ಕೆದಿಲ ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ | 77.98 ಲಕ್ಷ ರೂ. ನಿವ್ವಳ ಲಾಭ, ಶೇ.15 ಡಿವಿಡೆಂಡ್ ಘೋಷಣೆ : ಪದ್ಮನಾಭ ಭಟ್ ಪೆರ್ನಾಜೆ
ಪುತ್ತೂರು: ಕೆದಿಲ ವ್ಯವಸಾಯ ಸೇವಾ ಸಹಕಾರಿ ಸಂಘ 2023-24ನೇ ಸಾಲಿನಲ್ಲಿ 77.98 ಲಕ್ಷ ರೂಪಾಯಿ ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.15 ಡಿವಿಡೆಂಡ್ ನೀಡಲಾಗುವುದು. ಲೆಕ್ಕ ಪರಿಶೋಧನೆಯಲ್ಲಿ ಸಂಘವು ಸತತ 19 ವರ್ಷಗಳಿಂದ ‘ಎ’ ಶ್ರೇಣಿಯನ್ನು ಪಡೆದುಕೊಂಡಿದೆ. 2015-16 ರಿಂದ ನಿರಂತರವಾಗಿ ಶೇ.100 ಸಾಲ ವಸೂಲಾತಿ ಮಾಡಿದೆ ಎಂದು ಸಂಘದ ಅಧ್ಯಕ್ಷ ಪದ್ಮನಾಭ ಭಟ್ ಪೆರ್ನಾಜೆ ಹೇಳಿದರು. ಅವರು ಸಂಘದ ಶತಾನಂದ ಸಭಾ ಭವನದಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವರ್ಷಾಂತ್ಯಕ್ಕೆ ಸಂಘದಲ್ಲಿ […]










