ಕ್ಯಾಂಪಸ್‌

ನಾಳೆ (ಮಾ.20) : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಖೋ-ಖೋ ಪಂದ್ಯಾಟ

ಪುತ್ತೂರು : ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಶ್ರಯದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಮಂಗಳೂರು ವಿಭಾಗದ ಪುರುಷರ ಖೋ ಖೋ ಪಂದ್ಯಾಟವು ಮಾರ್ಚ್ 20 ಸೋಮವಾರ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ. ಪೂರ್ವಾಹ್ನ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ವಿಟ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಹಾಗೂ ರಾಷ್ಟ್ರೀಯ ಖೋ ಖೋ ತರಬೇತುದಾರ ಕಾರ್ತಿಕ್.ಎನ್ ಮುಖ್ಯ ಅತಿಥಿಗಳಾಗಿ ಭಾಗವಹಿಸುತ್ತಾರೆ. ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಸಮಾರಂಭದ ಅಧ್ಯಕ್ಷತೆ […]

ನಾಳೆ (ಮಾ.20) : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಖೋ-ಖೋ ಪಂದ್ಯಾಟ Read More »

ರಾಜ್ಯಮಟ್ಟದ ಕ್ರೀಡಾ ಸಾಧಕರು, ನಿವೃತ್ತ ದೈಹಿಕ ಶಿಕ್ಷಕರಿಗೆ ಸನ್ಮಾನ, ಶೈಕ್ಷಣಿಕ ಕಾರ್ಯಾಗಾರ

ಪುತ್ತೂರು: ಶೈಕ್ಷಣಿಕ ಕಾರ್ಯಾಗಾರ ಹಾಗೂ ರಾಜ್ಯಮಟ್ಟದ ಕ್ರೀಡಾ ಸಾಧಕರಿಗೆ ಮತ್ತು ನಿವೃತ್ತ ದೈಹಿಕ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ನಗರದ ಮಾಯಿದೇ ದೇವುಸ್ ಚರ್ಚ್ ಸಭಾಂಗಣದಲ್ಲಿ ನಡೆಯಿತು. ಶಾಸಕ ಸಂಜೀವ ಮಠಂದೂರು ಸನ್ಮಾನ ನೆರವೇರಿಸಿ ಮಾತನಾಡಿ, ವೃತ್ತಿ ಜೀವನದಲ್ಲಿ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿದರೆ ನಿವೃತ್ತಿಯಾದ ಮೇಲೆ ಸಮಾಜ ಗುರತಿಸುವ, ಗೌರವಿಸುವ ಕೆಲಸ ಮಾಡುತ್ತದೆ. ಮುಂಬರುವ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಸಾಕಷ್ಟು ಸವಾಲುಗಳಿದ್ದು, ಈ ಸವಾಲುಗಳನ್ನು ಸ್ವೀಕಾರ ಮಾಡಿಕೊಂಡು ಹೆಚ್ಚೆಚ್ಚು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತಾಗಬೇಕು ಎಂದರು. ಸುದಾನ ಶಾಲಾ ಸಂಚಾಲಕ

ರಾಜ್ಯಮಟ್ಟದ ಕ್ರೀಡಾ ಸಾಧಕರು, ನಿವೃತ್ತ ದೈಹಿಕ ಶಿಕ್ಷಕರಿಗೆ ಸನ್ಮಾನ, ಶೈಕ್ಷಣಿಕ ಕಾರ್ಯಾಗಾರ Read More »

