ಕ್ಯಾಂಪಸ್‌

ಅಂಬಿಕಾ ವಿದ್ಯಾಲಯ ಸಿಬಿಎಸ್‌ ಇ ಸಂಸ್ಥೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಪುತ್ತೂರು: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಹಬ್ಬದ ಆಚರಣೆಯ ಹಿನ್ನೆಲೆ ಹಾಗೂ ಮಹತ್ವವನ್ನು ಸಾರುವ ಸಲುವಾಗಿ, ಭಕ್ತಿ ಸಿಂಚನ ಕಾರ್ಯಕ್ರಮ ನಡೆಯಿತು. ಭಗವಧ್ಗೀತೆಯ ಪ್ರಥಮ ಅಧ್ಯಾಯದ ಪಠಣ, ಭಜನೆ ಹಾಡು, ಕುಣಿತ ಭಜನೆಗಳು ನಡೆದವು. ಮುದ್ದು ಕೃಷ್ಣ, ಮುದ್ದು ರಾಧೆಯರಿಗೆ ಆರತಿ ಬೆಳಗಿ, ತಿಲಕವಿಟ್ಟು ಹರಸಲಾಯಿತು. ಕಾರ್ಯಕ್ರಮದ ಅಂಗವಾಗಿ ಶ್ರೀಕೃಷ್ಣನ ಚಿತ್ರಕ್ಕೆ ಬಣ್ಣ ಹಚ್ಚುವ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ರಸಪ್ರಶ್ನೆ ಸ್ಪರ್ಧೆ, ಕಿರೀಟ ತಯಾರಿ, ಮಡಕೆ ಚಿತ್ರಕಲೆ ಹಾಗೂ ಮೊಸರು ಕುಡಿಕೆ […]

ಅಂಬಿಕಾ ವಿದ್ಯಾಲಯ ಸಿಬಿಎಸ್‌ ಇ ಸಂಸ್ಥೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ Read More »

ಎನ್‍.ಎಂ.ಸಿ. ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣದ ಆಮಂತ್ರಣ ಪತ್ರ ಹಾಗೂ ಕರಪತ್ರದ ಅನಾವರಣ

ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸೆ.2 ರಂದು ನಡೆಯಲಿರುವ ರಾಷ್ಟ್ರೀಯ ವಿಚಾರ ಸಂಕಿರಣದ  ಆಮಂತ್ರಣ ಪತ್ರ ಹಾಗೂ ಕರಪತ್ರದ ಅನಾವರಣ ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ.ಎಂ.  ಹಾಗೂ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ಆಮಂತ್ರಣ ಪತ್ರ ಹಾಗೂ ಕರಪತ್ರವನ್ನು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಬಂಟಮಲೆ ಅಕಾಡೆಮಿಯ ಅಧ್ಯಕ್ಷ ಹಿಮಕರ ಎ.ಕೆ., ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ. ವಿಚಾರ ಸಂಕಿರಣದ ಸಂಯೋಜಕಿ ಡಾ. ಅನುರಾಧಾ ಕುರುಂಜಿ, ಸಹ ಸಂಯೋಜಕರಾದ ಸಂಜೀವ ಕುದ್ಪಾಜೆ,

ಎನ್‍.ಎಂ.ಸಿ. ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣದ ಆಮಂತ್ರಣ ಪತ್ರ ಹಾಗೂ ಕರಪತ್ರದ ಅನಾವರಣ Read More »

ಅಕ್ಷಯ ಕಾಲೇಜು ವಿದ್ಯಾರ್ಥಿ ಸ೦ಘ ಚುನಾವಣೆ : ಅಧ್ಯಕ್ಷರಾಗಿ ಜೀವನ್ ಆಯ್ಕೆ.

ಪುತ್ತೂರು:  ಅಕ್ಷಯ ಎಜ್ಯುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಕಾಲೇಜು ಚುನಾವಣಾ ಸಮಿತಿ ಮತ್ತು ಐಕ್ಯೂಎಸಿ ಸಹಭಾಗಿತ್ವದಲ್ಲಿ ವಿದ್ಯಾರ್ಥಿ ಸ೦ಘ ಚುನಾವಣೆ ವಿದ್ಯುನ್ಮಾನ ಮತಯಂತ್ರದ  ಮೂಲಕ ನೆರವೇರಿತು.  ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಕಾರ್ಯದರ್ಶಿ ಸ್ಥಾನಗಳಿಗೆ ಚುನಾವಣೆ  ನಡೆಸಲಾಯಿತು. ಅಧ್ಯಕ್ಷ  ಸ್ಥಾನಕ್ಕೆ ಸ್ಪರ್ಧಿಸಿರುವ ತೃತೀಯ ವಾಣಿಜ್ಯ ವಿಭಾಗದ  ವಿದ್ಯಾರ್ಥಿ ಜೀವನ್ ಆಯ್ಕೆಯಾದರೆ, ಉಪಾಧ್ಯಕ್ಷ  ಸ್ಥಾನಕ್ಕೆ  ತೃತೀಯ ಬಿ.ಎಸ್ಸಿ ಫ್ಯಾಷನ್ ಡಿಸೈನ್ ವಿಭಾಗದ ನವಮಿ ಹಾಗೂ ಕಾರ್ಯದರ್ಶಿ ಸ್ಥಾನಕ್ಕೆ ತೃತೀಯ ಇಂಟೀರಿಯರ್ ಡಿಸೈನ್ ವಿದ್ಯಾರ್ಥಿನಿ ಪೂಜಿತ

