ಕ್ಯಾಂಪಸ್‌

ಅಂಬಿಕಾದಲ್ಲಿ ಧಾರ್ಮಿಕ ಶಿಕ್ಷಣ ತರಗತಿಗಳ ಉದ್ಘಾಟನೆ | ಆಧುನಿಕ ಶಿಕ್ಷಣದೊಂದಿಗೆ ಧರ್ಮದ ಜ್ಞಾನವೂ ಅಗತ್ಯ : ಬಾಲಚಂದ್ರ ನಟ್ಟೋಜ

ಪುತ್ತೂರು: ಆಧುನಿಕ ಶಿಕ್ಷಣದ ಜೊತೆಗೆ ಸನಾತನ ಧರ್ಮದ ಜ್ಞಾನವೂ ಸಿಕ್ಕಿದಾಗ ಶಿಕ್ಷಣ ವ್ಯವಸ್ಥೆಗೆ ನ್ಯಾಯ ಕೊಟ್ಟಂತಾಗುತ್ತದೆ. ರಸಾಯನಶಾಸ್ತ್ರ, ಭೌತಶಾಸ್ತ್ರದಂತಹ ವಿಷಯಗಳ ಜತೆಗೆ ಧರ್ಮ ಶಿಕ್ಷಣವನ್ನೂ ಕೊಟ್ಟಾಗ ನಿಜವಾದ ಶಿಕ್ಷಣ ಸಾಕಾರಗೊಳ್ಳುತ್ತದೆ. ಧರ್ಮದ ಜೊತೆಗೆ ಜಾಗೃತಿಯನ್ನೂ ಮೂಡಿಸುವುದು ಅಗತ್ಯ ಎಂದು ಪುಣೆಯ ದೀಪಕ್ ಫರ್ಟಿಲೈಝರ್ಸ್ ಆಂಡ್ ಕೆಮಿಕಲ್ಸ್‌ನ ವಿಶ್ರಾಂತ ಜನರಲ್ ಮ್ಯಾನೇಜರ್ ಬಾಲಚಂದ್ರ ನಟ್ಟೋಜ ಹೇಳಿದರು. ಅವರು ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಆರಂಭಿಸಲಾದ ಧಾರ್ಮಿಕ ಶಿಕ್ಷಣ ವ್ಯವಸ್ಥೆಯನ್ನು ಉದ್ಘಾಟಿಸಿ ಮಾತನಾಡಿದರು.ಪರಪೀಡನೆ ಮಾಡದೆ ಪರೋಪಕಾರ ಮಾಡುತ್ತಾ ಮುಕ್ತಿಯತ್ತ […]

ಅಂಬಿಕಾದಲ್ಲಿ ಧಾರ್ಮಿಕ ಶಿಕ್ಷಣ ತರಗತಿಗಳ ಉದ್ಘಾಟನೆ | ಆಧುನಿಕ ಶಿಕ್ಷಣದೊಂದಿಗೆ ಧರ್ಮದ ಜ್ಞಾನವೂ ಅಗತ್ಯ : ಬಾಲಚಂದ್ರ ನಟ್ಟೋಜ Read More »

ನ.14-15 : ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ  ಆಶ್ರಯದಲ್ಲಿ ಎರಡು ದಿನಗಳ ರಾಷ್ಟ್ರಮಟ್ಟದ ವಿಚಾರ ಸಂಕಿರಣ

ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ (ಸ್ವಾಯತ್ತ) ಆಶ್ರಯದಲ್ಲಿ ಎರಡು ದಿನಗಳ ರಾಷ್ಟ್ರಮಟ್ಟದ ವಿಚಾರ ಸಂಕಿರಣ ನ.14 ಹಾಗೂ 15 ರಂದು ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ ಎಂದು ಐಕ್ಯೂಎಸಿ ವಿಭಾಗದ ಡೀನ್ ಪ್ರೊ.ಶಿವಪ್ರಸಾದ್ ಕೆ.ಎಸ್. ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ವಿವೇಕಾನಂದ ಪದವಿ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ 2022 ರಲ್ಲಿ ಸ್ವಾಯತ್ತ ಸ್ಥಾನಮಾನ ಪಡೆದುಕೊಂಡಿದ್ದು, ಪ್ರಸ್ತುತ ಶಿಕ್ಷಣ ಕ್ಷೇತ್ರದಲ್ಲಿ ಸಮಾಜ ಹಾಗೂ ವಿಜ್ಞಾನ ಕ್ಷೇತ್ರ ಸಹಿತ ಭಾಷಾ ವಿಭಾಗದಲ್ಲಿ