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ದೀಪ ಪ್ರದಾನಮ್” ಕಾರ್ಯಕ್ರಮ

ಪುತ್ತೂರು: ಆಂಗ್ಲ ಭಾಷಾ ಶಿಕ್ಷಣದ ಜೊತೆಗೆ ಭಾರತೀಯ ಸಂಸ್ಕೃತಿಯನ್ನು, ಧರ್ಮವನ್ನು ಉಳಿಸಿ, ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ.  ಈ ಕಾರ್ಯ ಯಶಸ್ವಿಯಾಗಿ ನೆರವೇರಿದಾಗ ಭಾರತ ವಿಶ್ವಗುರುವಾಗುತ್ತದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು. ಅವರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ “ದೀಪ ಪ್ರದಾನಮ್” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಸಂಸ್ಕೃತಿಯ ಆಚರಣೆಗಳಿಗೆ ಅದರದ್ದೇ ಆದ ವೈಶಿಷ್ಟ್ಯತೆ, ವೈಜ್ಞಾನಿಕ ಹಿನ್ನೆಲೆ ಇದೆ. ಸಂಸ್ಕಾರದ ಅಳವಡಿಕೆ

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ದೀಪ ಪ್ರದಾನಮ್” ಕಾರ್ಯಕ್ರಮ Read More »

ಬನ್ನೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ಸ್ಮಾರ್ಟ್ ಕ್ಲಾಸ್ ಉದ್ಘಾಟನೆ | ಉದ್ಘಾಟನೆ ನೆರವೇರಿಸಿದ ಶಾಸಕ ಸಂಜೀವ ಮಠಂದೂರು

ಪುತ್ತೂರು : ಬನ್ನೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಉದ್ಘಾಟನೆ ನೆರವೇರಿಸಿ ಮಾತನಾಡಿ, ಮಕ್ಕಳು ಪ್ಲಾಸ್ಟಿಕ್ ಬಾಟಲಿಗಳಲ್ಲಿ ನೀರು ತರಬಾರದು ಎಂಬ ನಿಟ್ಟಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಪ್ರತೀ ಶಾಲೆಗಳಿಗೆ ಒದಗಿಸಲಾಗುತ್ತಿದೆ. ಖಾಸಗಿ ಶಾಲೆಗಳಿಗೆ ನಾವೇ ಕಡಿಮೆಯಿಲ್ಲ ಎಂಬ ದೃಷ್ಟಿಯಿಂದ ಸ್ಮಾರ್ಟ್ ಕ್ಲಾಸ್ ಗಳನ್ನು ಒದಗಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸರಕಾರಿ ಶಾಲೆಗಳು ಮುಚ್ಚಬಾರದು ಎಂಬ ನಿಟ್ಟಿನಲ್ಲಿ ಮೂಲಭೂತ ಸೌಕರ್ಯಗಳನ್ನು

ಬನ್ನೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ಸ್ಮಾರ್ಟ್ ಕ್ಲಾಸ್ ಉದ್ಘಾಟನೆ | ಉದ್ಘಾಟನೆ ನೆರವೇರಿಸಿದ ಶಾಸಕ ಸಂಜೀವ ಮಠಂದೂರು Read More »

ಕೆ.ವಿ.ಜಿ.ಯಂತೆಯೇ ಎ.ವಿ.ಜಿ. ಬೆಳಗಲಿ | ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ಉದ್ಘಾಟಿಸಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ಈ ವರ್ಷ ಎಲ್.ಕೆ.ಜಿ.ಯಿಂದ ಪ್ರಾರಂಭಗೊಳ್ಳುತ್ತಿದೆ. ಗುಣಮಟ್ಟದ ಜೊತೆಗೆ ಸಂಸ್ಕಾರಯುತ ಶಿಕ್ಷಣ ನೀಡಿ, ಮಾದರಿ ಸಂಸ್ಥೆಯಾಗಿ ಮೂಡಿಬರಲಿ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಬನ್ನೂರಿನ ಕೃಷ್ಣನಗರದಲ್ಲಿ ಅಲುಂಬುಡದಲ್ಲಿ ಎವಿಜಿ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟಿನ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇಶಪ್ರೇಮ ಇಲ್ಲದ ಶಿಕ್ಷಣ ಎಂದೂ ಯಶಸ್ವಿ ಆಗಲಾರದು. ದೇಶಪ್ರೇಮದ ಜೊತೆಗೆ ಶಿಕ್ಷಣ ಪಡೆದ ವ್ಯಕ್ತಿ ದೇಶದ ಸಂಪನ್ಮೂಲವಾಗಿ ಗುರುತಿಸಿಕೊಳ್ಳುತ್ತಾನೆ. ಇಂತಹ ದೇಶಪ್ರೇಮ, ಸಂಸ್ಕಾರಯುತ ಶಿಕ್ಷಣ ನೀಡುವ

