ದೇಶಕ್ಕೆ ಸ್ವಾತಂತ್ರ್ಯ ದೊರೆಯುವಲ್ಲಿ ನೇತಾಜಿ ಪ್ರಯತ್ನ ಪ್ರಧಾನ ಭೂಮಿಕೆ | ಬಪ್ಪಳಿಗೆಯ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಪರಾಕ್ರಮ ದಿವಸ್ ಆಚರಣೆಯಲ್ಲಿ ಆದರ್ಶ ಗೋಖಲೆ
ಪುತ್ತೂರು: ನೇತಾಜಿ ಸುಭಾಷ್ ಚಂದ್ರ ಭೋಸ್ ಪ್ರತಿಯೊಬ್ಬ ಭಾರತೀಯನಿಗೂ ಸ್ಪೂರ್ತಿಯ ಚಿಲುಮೆ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಅವರ ಪ್ರಯತ್ನವೇ ಪ್ರಧಾನ ಭೂಮಿಕೆ ಎಂಬುದನ್ನು ಮರೆಮಾಚಬಾರದು. ಅವರು ದೇಶಕ್ಕಾಗಿ ಸರ್ವಸ್ವವನ್ನೂ ಸಮರ್ಪಿಸಿ, ದೇಶವಾಸಿಗಳ ಹೃದಯದಲ್ಲಿ ರಾರಾಜಿಸಿದವರು ಎಂದು ಅಂಬಿಕಾ ಪದವಿಪೂರ್ವ ವಿದ್ಯಾಲಯದ ಉಪನ್ಯಾಸಕ ಆದರ್ಶ ಗೋಖಲೆ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಆವರಣದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಆಯೋಜಿಸಲಾದ ’ಸುಭಾಷ್ ಚಂದ್ರ ಭೋಸ್ ಅವರ ಜನ್ಮಜಯಂತಿ […]