ನ.14-15 : ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ  ಆಶ್ರಯದಲ್ಲಿ ಎರಡು ದಿನಗಳ ರಾಷ್ಟ್ರಮಟ್ಟದ ವಿಚಾರ ಸಂಕಿರಣ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಅಂತರ್ ಪದವಿಪೂರ್ವ ಕಾಲೇಜು  ಫೆಸ್ಟ್

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಆಡಳಿತಕ್ಕೆ ಒಳಪಟ್ಟ ಮಹಾವಿದ್ಯಾಲಯದಲ್ಲಿ ವಾಣಿಜ್ಯ ಶಾಸ್ತ್ರ ಮತ್ತು ಉದ್ಯಮ ಆಡಳಿತ ವಿಭಾಗದಿಂದ ಅಂತಿಮ ವಾಣಿಜ್ಯ ಪದವಿ ಮತ್ತು ಉದ್ಯಮ ಆಡಳಿತ ಪದವಿ ವಿದ್ಯಾರ್ಥಿಗಳು ಆಯೋಜಿಸಿದ ಅಂತರ್ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ‘ಪ್ರೇರಣ ಫೆಸ್ಟ್ ಹಮ್ಮಿಕೊಳ್ಳಲಾಯಿತು. ಚರಿತ್ರೆ ಯೂಟ್ಯೂಬ್ ಚಾನೆಲ್ ನಲ್ಲಿ ಧ್ವನಿ ನೀಡುವ ನಿತಿನ್ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿ  ವಿದ್ಯಾರ್ಥಿಗಳಲ್ಲಿ ಕಲಿಕೆಯ ಮನೋಭಾವ ಇರಬೇಕು, ನಿರಂತರ ಪರಿಶ್ರಮದಿಂದ ಕಲಿತಾಗ ಯಶಸ್ಸು ಸಾಧ್ಯ ಎಂದರು. ಕಾಲೇಜಿನ ಪ್ರಾಂಶುಪಾಲ ಡಾ ದಿನೇಶ್

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಅಂತರ್ ಪದವಿಪೂರ್ವ ಕಾಲೇಜು  ಫೆಸ್ಟ್ Read More »

ನ.16 : ಅಕ್ಷಯ ಕಾಲೇಜಿನಲ್ಲಿ ದ.ಕ, ಕಾಸರಗೋಡು, ಕೊಡಗು ಜಿಲ್ಲಾ ಅಂತರ್-ಕಾಲೇಜು ಪಿಯು ಫೆಸ್ಟ್ ‘ಅಟೆರ್ನಸ್ 2024’

ಪುತ್ತೂರು: ಅಕ್ಷಯ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ನಡಿಯಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ದ.ಕ, ಕಾಸರಗೋಡು, ಕೊಡಗು ಜಿಲ್ಲಾ ಅಂತರ್-ಕಾಲೇಜು  ಪದವಿ ಪೂರ್ವ(ಪಿಯು) ಕಾಲೇಜುಗಳ ಫೆಸ್ಟ್-‘ಅಟೆರ್ನಸ್ 2024’ ನ.16 ರಂದು ಅಕ್ಷಯ ಕಾಲೇಜಿನಲ್ಲಿ ಜರಗಲಿದೆ. ಕಾರ್ಯಕ್ರಮದಲ್ಲಿ 15 ಸ್ಪರ್ಧೆಗಳು ಜರಗಲಿದೆ. ಗ್ರೂಪ್ ಸಿಂಗಿಂಗ್, ಸೋಲೊ ಸಿಂಗಿಂಗ್, ಸೋಲೊ ಡ್ಯಾನ್ಸ್, ಗ್ರೂಪ್ ಡ್ಯಾನ್ಸ್, ಮೊಡೆಲ್ ಪ್ರೆಸೆಂಟೇಶನ್, ಜಾಹಿರಾತು, ಪಾಟ್ ಡೆಕೋರೇಶನ್, ಬೆಂಕಿಯಿಲ್ಲದ ಅಡುಗೆ, ಕ್ವಿಜ್, ವೆಲ್ತ್ ಔಟ್ ಆಫ್ ವೇಸ್ಟ್, ಪೆನ್ಸಿಲ್ ಸ್ಕೆಚ್, ಫಿಚ್ಚರ್ ಸ್ಟೋರಿ ರೈಟಿಂಗ್-ಕನ್ನಡ, ಫಿಚ್ಚರ್