ಕೆ.ವಿ.ಜಿ.ಯಂತೆಯೇ ಎ.ವಿ.ಜಿ. ಬೆಳಗಲಿ | ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ಉದ್ಘಾಟಿಸಿ ಶಾಸಕ ಸಂಜೀವ ಮಠಂದೂರು Read More »

ವಿವೇಕಾನಂದ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಖೋ-ಖೋ ಪಂದ್ಯಾಟ- ಅಲ್ಟಿಮೇಟ್ ಸ್ಫೋಟ್ಸ್‌ ಕ್ಲಬ್‌ಗೆ ಪ್ರಥಮ ಪ್ರಶಸ್ತಿ

ಪುತ್ತೂರು : ದಕ್ಷಿಣಕನ್ನಡಜಿಲ್ಲಾ ಖೊ-ಖೊ ಅಸೋಸಿಯೇನ್ ವತಿಯಿಂದ ಪುತ್ತೂರು ಅಲ್ಟಿಮೇಟ್ ಸ್ಪೋರ್ಟ್ಸ್‌ಕ್ಲಬ್ ಮತ್ತು ವಿವೇಕಾನಂದಕಾಲೇಜು ಸ್ವಾಯತ್ತ ಪುತ್ತೂರು, ದೈಹಿಕ ಶಿಕ್ಷಣ ವಿಭಾಗ, ವಿವೇಕಾನಂದ ವಿದ್ಯಾವರ್ಧಕ ಸಂಘದ ಸಹಯೋಗದೊಂದಿಗೆ ಪುತ್ತೂರಿನ ಇತಿಹಾಸದಲ್ಲಿ ಪ್ರಥಮ ಬಾರಿಗೆ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪುರುಷರ ಲೀಗ್ ಮಾದರಿಯ ಖೋ-ಖೋ ಚಾಂಪಿಯನ್ ಶಿಪ್ ಸೀಸನ್ -1 2023 ವಿವೇಕಾನಂದ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು. ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು 12  ತಂಡಗಳು ಭಾಗವಹಿಸಿದ್ದು, ಪ್ರಥಮ ಬಹುಮಾನವನ್ನುಅಲ್ಟಿಮೇಟ್ ಸ್ಪೋರ್ಟ್ಸ್‌ಕ್ಲಬ್ ಪುತ್ತೂರುತಂಡ, ದ್ವಿತೀಯ

ವಿವೇಕಾನಂದ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಖೋ-ಖೋ ಪಂದ್ಯಾಟ- ಅಲ್ಟಿಮೇಟ್ ಸ್ಫೋಟ್ಸ್‌ ಕ್ಲಬ್‌ಗೆ ಪ್ರಥಮ ಪ್ರಶಸ್ತಿ Read More »

