ಶ್ರೀ ಮಹಾ ಲಿಂಗೇಶ್ವರ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಹೇಳಿದರು. ಪುತ್ತೂರು ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಮಳಿಗೆಯಲ್ಲಿ ವಜ್ರಾಭರಣ ಪ್ರದರ್ಶನ, ಮಾರಾಟಕ್ಕೆ ಚಾಲನೆ ನೀಡಿ ಮಾತನಾಡಿದರು. ಆಭರಣ ಕ್ಷೇತ್ರದಲ್ಲಿ ಸುದೀರ್ಘ ಅನುಭವ ಹೊಂದಿರುವ ಮುಳಿಯ ಸಂಸ್ಥೆ ಇನ್ನಿತರ ಕ್ಷೇತ್ರಗಳಲ್ಲಿಯು ತನ್ನಭಾಪು ತೋರಿಸಿದೆ. ಧಾರ್ಮಿಕ, ರಿಯಲ್ ಎಸ್ಟೇಟ್ ಹೀಗೆ ತನ್ನ ಇರುವಿಕೆಯ ಕ್ಷೇತ್ರಗಳಲ್ಲಿ ಜನರ […]

ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಮಳಿಗೆಯಲ್ಲಿ ವಜ್ರಾಭರಣ ಪ್ರದರ್ಶನ, ಮಾರಾಟಕ್ಕೆ ಚಾಲನೆ Read More »

ಕೊಯಿಲ ವಿದ್ಯುತ್ ಉಪ ಕೇಂದ್ರ ಕಾಮಗಾರಿ ಕೂಡಲೇ ಪೂರ್ಣಗೊಳಿಸುವಂತೆ ಮತ್ತು ವಿದ್ಯುತ್ ಸಮಸ್ಯೆ ಪರಿಹರಿಸುವಂತೆ ಮನವಿ

ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರಿಂದ ಮನವಿ ಸಲ್ಲಿಕೆ ಕಡಬ: ತಾಲೂಕು ವ್ಯಾಪ್ತಿಯ ಕೊಯಿಲ, ರಾಮಕುಂಜ, ಆಲಂತಾಯ, ಹಳೆನೇರಂಕಿ, ಗೋಳಿತೊಟ್ಟು ಮತ್ತು ಪುತ್ತೂರು ತಾಲೂಕಿನ ಬಜತ್ತೂರು ಹಿರೇಬಂಡಾಡಿ ಗ್ರಾಮಗಳಿಗೆ ವಿದ್ಯುತ್ ಲೋ ವೋಲ್ಟೇಜ್ ಸಮಸ್ಯೆ ಇದ್ದ ಕಾರಣ ಕೊಯ್ಲದಲ್ಲಿ ಹೊಸದಾಗಿ ವಿದ್ಯುತ್ ಉಪಕೇಂದ್ರ ನಿರ್ಮಿಸುವ ಕಾಮಗಾರಿ ಈಗಾಗಲೇ ಪ್ರಾರಂಭಗೊಂಡಿದ್ದು, ಕಾಮಗಾರಿಯನ್ನು ಕೂಡಲೇ ಪೂರ್ಣಗೊಳಿಸಿ ಸಾರ್ವಜನಿಕರ ಸಮಸ್ಯೆಯನ್ನು ಪರಿಹರಿಸುವಂತೆ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು

ಕೊಯಿಲ ವಿದ್ಯುತ್ ಉಪ ಕೇಂದ್ರ ಕಾಮಗಾರಿ ಕೂಡಲೇ ಪೂರ್ಣಗೊಳಿಸುವಂತೆ ಮತ್ತು ವಿದ್ಯುತ್ ಸಮಸ್ಯೆ ಪರಿಹರಿಸುವಂತೆ ಮನವಿ Read More »