ನ.16 : ಅಕ್ಷಯ ಕಾಲೇಜಿನಲ್ಲಿ ದ.ಕ, ಕಾಸರಗೋಡು, ಕೊಡಗು ಜಿಲ್ಲಾ ಅಂತರ್-ಕಾಲೇಜು ಪಿಯು ಫೆಸ್ಟ್ ‘ಅಟೆರ್ನಸ್ 2024’ Read More »

ಪಟ್ಟೆ ಪ್ರತಿಭಾ ಪ್ರೌಢ ಶಾಲೆ ವಿದ್ಯಾರ್ಥಿನಿ ತನುಶ್ರೀ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ಬಡಗನ್ನೂರು ಗ್ರಾಮದ ಪಟ್ಟೆ ಪ್ರತಿಭಾ ಪ್ರೌಢ ಶಾಲೆಯ ೧೦ ನೇ ತರಗತಿ ವಿದ್ಯಾರ್ಥಿನಿ ತನುಶ್ರೀ ರೈ ಕೋಲಾರ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದ ಗುಂಡೆಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಸತತ ಎರಡನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ 11.87 ಮೀಟರ್ ದೂರ ಗುಂಡನ್ನು ಎಸೆದು ಈಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಅಕ್ಟೋಬರ್ ತಿಂಗಳಲ್ಲಿ ಸಾಂದೀಪನಿ ವಿದ್ಯಾಸಂಸ್ಥೆಗಳ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ 17ರ ವಯೋಮಾನದ ಬಾಲಕಿಯರ ಗುಂಡು ಎಸೆತದಲ್ಲಿ ತನುಶ್ರೀ ರೈ

ಪಟ್ಟೆ ಪ್ರತಿಭಾ ಪ್ರೌಢ ಶಾಲೆ ವಿದ್ಯಾರ್ಥಿನಿ ತನುಶ್ರೀ ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಎಂಬಿಎ ಕಲಿಕೆ ಕುರಿತು ಮಾರ್ಗದರ್ಶನ ಶಿಬಿರ

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಬಿಎ ವಿಭಾಗದ ಆಶ್ರಯದಲ್ಲಿ ವಿವೇಕಾನಂದ ಪದವಿ ಕಾಲೇಜಿನ ಸಹಯೋಗದೊಂದಿಗೆ ಎಂಬಿಎ ಕಲಿಕೆಯ ಮೂಲಕ ತಮ್ಮ ವೃತ್ತಿಪರ ಬದುಕನ್ನು ಎತ್ತರಿಸಿಕೊಳ್ಳುವುದು ಹೇಗೆ ಎನ್ನುವ ವಿಷಯದ ಬಗ್ಗೆ ಪದವಿ ವಿದ್ಯಾರ್ಥಿಗಳಿಗೆ ಒಂದು ದಿನದ ಮಾರ್ಗದರ್ಶನ ಶಿಬಿರವನ್ನು ಏರ್ಪಡಿಸಲಾಯಿತು. ಒಟ್ಟು ನಾಲ್ಕು ಅವಧಿಯಲ್ಲಿ ನಡೆದ ಈ ಕಾರ್ಯಾಗಾರದಲ್ಲಿ ಎಂಬಿಎ ಕಲಿಕೆಯಿಂದ ಆಗುವ ಪ್ರಯೋಜನಗಳು, ಸಿಗಬಹುದಾದ ವಿವಿಧ ಅವಕಾಶಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನವನ್ನು ನೀಡಲಾಯಿತು. ಮೊದಲ ಅವಧಿಯಲ್ಲಿ ಎಂಬಿಎ ಯಾಕೆ ಎಂಬ ವಿಷಯದ

ಎಂಬಿಎ ಕಲಿಕೆ ಕುರಿತು ಮಾರ್ಗದರ್ಶನ ಶಿಬಿರ Read More »

ಬೆಳ್ಳಾರೆ ಪದವಿ ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಭೆ | ಕಾಲೇಜಿನ ಧನಾತ್ಮಕ ಚಟುವಟಿಕೆಗಳನ್ನು ಪರಿಚಯಿಸಲು ನವ ಮಾಧ್ಯಮಗಳ ಬಳಕೆ ಅಗತ್ಯ : ಹಿರಿಯ ವಿದ್ಯಾರ್ಥಿಗಳಿಂದ ಸಲಹೆ

