ಕ್ಯಾಂಪಸ್‌

ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವ

ಪುತ್ತೂರು: ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ 2025-26ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿಗಳಿಗೆ ದೀಕ್ಷಾ ಸಮಾರಂಭ ಹಾಗೂ ಶಾಲಾ ಪ್ರಾರಂಭೋತ್ಸವವು ಸೋಮವಾರ ನಡೆಯಿತು. ಸಮಾರಂಭದಲ್ಲಿ ಶಾಲಾ ಸಂಚಾಲ ಭಾಸ್ಕರ ಆಚಾರ್ ಹಿಂದಾರು ಮಾತನಾಡಿ, ಜಗತ್ತಿಗೆ ಒಡೆಯನಾದ ಶ್ರೀ ಕೃಷ್ಣ ಪರಮಾತ್ಮನ ಗುರು ಸಾಂದೀಪನಿ ಹೆಸರಿನಲ್ಲಿ ಶಾಲಾಧ್ಯಕ್ಷರು ಶಾಲೆಯನ್ನು ಆರಂಭಿಸಿದ್ದು, ವಿದ್ಯಾರ್ಥಿಗಳಿಗೆ ವಿದ್ಯೆ ಎಂದರೆ ಕೇವಲ ಕಲಿಯುವುದು ಮಾತ್ರವಲ್ಲ ಒಳ್ಳೆತನವನ್ನು ಅಳವಡಿಸಿಕೊಂಡು, ಸಂಸ್ಕಾರಯುತವಾಗಿ, ತಂದೆ ತಾಯಿಗೆ ಗೌರವ ಕೊಟ್ಟು, ಶಾಲೆಗೆ ಚ್ಯುತಿ ಬಾರದ ಹಾಗೆ ಬಾಳಿ ಎಂದರು ಹಾಗೂ ನೂತನ […]

ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವ Read More »

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಶಾಲಾ ಆರಂಭೋತ್ಸವ “ಆರಂಭ-2025’

ಪುತ್ತೂರು: ಬನ್ನೂರಿನ ಅಲಂಬುಡದಲ್ಲಿ ಕಾರ್ಯಾಚರಿಸುತ್ತಿರುವ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ 2925-26ನೆ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ‘ ಆರಂಭ 2025’ ಅತ್ಯಂತ ಅರ್ಥಪೂರ್ಣವಾಗಿ  ನಡೆಯಿತು. ನಗರಸಭಾ ಮುಖ್ಯಾಧಿಕಾರಿ ಮಧು ಎಸ್. ಮನೋಹರ್ ಉದ್ಘಾಟಿಸಿ ಮಾತನಾಡಿ, ಮಾಡುವ ಕೆಲಸ ಸಣ್ಣದಾದರೂ ನಿರಂತರ ಪ್ರಯತ್ನ ಫಲ ನೀಡುತ್ತದೆ. ಅಂತೆಯೇ ಸಣ್ಣದಾಗಿ ಆರಂಭವಾದ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ಖಂಡಿತವಾಗಿಯೂ ದೊಡ್ಡದಾಗಿ ಬೆಳೆದು ಕೀರ್ತಿ ಪಡೆಯುತ್ತದೆ ಎಂದರು. ಶಾಲಾ ಸಂಚಾಲಕ ಎವಿ ನಾರಾಯಣ ಅವರ ಗುರುಗಳಾದ, ವಿವೇಕಾನಂದ ಪಾಲಿಟೆಕ್ನಿಕ್

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಶಾಲಾ ಆರಂಭೋತ್ಸವ “ಆರಂಭ-2025’ Read More »

ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ಫಲಿತಾಂಶ ಪ್ರಕಟ | ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿಗೆ ಶೇ.100 ಫಲಿತಾಂಶ

ಪುತ್ತೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ 2024-25ನೇ ಸಾಲಿನ ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶವು ಪ್ರಕಟಗೊಂಡಿದ್ದು, ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಕಾಲೇಜಿನಿಂದ ಒಟ್ಟು 372 ವಿದ್ಯಾರ್ಥಿಗಳು ಹಾಜರಾಗಿದ್ದು ಎಲ್ಲಾ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಕಾಲೇಜಿನ ವಿಭಾಗವಾರು ಫಲಿತಾಂಶಗಳ ಪೈಕಿ ಕಂಪ್ಯೂಟರ್ ಸೈನ್ಸ್-ಶೇ. 100, ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಷಿನ್ ಲರ್ನಿಂಗ್ ಶೇ.100, ಡಾಟಾಸೈನ್ಸ್- ಶೇ.100,

ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ಫಲಿತಾಂಶ ಪ್ರಕಟ | ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿಗೆ ಶೇ.100 ಫಲಿತಾಂಶ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ಸ್ವಚ್ಚತಾ ಸೇ ಸಹಕಾರ್’

