ಇತಿಹಾಸದಲ್ಲೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆಯಲಿರುವ ರಾಜಧಾನಿಯ ಕಂಬಳದ ಕರೆ ವೀಕ್ಷಣೆ | ಶಾಸಕರ ನೇತೃತ್ವದಲ್ಲಿ ವಿವಿಧ ಸಂಘಟನೆ ಪ್ರಮುಖರ ಸಭೆ
ಪುತ್ತೂರು: ನವೆಂಬರ್ ತಿಂಗಳಿನಲ್ಲಿ ನಡೆಯಲಿರುವ ಬೆಂಗಳೂರು ಕಂಬಳ ವಿಚಾರಕ್ಕೆ ಸಂಬಂಧಿಸಿದಂತೆ ವಿವಿಧ ಸಂಘಟನೆಗಳ ಪ್ರಮುಖರ ಜೊತೆ ಶಾಸಕ ಅಶೋಕ್ ರೈ ಅವರು ಬೆಂಗಳೂರಿನ ಸ್ವಾತಿ ಹೊಟೇಲ್ ಸಭಾಂಗಣದಲ್ಲಿ ಸಭೆ ನಡೆಸಿದರು. ಇದಕ್ಕೆ ಮೊದಲು ಅರಮನೆ ಮೈದಾನದಲ್ಲಿ ಕರೆ ನಿರ್ಮಾಣ ಮಾಡಬೇಕಾದ ಸ್ಥಳವನ್ನು ವೀಕ್ಷಣೆ ಮಾಡಲಾಯಿತು. ಸಭೆಯಲ್ಲಿ ಪ್ರಮುಖವಾಗಿ ಕೆಲವೊಂದು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಯಿತು. ಕರ್ನಾಟಕದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ರಾಜಧಾನಿಯಲ್ಲಿ ಕಂಬಳ ಏರ್ಪಡಿಸಲಾಗಿದೆ. ಕಂಬಳ ವೀಕ್ಷಣೆಗೆ ರಾಜ್ಯದ ನಾನಾ ಕಡೆಗಳಿಂದ ಕಂಬಳಾಭಿಮಾನಿಗಳು ಆಗಮಿಸುವ ನಿರೀಕ್ಷೆ […]