ಪೆರುವಾಜೆ : ಬೆಳ್ಳಾರೆ ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹತ್ತಾರು ಧನಾತ್ಮಕ ಚಟುವಟಿಕೆಗಳು ನಡೆಯುತ್ತಿದ್ದು ಅವು ಹೊರ ಜಗತ್ತಿಗೆ ಅಪರಿಚಿತವಾಗಿಯೇ ಉಳಿದಿದೆ. ಅವುಗಳನ್ನು ನವ ಮಾಧ್ಯಮಗಳ ಮೂಲಕ ಹೊರ ಜಗತ್ತಿಗೆ ಪರಿಚಯಿಸುವ ಕಾರ್ಯ ತುರ್ತಾಗಿ ಆಗಬೇಕು ಎಂಬ ಅಭಿಪ್ರಾಯ ಹಿರಿಯ ವಿದ್ಯಾರ್ಥಿಗಳಿಂದ ವ್ಯಕ್ತವಾಯಿತು. ಬೆಳ್ಳಾರೆ ಡಾ|ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಭೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಹಿರಿಯ ವಿದ್ಯಾರ್ಥಿ ಮಹೇಶ್ ಕೆ.ಎನ್. ಅಭಿಪ್ರಾಯ ವ್ಯಕ್ತಪಡಿಸಿ, ಸಾಮಾಜಿಕ ಜಾಲತಾಣಗಳು ಸಹಿತ

ಬೆಳ್ಳಾರೆ ಪದವಿ ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಭೆ | ಕಾಲೇಜಿನ ಧನಾತ್ಮಕ ಚಟುವಟಿಕೆಗಳನ್ನು ಪರಿಚಯಿಸಲು ನವ ಮಾಧ್ಯಮಗಳ ಬಳಕೆ ಅಗತ್ಯ : ಹಿರಿಯ ವಿದ್ಯಾರ್ಥಿಗಳಿಂದ ಸಲಹೆ Read More »

ನಾಳೆ ಮುಕ್ವೆ ಶಾಲೆ ಹಿರಿಯ ವಿದ್ಯಾರ್ಥಿಗಳ ಕ್ರೀಡಾಕೂಟ

ಪುತ್ತೂರು: ಸ.ಉ.ಹಿ.ಪ್ರಾ. ಶಾಲೆ ಮುಕ್ವೆ ಹಿರಿಯ ವಿದ್ಯಾರ್ಥಿ ಸಂಘ ಮುಕ್ವೆ ಆಶ್ರಯದಲ್ಲಿ ನ.10ರಂದು ಹಿರಿಯ ವಿದ್ಯಾರ್ಥಿಗಳ ಕ್ರೀಡಾಕೂಟಸ.ಉ.ಹಿ.ಪ್ರಾ. ಶಾಲೆ ಮುಕ್ವೆ ಶಾಲಾ ಮೈದಾನ ಹಿರಿಯ ವಿದ್ಯಾರ್ಥಿ ಸಂಘ ಮುಕ್ವೆ ನರಿಮೊಗರು ಇಲ್ಲಿ ಬೆಳಗ್ಗೆ 8.30ರಿಂ ಸಂಜೆ 5.30ರ ತನಕ ನಡೆಯಲಿದೆ ಸ್ಪರ್ಧೆಗಳ ವಿವರ ಪುರುಷರಿಗೆ : ಕ್ರಿಕೆಟ್, ವಾಲಿಬಾಲ್, ಕಬಡ್ಡಿ, ಹಗ್ಗಜಗ್ಗಾಟ, 100ಮೀ ಓಟ ಮಹಿಳೆಯರಿಗೆ : ತ್ರೋಬಾಲ್, ಹಗ್ಗಜಗ್ಗಾಟ, ಗುಂಡೆಸೆತ, 100ಮೀ ಓಟ ಸಂಜೆ 5.30ಕ್ಕೆ : ಸಮಾರೋಪ ಸಮಾರಂಭ ನಡೆಯಲಿದೆ. ಪ್ರತಿ ಸದಸ್ಯರು 100

ನಾಳೆ ಮುಕ್ವೆ ಶಾಲೆ ಹಿರಿಯ ವಿದ್ಯಾರ್ಥಿಗಳ ಕ್ರೀಡಾಕೂಟ Read More »

