ಕ್ಯಾಂಪಸ್‌

ಕೋಡಿಂಬಾಡಿ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್, ಕುಡಿಯುವ ನೀರಿನ ಘಟಕ ಉದ್ಘಾಟನೆ

ಉಪ್ಪಿನಂಗಡಿ : ಕೋಡಿಂಬಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕುಡಿಯುವ ನೀರಿನ ಘಟಕ ಹಾಗೂ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಸೋಮವಾರ ನಡೆಯಿತು. ಪುತ್ತೂರು ಶಾಸಕ ಸಂಜೀವ ಮಠದೂರು ಉದ್ಘಾಟನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಶಯನ ಜಯಾನಂದ್, ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷ ಜಯಾನಂದ ಕೆ, ಪಂಚಾಯತ್ ಅಧ್ಯಕ್ಷ ರಾಮಚಂದ್ರ ಪೂಜಾರಿ, ಸದಸ್ಯರಾದ ರಾಮಣ್ಣ ಗೌಡ ಗುಂಡೋಲೆ, ವಿಶ್ವನಾಥ್, ಬೂತ್ ಅಧ್ಯಕ್ಷರಾದ ಪ್ರದೀಪಕುಮಾರ್ ಶೆಟ್ಟಿ ಪನಿಪಾಲ್, ಭರತ್ ನಿಡ್ಯಾ, ಎಸ್‍ಡಿಎಂಸಿ ಅಧ್ಯಕ್ಷ ಶೇಖರ್ […]

ಕೋಡಿಂಬಾಡಿ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್, ಕುಡಿಯುವ ನೀರಿನ ಘಟಕ ಉದ್ಘಾಟನೆ Read More »

ಕೊಂಬೆಟ್ಟು ದ್ರಾವಿಡ ಬ್ರಾಹ್ಮಣರ ವಿದ್ಯಾರ್ಥಿ ಭವನ ಮತ್ತು ಕ್ಷೇಮಾಭಿವೃದ್ಧಿ ಸಂಘದ ಶತಮಾನೋತ್ಸವ

ಪುತ್ತೂರು : ವೇದ ಎಂಬುದು ಒಂದು ಕಾಲಕ್ಕೆ ಸೀಮಿತವಾಗಿರುವುದಲ್ಲ. ಯೋಗ್ಯತೆಗೆ ಅನುಗುಣವಾಗಿ ಗುಣಗಳನ್ನು ಮಾಡಲಾಗಿದೆ. ಇತಿಹಾಸವನ್ನು ಬರೆಯುವಾಗ ಸತ್ಯವನ್ನು ಮರೆಮಾಚಿಕೊಂಡು ಬರಲಾಗಿದೆ. ಜಪ, ಅನುಷ್ಠಾನಗಳನ್ನು ಬಿಟ್ಟು ಹೋಗುತ್ತಿರುವುದು ಅಪಾಯದ ಸೂಚನೆಯನ್ನು ನೀಡುತ್ತಿದೆ ಎಂದು ಶ್ರೀ ಕ್ಷೇತ್ರ ಕಟೀಲು ಹರಿನಾರಾಯಣ ಅಸ್ರಣ್ಣರು ಹೇಳಿದರು. ಅವರು ಭಾನುವಾರ ಕೊಂಬೆಟ್ಟು ದ್ರಾವಿಡ ಬ್ರಾಹ್ಮಣರ ವಿದ್ಯಾರ್ಥಿ ಭವನ ಮತ್ತು ಕ್ಷೇಮಾಭಿವೃದ್ಧಿ ಸಂಘದ ಶತಮಾನೋತ್ಸವದ ಅಂಗವಾಗಿ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ಹಿಂದು ಧರ್ಮ ತಾಯಿಗೆ ಮಹತ್ವ ಸ್ಥಾನ ನೀಡಿದೆ. ಹಿಂದುಗಳನ್ನು

ಕೊಂಬೆಟ್ಟು ದ್ರಾವಿಡ ಬ್ರಾಹ್ಮಣರ ವಿದ್ಯಾರ್ಥಿ ಭವನ ಮತ್ತು ಕ್ಷೇಮಾಭಿವೃದ್ಧಿ ಸಂಘದ ಶತಮಾನೋತ್ಸವ Read More »

