ಕ್ಯಾಂಪಸ್‌

ಮಾಣಿಲ ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಮಾಣಿಲ: ಮಾಣಿಲ ಸರಕಾರಿ ಪ್ರೌಢಶಾಲೆಯಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು. ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ, ಯೋಗ ಗುರು ವಿಶ್ವೇಶ್ವರ ಭಟ್ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಯೋಗದ ಮಹತ್ವವನ್ನು ವಿವರಿಸಿ, ಹಲವು ಯೋಗಾಸನ ಹಾಗೂ ಪ್ರಾಣಾಯಾಮಗಳ ಅಭ್ಯಾಸ ಮಾಡಿಸಿದರು.    ಮಾಣಿಲ ಗ್ರಾಪಂ ಅಧ್ಯಕ್ಷ ಶ್ರೀಧರ ಬಾಳೆಕಲ್ಲು, ಸದಸ್ಯ ರಾಜೇಶ್ ಬಾಳೆಕಲ್ಲು ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಮುಖ್ಯಶಿಕ್ಷಕಿ ಲತಾ ಯು. ವಹಿಸಿದ್ದರು. ಯೋಗ ಗುರು ವಿಶ್ವೇಶ್ವರ ಭಟ್ , ಎಸ್ ಡಿ ಎಂ ಸಿ ಸದಸ್ಯ […]

ಮಾಣಿಲ ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ Read More »

ವೀರಮಂಗಲ ಶಾಲೆಗೆ ಯೋಗ ಟೀ ಶರ್ಟ್ ಕೊಡುಗೆ

ವೀರಮಂಗಲ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವೀರಮಂಗಲ ಇದರ ವತಿಯಿಂದ ಪಿಎಂಶ್ರೀ ವೀರಮಂಗಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ   ಯೋಗ ಟೀ ಶರ್ಟ್ ಕೊಡುಗೆಯಾಗಿ ನೀಡಲಾಯಿತು. ಪುತ್ತಿಲ ಪರಿವಾರದ ಮುಖ್ಯಸ್ಥರಾದ ಅರುಣ್ ಕುಮಾರ್ ಪುತ್ತಿಲ ಮಕ್ಕಳಿಗೆ ಟೀ ಶರ್ಟ್ ವಿತರಿಸಿ ಶುಭಹಾರೈಸಿದರು. ಪುತ್ತಿಲ ಪರಿವಾರದ ಅಧ್ಯಕ್ಷರಾದ ಪ್ರವಿಣ್ ಮಾರ್ತ, ಕಾರ್ಯದರ್ಶಿ ಉಮೇಶ್ ಕೋಡಿಬೈಲು, ಮಹಾವಿಷ್ಣು ಸೇವಾ ಟ್ರಸ್ಟ್ ಆನಾಜೆ ಇದರ ಅಧ್ಯಕ್ಷ ಗೋಪಾಲಕೃಷ್ಣ ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್  ನ ಟ್ರಸ್ಟಿಗಳು ಉಪಸ್ಥಿತರಿದ್ದರು. ಶಾಲಾ ವತಿಯಿಂದ

ವೀರಮಂಗಲ ಶಾಲೆಗೆ ಯೋಗ ಟೀ ಶರ್ಟ್ ಕೊಡುಗೆ Read More »

ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಪುತ್ತೂರು: ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ಸಂಚಾಲಕ ಭಾಸ್ಕರ್ ಆಚಾರ್ ಹಿಂದಾರ್ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ಜಯಮಾಲಾ ಮಾತನಾಡಿ, ಯೋಗವು ಮನುಷ್ಯನ ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರುತ್ತದೆ. ಪ್ರತಿನಿತ್ಯ ಯೋಗ ಮಾಡುವ ಮೂಲಕ ಆರೋಗ್ಯ ವೃದ್ಧಿಸಬಹುದು ಎಂದು ಹೇಳಿದರು. ಯೋಗ ಶಿಕ್ಷಕರುಗಳಾದ ನವೀನ್ ಕುಮಾರ್, ವೀಣಾ ವಿದ್ಯಾರ್ಥಿಗಳಿಗೆ ಯೋಗದ ವಿಶೇಷತೆಗಳನ್ನು ತಿಳಿಸಿ ಸಾಮೂಹಿಕ ಯೋಗಾಭ್ಯಾಸಗಳನ್ನು ನಡೆಸಿಕೊಟ್ಟರು.

ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ Read More »

ವಿದ್ಯಾರ್ಥಿಗಳು ನೈಜ ನಾಯಕರಂತೆ ಮುನ್ನಡೆಯಬೇಕು | ಅಂಬಿಕಾ ಪ.ಪೂ ವಿದ್ಯಾಲಯದಲ್ಲಿ ವಿದ್ಯಾರ್ಥಿ ನಾಯಕರ ಪ್ರಮಾಣವಚನದಲ್ಲಿ ಸುಬೇದಾರ್ ರಮೇಶ್ ಬಾಬು

ಪುತ್ತೂರು: ವಿದ್ಯಾರ್ಥಿಗಳು ನಾಯಕತ್ವ ಬೆಳೆಸಿಕೊಂಡು ತಮ್ಮಿಂದಾದ ಉತ್ಕ್ರಷ್ಟ ಪ್ರಯತ್ನ ಮಾಡುವುದಲ್ಲದೆ ತಾವು ವಿದ್ಯಾಭ್ಯಾಸಗೈಯುವ ವಿದ್ಯಾದೇಗುಲದ ಒಳಿತಿಗಾಗಿಯೂ ಚಿಂತನೆ ನಡೆಸಬೇಕು ಎಂದು ಭಾರತೀಯ ಸೇನೆಯ ನಿವೃತ್ತ ಅಧಿಕಾರಿ ಸುಬೇದಾರ್ ರಮೇಶ್ ಬಾಬು ಪಿ. ಹೇಳಿದರು. ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಆಯೋಜಿಸಲಾದ ಕಾಲೇಜು ಸಂಸತ್ತಿನ ಪದಗ್ರಹಣ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪ್ರಜಾಪ್ರಭುತ್ವದಲ್ಲಿ ಹೇಗೆ ನಾಯಕರು ಮತ್ತು ಪ್ರಜೆಗಳ ಒಡನಾಟ, ಚರ್ಚೆ, ತೀರ್ಮಾನ ಕೈಗೊಳ್ಳುವ ಪರಿ ನಡೆಯುತ್ತದೆಯೋ ಅದೇ ರೀತಿ ವಿದ್ಯಾರ್ಥಿ ನಾಯಕರೂ ಮುನ್ನಡೆಯಬೇಕು ಎಂದು

ವಿದ್ಯಾರ್ಥಿಗಳು ನೈಜ ನಾಯಕರಂತೆ ಮುನ್ನಡೆಯಬೇಕು | ಅಂಬಿಕಾ ಪ.ಪೂ ವಿದ್ಯಾಲಯದಲ್ಲಿ ವಿದ್ಯಾರ್ಥಿ ನಾಯಕರ ಪ್ರಮಾಣವಚನದಲ್ಲಿ ಸುಬೇದಾರ್ ರಮೇಶ್ ಬಾಬು Read More »

ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿಶ್ವಯೋಗ ದಿನಾಚರಣೆ

ಪುತ್ತೂರು: ಯೋಗಾಭ್ಯಾಸ ದೈಹಿಕ ಮತ್ತು ಮಾನಸಿಕ ವಿಕಾಸಕ್ಕೆ ಸಾಧನ. ಯೋಗದ ನಿರಂತರ ಅಭ್ಯಾಸದಿಂದ ಮನೋನಿಯಂತ್ರಣ, ಇಂದ್ರಿಯ ನಿಗ್ರಹ, ಅಧಿಕ ಕಾರ್ಯೋತ್ಸಾಹ ಮೊದಲಾದ ಸಾಮರ್ಥ್ಯಗಳನ್ನು ಬೆಳೆಸಿಕೊಳ್ಳಬಹುದು. ಪಾರಮಾರ್ಥಿಕ ಸತ್ಯದೆಡೆಗೆ, ಆತ್ಮದ ಅರಿವನ್ನು ಪಡೆಯುವುದರೆಡೆಗೆ ಸಾಗಲು ಮನುಷ್ಯರಿಗೆ ನೆರವಾಗುವಂತದ್ದೆಲ್ಲವೂ ಯೋಗವೇ ಎಂದು ಪುತ್ತೂರಿನ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಯೋಗಶಿಕ್ಷಕಿ ಶರಾವತಿ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ವಿಶ್ವಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಯೋಗದ ಪ್ರಾಮುಖ್ಯತೆ ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಶ್ಯಾನಭಾಗ್ ಮಾತನಾಡಿ, ,ವಾಸ್ತವವಾಗಿ ಯೋಗ ಎಂಬುದು

ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿಶ್ವಯೋಗ ದಿನಾಚರಣೆ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಅ೦ತರಾಷ್ಟ್ರೀಯ ಯೋಗ ದಿನಾಚರಣೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಎನ್‌ಸಿಸಿ ಆರ್ಮಿ ಮತ್ತು ನೇವಿ ಘಟಕಗಳು, ಎನ್‌ಎಸ್‌ಎಸ್‌ ಘಟಕಗಳು, ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಎನ್‌ ಸಿಸಿ ಘಟಕಗಳು ಮತ್ತು ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯ ಎನ್‌ ಸಿ ಸಿ ಘಟಕಗಳ ಸಂಯುಕ್ತ ಆಶ್ರಯದಲ್ಲಿ “ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ” ಎಂಬ ಆಶಯದೊಂದಿಗೆ ಕಾಲೇಜಿನ ಬೆಳ್ಳಿ ಹಬ್ಬ ಸಭಾಭವನದಲ್ಲಿ ಹತ್ತನೇ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಸಂತ ಫಿಲೋಮಿನಾ ಪದವಿ ಕಾಲೇಜಿನ ಎನ್‌ಸಿಸಿ ಆರ್ಮಿ ವಿಂಗ್ಅಧಿಕಾರಿ ಕ್ಯಾಪ್ಟನ್ ಜಾನ್ಸನ್ ಡೇವಿಡ್

ಸಂತ ಫಿಲೋಮಿನಾ ಕಾಲೇಜಿನಲ್ಲಿ ಅ೦ತರಾಷ್ಟ್ರೀಯ ಯೋಗ ದಿನಾಚರಣೆ Read More »

ವಿದ್ಯಾರಶ್ಮಿ ವಿದ್ಯಾಲಯದಲ್ಲಿ‌ ವಿಶ್ವಯೋಗ ದಿನಾಚರಣೆ

ಸವಣೂರು: ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಅ೦ತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಯೋಗ ದಿನಾಚರಣೆಯ ಕಾರ್ಯಕ್ರಮವನ್ನು 10ನೇ ತರಗತಿಯ ಕುಮಾರಿ ರಶ್ಮಿತಾ ಮತ್ತು ಜೀವಿತಾ ನಿರ್ವಹಿಸಿದರು. ಸುಮಾರು 300 ವಿದ್ಯಾರ್ಥಿಗಳು ಯೋಗಾಭ್ಯಾಸದಲ್ಲಿ ಪಾಲ್ಗೊ೦ಡರು ಹಾಗೂ ಈ ಕಾರ್ಯಕ್ರಮದಲ್ಲಿ ಆಡಳಿತಾಧಿಕಾರಿ ಅಶ್ವಿನ್ ಎಲ್.ಶೆಟ್ಟಿ, ಪ್ರಾಂಶುಪಾಲರುಗಳು ಹಾಗೂ ಸಂಸ್ಥೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ವಿದ್ಯಾರಶ್ಮಿ ವಿದ್ಯಾಲಯದಲ್ಲಿ‌ ವಿಶ್ವಯೋಗ ದಿನಾಚರಣೆ Read More »

ಯೋಗ ಮನುಷ್ಯನ ದಿನನಿತ್ಯದ ಭಾಗವಾಗಲಿ | ದರ್ಬೆ ಲಿಟ್ಲ್ ಫ್ಲವರ್ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯಲ್ಲಿ ಭಗಿನಿ ವೆನಿಶಾ ಬಿ.ಎಸ್.

ಪುತ್ತೂರು: ದರ್ಬೆ ಲಿಟ್ಲ್ ಫ್ಲವರ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಯೋಗದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಏರ್ಪಡಿಸಿದ ಸರಳ ಸಮಾರಂಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ.ಎಸ್. ಅಧ್ಯಕ್ಷತೆ ವಹಿಸಿ ಮಾತನಾಡಿ, ಭಾರತೀಯ ವೈದ್ಯ ಪದ್ಧತಿಯಲ್ಲಿ ಆಯುರ್ವೇದಕ್ಕೆ ಮಹತ್ವದ ಸ್ಥಾನವಿದೆ. ಯೋಗದಿಂದ ದೈಹಿಕ ಮತ್ತು ಮಾನಸಿಕ ಸಮತೋಲನ ಸಾಧ್ಯವಿದ್ದು, ಯೋಗ ಇದ್ದರೆ ರೋಗವಿಲ್ಲ, ಯೋಗ ದಿನ ನಿತ್ಯದ ಭಾಗವಾಗಲಿ ಎಂದರು. ವೇದಿಕೆಯಲ್ಲಿ ಹಿರಿಯ ಶಿಕ್ಷಕಿ ವಿಲ್ಮಾ ಫೆರ್ನಾಂಡಿಸ್, ಕೋಸ್ಟಲ್ ಹೋಮ್ ಮಾಲಕ ಸಂದೇಶ್ ರೈ,

ಯೋಗ ಮನುಷ್ಯನ ದಿನನಿತ್ಯದ ಭಾಗವಾಗಲಿ | ದರ್ಬೆ ಲಿಟ್ಲ್ ಫ್ಲವರ್ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯಲ್ಲಿ ಭಗಿನಿ ವೆನಿಶಾ ಬಿ.ಎಸ್. Read More »