ಪುತ್ತೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು, ದ.ಕ.ಜಿಲ್ಲಾ ಸಹಕಾರಿ ಯೂನಿಯನ್, ದ.ಕ.ಜಿಲ್ಲಾ ಸಹಕಾರ ಇಲಾಖೆ ಹಾಗೂ ಸಂತ ಪೀಲೋಮಿನಾ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ-2025 ಅಂಗವಾಗಿ ‘ಸ್ವಚ್ಚತಾ ಸೇ ಸಹಕಾರ್’ ಕಾರ್ಯಕ್ರಮ ಸಂತ ಫಿಲೋಮಿನಾ ಕಾಲೇಜಿನಲ್ಲಿ ನಡೆಯಿತು.  ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಹಾತ್ಮ ಗಾಂಧೀಜಿಯವರ 150 ನೇ ಜನ್ಮದಿನಾಚರಣೆ ಪ್ರಯುಕ್ತ ಸ್ವಚ್ಛ ಭಾರತ ನಿರ್ಮಾಣ

ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ಸ್ವಚ್ಚತಾ ಸೇ ಸಹಕಾರ್’ Read More »

ಹಿರಿಯರಿಗೆ ತೃಪ್ತಿ ನೀಡುವ ರೀತಿಯಲ್ಲಿ ಎಳೆಯರು ಕಾರ್ಯನಿರ್ವಹಿಸಬೇಕು. : ಡಾ. ಗಿರೀಶ್ ಅಜಕ್ಕಳ | ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ

ಪುತ್ತೂರು: ಜಿಡೆಕಲ್ಲಿನಲ್ಲಿ ಕಾರ್ಯಾಚರಿಸುತ್ತಿರುವ  ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಸೋಮವಾರ ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಗಿರೀಶ್ ಭಟ್ ಅಜಕ್ಕಳ ಪಾಲ್ಗೊಂಡು ಮಾತನಾಡಿ, ವಿದ್ಯಾರ್ಥಿಗಳು ತಮ್ಮಲ್ಲಿದ್ದ ಸಂಪತ್ತನ್ನು ಸದುಪಯೋಗಪಡಿಸಿಕೊಳ್ಳಬೇಕು. ಹಾಗಾದಾಗ ಅದು ಜೀವನ ಪರ್ಯಂತ ಫಲವನ್ನು ನೀಡುತ್ತದೆ. ಹಿರಿಯರಿಗೆ ತೃಪ್ತಿ ನೀಡುವ ರೀತಿಯಲ್ಲಿ ಎಳೆಯರು ಕಾರ್ಯನಿರ್ವಹಿಸಬೇಕು. ಬುದ್ಧಿವಂತಿಕೆಯಿಂದ ಕಾರ್ಯೋನ್ಮುಖರಾಗುವ ಮೂಲಕ ಯಶಸ್ಸನ್ನು ಪಡೆಯಬೇಕು. ಇದು ವಿದ್ಯಾರ್ಥಿ ಜೀವನಕ್ಕೆ ಮುಕುಟಪ್ರಾಯವಾದ ಸಂಗತಿಯಾಗುತ್ತದೆ ಎಂದು ಅವರು ಪ್ರತಿಪಾದಿಸಿದರು.

ಹಿರಿಯರಿಗೆ ತೃಪ್ತಿ ನೀಡುವ ರೀತಿಯಲ್ಲಿ ಎಳೆಯರು ಕಾರ್ಯನಿರ್ವಹಿಸಬೇಕು. : ಡಾ. ಗಿರೀಶ್ ಅಜಕ್ಕಳ | ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ Read More »

ಭಾರೀ ಮಳೆ ಹಿನ್ನಲೆಯಲ್ಲಿ ಇಂದು ಅಂಗನವಾಡಿಗಳಿಗೆ ರಜೆ ಘೋಷಣೆ

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ಎಲ್ಲ ಅಂಗನವಾಡಿಗಳಿಗೆ ಇಂದು( ಮೇ 26) ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಮುಂಗಾರು ಆರಂಭದಲ್ಲೇ ಜಿಲ್ಲೆಯ ಅನೇಕ ಕಡೆಗಳಲ್ಲಿ ಭಾರೀ ಹಾನಿಯುಂಟು ಮಾಡಿದೆ. ಈ ಹಿನ್ನಲೆಯಲ್ಲಿ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದ್ದು, ದ.ಕ.ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಭಾರೀ ಮಳೆ ಹಿನ್ನಲೆಯಲ್ಲಿ ಇಂದು ಅಂಗನವಾಡಿಗಳಿಗೆ ರಜೆ ಘೋಷಣೆ Read More »