ಎಣ್ಮೂರು ಶಾಲಾ ಹಳೆ ವಿದ್ಯಾರ್ಥಿ ಸಂಘದಿಂದ ಸನ್ಮಾನ

ಪುತ್ತೂರು : ಎಣ್ಮೂರು ಶಾಲೆಗೆ ಟೈಲ್ಸ್ ಅಳವಡಿಸಲು  50 ಸಾವಿರವನ್ನು ನೀಡಿದ ಅಬ್ದುಲ್‍ ಸತ್ತರ್‍ ಫ್ಯಾಮಿಲಿ ಉಲ್ಲಲಾಡಿ ಅವರ ತಂದೆಯನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ರಮೇಶ್ ಕೋಟೆ, ಅಧ್ಯಕ್ಷ ಪ್ರಕಾಶ್‍ ರೈ, ಎಸ್‍ಡಿಎಂಸಿ ಅಧ್ಯಕ್ಷ ಅಬ್ದುಲ್‍ ಶರೀಫ್‍ ಜಿ., ಉಪಾಧ್ಯಕ್ಷೆ ಸುನಿತಾ, ಶಾಲಾ ಮುಖ್ಯ ಶಿಕ್ಷಕಿ ಭುವನೇಶ್ವರಿ ಹೇಮಳ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸನ್ಮಾನಿತರನ್ನು ಶಾಲು ಹೊದಿಸಿ, ಫಲಪುಷ್ಪ ನೀಡಿ ಗೌರವಿಸಲಾಯಿತು.

ಎಣ್ಮೂರು ಶಾಲಾ ಹಳೆ ವಿದ್ಯಾರ್ಥಿ ಸಂಘದಿಂದ ಸನ್ಮಾನ Read More »

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಭಾರತ ರಶ್ಮಿ ಕಾರ್ಯಕ್ರಮ

ಸವಣೂರು : ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಟ್ಟದ ‘ಭಾರತ ರಶ್ಮಿ’ ಕಾರ್ಯಕ್ರಮ ಶನಿವಾರ ನಡೆಯಿತು. ಶಾಲಾ ಸಂಚಾಲಕ ಸವಣೂರು ಸೀತಾರಾಮ ರೈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರಶ್ಮಿ ಯಾವತ್ತೂ ಹೊಸತನಗಳಿಗೆ ತೆರೆದುಕೊಳ್ಳುವ ಪರಿಪಾಠವನ್ನು ಬೆಳೆಸಿಕೊಂಡಿದೆ. ಹಳ್ಳಿಯ ಮಕ್ಕಳಿಗೆ ಒಳಿತಾದರೆ ಅದುವೇ ನಮಗೆ ಸಂತೋಷ ಎಂದರು. ಪ್ರಾಂಶುಪಾಲ ಸೀತಾರಾಮ ಕೇವಳ ಪ್ರಾಸ್ತಾವಿಕವಾಗಿ ಮಾತನಾಡಿ, ಕಾಲೇಜಿನಲ್ಲಿ ಲಭ್ಯವಿರುವ ವಿವಿಧ ಅತ್ಯಾಧುನಿಕ ಸೌಲಭ್ಯಗಳ ವಿವರ ನೀಡಿ, ಒಟ್ಟಾರೆಯಾಗಿ ಸಮಗ್ರ ಮತ್ತು ಸಶಕ್ತ ಭಾರತ ನಿರ್ಮಾಣಕ್ಕೆ ವಿದ್ಯಾರಶ್ಮಿ ಸಣ್ಣದೊಂದು ಕೊಡುಗೆ

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಭಾರತ ರಶ್ಮಿ ಕಾರ್ಯಕ್ರಮ Read More »

ರಾಷ್ಟ್ರಮಟ್ಟದ ಕಲೋತ್ಸವ : ಸನ್ಮಾನ ಕಾರ್ಯಕ್ರಮ “ಪ್ರತಿಭಾ ದೀಪ ಸಮ್ಮಾನನಮ್”

ಪುತ್ತೂರು : ರಾಷ್ಟ್ರಮಟ್ಟದ ಕಲೋತ್ಸವ ವಿಜೇತ ಹಾಗೂ ಪ್ರಧಾನಮಂತ್ರಿಗಳ ಪರೀಕ್ಷಾ ಪೇ ಚರ್ಚಾಕಾರ್ಯಕ್ರಮದಲ್ಲಿ ಭಾಗವಹಿಸಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ೧೦ನೇ ತರಗತಿ ವಿದ್ಯಾರ್ಥಿ ತೇಜ ಚಿನ್ಮಯ ಹೊಳ್ಳ ಅವರ ಸನ್ಮಾನ ಸಮಾರಂಭ ಪ್ರತಿಭಾ ಸಮ್ಮಾನನಮ್ ಶುಕ್ರವಾರ ಶಾಲಾ ಯಾದವಶ್ರೀ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಮ್.ಕೃಷ್ಣ ಭಟ್ ಮಾತನಾಡಿ, ಪ್ರತಿಭೆ ಒಂದು ದೀಪದಂತೆ. ದೀಪ ಪ್ರಜ್ವಲಿಸಿದಾಗ ಅದಕ್ಕೆ ಪ್ರಾಮುಖ್ಯತೆ ಬರುತ್ತದೆ. ಪ್ರತಿಭೆಯನ್ನು ಗುರುತಿಸಿ ಗೌರವಿಸುವುದು ಒಂದು ಅವಿಸ್ಮರಣೀಯ ಅಮೃತ ಘಳಿಗೆ

