ಕ್ಯಾಂಪಸ್‌

ಬಪ್ಪಳಿಗೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಯೋಗ ಶಿಕ್ಷಣದ ಉದ್ಘಾಟನೆ

ಪುತ್ತೂರು: ಯಾರು ತನ್ನ ಪರಂಪರೆಯನ್ನು ಸಂಸ್ಕೃತಿಯನ್ನು ಮರೆಯುತ್ತಾನೋ ಅವನು ಔನ್ನತ್ಯವನ್ನು ಹೊಂದುವುದು ಅಸಾಧ್ಯ. ಭಾರತೀಯ ಜೀವನ ಪದ್ಧತಿ ಭಾರತೀಯ ತತ್ವಶಾಸ್ತ್ರದ ಮೇಲೆ ನಿಂತಿದೆ ಮಾತ್ರವಲ್ಲದೆ ಯೋಗವು ಆಧಾರ ಸ್ತಂಭದಂತೆ ತನ್ನ ಸ್ಥಾನವನ್ನು ಹೊಂದಿದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಅವರು ಬಪ್ಪಳಿಗೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಯೋಗ ಶಿಕ್ಷಣ ತರಗತಿಗಳನ್ನು ಉದ್ಘಾಟಿಸಿ ಮಾತನಾಡಿದರು. ಆರ್ಟ್ ಆಫ್ ಲಿವಿಂಗ್‌ ನ […]

ಬಪ್ಪಳಿಗೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಯೋಗ ಶಿಕ್ಷಣದ ಉದ್ಘಾಟನೆ Read More »

ಜೆಇಇ ಅಡ್ವಾನ್ಸ್ -2025 ಪರೀಕ್ಷೆಯಲ್ಲಿ ಅಂಬಿಕಾ ಪದವಿಪೂರ್ವ ವಿದ್ಯಾಲಯದ  ಭುವನ್ ರೈಗೆ 1514 ನೇ ರ‍್ಯಾಂಕ್

ಪುತ್ತೂರು : ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿ ಬಂಟ್ವಾಳ ಪುಣಚದ ವಿನೋದ್ ಪ್ರಸಾದ್ ರೈ ಮತ್ತು ಪೂರ್ಣಿಮಾ ಎ. ದಂಪತಿ ಪುತ್ರ ಭುವನ್ ರೈ ರಾಷ್ಟ್ರಮಟ್ಟದ ಜೆ.ಇ.ಇ. ಅಡ್ವಾನ್ಸ್ ಪರೀಕ್ಷೆಯಲ್ಲಿ 1514 ನೇ ರ‍್ಯಾಂಕ್ (EWS) ಪಡೆದಿದ್ದಾರೆ. ಅಲ್ಲದೆ 11835 ನೇ ರ‍್ಯಾಂಕ್  (CRL) ಪಡೆದುಕೊಂಡಿದ್ದಾರೆ. ಅವರ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿ, ಆಡಳಿತ ಮಂಡಳಿ ಸದಸ್ಯರು, ಉಪನ್ಯಾಸಕರು ಮತ್ತು ಉಪನ್ಯಾಸಕೇತರ ವೃಂದದವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಜೆಇಇ ಅಡ್ವಾನ್ಸ್ -2025 ಪರೀಕ್ಷೆಯಲ್ಲಿ ಅಂಬಿಕಾ ಪದವಿಪೂರ್ವ ವಿದ್ಯಾಲಯದ  ಭುವನ್ ರೈಗೆ 1514 ನೇ ರ‍್ಯಾಂಕ್ Read More »

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ | ಗಳಿಕೆಯ ಜತೆಯಲ್ಲಿ ಸಾಮಾಜಿಕ ಕಳಕಳಿಯನ್ನು ಬೆಳೆಸಿಕೊಳ್ಳಬೇಕು : ನಿವೇದಿತಾ ಕಾಮತ್‍

