ಕ್ಯಾಂಪಸ್‌

ವಿಟಿಯು ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಚಿನ್ನ ಹಾಗೂ ಬೆಳ್ಳಿಯ ಪದಕದ ಸಾಧನೆ

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಅಂತರ್ಕಾಲೇಜು ಭಾರ ಎತ್ತುವ ಸ್ಪರ್ಧೆಯಲ್ಲಿ ಒಂದು ಚಿನ್ನ ಹಾಗೂ ಒಂದು ಬೆಳ್ಳಿ ಪದಕವನ್ನು ಗಳಿಸಿಕೊಂಡಿದ್ದಾರೆ. ಮೂಡಬಿದ್ರೆಯ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಆಶ್ರಯದಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಕಾಲೇಜಿನ ದ್ವಿತೀಯ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಭುವನ್‌ರಾಮ್ ಜಗದೀಶ್ ಭಂಡಾರಿ 73 ಕೆಜಿ ವಿಭಾಗದಲ್ಲಿ ಒಟ್ಟು 190 ಕೆಜಿ ಭಾರ ಎತ್ತುವುದರ ಮೂಲಕ ಚಿನ್ನದ ಪದಕದ ಸಾಧನೆ ಮಾಡಿದ್ದಾರೆ. ಇದೇ […]

ವಿಟಿಯು ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಚಿನ್ನ ಹಾಗೂ ಬೆಳ್ಳಿಯ ಪದಕದ ಸಾಧನೆ Read More »

ವಿವೇಕಾನಂದ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ | ಭಾಷೆಯ ಬಾಂಧವ್ಯ ಬೆಳೆಯಲಿ : ಡಾ. ಜಿ. ಎನ್. ಭಟ್

ಪುತ್ತೂರು: ನಮ್ಮ ಭಾಷೆಯನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬಾರದು. ತಾಂತ್ರಿಕ ಯುಗದಲ್ಲಿ ಭಾಷೆಯ ಕುರಿತಾಗಿ ಅಸ್ಥಿರತೆ ಬಂದು ಮಕ್ಕಳ ಮನಸ್ಥಿತಿ ಹದಗೆಟ್ಟಿದೆ. ಇದರಿಂದ ಭಾಷೆ ಮೂಲೆ ಗುಂಪಾಗುವ ಸಾಧ್ಯತೆ ಇದೆ. ನಮ್ಮ ಭಾಷೆಯ ಮೇಲೆ ಅಭಿಮಾನದ ಜೊತೆಗೆ  ಭಾಷೆಯ ಬಾಂಧವ್ಯವೂ ಕೂಡಾ ಬೆಳೆಯಲಿ ಎಂದು ಮಂಗಳೂರು ಕೆನರಾ ಕಾಲೇಜಿನ ನಿವೃತ್ತ ಪ್ರಿನ್ಸಿಪಾಲ್‍ ಡಾ. ಜಿ. ಎನ್. ಭಟ್ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದ ಐಕ್ಯೂಎಸಿ ಘಟಕ ಮತ್ತು  ಭಾಷಾ ವಿಭಾಗದ ಜಂಟಿ

ವಿವೇಕಾನಂದ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ | ಭಾಷೆಯ ಬಾಂಧವ್ಯ ಬೆಳೆಯಲಿ : ಡಾ. ಜಿ. ಎನ್. ಭಟ್ Read More »

ಸಾಮೆತ್ತಡ್ಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಪುತ್ತೂರು: ಸಾಮೆತ್ತಡ್ಕ “ನಮ್ಮ ಶಾಲೆ “ಸ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ ಗುರುವಾರ ನಡೆಯಿತು. ಪಂಡಿತ್ ಜವಾಹರ್ ಲಾಲ್ ನೆಹರು ರವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಶಾಲ ಎಸ್‍ ಡಿಎಂಸಿ ಅಧ್ಯಕ್ಷ ಶಿವಪ್ರಸಾದ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಎಲ್‍ ಕೆಜಿ ಯಿಂದ 7ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪುತ್ತೂರು ಪೊಲೀಸ್ ಠಾಣೆಯ ಉಪನಿರೀಕ್ಷಕ ಆಂಜನೇಯ ರೆಡ್ಡಿ ಬಹುಮಾನ ವಿತರಿಸಿ ಶುಭ ಹಾರೈಸಿದರು.