ಸಮಾಜದಿಂದ ಪಡೆದದ್ದನ್ನು ಸಮಾಜಕ್ಕೆ ನೀಡಬೇಕು: ಸೀತಾರಾಮ ಕೇವಳ | ಕಡಬ ಸರಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಸಮಾರಂಭ

ಕಡಬ: ತಾಲೂಕಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಶನಿವಾರ ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ನ್ಯೂಸ್ ಪುತ್ತೂರು ಇದರ ಅಧ್ಯಕ್ಷ ಸೀತಾರಾಮ ಕೇವಳ ಮಾತನಾಡಿ, ವಿದ್ಯಾರ್ಥಿಗಳು ಗುರುಗಳಿಗಿಂತಲೂ ಹೆಚ್ಚಿನ ಸಾಧನೆ ಮಾಡಿದಾಗ ನಿಜವಾದ ಗುರುಕಾಣಿಕೆ ನೀಡಿದಂತಾಗುತ್ತದೆ. ಸಮಾಜದಿಂದ ಪಡೆದದ್ದನ್ನು ಸಮಾಜಕ್ಕೆ ನೀಡುವುದು ನಮ್ಮ ಕರ್ತವ್ಯವಾಗಬೇಕು. ಇಲ್ಲಿ ಕಾಲೇಜಿನ ಅಭಿವೃದ್ಧಿ ಮಂಡಳಿ ಬೆವರಿಳಿಸಿ ದುಡಿದು ಗಳಿಸಿದ ಸ್ವಂತ ಸಂಪಾದನೆಯ ಒಂದು ಭಾಗವನ್ನು ಕಾಲೇಜಿನ ಬಿಸಿ ಊಟದ ವ್ಯವಸ್ಥೆಗೆ ನೀಡುತ್ತಿದ್ದಾರೆ. ವಿದ್ಯಾರ್ಥಿಗಳಾದ ನೀವು ದುಡಿದು ಗಳಿಸಿ ಮುಂದಿನ

ಸಮಾಜದಿಂದ ಪಡೆದದ್ದನ್ನು ಸಮಾಜಕ್ಕೆ ನೀಡಬೇಕು: ಸೀತಾರಾಮ ಕೇವಳ | ಕಡಬ ಸರಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಸಮಾರಂಭ Read More »

ಪ್ರಶ್ನೆಗಳು ಹುಟ್ಟುವವರೆಗೆ ನಮ್ಮ ಸಂಶೋಧನೆ ಸರಿ ಹಾದಿಯಲ್ಲಿರುತ್ತೆ: ಪ್ರೊ.ಬಿ. ವೆಂಕಟರಾಜ | ಪ್ರಭಾವಶಾಲಿ ಸಂಶೋಧನಾ ಬರಹ ಕುರಿತು ಉಪನ್ಯಾಸಕರಿಗೆ ಮಾಹಿತಿ ಕಾರ್ಯಕ್ರಮ

ಪುತ್ತೂರು: ಪ್ರತಿಯೊಬ್ಬ ವ್ಯಕ್ತಿಯಲ್ಲೂ ಸಂಶೋಧನೆಯ ಗುಣ ಇರುತ್ತದೆ. ಅದು ಗೃಹಿಣಿಯೇ ಆಗಿರಲಿ, ಮೆಕ್ಯಾನಿಕ್ಕೇ ಆಗಿರಲಿ. ಆ ಸಂಶೋಧನೆಗೊಂದು ಮೂರ್ತರೂಪ ನೀಡುವ ಅಗತ್ಯವಿದೆ. ಅದನ್ನೇ ಈ ಸಂಶೋಧನಾ ಪ್ರಬಂಧಗಳು ಮಾಡುವುದು. ಸಂಶೋಧನೆ ಎನ್ನುವುದು ಎಂದು  ಮೈಸೂರಿನ ಎಸ್‌ ಡಿಎಂ ರಿಸರ್ಚ್ ಸೆಂಟರ್‌ನ ಪ್ರೋ. ಬಿ ವೆಂಕಟರಾಜ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ), ವಿವೇಕಾನಂದ ಸಂಶೋಧನಾಕೇಂದ್ರ ಹಾಗೂ ಐಕ್ಯೂಎಸಿ ಘಟಕದ ಸಂಯೋಜನೆಯಲ್ಲಿ ಆಯೋಜಿಸಿದ್ದ ಉಪನ್ಯಾಸಕರ ಅಭಿವೃದ್ಧಿ ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದ ಪ್ರಭಾವಶಾಲಿ ಸಂಶೋಧನಾ ಬರಹ