ಬೀಡಿಕಾರ್ಮಿಕರ ಬೋನಸ್ ಸಾವಿರ ಬೀಡಿಗೆ ರೂ. 43.34

ಪುತ್ತೂರು: ಪ್ರತಿ ವರ್ಷದಂತೆ ಈ ವರ್ಷವೂ ಬೀಡಿಕಾರ್ಮಿಕರ ಬೋನಸ್, ರಜಾಸಂಬಳ, ಹಬ್ಬದ ರಜಾಸಂಬಳ ಒಟ್ಟಿಗೆ ಬಿಡುಗಡೆಯಾಗಿದ್ದು ಪ್ರತಿ ಸಾವಿರ ಬೀಡಿಗೆ ರೂ. 43.34 ರಂತೆ ಅಂದರೆ ಒಂದು ಲಕ್ಷ ಬೀಡಿಕಟ್ಟಿದವರಿಗೆತಲಾ ರೂ.4,334 ಬೋನಸ್ ಸಿಗಲಿದೆ ಎಂದು ಪುತ್ತೂರು ತಾಲೂಕು ಬೀಡಿಕೆಲಸಗಾರರ ಸಂಘದ ಅಧ್ಯಕ್ಷ, ನ್ಯಾಯವಾದಿ ಪಿ.ಕೆ.ಸತೀಶನ್, ಕಾರ್ಯದರ್ಶಿ ಬಿ.ಎಂ.ಭಟ್, ಖಜಾಂಜಿ ಈಶ್ವರಿ ಶಂಕರ್ ಮುಂಡೂರು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅದಲ್ಲದೆ ಸರಕಾರ ನಿಗದಿ ಪಡಿಸಿದ ಹೊಸ ಕನಿಷ್ಟ ಕೂಲಿ ಪ್ರತಿ ಸಾವಿರ ಬೀಡಿಗೆ ರೂ. 391.92 ರಂತೆ

ಬೀಡಿಕಾರ್ಮಿಕರ ಬೋನಸ್ ಸಾವಿರ ಬೀಡಿಗೆ ರೂ. 43.34 Read More »

ಜಿ.ಎಲ್. ಆಚಾರ್ಯದಲ್ಲಿ ಆಟಿ ಸೇಲ್: ಇನ್ನು ಮೂರೇ ದಿನ

ಪುತ್ತೂರು: ನಗರದ ಪ್ರತಿಷ್ಠಿತ ಆಭರಣ ಮಳಿಗೆ ಜಿ. ಎಲ್. ಆಚಾರ್ಯದಲ್ಲಿ ಆಟಿ ಸೇಲ್ ನಡೆಯುತ್ತಿದ್ದು, ಇದಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಮುಂದಿನ ಮೂರು ದಿನಗಳ ಕಾಲ ಈ ಆರ್ ಇರಲಿದ್ದು ಚಿನ್ನ, ಬೆಳ್ಳಿ, ವಜ್ರಾಭರಣಗಳಿಗೆ ಆಕರ್ಷಕ ಉಡುಗೊರೆ ಪ್ರಕಟಿಸಲಾಗಿದೆ. ಚಿನ್ನಾಭರಣ ಖರೀದಿಗೆ ನೇರ 300/- ರೂ. ರಿಯಾಯಿತಿ, 1 ಕ್ಯಾರಟ್ ಗ್ಲೋ ವಜ್ರಾಭರಣ ಖರೀದಿಯ ಮೇಲೆ ರೂ. 5000/- ನೇರ ರಿಯಾಯಿತಿ ಇದೆ. ಬೆಳ್ಳಿ ಆಭರಣಗಳಿಗೆ ಸಂಬಂಧಿಸಿದ ಹಾಗೆ ಕೆ.ಜಿ. ಗೆ 3000/- ರೂ. ರಿಯಾಯಿತಿ

ಜಿ.ಎಲ್. ಆಚಾರ್ಯದಲ್ಲಿ ಆಟಿ ಸೇಲ್: ಇನ್ನು ಮೂರೇ ದಿನ Read More »

ಮೃತ ವ್ಯಕ್ತಿಯ ಅಂಗಾಂಗ ದಾನ ಮಾಡಿ ಮಾದರಿಯಾದ ಕುಟುಂಬ

ಕಾರ್ಕಳ: ಮೃತನ ಕಿಡ್ನಿ, ಹೃದಯ, ಕಣ್ಣುಗಳನ್ನು ದಾನ ಮಾಡುವ ಮೂಲಕ ನಂದಳಿಕೆಯ ಕುಟುಂಬವೊಂದು ಸಾವಿನ ನೋವಿನಲ್ಲೂ ಮತ್ತೊಂದಷ್ಟು ಜನರಿಗೆ ಸಾಂತ್ವನವಾಗುವ ಮೂಲಕ ಮಾದರಿಯಾಗಿದ್ದಾರೆ. ಬೆಂಗಳೂರು ಮೂಲದ ಕಂಪನಿಯೊಂದರಲ್ಲಿ ಬಾಂಗ್ಲಾದೇಶದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಬೆಳ್ಮಣ್ಣಿನ ನಂದಳಿಕೆಯ ನಿತೀಶ್ ಎನ್(46) ಮೃತಪಟ್ಚಿದ್ದರು. ಇವರ ಪತ್ನಿ ಮತ್ತು ತಾಯಿ ಮೃತರ ಕಣ್ಣು, ಕಿಡ್ನಿ, ಹೃದಯವನ್ನು ದಾನ ಮಾಡುವಂತೆ ವಿನಂತಿಸಿಕೊಂಡಿದ್ದಾರೆ. ನಿತೀಶ್ ಅವರು ಒಂದು ಕಣ್ಣಿನ ದೃಷ್ಟಿಯ ತೊಂದರೆ ಅನುಭವಿ ಸುತ್ತ ಬಿದ್ದು, ತಪಾಸಣೆಗಾಗಿ ಬೆಂಗಳೂರಿಗೆ ಬಂದಿದ್ದರು. ತಪಾಸಣೆಯ ಸಂದರ್ಭದಲ್ಲಿ ತೊಂದರೆಯಾಗಿ ಆ್ಯಂಜಿಯೋಪ್ಲಾಸ್ಟ್