ಅಕ್ಷಯ ಕಾಲೇಜು ವಿದ್ಯಾರ್ಥಿ ಸ೦ಘ ಚುನಾವಣೆ : ಅಧ್ಯಕ್ಷರಾಗಿ ಜೀವನ್ ಆಯ್ಕೆ. Read More »

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪದವಿ ಪ್ರದಾನ ಸಮಾರಂಭ

ಪುತ್ತೂರು: ಜೀವನದಲ್ಲಿ ನಾವು ನಾವು ಮಾಡುವ ಕೆಲಸವನ್ನು ಪ್ರಮಾಣಿಕವಾಗಿ ಪ್ರೀತಿಸಿ ಅದರ ಬಗ್ಗೆ ಅಭಿರುಚಿಯನ್ನು ಬೆಳೆಸಿಕೊಳ್ಳಬೇಕು. ಆಗ ನಮ್ಮ ಗುರಿ ತಲುಪಲು ಸಾಧ್ಯ ಎಂದು ಪುತ್ತೂರು ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್,  ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಹಿರಿಯ ವಿದ್ಯಾರ್ಥಿ ಕನಿಷ್ಕ ಎಸ್. ಚಂದ್ರ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ 2023-24 ನೇ ಸಾಲಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ ಇಂಜಿನಿಯರಿಂಗ್ ವಿಭಾಗಗಳ ಅಂತಿಮ ವರ್ಷದ ಪರೀಕ್ಷೆಯಲ್ಲಿ

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪದವಿ ಪ್ರದಾನ ಸಮಾರಂಭ Read More »

ದೇಶಭಕ್ತಿ ಗೀತ ಗಾಯನ ಸ್ಪರ್ಧೆ | ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪುತ್ತೂರು:  2024 25 ನೇ ಸಾಲಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ವತಿಯಿಂದ ಪುತ್ತೂರು ಸ್ಥಳೀಯ ಸಂಸ್ಥೆಯ ನೇತೃತ್ವದಲ್ಲಿ ನಡೆದ ದೇಶಭಕ್ತಿ ಗೀತ-ಗಾಯನ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಕಬ್ ವಿಭಾಗದ ನಾಲ್ಕನೇ ತರಗತಿಯ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಪುತ್ತೂರು ತಾಲೂಕನ್ನು ವಿದ್ಯಾರ್ಥಿಗಳಾದ ವಂಶಿಕ್ ಕೆ., ಎ.ವಿ.ಧನ್ವಿಕ್ ಕುಮಾರ್, ಉದ್ಯಾನ್ ಎಂ., ಅಥರ್ವ ಎಸ್.ಆರ್., ಧನ್ವಿತ್ ಎಚ್. ಭಟ್, ಮತ್ತು ಬಿ. ಸಮರ್ಥ್ ಪ್ರತಿನಿಧಿಸಿ

ದೇಶಭಕ್ತಿ ಗೀತ ಗಾಯನ ಸ್ಪರ್ಧೆ | ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ಪೆರಿಯಡ್ಕ ಸರ್ವೋದಯ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

ಉಪ್ಪಿನಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ  ಬಿ ಸಿ ಟ್ರಸ್ಟ್ ಪುತ್ತೂರು ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ  ಟ್ರಸ್ಟ್ ಧರ್ಮಸ್ಥಳ ಮತ್ತು ಪೆರಿಯಡ್ಕ ಸರ್ವೋದಯ ಪ್ರೌಢಶಾಲೆ  ಜಂಟಿ ಆಶ್ರಯದಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಪೆರಿಯಡ್ಕ ಸರ್ವೋದಯ ಪ್ರೌಢಶಾಲೆಯಲ್ಲಿ ನಡೆಯಿತು ಶಾಲಾ ಪರಿವೀಕ್ಷಕ  ಬಾಲಕೃಷ್ಣ ಬಿ.ಟಿ. ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಶಾಲಾ  ಮುಖ್ಯ ಶಿಕ್ಷಕಿ ಲಕ್ಷ್ಮೀ ಪಿ. ಅಧ್ಯಕ್ಷತೆ ವಹಿಸಿದ್ದರು. ಉಪ್ಪಿನಂಗಡಿ ವಲಯದ ಜನಜಾಗೃತಿ ವೇದಿಕೆ  ವಲಯಧ್ಯಕ್ಷ ಲೋಕೇಶ್ ಬೆತ್ತೋಡಿ ರವರು

