ಕಾರಂತರು ಶಿಸ್ತು, ಸಮಯ ಪ್ರಜ್ಞೆಗೆ ಹೆಸರುವಾಸಿ : ಕೋಟ ಶ್ರೀನಿವಾಸ ಪೂಜಾರಿ | ವಿವೇಕಾನಂದ ಕಾಲೇಜಿನಲ್ಲಿ ವಿಚಾರ ಗೋಷ್ಠಿ
ಪುತ್ತೂರು: ಕಾರಂತರು ಒಂದು ತುಂಬಿದ ಕೊಡವಿದ್ದಂತೆ. ಅವರು ಎಂದೂ ಪ್ರಶಸ್ತಿಯ ಹಿಂದೆ ಹೋದವರಲ್ಲ. ಕಾರಂತರಲ್ಲಿ ಹಾಸ್ಯ ಪ್ರಜ್ಞೆಯೂ ಇತ್ತು. ಅವರು ಬಹಳ ನೇರವಾಗಿ ಮಾತನಾಡುವ ವ್ಯಕ್ತಿ. ಕಾರಂತರ ವಿಚಾರಗಳನ್ನು ಮುಂದಿನ ಜನಾಂಗಕ್ಕೆ ತಿಳಿಸುವುದು ಅವಶ್ಯ ಎಂದು ಉಡುಪಿ ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಮಂಗಳವಾರ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ (ಸ್ವಾಯತ್ತ) ವಿವೇಕಾನಂದ ಸಂಶೋಧನಾ ಕೇಂದ್ರ, ಡಾ.ಕೆ ಶಿವರಾಮ ಕಾರಂತ ಅಧ್ಯಯನ ಕೇಂದ್ರ, ಕನ್ನಡ ವಿಭಾಗ ಮತ್ತು ಐಕ್ಯುಎಸಿ ಸಹಯೋಗದಲ್ಲಿ […]