ರಾಜ್ಯ ಕಾನೂನು ವಿ.ವಿ ಮಟ್ಟದ ಮಹಿಳಾ ಮತ್ತು ಪುರುಷರ ಗುಡ್ಡಗಾಡು ಓಟ ಸ್ಪರ್ಧೆ: ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯ ಪ್ರಥಮ
ಪುತ್ತೂರು: ಸರಕಾರಿ ಕಾನೂನು ಮಹಾವಿದ್ಯಾಲಯದಲ್ಲಿ ಜ. 21ರಂದು ನಡೆದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಅಂತರ್ ಕಾಲೇಜು ಪುರುಷರ ಹಾಗೂ ಮಹಿಳಾ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯ ತಂಡ ಭಾಗವಹಿಸಿದ್ದು, ಎರಡು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ಜೊತೆಗೆ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಆರು ವಿದ್ಯಾರ್ಥಿಗಳು ಮುಂದೆ ನಡೆಯಲಿರುವ ಅಖಿಲ ಭಾರತೀಯ ದಕ್ಷಿಣ ಪ್ರಾಂತ ಅಂತರ್ ವಿಶ್ವವಿದ್ಯಾಲಯ ಕ್ರಾಸ್ ಕಂಟ್ರಿ ಸ್ಪರ್ಧೆಗೆ ಅರ್ಹತೆ ಪಡೆದಿದ್ದು, ಕರ್ನಾಟಕ ರಾಜ್ಯ ಕಾನೂನು ಮಹಾವಿದ್ಯಾಲಯದ ತಂಡವನ್ನು ಪ್ರತಿನಿಧಿಸಲಿದ್ದಾರೆ. ಪುರುಷರ […]