ರಾಷ್ಟ್ರಮಟ್ಟದ ಕಲೋತ್ಸವ : ಸನ್ಮಾನ ಕಾರ್ಯಕ್ರಮ “ಪ್ರತಿಭಾ ದೀಪ ಸಮ್ಮಾನನಮ್” Read More »

ಫೆ.4 ರಂದು ನಿಗದಿಯಾಗಿದ್ದ ಶಾಸಕರೊಂದಿಗಿನ ಜನತಾ ಅದಾಲತ್ ಫೆ.6 ಕ್ಕೆ ಮುಂದೂಡಿಕೆ

ಪುತ್ತೂರು : ಪುತ್ತೂರು ರೋಟರಿ ಕ್ಲಬ್ ವತಿಯಿಂದ ಫೆ.4 ಶನಿವಾರ ಆಯೋಜಿಸಲಾಗಿದ್ದ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರೊಂದಿಗಿನ ಮುಖಾಮುಖಿ ಕಾರ್ಯಕ್ರಮ ರೋಟರಿ ಜನತಾ ಅದಾಲತ್ ಕಾರ್ಯಕ್ರಮವನ್ನು ಫೆ.6 ಕ್ಕೆ ಮುಂದೂಡಲಾಗಿದೆ. ಕಾರ್ಯಕ್ರಮ ನಿಗದಿಯಾದಂತೆ ಜೈನಭವನದಲ್ಲಿ ಸಂಜೆ ನಡೆಯಲಿದೆ ಎಂದು ರೋಟರಿ ಪ್ರಕಟಣೆ ತಿಳಿಸಿದೆ.

ಫೆ.4 ರಂದು ನಿಗದಿಯಾಗಿದ್ದ ಶಾಸಕರೊಂದಿಗಿನ ಜನತಾ ಅದಾಲತ್ ಫೆ.6 ಕ್ಕೆ ಮುಂದೂಡಿಕೆ Read More »

ಫೆ.11 : ಸಚಿವ ಅಮಿತ್ ಶಾ ಭೇಟಿ ಹಿನ್ನೆಲೆ : ತೆಂಕಿಲ ಶಾಲಾ ಮೈದಾನಕ್ಕೆ ಜಿಲ್ಲಾಧಿಕಾರಿ, ಎಸ್ಪಿ ಭೇಟಿ

ಪುತ್ತೂರು: ಸುವರ್ಣ ಮಹೋತ್ಸವ ಆಚರಿಸುತ್ತಿರುವ ಪ್ರತಿಷ್ಠಿತ ಅಂತರ್ರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋದ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಫೆ.11ರಂದು ಕೇಂದ್ರ ಗೃಹ ಸಚಿವರು, ಕೇಂದ್ರದ ಪ್ರಥಮ ಸಹಕಾರ ಸಚಿವ ಅಮಿತ್ ಶಾ ಆಗಮನ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ದ.ಕ ಎಸ್ಪಿ ಡಾ.ಅಮಟೆ ವಿಕ್ರಮ್‌ರವರು ಕಾರ್ಯಕ್ರಮ ನಡೆಯುವ ತೆಂಕಿಲ ವಿವೇಕಾನಂದ ಶಾಲಾ ಮೈದಾನಕ್ಕೆ ಶುಕ್ರವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ಸಹಾಯಕ ಕಮೀಷನರ್ ಗಿರೀಶ್ ನಂದನ್, ಡಿವೈಎಸ್ಪಿ ವೀರಯ್ಯ ಹಿರೇಮಠ್, ಕ್ಯಾಂಪ್ಕೋ ಮಾಜಿ

ಫೆ.11 : ಸಚಿವ ಅಮಿತ್ ಶಾ ಭೇಟಿ ಹಿನ್ನೆಲೆ : ತೆಂಕಿಲ ಶಾಲಾ ಮೈದಾನಕ್ಕೆ ಜಿಲ್ಲಾಧಿಕಾರಿ, ಎಸ್ಪಿ ಭೇಟಿ Read More »