ಪೆರಿಯಡ್ಕ ಸರ್ವೋದಯ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ Read More »

ವಿವೇಕಾನಂದ ಕಾಲೇಜಿನಲ್ಲಿ ಯಕ್ಷ ದೀಕ್ಷ ಪ್ರಧಾನ ಕಾರ್ಯಕ್ರಮ | ಕನ್ನಡ ಭಾಷೆ ಉಳಿವಿಗೆ ಯಕ್ಷಗಾನ ಬಹುಮುಖ್ಯವಾದುದು-ನಾ. ಕಾರಂತ ಪೆರಾಜೆ

ಪುತ್ತೂರು: ದೀಕ್ಷೆ ಪಡೆದು ಭಾಗವತಿಕೆ ಮಾಡಿದರೆ ಯಕ್ಷಗಾನ ಮುಂದುವರಿಯುತ್ತದೆ. ಆದರೆ ಪ್ರೇಕ್ಷಕರಿಗೆ ಯಕ್ಷಗಾನದ ಭಾವಗಳೆಲ್ಲವನ್ನೂ ಅರ್ಥ ಮಾಡಿಕೊಂಡು ಯಕ್ಷಗಾನ ನೋಡುವುದು ಹೇಗೆ ಎಂದು ತಿಳಿಸಿ ಕೊಡುವುದಕ್ಕೆ ಒಂದು ಪ್ರತ್ಯೇಕ ಕಮ್ಮಟ ನಡೆಸುವಂತಹ ಸ್ಥಿತಿಯಲ್ಲಿ ನಾವಿದ್ದೇವೆ. ಯಕ್ಷಗಾನದ ಅಲೆ ಹಬ್ಬುವುದಕ್ಕೆ ಮಹಿಳಾ ಹಾಗೂ ಮಕ್ಕಳ ತಂಡ ಮುಖ್ಯ ಪಾತ್ರ ವಹಿಸಿದ್ದಾರೆ. ಯಾವುದೇ ಕಲೆಯು ನಮ್ಮ ಬದುಕಿನ ಅಂಗವಾಗಿ ಬಂದಾಗ ಅದುವೇ ನಮ್ಮ ಬದುಕನ್ನು ಉತ್ತಮವಾಗಿ ರೂಪಿಸುತ್ತದೆ. ಕನ್ನಡ ಭಾಷೆಯ ಉಳಿವಿಗೆ ಯಕ್ಷಗಾನ ಬಹುದೊಡ್ಡ ಕೊಡುಗೆ ನೀಡಿದೆ. ಯಕ್ಷಗಾನವನ್ನು ಉಳಿಸುವುದೇ

ವಿವೇಕಾನಂದ ಕಾಲೇಜಿನಲ್ಲಿ ಯಕ್ಷ ದೀಕ್ಷ ಪ್ರಧಾನ ಕಾರ್ಯಕ್ರಮ | ಕನ್ನಡ ಭಾಷೆ ಉಳಿವಿಗೆ ಯಕ್ಷಗಾನ ಬಹುಮುಖ್ಯವಾದುದು-ನಾ. ಕಾರಂತ ಪೆರಾಜೆ Read More »

ಫಿಲೋಮಿನಾ ಕಾಲೇಜಿನಲ್ಲಿ ವಿಶ್ವ ಉದ್ಯಮಿಗಳ ದಿನಾಚರಣೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಬಿಬಿಎ ವಿಭಾಗ ವಿಶ್ವ ಉದ್ಯಮಿಗಳ ದಿನವನನ್ನು ಸ್ಫೂರ್ತಿದಾಯಕ ಯಶಸ್ಸು, ಸ್ಫೂರ್ತಿ ಮತ್ತು ಬೆಳವಣಿಗೆಯ ಬಗ್ಗೆ ಹಳೆಯ ವಿದ್ಯಾರ್ಥಿಗಳ ಅರಿವು ಎಂಬ ವಿಷಯದಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿತು. ಸೀಮೆನ್ಸ್ ಎಜಿಯ ಹೋಡ್ ಗ್ಲೋಬಲ್ ಸಿಆರ್‌ಎಂಒ ಶ್ರೀನಿವಾಸ ವೆಂಕಟೇಶ್ ಮೂರ್ತಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಕಾಲೇಜಿನ ಹಳೆಯ ವಿದ್ಯಾರ್ಥಿಯಾಗಿರುವ ಶ್ರೀಮೂರ್ತಿ ಅವರು ಉದ್ಯಮಿಗಳಾಗಲು ಎದುರಿಸಿದ ಸವಾಲುಗಳು ಮತ್ತು ತಮ್ಮ ಉದ್ಯಮಿತ್ವದ ಆರಂಭಿಕ ಹಂತಗಳಲ್ಲಿ ಅನುಭವಿಸಿದ ಕಷ್ಟಗಳು ಸೇರಿದಂತ, ತಮ್ಮ ಯಶಸ್ವಿ ಜೀವನಯಾನವನ್ನು ವಿದ್ಯಾರ್ಥಿಗಳಿಗೆ ಹಂಚಿಕೊಂಡರು