ಪುತ್ತೂರು: ಜೀವನದಲ್ಲಿ ಪ್ರತಿಯೊಬ್ಬರಿಗೂ ಅವರದ್ದೇ ಆದ ಗುರಿ ಇರುತ್ತದೆ, ಅದನ್ನು ತಲುಪುವಲ್ಲಿ ಅಪಾರವಾದ ಶ್ರದ್ಧೆ ಮತ್ತು ಅವಿರತವಾದ ಶ್ರಮದ ಆವಶ್ಯಕತೆ ಇದೆ ಎಂದು ಎಸ್‌ ಎಪಿ ಲ್ಯಾಬ್ ಇಂಡಿಯಾದ ಡೆವೆಲಪ್‌ಮೆಂಟ್ ಎಕ್ಸ್ ಪರ್ಟ್ ಹಾಗೂ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಹಿರಿಯ ವಿದ್ಯಾರ್ಥಿನಿ ನಿವೇದಿತಾ ಕಾಮತ್ ಹೇಳಿದರು. ಅವರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತಾಡಿದರು. ಸಮಾಜ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ | ಗಳಿಕೆಯ ಜತೆಯಲ್ಲಿ ಸಾಮಾಜಿಕ ಕಳಕಳಿಯನ್ನು ಬೆಳೆಸಿಕೊಳ್ಳಬೇಕು : ನಿವೇದಿತಾ ಕಾಮತ್‍ Read More »

ಅಕ್ಷರ ದೇಗುಲಕ್ಕೆ ಮೊದಲ ಹೆಜ್ಜೆ ಇಟ್ಟ ಪುಟಾಣಿಗಳಿಗೆ ಅಕ್ಕರೆಯ ಆರತಿ | ವೀರಮಂಗಲ ಪಿಎಂಶ್ರೀ ಶಾಲಾ ಆರಂಭೋತ್ಸವ

ಪುತ್ತೂರು: ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವೀರಮಂಗಲದಲ್ಲಿ ಮಕ್ಕಳ ಕಲರವ. ಅಕ್ಷರ ದೇಗುಲಕ್ಕೆ ನೂತನವಾಗಿ ಕಾಲಿಡುವ ಭಾರತದ ಭವಿತವ್ಯದ ಕನಸುಗಳಿಗೆ ಅಕ್ಕರೆಯ ಆರತಿ . ತಲೆಗೊಂದು ಅಕ್ಷರ ಕಿರೀಟ, ಕೈಲೊಂದು ಬಲೂನ್, ಬ್ಯಾಂಡ್ ವಾಲಗದ ನಾದಕ್ಕೆ ಹೆಜ್ಜೆ ಇಡುತ್ತಾ ಬಂದ ಮಕ್ಕಳ ಮೊಗದಲ್ಲಿ  ಸಂಭ್ರಮದ ಕಲೆ.  ಹಸಿರು ಅಂಗಿ ಧರಿಸಿದ ವಿದ್ಯಾರ್ಥಿಗಳು ಮೆರವಣಿಗೆಯ ಮೂಲಕ ಸಾಗಿ ಬಂದ ದೃಶ್ಯವನ್ನು ಸಂಭ್ರಮಿಸುವ ಕ್ಷಣಕ್ಕೆ ಪೋಷಕರು,ಶಿಕ್ಷಕರು ಸಾಕ್ಷಿಯಾದರು.  ಇಂದು ಪ್ರಧಾನಮಂತ್ರಿ ಸ್ಕೂಲ್ಸ್ ಫಾರ್ ರೈಸಿಂಗ್ ಇಂಡಿಯಾ (ಪಿಎಂಶ್ರೀ) ಶಾಲೆ

ಅಕ್ಷರ ದೇಗುಲಕ್ಕೆ ಮೊದಲ ಹೆಜ್ಜೆ ಇಟ್ಟ ಪುಟಾಣಿಗಳಿಗೆ ಅಕ್ಕರೆಯ ಆರತಿ | ವೀರಮಂಗಲ ಪಿಎಂಶ್ರೀ ಶಾಲಾ ಆರಂಭೋತ್ಸವ Read More »

ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವ

ಪುತ್ತೂರು: ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ 2025-26ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿಗಳಿಗೆ ದೀಕ್ಷಾ ಸಮಾರಂಭ ಹಾಗೂ ಶಾಲಾ ಪ್ರಾರಂಭೋತ್ಸವವು ಸೋಮವಾರ ನಡೆಯಿತು. ಸಮಾರಂಭದಲ್ಲಿ ಶಾಲಾ ಸಂಚಾಲ ಭಾಸ್ಕರ ಆಚಾರ್ ಹಿಂದಾರು ಮಾತನಾಡಿ, ಜಗತ್ತಿಗೆ ಒಡೆಯನಾದ ಶ್ರೀ ಕೃಷ್ಣ ಪರಮಾತ್ಮನ ಗುರು ಸಾಂದೀಪನಿ ಹೆಸರಿನಲ್ಲಿ ಶಾಲಾಧ್ಯಕ್ಷರು ಶಾಲೆಯನ್ನು ಆರಂಭಿಸಿದ್ದು, ವಿದ್ಯಾರ್ಥಿಗಳಿಗೆ ವಿದ್ಯೆ ಎಂದರೆ ಕೇವಲ ಕಲಿಯುವುದು ಮಾತ್ರವಲ್ಲ ಒಳ್ಳೆತನವನ್ನು ಅಳವಡಿಸಿಕೊಂಡು, ಸಂಸ್ಕಾರಯುತವಾಗಿ, ತಂದೆ ತಾಯಿಗೆ ಗೌರವ ಕೊಟ್ಟು, ಶಾಲೆಗೆ ಚ್ಯುತಿ ಬಾರದ ಹಾಗೆ ಬಾಳಿ ಎಂದರು ಹಾಗೂ ನೂತನ

ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವ Read More »

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಶಾಲಾ ಆರಂಭೋತ್ಸವ “ಆರಂಭ-2025’

ಪುತ್ತೂರು: ಬನ್ನೂರಿನ ಅಲಂಬುಡದಲ್ಲಿ ಕಾರ್ಯಾಚರಿಸುತ್ತಿರುವ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ 2925-26ನೆ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ‘ ಆರಂಭ 2025’ ಅತ್ಯಂತ ಅರ್ಥಪೂರ್ಣವಾಗಿ  ನಡೆಯಿತು. ನಗರಸಭಾ ಮುಖ್ಯಾಧಿಕಾರಿ ಮಧು ಎಸ್. ಮನೋಹರ್ ಉದ್ಘಾಟಿಸಿ ಮಾತನಾಡಿ, ಮಾಡುವ ಕೆಲಸ ಸಣ್ಣದಾದರೂ ನಿರಂತರ ಪ್ರಯತ್ನ ಫಲ ನೀಡುತ್ತದೆ. ಅಂತೆಯೇ ಸಣ್ಣದಾಗಿ ಆರಂಭವಾದ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ಖಂಡಿತವಾಗಿಯೂ ದೊಡ್ಡದಾಗಿ ಬೆಳೆದು ಕೀರ್ತಿ ಪಡೆಯುತ್ತದೆ ಎಂದರು. ಶಾಲಾ ಸಂಚಾಲಕ ಎವಿ ನಾರಾಯಣ ಅವರ ಗುರುಗಳಾದ, ವಿವೇಕಾನಂದ ಪಾಲಿಟೆಕ್ನಿಕ್

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಶಾಲಾ ಆರಂಭೋತ್ಸವ “ಆರಂಭ-2025’ Read More »

ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ಫಲಿತಾಂಶ ಪ್ರಕಟ | ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿಗೆ ಶೇ.100 ಫಲಿತಾಂಶ

ಪುತ್ತೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ 2024-25ನೇ ಸಾಲಿನ ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶವು ಪ್ರಕಟಗೊಂಡಿದ್ದು, ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಕಾಲೇಜಿನಿಂದ ಒಟ್ಟು 372 ವಿದ್ಯಾರ್ಥಿಗಳು ಹಾಜರಾಗಿದ್ದು ಎಲ್ಲಾ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಕಾಲೇಜಿನ ವಿಭಾಗವಾರು ಫಲಿತಾಂಶಗಳ ಪೈಕಿ ಕಂಪ್ಯೂಟರ್ ಸೈನ್ಸ್-ಶೇ. 100, ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಷಿನ್ ಲರ್ನಿಂಗ್ ಶೇ.100, ಡಾಟಾಸೈನ್ಸ್- ಶೇ.100,

ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ಫಲಿತಾಂಶ ಪ್ರಕಟ | ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿಗೆ ಶೇ.100 ಫಲಿತಾಂಶ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ಸ್ವಚ್ಚತಾ ಸೇ ಸಹಕಾರ್’