ರಾಜ್ಯಮಟ್ಟದ 10 ಕಿ.ಮೀ. ಕ್ರಾಸ್ ಕಂಟ್ರಿ | ವಿವೇಕಾನಂದ ಕಾಲೇಜ್ ಆಫ್‍ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ವಿದ್ಯಾರ್ಥಿನಿಯರ ತಂಡ ಚಾಂಪಿಯನ್ ಶಿಪ್

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿನಿಯರ ತಂಡ 2024-25 ನೇ ಸಾಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ 10 ಕಿಮೀ ಕ್ರಾಸ್-ಕಂಟ್ರಿ ಸ್ಪರ್ಧೆಯಲ್ಲಿ ಮಹಿಳೆಯರ ವಿಭಾಗದಲ್ಲಿ ಸತತ ಮೂರನೇ ಬಾರಿಗೆ ಚಾಂಪಿಯನ್‌ಶಿಪ್ ಪ್ರಶಸ್ತಿ ಗೆದ್ದುಕೊಂಡಿದೆ. ಶ್ರವಣಬೆಳಗೊಳದ ಬಾಹುಬಲಿ ಕಾಲೇಜ್ ಆಫ್ ಎಂಜಿನಿಯರಿಂಗ್ ಆಶ್ರಯದಲ್ಲಿ ನಡೆದ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಈ ವಿಶಿಷ್ಟ ಸಾಧನೆಯನ್ನು ಮಾಡಿದ್ದಾರೆ. ತೃತೀಯ ವರ್ಷದ ಎಲೆಕ್ಟ್ರಾನಿಕ್ಸ್ ವಿಭಾಗದ ವಿದ್ಯಾ.ಸಿ.ಎಸ್ ತೃತೀಯ ಸ್ಥಾನ, ದ್ವಿತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ಜೀಕ್ಷಿತಾ.ಕೆ 4ನೇ

ರಾಜ್ಯಮಟ್ಟದ 10 ಕಿ.ಮೀ. ಕ್ರಾಸ್ ಕಂಟ್ರಿ | ವಿವೇಕಾನಂದ ಕಾಲೇಜ್ ಆಫ್‍ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ವಿದ್ಯಾರ್ಥಿನಿಯರ ತಂಡ ಚಾಂಪಿಯನ್ ಶಿಪ್ Read More »

ನರೇಂದ್ರ ಕಾಲೇಜಿನಲ್ಲಿ ಹಿಂದೂ ಸಾಮ್ರಾಜ್ಯ ದಿವಸ್ ಆಚರಣೆ

ಪುತ್ತೂರು: ಶಿವಾಜಿ ಇಂದು ಸ್ವಶಕ್ತಿಯಿಂದ ಹಿಂದೂ ಸಾಮ್ರಾಜ್ಯಕ್ಕೆ, ಅಭೀಷಕ್ತನಾದ ದಿನವಾಗಿದ್ದು, ಶ್ರೇಷ್ಟ ಶುದ್ಧ ತ್ರಯೋದಶಿಯನ್ನು ರಾಷ್ಟ್ರಕ್ಕೆ ಪರ್ವದಿನವಾಗಿ, ಹಿಂದೂ ಸಾಮ್ರಾಜ್ಯ ದಿನೋತ್ಸವವಾಗಿ, ರಾಷ್ಟ್ರಜಾಗರಣ ಮಹೋತ್ಸವವಾಗಿ ಆಚರಿಸಲಾಗುತ್ತದೆ ಎಂದು ವಿದ್ಯಾಭಾರತಿ ಜಿಲ್ಲಾ ಯೋಗ ಶಿಕ್ಷಣ ಸಂಯೋಜಕ ಚಂದ್ರಶೇಖರ ದೇಲಂಪಾಡಿ ಹೇಳಿದರು. ಅವರು ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ಹಿಂದೂ ಸಾಮ್ರಾಜ್ಯ ದಿವಸ್ ಆಚರಣೆಯ ಕಾರ್‍ಯಕ್ರಮದಲ್ಲಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಶ್ಯಾನಭಾಗ್ ಸ್ವಾಗತಿಸಿ ಮಾತನಾಡಿ, ಶಿವಾಜಿಯ ಆದರ್ಶಗಳನ್ನು ಮೈಗೂಡಿಸಿಕೊಂಡು ದೇಶಕಟ್ಟುವ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಸಮರ್ಥರಾಗಬೇಕು ಎಂದು ಹೇಳಿದರು. ಕಾಲೇಜಿನ ಉಪನ್ಯಾಸಕರು,

ನರೇಂದ್ರ ಕಾಲೇಜಿನಲ್ಲಿ ಹಿಂದೂ ಸಾಮ್ರಾಜ್ಯ ದಿವಸ್ ಆಚರಣೆ Read More »

error: Content is protected !!
Scroll to Top