ಆನಡ್ಕ ಪ್ರಾಥಮಿಕ ಶಾಲೆಯಲ್ಲಿ ಸ್ಟಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ | ಉದ್ಘಾಟನೆ ನೆರವೇರಿಸಿದ ಶಾಸಕ ಸಂಜೀವ ಮಠಂದೂರು
ಪುತ್ತೂರು: ಆನಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುದ್ಧ ಕುಡಿಯುವ ನೀತಿನ ಘಟಕ, ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಮಂಗಳವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಉದ್ಘಾಟನೆ ನೆರವೇರಿಸಿ ಮಾತನಾಡಿ, ಶಾಲೆಗಳನ್ನು ಆಧುನೀಕರಣಗೊಳಿಸುವ ನಿಟ್ಟಿನಲ್ಲಿ ಸ್ಟಾರ್ಟ್ ಕ್ಲಾಸ್, ಕುಡಿಯುವ ನೀರಿನ ಘಟಕ ನೀಡುವ ಕೆಲಸ ಆಗಿದೆ. ಜತೆಗೆ ಮಕ್ಕಳು ಮೊಬೈಲ್ ಫೋನ್‍ಗೆ ಬೇಗ ಹೊಂದಿಕೊಳ್ಳುತ್ತಾರೆ ಎಂಬ ಕಾರಣಕ್ಕೂ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆ ಮಾಡಲಾಗಿದೆ ಎಂದ ಅವರು, ಮಕ್ಕಳ ಬೆಳವಣಿಗೆಗೆ ಬೇಕಾದ ಮೊಟ್ಟೆ, ಚಿಕ್ಕಿ ಕೊಡುವ ಕೆಲಸ ಸರಕಾರ ಮಾಡುತ್ತಿದೆ […]