ಚಾರ್ವಾಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ | ಒಂದೂವರೆ ಕೋಟಿ ವೆಚ್ಚದ ಕಟ್ಟಡಕ್ಕೆ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥರಿಂದ ಶಿಲಾನ್ಯಾಸ
ಕಾಣಿಯೂರು: ಚಾರ್ವಾಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ನೂತನ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಭಾನುವಾರ ಕಾಣಿಯೂರು ಪ್ರಧಾನ ಕಚೇರಿ ಆವರಣದಲ್ಲಿ ನಡೆಯಿತು. ಸಂಘದ ಶತಮಾನೋತ್ಸವದ ನೆನಪಿಗಾಗಿ ಸುಮಾರು ಒಂದೂವರೆ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಕಟ್ಟಡಕ್ಕೆ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿಗಳು ಶಿಲಾನ್ಯಾಸ ನೆರವೇರಿಸಿ ಆಶೀರ್ವಚನ ನೀಡಿದರು. ಸಮಾರಂಭದಲ್ಲಿ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಚಾರ್ವಾಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ, ಉಪಾದ್ಯಕ್ಷ ಬಾಲಕೃಷ್ಣ […]