ಮೃತ ವ್ಯಕ್ತಿಯ ಅಂಗಾಂಗ ದಾನ ಮಾಡಿ ಮಾದರಿಯಾದ ಕುಟುಂಬ Read More »

ಎಲ್‌ಕೆಜಿಯಿಂದ ಪಿಯುಸಿ ತನಕದ ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ

ಬಡ ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡಲು ಸರ್ಕಾರದ ಮಹತ್ವದ ನಿರ್ಧಾರ ಬೆಂಗಳೂರು: ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳ ಎಲ್‌ಕೆಜಿಯಿಂದ ಪಿಯುಸಿ ತನಕದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪ್ರಮುಖ ಒತ್ತು ನೀಡಲಾಗುತ್ತಿದೆ. ಈ ಕುರಿತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್‌ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು

ಎಲ್‌ಕೆಜಿಯಿಂದ ಪಿಯುಸಿ ತನಕದ ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ Read More »

ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ

ಪುತ್ತೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳು ಜೆರಾಕ್ಸ್ ಮಾಡಿ ಬರುವುದಾಗಿ ಹೋಗಿ ಬಳಿಕ ಮನೆಗೆ ಬಾರದೆ ನಾಪತ್ತೆಯಾದ ಬಗ್ಗೆ ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಲಾಗಿದೆ. ಪುತ್ತೂರು ಪಡ್ನೂರು ನಿವಾಸಿ ಗಿರಿಜಾ ದೇವಿ ಮತ್ತು ಮಂಟು ಪಾಸ್ವಾನ ದಂಪತಿಗಳ ಪುತ್ರಿ ರೂಪ (೧೯) ನಾಪತ್ತೆಯಾದ ಯುವತಿ. ತಾಯಿ ಮಂಗಳೂರಿನ ನರ್ಸಿಂಗ್ ಹೋಂ ನಲ್ಲಿ ತಂದೆ ಉಡುಪಿಯಲ್ಲಿ ಗಾರೆ ಕೆಲಸ ನಿರ್ವಹಿಸುತ್ತಿದ್ದು ಮನೆಯಲ್ಲಿ ರೂಪ ಮತ್ತು ಆಕೆಯ ತಮ್ಮ ವಾಸವಿದ್ದು ನಿನ್ನೆ ಜೆರಾಕ್ಸ್ ಮಾಡಿಸಲು ಪೇಟೆಗೆ ಹೋಗಿ ಬರುವುದಾಗಿ ತಿಳಿಸಿ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ Read More »

ಗುರುವಾಯನಕೆರೆ ಹೆದ್ದಾರಿಯಲ್ಲಿ ಮರಣ ಗುಂಡಿಗಳು | ವಾಹನ ಚಾಲಕರು ಕಂಗಾಲು  ನಿರ್ಲಕ್ಷ್ಯ ತೋರುತ್ತಿರುವ ಜನಪ್ರತಿನಿಧಿಗಳು

