ಜಿಲ್ಲಾ ಕೇಂದ್ರಕ್ಕೆ ಪೂರಕವಾಗಿ ನಿರ್ಮಾಣವಾಗಲಿದೆ ಜಿಲ್ಲಾ ಕ್ರೀಡಾಂಗಣ | ತೆಂಕಿಲದಲ್ಲಿ ಜಾಗ ಗುರುತಿಸಿದ್ದು, ಯೋಜನಾ ವರದಿಯೂ ಸಿದ್ಧ
ಪುತ್ತೂರು: ಜಿಲ್ಲಾ ಕೇಂದ್ರದ ಕನಸು ಕಾಣುತ್ತಿರುವ ಪುತ್ತೂರಿಗೆ ಸುಸಜ್ಜಿತ ಕ್ರೀಡಾಂಗಣ ಅಗತ್ಯ. ಈ ಹಿನ್ನೆಲೆಯಲ್ಲಿ ಕ್ರೀಡಾಂಗಣಕ್ಕಾಗಿ ಜಾಗ ಕಾದಿರಿಸಿದ್ದು, ಯೋಜನಾ ವರದಿಯನ್ನು ಸಿದ್ಧಪಡಿಸಲಾಗಿದೆ. ಶಾಸಕ ಸಂಜೀವ ಮಠಂದೂರು ಅವರು ಮುತುವರ್ಜಿಯ ವಹಿಸಿ ಜಿಲ್ಲಾ ಕೇಂದ್ರಕ್ಕೆ ಅಗತ್ಯವಾದ ಮೂಲಸೌಕರ್ಯಗಳನ್ನು ಒಂದೊಂದಾಗಿ ಹೊಂದಿಸಿಕೊಳ್ಳುವಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಇದರಲ್ಲಿ ಕ್ರೀಡಾಂಗಣವೂ ಒಂದು. ಪುತ್ತೂರು ನಗರದ ಹೊರವಲಯದ ತೆಂಕಿಲದಲ್ಲಿ ಆಧುನಿಕ ಸೌಲಭ್ಯಗಳನ್ನೊಳಗೊಂಡ ಜಿಲ್ಲಾ ಕ್ರೀಡಾಂಗಣಕ್ಕಾಗಿ ಈಗಾಗಲೇ ಸ್ಥಳ ಕಾಯ್ದಿರಿಸುವಿಕೆ ಪ್ರಕ್ರಿಯೆ ನಡೆದಿದೆ. ಶಾಸಕ ಸಂಜೀವ ಮಠಂದೂರು ಅವರ ಸರ್ವ ಪ್ರಯತ್ನದಿಂದ ಕ್ರೀಡಾಂಗಣದ ಕನಸು ನನಸಾಗುವುದರಲ್ಲಿದೆ. […]