ಪೆರಿಯಡ್ಕದಲ್ಲಿ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರಿಂದ ಆಂಗ್ಲ ಮಾಧ್ಯಮ ಶಾಲೆಗೆ ಶಿಲಾನ್ಯಾಸ
ಪುತ್ತೂರು: ಜಯಂತ್ಯೋತ್ಸವ ಸಂಸ್ಮರಣೆ ಕಾರ್ಯಕ್ರಮದ ಅಂಗವಾಗಿ ಜ. 22ರಂದು ಬೆಳಿಗ್ಗೆ ಉಪ್ಪಿನಂಗಡಿಯ ಪೆರಿಯಡ್ಕ ಬಿಜಿಎಸ್ ಶಾಲಾ ಆವರಣದಲ್ಲಿ ಆಂಗ್ಲ ಮಾಧ್ಯಮ ಶಾಲೆಗೆ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ, ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದ ಗೌಡ, ಮೀನುಗಾರಿಕಾ ಇಲಾಖೆಯ ಸಚಿವ ಎಸ್. ಅಂಗಾರ, ಶಾಸಕ ಸಂಜೀವ ಮಠಂದೂರು ಮೊದಲಾದವರು ಉಪಸ್ಥಿತರಿದ್ದರು.
ಪೆರಿಯಡ್ಕದಲ್ಲಿ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರಿಂದ ಆಂಗ್ಲ ಮಾಧ್ಯಮ ಶಾಲೆಗೆ ಶಿಲಾನ್ಯಾಸ Read More »