ಪ್ರಗತಿ ಸ್ಟಡಿ ಸೆಂಟರ್ ನಲ್ಲಿ ಆಫ್ಟರ್ ಪಿಯುಸಿ ವಾಟ್ ನೆಕ್ಟ್ಸ್  ಕಾರ್ಯಕ್ರಮ

ಪುತ್ತೂರು:-ಹತ್ತೂರಿನಲ್ಲೂ ಹೆಸರು ಪಡೆದ ಊರು ಪುತ್ತೂರು. ಇಲ್ಲಿನ ವಿದ್ಯಾವಂತ ಯುವ ಸಮೂಹ ಪುತ್ತೂರಿನ ಹೆಮ್ಮೆ.ಅವರಿಗೆ ಸರಿಯಾದ ಮಾರ್ಗದರ್ಶನ ನೀಡಿ ಪ್ರಗತಿಯ ಹಾದಿಯಲ್ಲಿ ಸಾಗುವ ಶೈಕ್ಷಣಿಕ,ಸಮಾಜಮುಖಿ ಕಾರ್ಯವನ್ನು ಪ್ರಗತಿಯ ಸ್ಟಡಿ ಸೆಂಟರ್ ಮಾಡುತ್ತಿದೆ ಎಂದು ಜಿ.ಎಲ್.ಆಚಾರ್ಯ ಸಂಸ್ಥೆಯ ಮುಖ್ಯಸ್ಥ ಬಲರಾಮ ಆಚಾರ್ಯ ಹೇಳಿದರು. ಅವರು ಇಲ್ಲಿಯ ಪ್ರಗತಿ ಸ್ಟಡಿ ಸೆಂಟರ್ ನಲ್ಲಿ ಆಫ್ಟರ್ ಪಿಯುಸಿ ವಾಟ್ ನೆಕ್ಟ್ಸ್  ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿರು. ಮುಖ್ಯ ಅತಿಥಿಯಾಗಿ ನಗರಸಭೆ ಉಪಾಧ್ಯಕ್ಷೆ ವಿದ್ಯಾಗೌರಿ ಮಾತನಾಡಿ, ಪ್ರಗತಿ ಸಂಸ್ಥೆಯು ಯಾವುದೇ ವಿದ್ಯಾಲಯ

ಪ್ರಗತಿ ಸ್ಟಡಿ ಸೆಂಟರ್ ನಲ್ಲಿ ಆಫ್ಟರ್ ಪಿಯುಸಿ ವಾಟ್ ನೆಕ್ಟ್ಸ್  ಕಾರ್ಯಕ್ರಮ Read More »

ಎನ್.ಎಸ್.ಎಸ್.ನಿಂದ ಆದರ್ಶ ವ್ಯಕ್ತಿತ್ವ ನಿರ್ಮಾಣ ಸಾಧ್ಯ | ಬೆಟ್ಟಂಪಾಡಿ ಕಾಲೇಜಿನ ಎನ್‌ಎಸ್ಎಸ್ ಶಿಬಿರ ಸಂಪನ್ನ ಸಮಾರಂಭದಲ್ಲಿ ರಾಧಾಕೃಷ್ಣ ಬೋರ್ಕರ್

ಪುತ್ತೂರು: ಎನ್ ಎಸ್ ಎಸ್ ನಿಂದ ಆದರ್ಶ ವ್ಯಕ್ತಿತ್ವ ನಿರ್ಮಾಣ ಸಾಧ್ಯ. ಯಶಸ್ವಿ ಮನುಷ್ಯರ ಯಶಸ್ಸಿನ ಗುಟ್ಟು ಸಮಯ ಪ್ರಜ್ಞೆ, ಒಬ್ಬ ವ್ಯಕ್ತಿಯು ಸಮಯವನ್ನು ಗೌರವಿಸದಿದ್ದರೆ ಸಮಯ ಅವನನ್ನು ಗೌರವಿಸುವುದಿಲ್ಲ. ಎನ್ಎಸ್ಎಸ್ ಸಮಯವನ್ನು ಗೌರವಿಸುವ ಪರಿಯನ್ನು ಕಲಿಸಿಕೊಡುತ್ತದೆ ಎಂದು ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್ ಹೇಳಿದರು. ಅವರು ಮುಂಡೂರು ಶಾಲೆಯಲ್ಲಿ ಜರುಗಿದ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿಯ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಬುದ್ಧಿವಂತರಾಗದೆ ಜೀವನದಲ್ಲಿ ಮುಂದೆ ಬರಲು

ಎನ್.ಎಸ್.ಎಸ್.ನಿಂದ ಆದರ್ಶ ವ್ಯಕ್ತಿತ್ವ ನಿರ್ಮಾಣ ಸಾಧ್ಯ | ಬೆಟ್ಟಂಪಾಡಿ ಕಾಲೇಜಿನ ಎನ್‌ಎಸ್ಎಸ್ ಶಿಬಿರ ಸಂಪನ್ನ ಸಮಾರಂಭದಲ್ಲಿ ರಾಧಾಕೃಷ್ಣ ಬೋರ್ಕರ್ Read More »