ಪುತ್ತೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು, ದ.ಕ.ಜಿಲ್ಲಾ ಸಹಕಾರಿ ಯೂನಿಯನ್, ದ.ಕ.ಜಿಲ್ಲಾ ಸಹಕಾರ ಇಲಾಖೆ ಹಾಗೂ ಸಂತ ಪೀಲೋಮಿನಾ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ-2025 ಅಂಗವಾಗಿ ‘ಸ್ವಚ್ಚತಾ ಸೇ ಸಹಕಾರ್’ ಕಾರ್ಯಕ್ರಮ ಸಂತ ಫಿಲೋಮಿನಾ ಕಾಲೇಜಿನಲ್ಲಿ ನಡೆಯಿತು.  ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಹಾತ್ಮ ಗಾಂಧೀಜಿಯವರ 150 ನೇ ಜನ್ಮದಿನಾಚರಣೆ ಪ್ರಯುಕ್ತ ಸ್ವಚ್ಛ ಭಾರತ ನಿರ್ಮಾಣ

ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ಸ್ವಚ್ಚತಾ ಸೇ ಸಹಕಾರ್’ Read More »

ಹಿರಿಯರಿಗೆ ತೃಪ್ತಿ ನೀಡುವ ರೀತಿಯಲ್ಲಿ ಎಳೆಯರು ಕಾರ್ಯನಿರ್ವಹಿಸಬೇಕು. : ಡಾ. ಗಿರೀಶ್ ಅಜಕ್ಕಳ | ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ

ಪುತ್ತೂರು: ಜಿಡೆಕಲ್ಲಿನಲ್ಲಿ ಕಾರ್ಯಾಚರಿಸುತ್ತಿರುವ  ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಸೋಮವಾರ ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಗಿರೀಶ್ ಭಟ್ ಅಜಕ್ಕಳ ಪಾಲ್ಗೊಂಡು ಮಾತನಾಡಿ, ವಿದ್ಯಾರ್ಥಿಗಳು ತಮ್ಮಲ್ಲಿದ್ದ ಸಂಪತ್ತನ್ನು ಸದುಪಯೋಗಪಡಿಸಿಕೊಳ್ಳಬೇಕು. ಹಾಗಾದಾಗ ಅದು ಜೀವನ ಪರ್ಯಂತ ಫಲವನ್ನು ನೀಡುತ್ತದೆ. ಹಿರಿಯರಿಗೆ ತೃಪ್ತಿ ನೀಡುವ ರೀತಿಯಲ್ಲಿ ಎಳೆಯರು ಕಾರ್ಯನಿರ್ವಹಿಸಬೇಕು. ಬುದ್ಧಿವಂತಿಕೆಯಿಂದ ಕಾರ್ಯೋನ್ಮುಖರಾಗುವ ಮೂಲಕ ಯಶಸ್ಸನ್ನು ಪಡೆಯಬೇಕು. ಇದು ವಿದ್ಯಾರ್ಥಿ ಜೀವನಕ್ಕೆ ಮುಕುಟಪ್ರಾಯವಾದ ಸಂಗತಿಯಾಗುತ್ತದೆ ಎಂದು ಅವರು ಪ್ರತಿಪಾದಿಸಿದರು.

ಹಿರಿಯರಿಗೆ ತೃಪ್ತಿ ನೀಡುವ ರೀತಿಯಲ್ಲಿ ಎಳೆಯರು ಕಾರ್ಯನಿರ್ವಹಿಸಬೇಕು. : ಡಾ. ಗಿರೀಶ್ ಅಜಕ್ಕಳ | ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ Read More »

ಭಾರೀ ಮಳೆ ಹಿನ್ನಲೆಯಲ್ಲಿ ಇಂದು ಅಂಗನವಾಡಿಗಳಿಗೆ ರಜೆ ಘೋಷಣೆ

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ಎಲ್ಲ ಅಂಗನವಾಡಿಗಳಿಗೆ ಇಂದು( ಮೇ 26) ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಮುಂಗಾರು ಆರಂಭದಲ್ಲೇ ಜಿಲ್ಲೆಯ ಅನೇಕ ಕಡೆಗಳಲ್ಲಿ ಭಾರೀ ಹಾನಿಯುಂಟು ಮಾಡಿದೆ. ಈ ಹಿನ್ನಲೆಯಲ್ಲಿ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದ್ದು, ದ.ಕ.ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಭಾರೀ ಮಳೆ ಹಿನ್ನಲೆಯಲ್ಲಿ ಇಂದು ಅಂಗನವಾಡಿಗಳಿಗೆ ರಜೆ ಘೋಷಣೆ Read More »

error: Content is protected !!
Scroll to Top