ಮುಂಡೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಮೃತಧಾರ ವಿಸ್ತೃತ ಕಟ್ಟಡದ ಪ್ರವೇಶೋತ್ಸವ | ಸಾಂದ್ರ ಶೀತಲೀಕರಣ ಘಟಕ ಉದ್ಘಾಟನೆ
ಪುತ್ತೂರು : ಮುಂಡೂರು ಹಾಲು ಉತ್ಪಾದಕರ ಸಹಕಾರ ಸಂಘದ “ಅಮೃತಧಾರ” ವಿಸ್ತೃತ ಕಟ್ಟಡದ ಪ್ರವೇಶೋತ್ಸವ ಹಾಗೂ ಸಾಂದ್ರ ಶೀತಲೀಕರಣ ಘಟಕದ ಉದ್ಘಾಟನೆ ಗುರುವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಉದ್ಘಾಟನೆ ನೆರವೇರಿಸಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಕೃಷಿಯ ಜತೆಗೆ ಹೈನುಗಾರಿಕೆಗೂ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮುಂಡೂರಿನಲ್ಲಿ ಪ್ರಾರಂಭಗೊಂಡ ಸಂಘವು ಉತ್ತಮ ಸಾಧನೆಯ ಹಾದಿಯಲ್ಲಿ ಮುನ್ನಡೆಯುತ್ತಿದೆ. ಪ್ರಸ್ತುತ 1300 ಲೀಟರ್ ಹಾಲು ಸಂಗ್ರಹದೊಂದಿಗೆ ಸಾಂದ್ರ ಶೀತಲೀಕರಣ ಘಟಕ ಸ್ಥಾಪಿಸುವ ಹಂತಕ್ಕೆ ಬೆಳೆದಿರುವುದು ಶ್ಲಾಘನೀಯ ಎಂದರು. ದ.ಕ.ಜಿಲ್ಲಾ ಹಾಲು ಉತ್ಪಾದಕರ […]