ಜೆಸಿಐ ಪುತ್ತೂರು  ಅಧ್ಯಕ್ಷರಾಗಿ ಭಾಗ್ಯೇಶ್ ರೈ ಆಯ್ಕೆ

ಪುತ್ತೂರು: ಪ್ರತಿಷ್ಠಿತ ಅಂತರಾಷ್ಟ್ರೀಯ ಸೇವಾ ಸಂಸ್ಥೆಯಾದ JCI ಪುತ್ತೂರು ಘಟಕದ 2025 ನೇ ಸಾಲಿನ ಅಧ್ಯಕ್ಷರಾಗಿ ವಿದ್ಯಾಮಾತಾ ಅಕಾಡೆಮಿ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ರವರು ಚುನಾಯಿತರಾಗಿದ್ದಾರೆ. JCI ಮುಳಿಯ  ಹಾಲ್ ನಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯನ್ನು ನಿಯೋಜಿತ ವಲಯ ಉಪಾಧ್ಯಕ್ಷ ಚುನಾವಣಾ ಅಧಿಕಾರಿ JC ಸುಹಾಸ್ ಮರಿಕೆ, ರಾಷ್ಟ್ರೀಯ ಸಂಯೋಜಕಿ JC ಸ್ವಾತಿ ಜೆ ರೈ , ಪೂರ್ವ ಅಧ್ಯಕ್ಷರಾದ JC ಶಶಿರಾಜ್ ರೈ, JC ಮೋಹನ್ ಕೆ ರವರುಗಳು ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಪೂರ್ವ

ಜೆಸಿಐ ಪುತ್ತೂರು  ಅಧ್ಯಕ್ಷರಾಗಿ ಭಾಗ್ಯೇಶ್ ರೈ ಆಯ್ಕೆ Read More »

ಎನ್.ಎಸ್.ಎಸ್ ವತಿಯಿಂದ ‘ಭ್ರಷ್ಟಾಚಾರದ ವಿರುದ್ಧ ಜಾಗೃತಿ ಹಾಗೂ ಪ್ರಮಾಣ ವಿಧಿ’ ಸ್ವೀಕಾರ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಎನ್ಎಸ್ಎಸ್ಯೋಜನಾ ಘಟಕದ ವತಿಯಿಂದ ‘ಭ್ರಷ್ಟಾಚಾರದ ವಿರುದ್ಧ ಜಾಗೃತಿ ಹಾಗೂ ಪ್ರಮಾಣ ವಿಧಿ’ ಸ್ವೀಕಾರ ಮಹಾವಿದ್ಯಾಲಯದ ಸುಜ್ಞಾನ  ದೀಪಿಕಾ ಸಭಾಂಗಣದಲ್ಲಿ ಬುಧವಾರ ನಡೆಯಿತು. ಕಾಲೇಜಿನ ಸಹಾಯಕ ಪ್ರಾಧ್ಯಾಪಕ, ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮಾಧಿಕಾರಿ ಲಕ್ಷ್ಮೀಕಾಂತ ಎ. ಮಾತನಾಡಿ, ಭಾರತವನ್ನು ಭ್ರಷ್ಟಾಚಾರ ಮುಕ್ತಗೊಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಜವಾಬ್ದಾರಿಯುತ ನಾಗರಿಕ ತನ್ನಲ್ಲಿ ನೈತಿಕತೆಯನ್ನು ಬೆಳೆಸಿಕೊಳ್ಳಬೇಕು. ಭ್ರಷ್ಟಾಚಾರ ವಿರೋಧಿಸುವ ಪ್ರತಿಜ್ಞೆಯನ್ನು ಕೈಗೊಳ್ಳಬೇಕು ಎಂದರು. ಸಹಾಯಕ ಪ್ರಾಧ್ಯಾಪಕಿ ಶ್ರೀರಕ್ಷಾ ಭ್ರಷ್ಟಾಚಾರದ ವಿರುದ್ಧದ ಪ್ರತಿಜ್ಞಾ ವಿಧಿ ಬೋಧಿಸಿದರು. ಮಹಾವಿದ್ಯಾಲಯದ

ಎನ್.ಎಸ್.ಎಸ್ ವತಿಯಿಂದ ‘ಭ್ರಷ್ಟಾಚಾರದ ವಿರುದ್ಧ ಜಾಗೃತಿ ಹಾಗೂ ಪ್ರಮಾಣ ವಿಧಿ’ ಸ್ವೀಕಾರ Read More »

error: Content is protected !!
Scroll to Top