ಫಿಲೋಮಿನಾ ಕಾಲೇಜಿನಲ್ಲಿ ವಿಶ್ವ ಉದ್ಯಮಿಗಳ ದಿನಾಚರಣೆ Read More »

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಧ್ಯಾಪಕರ ಜ್ಞಾನಾಭಿವೃದ್ಧಿ ಕಾರ್ಯಾಗಾರ

ಪುತ್ತೂರು: ಅಧ್ಯಾಪನ ಎನ್ನುವುದು ವೃತ್ತಿಯಲ್ಲ ಒಂದು ಜವಾಬ್ಧಾರಿ, ಇದನ್ನು ಅರಿತುಕೊಂಡು ಕಾರ್ಯ ನಿರ್ವಹಿಸಿದರೆ ಮಾತ್ರ ಆತನೊಬ್ಬ ಉತ್ತಮ ಅಧ್ಯಾಪಕನಾಗಬಲ್ಲ ಎಂದು ಐಐಐಟಿ ಧಾರವಾಡದ ಪೂರ್ವ ರಿಜಿಸ್ಟ್ರಾರ್ ಡಾ.ಚನ್ನಪ್ಪ.ಬಿ.ಅಕ್ಕಿ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ಆಶ್ರಯದಲ್ಲಿ ನಡೆಯುತ್ತಿರುವ ಅತ್ಯುತ್ತಮ ಸಂಶೋಧನಾ ವಿಧಾನಗಳನ್ನು ಅಳವಡಿಸಿಕೊಳ್ಳುವುದು ಎನ್ನುವ ವಿಷಯದ ಬಗ್ಗೆ 3 ದಿನಗಳ ಅಧ್ಯಾಪಕರ ಜ್ಞಾನಾಭಿವೃದ್ಧಿ ಕಾರ್ಯಾಗಾರಕ್ಕೆ ದೀಪ ಬೆಳಗಿಸಿ ಚಾಲನೆ ನೀಡಿ ಮಾತಾಡಿದರು. ನಮ್ಮ ವಿದ್ಯಾರ್ಹತೆ, ಡಿಗ್ರಿಗಳು ನಮಗೆ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಧ್ಯಾಪಕರ ಜ್ಞಾನಾಭಿವೃದ್ಧಿ ಕಾರ್ಯಾಗಾರ Read More »

ವಿವೇಕಾನಂದ  ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ

ಪುತ್ತೂರು: ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ (ಸ್ವಾಯತ್ತ) 2024-25ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಚುನಾವಣೆಯ ಮುಖಾಂತರ ರಚಿಸಲಾಯಿತು. ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷನಾಗಿ ಅಂತಿಮ ವರ್ಷದ ಬಿಬಿಎ ವಿದ್ಯಾರ್ಥಿ ಕೆ ಆಶೀಶ್ ಆಳ್ವ, ಕಾರ್ಯದರ್ಶಿಯಾಗಿ ಬಿಸಿಎ ವಿಭಾಗದ ನಿಖಿಲ್ ಕುಮಾರ್ ಕೆ. ಟಿ., ಜೊತೆ ಕಾರ್ಯದರ್ಶಿಯಾಗಿ  ಕಲಾ ವಿಭಾಗದ ಪೃಥ್ವಿ ಆರ್ ಆಳ್ವ ಆಯ್ಕೆಯಾದರು.  ಚುನಾವಣೆಯು  ಕಾಲೇಜಿನ ಮುಖ್ಯ ಚುನಾವಣಾಧಿಕಾರಿ ಮತ್ತು ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಅರುಣ್ ಪ್ರಕಾಶ್ ತಂಡದ ನೇತೃತ್ವದಲ್ಲಿ ನಡೆಯಿತು. ಈ

ವಿವೇಕಾನಂದ  ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ Read More »

error: Content is protected !!
Scroll to Top