ಪುತ್ತೂರು: ದೇಶ ಕಟ್ಟುವ ಕೆಲಸದಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದುದು:  ಹರೀಶ್ ಶಾಸ್ತ್ರಿ

ಪುತ್ತೂರು :,ಶಿಕ್ಷಣ ವೃತ್ತಿಯು  ಮಕ್ಕಳನ್ನು ತಿದ್ದುವ ಒಂದು ಅಭೂತಪೂರ್ವ ವೇದಿಕೆಯಾಗಿದೆ. ಸಮಾಜವನ್ನು ತಿದ್ದಲು ಹಾಗೂ ಮಕ್ಕಳ ಜೀವನ ಸರಿಪಡಿಸಲು ಶಿಕ್ಷಕ ವೃತ್ತಿ ಒಂದು ಪ್ರಮುಖ ವೃತ್ತಿ. ಶಿಕ್ಷಕನಾದವನು ಮಕ್ಕಳಿಂದ ಏನನ್ನು ನಿರೀಕ್ಷಿಸಬಾರದು. ಅವರ ಮನೋಭಾವವನ್ನು ಅರ್ಥೈಸಿಕೊಂಡು ಅವರೊಂದಿಗೆ ಬೆರೆಯಬೇಕು ಎಂದು ಪುತ್ತೂರಿನ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಹರೀಶ್ ಶಾಸ್ತ್ರಿ ಹೇಳಿದರು. ವಿವೇಕಾನಂದ ಮಹಾವಿದ್ಯಾಲಯ(ಸ್ವಾಯತ್ತ)ದ ಭವಿಷ್ ಘಟಕ ಹಾಗೂ ಐಕ್ಯೂಎಸಿ ಘಟಕಗಳ ಜಂಟಿ ಆಶ್ರಯದಲ್ಲಿ ನಡೆದ ’ನಾನು ಯಾಕೆ ಅಧ್ಯಾಪಕ ವೃತ್ತಿ ಆಯ್ದುಕೊಂಡೆ’

ಪುತ್ತೂರು: ದೇಶ ಕಟ್ಟುವ ಕೆಲಸದಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದುದು:  ಹರೀಶ್ ಶಾಸ್ತ್ರಿ Read More »

ಅಂಬಿಕಾ ಸಿಬಿಎಸ್ ಇ ವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಪುತ್ತೂರು : ನಗರದ  ಅಂಬಿಕಾ ಸಿಬಿಎಸ್ ಇ ವಿದ್ಯಾಲಯದಲ್ಲಿ  ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ನಡೆಯಿತು.  ಸಮಾರಂಭದಲ್ಲಿ ವಿದ್ಯಾಲಯದ ಹಿರಿಯ ಶಿಕ್ಷಕಿ ಹಾಗೂ ಉಪ ಪ್ರಾoಶುಪಾಲೆ ಸುಜನಿ ಬೋರ್ಕರ್ ರವರನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಗೌರವಿಸಲಾಯಿತು. ಗೌರವ ಸ್ವೀಕರಿಸಿ ಮಾತನಾಡಿದ ಸುಜನಿ ಬೋರ್ಕರ್, ಭಾರತೀಯ ಪರಂಪರೆಯಲ್ಲಿ ಸ್ತ್ರೀಯರಿಗೆ ಅಪಾರ ಗೌರವವಿದೆ. ಯತ್ರ ನಾರ್ಯಸ್ತು ಪೂಜ್ಯoತೆ ರಮಂತೆ ತತ್ರ ದೇವತಾ: ಎಂಬ ನುಡಿಯಂತೆ ಎಲ್ಲಿ ಸ್ತ್ರೀಯರನ್ನು ಪೂಜ್ಯ ಭಾವದಿಂದ ನೋಡುತ್ತಾರೋ,

ಅಂಬಿಕಾ ಸಿಬಿಎಸ್ ಇ ವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ Read More »

error: Content is protected !!
Scroll to Top