ಗ್ರಾಮೀಣ ಅಂಚೆ ಸೇವಕರ ನೇಮಕಕ್ಕೆ ಅರ್ಜಿ ಆಹ್ವಾನ

ಪುತ್ತೂರು : ಮಂಗಳೂರು ಅಂಚೆ ಇಲಾಖೆಯಲ್ಲಿ ಗ್ರಾಮೀಣ ಅಂಚೆ ಸೇವಕರ ನೇಮಕಾತಿ ಸಂಬಂಧ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಎಂದು ಮಂಗಳೂರು ವಲಯ ಅಂಚೆ ಅಧೀಕ್ಷಕ ಶ್ರೀಹರ್ಷ ತಿಳಿಸಿದ್ದಾರೆ. ಫೆ,.16 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನ. Indiapostgdsonline.gov.in  ವೆಬ್ಸೈಟ್ ಮೂಲಕವೇ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು. ಎಲ್ಲಾ ಹುದ್ದೆಗಳಿಗೆ 10ನೇ ತರಗತಿ ತೇರ್ಗಡೆ ಕಡ್ಡಾಯ. ಗಣಿತ ಮತ್ತು

ಗ್ರಾಮೀಣ ಅಂಚೆ ಸೇವಕರ ನೇಮಕಕ್ಕೆ ಅರ್ಜಿ ಆಹ್ವಾನ Read More »

ಕುಂಬ್ರ ಕೆಪಿಎಸ್ ಶಾಲೆಯಲ್ಲಿ ಕಲಿಕಾ ಹಬ್ಬ, ಸ್ಮಾರ್ಟ್‍‍ ಕ್ಲಾಸ್, ಕುಡಿಯುವ ನೀರಿನ ಘಟಕ ಉದ್ಘಾಟನೆ

ಪುತ್ತೂರು : ಕುಂಬ್ರ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ಕಲಿಕಾ ಹಬ್ಬ ಹಾಗೂ ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ ಬುಧವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಸ್ಟಾರ್ಟ್ ಕ್ಲಾಸ್ ಉದ್ಘಾಟಿಸಿ, ಮಕ್ಕಳು ಪ್ರಕೃತಿಯೊಂದಿಗೆ ಬೆರೆತು ಪ್ರಕೃತಿಯ ವಿಚಾರ ತಿಳಿದು ಕೊಳ್ಳಲು  ಕಲಿಕಾ ಹಬ್ಬ ಪೂಕರವಾಗಿದ್ದು, ಪ್ರಕೃತಿ ಮಡಿಲಲ್ಲಿ ಶಿಕ್ಷಕರ ಜೊತೆಗೂಡಿ ವಿದ್ಯಾರ್ಥಿಗಳಿಗೆ ಕಲಿಕೆ ಹಬ್ಬವಾಗಿ ಪರಿಣಮಿಸಿದೆ. ಇಂತಹಾ ಕಾರ್ಯಕ್ರಮ ಮಕ್ಕಳಲ್ಲಿ ಉತ್ಸಾಹ ಮೂಡಿಸುವ ಜತೆಗೆ ಶೈಕ್ಷಣಿಕವಾಗಿ ಬೆಳೆಯುವಲ್ಲಿ ಸಹಕಾರಿಯಾಗುತ್ತದೆ ಎಂದರು. ತಾಪಂ ಸ್ಥಾಯಿ ಸಮಿತಿ

ಕುಂಬ್ರ ಕೆಪಿಎಸ್ ಶಾಲೆಯಲ್ಲಿ ಕಲಿಕಾ ಹಬ್ಬ, ಸ್ಮಾರ್ಟ್‍‍ ಕ್ಲಾಸ್, ಕುಡಿಯುವ ನೀರಿನ ಘಟಕ ಉದ್ಘಾಟನೆ Read More »

ಸರ್ವೆ ಕಲ್ಪಣೆ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

ಪುತ್ತೂರು : ಸರ್ವೆ ಕಲ್ಪಣೆ ಸರಕಾರಿ ಪ್ರೌಢಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಸೋಮವಾರ ನಡೆಯಿತು.ಪುತ್ತೂರು ಶಾಸಕ ಸಂಜೀವ ಮಠದೂರು ಉದ್ಘಾಟನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಸಕರನ್ನು ಸನ್ಮಾನಿಸಿ, ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಅಶೋಕ್ ರೈ ಸೊರಕೆ, ಹಿರಿಯ ವಿದ್ಯಾರ್ಥಿ ವಿನೋದ್‌ಶಾಂತಿಗೋಡು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಪ್ರೌಢ ಶಾಲಾ ಮುಖ್ಯ ಶಿಕ್ಷಕ ಜಯರಾಮ್ ಶೆಟ್ಟಿ ಸ್ವಾಗತಿಸಿದರು.

ಸರ್ವೆ ಕಲ್ಪಣೆ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ Read More »

error: Content is protected !!
Scroll to Top