ಗ್ರಾಮಜನ್ಯ ರೈತ ಉತ್ಪಾದಕ ಸಂಸ್ಥೆಯ ನೂತನ ಜಾಲತಾಣ ಅನಾವರಣ, ಜೇನುಪೆಟ್ಟಿಗೆ ನಿರ್ವಹಣಾ ಸೇವೆ ಲೋಕಾರ್ಪಣೆ, ಜೇನು ಕೃಷಿಕರ ಸಮ್ಮಿಲನ
ಪುತ್ತೂರು: ಗ್ರಾಮಜನ್ಯ ರೈತ ಉತ್ಪಾದಕ ಸಂಸ್ಥೆಯ ನೂತನ ಜಾಲತಾಣದ ಅನಾವರಣ, ಕೃಷಿಕಾರಿಗಾಗಿ ಜೇನು ಪೆಟ್ಟಿಗೆ ನಿರ್ವಹಣಾ ಸೇವೆಯ ಲೋಕಾರ್ಪಣೆ ಮತ್ತು ಜೇನು ಕೃಷಿಕರ ಸಮ್ಮಿಲನ ಕಾರ್ಯಕ್ರಮ ಪುತ್ತೂರಿನ ಜಿ. ಎಲ್. ರೋಟರಿ ಸಭಾಭವನದಲ್ಲಿ ನಡೆಯಿತು. ಪುತ್ತೂರು ಶಾಸಕ ಅಶೋಕ ಕುಮಾರ ರೈ ಜೇನು ಕೃಷಿಯ ಸಾಧಕರನ್ನು ಸನ್ಮಾನಿಸಿ ಮಾತನಾಡಿ, ಜೇನಿನ ಬಳಕೆ ವ್ಯಾಪಕವಾಗಿ ಹೆಚ್ಚಾಗುವಂತೆ ಸರಕಾರದ ಮಟ್ಟದಲ್ಲಿ ಹೆಚ್ಚಿನ ವ್ಯವಸ್ಥೆಯನ್ನು ಜಾರಿಗೊಳಿಸಿ, ಜೇನು ಕೃಷಿಕರಿಗೆ ಉತ್ತಮ ಮಾರುಕಟ್ಟೆ ಲಭಿಸುವಂತೆ ರೈತ ಉತ್ಪಾದಕ ಸಂಸ್ಥೆಯ ಮೂಲಕ ಆಗಲಿ ಎಂದು […]