ಸಾಮೆತ್ತಡ್ಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ Read More »

ಬೆಟ್ಟಂಪಾಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ : ಸೂರಂಬೈಲು ಶಾಲೆಯ ಮೂರು ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ

ಪುತ್ತೂರು: ಬೆಟ್ಟಂಪಾಡಿ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಬೆಟ್ಟಂಪಾಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ -2024 ರಲ್ಲಿ ಸೂರಂಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೂವರು ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಾದ ಜಿತೇಶ್ ಮಿಮಿಕ್ರಿ ಯಲ್ಲಿ ಪ್ರಥಮ, ದಿವಸ್ ಚಂದ್ ಹಿರಿಯರ ವಿಭಾಗದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಕಿರಿಯರ ವಿಭಾಗದ ಆಶುಭಾಷಣ ಸ್ಪರ್ಧೆಯಲ್ಲಿ ಸಾಕೇತರಾಮ ಪ್ರಥಮ ಸ್ಥಾನದೊಂದಿಗೆ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಕಿರಿಯ ವಿಭಾಗದ ಛದ್ಮವೇಷ ಸ್ಪರ್ಧೆಯಲ್ಲಿ ಲಿಯಾಶ್ರೀ ದ್ವಿತೀಯ, ಹಿರಿಯ ವಿಭಾಗದ

ಬೆಟ್ಟಂಪಾಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ : ಸೂರಂಬೈಲು ಶಾಲೆಯ ಮೂರು ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ Read More »

ಅಂತಿಮ ವರ್ಷದ ಎಂಬಿಎ, ಎಂಸಿಎ ಫಲಿತಾಂಶ ಪ್ರಕಟ : ವಿವೇಕಾನಂದ ಕಾಲೇಜಿಗೆ ಶೇ.100 ಫಲಿತಾಂಶ

ಪುತ್ತೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ 2024 ನೇ ಸಾಲಿನ ಅಂತಿಮ ವರ್ಷದ ಎಂಬಿಎ ಮತ್ತು ಎಂಸಿಎ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಗೊಂಡಿದ್ದು, ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ಎರಡೂ ವಿಭಾಗಗಳಲ್ಲಿ ಶೇ.100 ಫಲಿತಾಂಶದೊಂದಿಗೆ ಉತ್ತಮ ಸಾಧನೆಯನ್ನು ಮಾಡಿದ್ದಾರೆ. ಆಗಸ್ಟ್ ತಿಂಗಳಿನಲ್ಲಿ ನಡೆದ ಎಂಸಿಎ ವಿಭಾಗದ ಪರೀಕ್ಷೆಗೆ ಕಾಲೇಜಿನಿಂದ ಒಟ್ಟು 60  ವಿದ್ಯಾರ್ಥಿಗಳು ಹಾಜರಾಗಿದ್ದು. ಎಲ್ಲರೂ  ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಅಪೂರ್ವ ಸಾಧನೆಯನ್ನು ಮಾಡಿದ್ದಾರೆ. ಅಕ್ಟೋಬರ್ ತಿಂಗಳಿನಲ್ಲಿ ಪೂರ್ಣಗೊಂಡ ಎಂಬಿಎ

ಅಂತಿಮ ವರ್ಷದ ಎಂಬಿಎ, ಎಂಸಿಎ ಫಲಿತಾಂಶ ಪ್ರಕಟ : ವಿವೇಕಾನಂದ ಕಾಲೇಜಿಗೆ ಶೇ.100 ಫಲಿತಾಂಶ Read More »

ರೇಡಿಯೋ ಪಾಂಚಜನ್ಯದಲ್ಲಿ ಕನ್ನಡ ಗೀತೆ ಗಾಯನ-ಚರ್ಚಾ ಸ್ಪರ್ಧೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ ರೇಡಿಯೋ ಪಾಂಚಜನ್ಯದ ಆಶ್ರಯದಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತ್ ಮತ್ತು ರೋಟರಿ ಯುವ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಗೀತೆ ಗಾಯನ ಸ್ಪರ್ಧೆ ಮತ್ತು ಜೀವನದ ಬೆಳವಣಿಗೆಗೆ ಶಿಕ್ಷಣದಲ್ಲಿ ಕನ್ನಡ ಭಾಷೆ ಬೇಕೆ.. ? ಬೇಡವೇ….? ಚರ್ಚಾ ಸ್ಪರ್ಧೆ ನೆಹರೂನಗರ ವಿವೇಕಾನಂದ ಸ್ನಾತಕೋತ್ತರ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮವನ್ನು ರೇಡಿಯೋ ಪಾಂಚಜನ್ಯದ ಅಧ್ಯಕ್ಷೆ ಕೃಷ್ಣವೇಣಿ ಪ್ರಸಾದ್ ಮುಳಿಯ, ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಉಮೇಶ್ ನಾಯಕ್

ರೇಡಿಯೋ ಪಾಂಚಜನ್ಯದಲ್ಲಿ ಕನ್ನಡ ಗೀತೆ ಗಾಯನ-ಚರ್ಚಾ ಸ್ಪರ್ಧೆ Read More »

