ಸರಕಾರಿ ಶಾಲೆಗಳ ಬಗ್ಗೆ ಕೀಳರಿಮೆ ಬೇಡ : ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಶಾಸಕ ಸಂಜೀವ ಮಠಂದೂರು
ಪುತ್ತೂರು: ಇಂದು ಉನ್ನತ ಹುದ್ದೆಗಳಲ್ಲಿ ಇರುವವರೆಲ್ಲರೂ ಕನ್ನಡ ಮಾಧ್ಯಮದಿಂದಲೇ ಬಂದವರು. ಆದ್ದರಿಂದ ಕನ್ನಡ ಮಾಧ್ಯಮದ ಬಗ್ಗೆ ಕೀಳರಿಮೆ ಬೇಡ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಕಬಕ ಹಿ.ಪ್ರಾ. ಶಾಲೆಯಲ್ಲಿ ಶನಿವಾರ ನಡೆದ ವಾರ್ಷಿಕೋತ್ಸವ ಸಂದರ್ಭ ಸ್ಮಾರ್ಟ್ ಕ್ಲಾಸ್ ಹಾಗೂ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರಕಾರಿ ಕನ್ನಡ ಮಾಧ್ಯಮಗಳು ಈ ನಾಡಿಗೆ ನೀಡಿರುವ ಕೊಡುಗೆ ಅಗಣಿತ. ಇಷ್ಟು ಕೊಡುಗೆ ನೀಡಿರುವ ಕನ್ನಡ ಶಾಲೆಗಳ ಬಗ್ಗೆ ಇಂದು ಕೀಳರಿಮೆ ಹುಟ್ಟಿಕೊಂಡಿರುವುದು ಬೇಸರದ ಸಂಗತಿ. […]