ಬೆಳ್ತಂಗಡಿ : ಗುರುವಾಯನಕೆರೆ ಕಾರ್ಕಳ ರಸ್ತೆಯಲ್ಲಿ ಹೊಂಡ – ಗುಂಡಿಗಳು ನಿರ್ಮಾಣಗೊಂಡಿದೆ . ಇದರಿಂದಾಗಿ ವಾಹನ ಅವಘಡಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲಿದ್ದು, ವಾಹನ ಸವಾರರು ಹಾಗೂ ಪಾದಚಾರಿಗಳು ತೊಂದರೆ ಅನುಭವಿಸುವ ಪರಿಸ್ಥಿತಿ ಉಂಟಾಗಿದೆ.    ಮಳೆ ಬಂದ ಸಂದರ್ಭದಲ್ಲಿ ಹೊಂಡಗಳಲ್ಲಿ ನೀರು ತುಂಬಿದಾಗ , ಗುಂಡಿಯ ಆಳ ತಿಳಿಯದೆ ದ್ವಿಚಕ್ರ ವಾಹನಗಳನ್ನು ಒಳಗೊಂಡಂತೆ ಇತರ ಸಣ್ಣ-ಪುಟ್ಟ ವಾಹನಗಳು ಬಿದ್ದು ಸವಾರರು ಗಾಯಗೊಳ್ಳುತ್ತಿರುವುದು ದಿನನಿತ್ಯವೂ  ಸಂಭವಿಸುತ್ತಿದೆ . ಹೊಂಡ – ಗುಂಡಿಗಳ ದುರಸ್ತಿ ಕುರಿತು ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ

ಗುರುವಾಯನಕೆರೆ ಹೆದ್ದಾರಿಯಲ್ಲಿ ಮರಣ ಗುಂಡಿಗಳು | ವಾಹನ ಚಾಲಕರು ಕಂಗಾಲು  ನಿರ್ಲಕ್ಷ್ಯ ತೋರುತ್ತಿರುವ ಜನಪ್ರತಿನಿಧಿಗಳು Read More »

ನಾಳೆ ಮಂಗಳೂರು ಆಕಾಶವಾಣಿಯಲ್ಲಿ ಸೀತಾರಾಮ ಕೇವಳರ ಚಿಂತನ

ಪುತ್ತೂರು: ಅಂತಾರಾಷ್ಟ್ರೀಯ  ರೆಡ್ ಕ್ರಾಸ್ ದಿನ (ಕ್ರೆಸೆಂಟ್ ಡೇ) ಕುರಿತಾಗಿ ಸೀತಾರಾಮ ಕೇವಳ ಅವರು ಮಂಡಿಸಿದ ಚಿಂತನವು  ಬೆಳಿಗ್ಗೆ 6.30ಕ್ಕೆ ಮಂಗಳೂರು ಆಕಾಶವಾಣಿಯಲ್ಲಿ ಪ್ರಸಾರವಾಗಲಿದೆ. ಕೇವಳ ಅವರ ಇನ್ನೂ ಮೂರು ಇತರ ಚಿಂತನಗಳು ( ರಾಷ್ಟ್ರೀಯ  ಕ್ವಿಟ್ ಇಂಡಿಯಾ ಡೇ, ಆಹಾರದ ಸಮರ್ಪಕ ಬಳಕೆ ಮತ್ತು ಉತ್ಸವಗಳು ಹೇಗಿರಬೇಕು ) ಕ್ರಮವಾಗಿ 2025ರ ಜೂನ್ 8, ಜುಲೈ 8 ಮತ್ತು ಆಗಸ್ಟ್ 8ರಂದು ಮುಂಜಾನೆ 6.30ಕ್ಕೆ ಪ್ರಸಾರವಾಗಲಿವೆ.

ನಾಳೆ ಮಂಗಳೂರು ಆಕಾಶವಾಣಿಯಲ್ಲಿ ಸೀತಾರಾಮ ಕೇವಳರ ಚಿಂತನ Read More »

ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ ನಿಧನ

ಮಂಗಳೂರು : ಹಿರಿಯ ಪತ್ರಕರ್ತ, ಹೊಸದಿಗಂತ ಪತ್ರಿಕೆಯ ವಿಶೇಷ ವರದಿಗಾರ ಗುರುವಪ್ಪ ಬಾಳೆಪುಣಿ (62) ಅಲ್ಪಕಾಲದ ಅಸೌಖ್ಯದಿಂದ ಇಂದು ಬಾಳೆಪುಣಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಮಂಗಳೂರು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಬಾಳೆಪುಣಿ ಅವರು 26 ವರ್ಷ ಹೊಸದಿಗಂತ ಪತ್ರಿಕೆಯ ವರದಿಗಾರನಾಗಿ ಕಾರ್ಯ ನಿರ್ವಹಿಸಿದ್ದರು. ಮಂಗಳೂರು ಮಿತ್ರ , ಕರಾವಳಿ ಅಲೆ ಪತ್ರಿಕೆಗಳಲ್ಲಿಯೂ ವರದಿಗಾರನಾಗಿ ಕಾರ್ಯ ನಿರ್ವಹಿಸಿದ್ದರು. ಹರೇಕಳ ಹಾಜಬ್ಬ ಅವರನ್ನು

ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ ನಿಧನ Read More »

error: Content is protected !!
Scroll to Top