ಅಂಬಿಕಾದಲ್ಲಿ ಧಾರ್ಮಿಕ ಶಿಕ್ಷಣ ತರಗತಿಗಳ ಉದ್ಘಾಟನೆ | ಆಧುನಿಕ ಶಿಕ್ಷಣದೊಂದಿಗೆ ಧರ್ಮದ ಜ್ಞಾನವೂ ಅಗತ್ಯ : ಬಾಲಚಂದ್ರ ನಟ್ಟೋಜ

ಪುತ್ತೂರು: ಆಧುನಿಕ ಶಿಕ್ಷಣದ ಜೊತೆಗೆ ಸನಾತನ ಧರ್ಮದ ಜ್ಞಾನವೂ ಸಿಕ್ಕಿದಾಗ ಶಿಕ್ಷಣ ವ್ಯವಸ್ಥೆಗೆ ನ್ಯಾಯ ಕೊಟ್ಟಂತಾಗುತ್ತದೆ. ರಸಾಯನಶಾಸ್ತ್ರ, ಭೌತಶಾಸ್ತ್ರದಂತಹ ವಿಷಯಗಳ ಜತೆಗೆ ಧರ್ಮ ಶಿಕ್ಷಣವನ್ನೂ ಕೊಟ್ಟಾಗ ನಿಜವಾದ ಶಿಕ್ಷಣ ಸಾಕಾರಗೊಳ್ಳುತ್ತದೆ. ಧರ್ಮದ ಜೊತೆಗೆ ಜಾಗೃತಿಯನ್ನೂ ಮೂಡಿಸುವುದು ಅಗತ್ಯ ಎಂದು ಪುಣೆಯ ದೀಪಕ್ ಫರ್ಟಿಲೈಝರ್ಸ್ ಆಂಡ್ ಕೆಮಿಕಲ್ಸ್‌ನ ವಿಶ್ರಾಂತ ಜನರಲ್ ಮ್ಯಾನೇಜರ್ ಬಾಲಚಂದ್ರ ನಟ್ಟೋಜ ಹೇಳಿದರು. ಅವರು ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಆರಂಭಿಸಲಾದ ಧಾರ್ಮಿಕ ಶಿಕ್ಷಣ ವ್ಯವಸ್ಥೆಯನ್ನು ಉದ್ಘಾಟಿಸಿ ಮಾತನಾಡಿದರು.ಪರಪೀಡನೆ ಮಾಡದೆ ಪರೋಪಕಾರ ಮಾಡುತ್ತಾ ಮುಕ್ತಿಯತ್ತ

ಅಂಬಿಕಾದಲ್ಲಿ ಧಾರ್ಮಿಕ ಶಿಕ್ಷಣ ತರಗತಿಗಳ ಉದ್ಘಾಟನೆ | ಆಧುನಿಕ ಶಿಕ್ಷಣದೊಂದಿಗೆ ಧರ್ಮದ ಜ್ಞಾನವೂ ಅಗತ್ಯ : ಬಾಲಚಂದ್ರ ನಟ್ಟೋಜ Read More »

ನ.14-15 : ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ  ಆಶ್ರಯದಲ್ಲಿ ಎರಡು ದಿನಗಳ ರಾಷ್ಟ್ರಮಟ್ಟದ ವಿಚಾರ ಸಂಕಿರಣ

ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ (ಸ್ವಾಯತ್ತ) ಆಶ್ರಯದಲ್ಲಿ ಎರಡು ದಿನಗಳ ರಾಷ್ಟ್ರಮಟ್ಟದ ವಿಚಾರ ಸಂಕಿರಣ ನ.14 ಹಾಗೂ 15 ರಂದು ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ ಎಂದು ಐಕ್ಯೂಎಸಿ ವಿಭಾಗದ ಡೀನ್ ಪ್ರೊ.ಶಿವಪ್ರಸಾದ್ ಕೆ.ಎಸ್. ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ವಿವೇಕಾನಂದ ಪದವಿ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ 2022 ರಲ್ಲಿ ಸ್ವಾಯತ್ತ ಸ್ಥಾನಮಾನ ಪಡೆದುಕೊಂಡಿದ್ದು, ಪ್ರಸ್ತುತ ಶಿಕ್ಷಣ ಕ್ಷೇತ್ರದಲ್ಲಿ ಸಮಾಜ ಹಾಗೂ ವಿಜ್ಞಾನ ಕ್ಷೇತ್ರ ಸಹಿತ ಭಾಷಾ ವಿಭಾಗದಲ್ಲಿ