ಪ್ರಶ್ನೆಗಳು ಹುಟ್ಟುವವರೆಗೆ ನಮ್ಮ ಸಂಶೋಧನೆ ಸರಿ ಹಾದಿಯಲ್ಲಿರುತ್ತೆ: ಪ್ರೊ.ಬಿ. ವೆಂಕಟರಾಜ | ಪ್ರಭಾವಶಾಲಿ ಸಂಶೋಧನಾ ಬರಹ ಕುರಿತು ಉಪನ್ಯಾಸಕರಿಗೆ ಮಾಹಿತಿ ಕಾರ್ಯಕ್ರಮ Read More »

ಮೇ 26: ಪುತ್ತೂರು ಜಿಡೆಕಲ್ಲು ಸ. ಪ್ರ.ದ. ಕಾಲೇಜು ವಾರ್ಷಿಕೋತ್ಸವ

ಪುತ್ತೂರು: ಜಿಡೆಕಲ್ಲಿನಲ್ಲಿ ಕಾರ್ಯಾಚರಿಸುತ್ತಿರುವ ಸ. ಪ್ರ.ದ. ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಮೇ 26 ಸೋಮವಾರ ನಡೆಯಲಿದೆ. ಪೂರ್ವಾಹ್ನ ಗಂಟೆ 10ಕ್ಕೆ ಕಾಲೇಜು ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮದ ಉದ್ಘಾಟನೆಯನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಸಿದ್ಧಕಟ್ಟೆ ಸ.ಪ್ರ.ದ. ಕಾಲೇಜಿನ ಪ್ರಾಂಶುಪಾಲ ಡಾ. ಗಿರೀಶ್ ಭಟ್ ಎ. ಪಾಲ್ಗೊಳ್ಳಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಸುಬ್ಬಪ್ಪ ಕೈಕಂಬ ವಹಿಸಲಿದ್ದಾರೆ ಎಂದು ಕಾಲೇಜು ಪ್ರಕಟಣೆಯಲ್ಲಿ ತಿಳಿಸಿದೆ.

ಮೇ 26: ಪುತ್ತೂರು ಜಿಡೆಕಲ್ಲು ಸ. ಪ್ರ.ದ. ಕಾಲೇಜು ವಾರ್ಷಿಕೋತ್ಸವ Read More »

ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್’ನಲ್ಲಿ ಚಿನ್ನಾಭರಣ ಹೂಡಿಕೆಯ ಉಳಿತಾಯ ಯೋಜನೆ “ಸ್ವರ್ಣಧಾರಾ” ಉದ್ಘಾಟನೆ

ಪುತ್ತೂರು: ಸ್ವರ್ಣಧಾರಾ ಚಿನ್ನಾಭರಣ ಹೂಡಿಕೆಯ ಉಳಿತಾಯ ಯೋಜನೆಯನ್ನು ಪುತ್ತೂರಿನ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್’ನಲ್ಲಿ ಗುರುವಾರ ಉದ್ಘಾಟಿಸಲಾಯಿತು. ಸ್ವರ್ಣಧಾರಾ ಯೋಜನೆಯ ಬಗ್ಗೆ ಮಾತನಾಡಿದ ಸಂಸ್ಥೆಯ ಮಾಲಕರಾದ ಬಲರಾಮ ಆಚಾರ್ಯ, ಸ್ವರ್ಣಧಾರಾ ಯೋಜನೆಗೆ ಗ್ರಾಹಕರಿಂದ ಉತ್ತಮ ಬೇಡಿಕೆ ಇದೆ. ಹಾಗಾಗಿ ಗ್ರಾಹಕರಿಗೆ ಇನ್ನಷ್ಟು ಅನುಕೂಲತೆ ಆಗುವಂತೆ ಯೋಜನೆಯನ್ನು ಒಂದಷ್ಡು ಬದಲಾವಣೆಯೊಂದಿಗೆ ಹೊಸತನ್ನು  ಪರಿಚಯಿಸುತ್ತಿದ್ದೇವೆ. ಇಂದು ಉದ್ಘಾಟನೆಗೊಂಡ ಹೊಸ ಸ್ಕೀಂನಲ್ಲಿ ಗ್ರಾಹಕರು ಪ್ರತಿ ತಿಂಗಳು ಹೂಡಿಕೆ ಮಾಡುವ ಮೊತ್ತದ ಚಿನ್ನವನ್ನು ತೆಗೆದಿಡಲಾಗುವುದು. ಅಂದರೆ ಇಂದು ಹೂಡಿಕೆ ಮಾಡಿದರೆ, ಇಂದಿನ ಚಿನ್ನದ ಧಾರಣೆಯಲ್ಲೇ

ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್’ನಲ್ಲಿ ಚಿನ್ನಾಭರಣ ಹೂಡಿಕೆಯ ಉಳಿತಾಯ ಯೋಜನೆ “ಸ್ವರ್ಣಧಾರಾ” ಉದ್ಘಾಟನೆ Read More »

error: Content is protected !!
Scroll to Top