ಜೂ.17-18 : ಪುತ್ತೂರು ಜೈನಭವನದಲ್ಲಿ ಹಲಸು ಮತ್ತು ಹಣ್ಣುಗಳ ಮೇಳ-2023” | ಹಲಸಿನ ಹಣ್ಣು ಸಹಿತ ವಿವಿಧ ಹಣ್ಣುಗಳ ಪ್ರದರ್ಶನ, ಮಾರಾಟ | ಹಲಸಿನ ಹಣ್ಣಿನ ವಿವಿಧ ಖಾದ್ಯಗಳ ಮಳಿಗೆ
ಪುತ್ತೂರು: ಪುತ್ತೂರು ನವತೇಜ ಟ್ರಸ್ಟ್, ಬೆಂಗಳೂರಿನ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಹಾಗೂ ಪುತ್ತೂರು ಜೆಸಿಐ ಸಂಯುಕ್ತ ಆಶ್ರಯದಲ್ಲಿ6ನೇ “ಹಲಸು ಮತ್ತು ಹಣ್ಣುಗಳ ಮೇಳ-2023” ಜೂ.17 ಹಾಗೂ 18 ರಂದು ಪುತ್ತೂರು ಬೈಪಾಸ್ ರಸ್ತೆಯಲ್ಲಿರುವ ಜೈನ ಭವನದಲ್ಲಿ ನಡೆಯಲಿದೆ ಎಂದು ನವತೇಜ ಟ್ರಸ್ಟ್ ಅಧ್ಯಕ್ಷ ಅನಂತಪ್ರಸಾದ್ ನೈತ್ತಡ್ಕ ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮೇಳದಲ್ಲಿ ಸುಮಾರು 30 ಕ್ಕೂ ಅಧಿಕ ಮಿಕ್ಕಿ ಹಲಸಿನ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟಗಳ ಮಳಿಗೆಗಳಿವೆ. ಸ್ಥಳದಲ್ಲೇ ತಯಾರಿಸುವ ಹಲವು ಪಾರಂಪರಿಕ […]