ರಾಷ್ಟ್ರೀಯತೆಯನ್ನು ಮೈಗೂಡಿಸಿಕೊಳ್ಳುವ ನಿಟ್ಟಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ | ಬೊಳುವಾರಿನಲ್ಲಿ ಸರಕಾರಿ ಪ್ರಥಮದರ್ಜೆ ಕಾಲೇಜಿಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಸಂಜೀವ ಮಠಂದೂರು
ಪುತ್ತೂರು : ಪುತ್ತೂರು: ಶಿಕ್ಷಣ ಪದ್ಧತಿಯಿಂದ ದೇಶದ ಚಿತ್ರಣ ಬದಲು ಮಾಡಲು ಸಾಧ್ಯವಿದ್ದು, ರಾಷ್ಟ್ರೀಯತೆಯನ್ನು ಮೈಗೂಡಿಸಿಕೊಳ್ಳಬೇಕೆಂಬ ನಿಟ್ಟಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗಿದೆ. ವಿದ್ಯಾರ್ಥಿಗಳಿಗೆ ಆಸಕ್ತಿ ಇರುವ ಕ್ಷೇತ್ರದಲ್ಲೇ ಅಭ್ಯಾಸ ಮಾಡುವ ವ್ಯವಸ್ಥೆಯನ್ನು ಮಾಡಲಾಗಿದೆ. ಐದು ಸರ್ಕಾರಿ ಪದವಿ ಕಾಲೇಜು ಹೊಂದಿರುವ ಏಕೈಕ ವಿಧಾನ ಸಭಾಕ್ಷೇತ್ರ ಪುತ್ತೂರು. ಅದರಲ್ಲೂ ಒಂದು ಮಹಿಳಾ ಕಾಲೇಜು ಇರುವುದು ವಿಶೇಷವಾಗಿದೆ. ಇಲ್ಲಿರುವ ಪ್ರಾಥಮಿಕ ಶಾಲೆಯನ್ನು ಉಳಿಸುವ ಜತೆಗೆ, ಜಾಗದ ಕಾನೂನು ಹೋರಾಟ ಮಾಡಿಯೇ ಸಿದ್ದ ಎಂದು ಪುತ್ತೂರು ಶಾಸಕ ಸಂಜೀವ […]