ನ.14-15 : ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ  ಆಶ್ರಯದಲ್ಲಿ ಎರಡು ದಿನಗಳ ರಾಷ್ಟ್ರಮಟ್ಟದ ವಿಚಾರ ಸಂಕಿರಣ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಅಂತರ್ ಪದವಿಪೂರ್ವ ಕಾಲೇಜು  ಫೆಸ್ಟ್

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಆಡಳಿತಕ್ಕೆ ಒಳಪಟ್ಟ ಮಹಾವಿದ್ಯಾಲಯದಲ್ಲಿ ವಾಣಿಜ್ಯ ಶಾಸ್ತ್ರ ಮತ್ತು ಉದ್ಯಮ ಆಡಳಿತ ವಿಭಾಗದಿಂದ ಅಂತಿಮ ವಾಣಿಜ್ಯ ಪದವಿ ಮತ್ತು ಉದ್ಯಮ ಆಡಳಿತ ಪದವಿ ವಿದ್ಯಾರ್ಥಿಗಳು ಆಯೋಜಿಸಿದ ಅಂತರ್ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ‘ಪ್ರೇರಣ ಫೆಸ್ಟ್ ಹಮ್ಮಿಕೊಳ್ಳಲಾಯಿತು. ಚರಿತ್ರೆ ಯೂಟ್ಯೂಬ್ ಚಾನೆಲ್ ನಲ್ಲಿ ಧ್ವನಿ ನೀಡುವ ನಿತಿನ್ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿ  ವಿದ್ಯಾರ್ಥಿಗಳಲ್ಲಿ ಕಲಿಕೆಯ ಮನೋಭಾವ ಇರಬೇಕು, ನಿರಂತರ ಪರಿಶ್ರಮದಿಂದ ಕಲಿತಾಗ ಯಶಸ್ಸು ಸಾಧ್ಯ ಎಂದರು. ಕಾಲೇಜಿನ ಪ್ರಾಂಶುಪಾಲ ಡಾ ದಿನೇಶ್

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಅಂತರ್ ಪದವಿಪೂರ್ವ ಕಾಲೇಜು  ಫೆಸ್ಟ್ Read More »

ನ.16 : ಅಕ್ಷಯ ಕಾಲೇಜಿನಲ್ಲಿ ದ.ಕ, ಕಾಸರಗೋಡು, ಕೊಡಗು ಜಿಲ್ಲಾ ಅಂತರ್-ಕಾಲೇಜು ಪಿಯು ಫೆಸ್ಟ್ ‘ಅಟೆರ್ನಸ್ 2024’

ಪುತ್ತೂರು: ಅಕ್ಷಯ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ನಡಿಯಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ದ.ಕ, ಕಾಸರಗೋಡು, ಕೊಡಗು ಜಿಲ್ಲಾ ಅಂತರ್-ಕಾಲೇಜು  ಪದವಿ ಪೂರ್ವ(ಪಿಯು) ಕಾಲೇಜುಗಳ ಫೆಸ್ಟ್-‘ಅಟೆರ್ನಸ್ 2024’ ನ.16 ರಂದು ಅಕ್ಷಯ ಕಾಲೇಜಿನಲ್ಲಿ ಜರಗಲಿದೆ. ಕಾರ್ಯಕ್ರಮದಲ್ಲಿ 15 ಸ್ಪರ್ಧೆಗಳು ಜರಗಲಿದೆ. ಗ್ರೂಪ್ ಸಿಂಗಿಂಗ್, ಸೋಲೊ ಸಿಂಗಿಂಗ್, ಸೋಲೊ ಡ್ಯಾನ್ಸ್, ಗ್ರೂಪ್ ಡ್ಯಾನ್ಸ್, ಮೊಡೆಲ್ ಪ್ರೆಸೆಂಟೇಶನ್, ಜಾಹಿರಾತು, ಪಾಟ್ ಡೆಕೋರೇಶನ್, ಬೆಂಕಿಯಿಲ್ಲದ ಅಡುಗೆ, ಕ್ವಿಜ್, ವೆಲ್ತ್ ಔಟ್ ಆಫ್ ವೇಸ್ಟ್, ಪೆನ್ಸಿಲ್ ಸ್ಕೆಚ್, ಫಿಚ್ಚರ್ ಸ್ಟೋರಿ ರೈಟಿಂಗ್-ಕನ್ನಡ, ಫಿಚ್ಚರ್

ನ.16 : ಅಕ್ಷಯ ಕಾಲೇಜಿನಲ್ಲಿ ದ.ಕ, ಕಾಸರಗೋಡು, ಕೊಡಗು ಜಿಲ್ಲಾ ಅಂತರ್-ಕಾಲೇಜು ಪಿಯು ಫೆಸ್ಟ್ ‘ಅಟೆರ್ನಸ್ 2024’ Read More »

error: Content is protected !!
Scroll to Top