ಕ್ಯಾಂಪಸ್‌

ಅಂಬಿಕಾ ಪ.ಪೂ.ವಿದ್ಯಾಲಯದಲ್ಲಿ ಯೋಗ ತರಬೇತಿ ಉದ್ಘಾಟನೆ

ಪುತ್ತೂರು: ಬಪ್ಪಳಿಗೆಯಲ್ಲಿನ ಅಂಬಿಕಾ ವಸತಿಯುತ ಪದವಿಪೂರ್ವ ವಿದ್ಯಾಲಯದಲ್ಲಿ ಯೋಗ ತರಬೇತಿಯನ್ನು ಆರಂಭಗೊಳಿಸಲಾಯಿತು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಮ್ಮ ಮನಸ್ಸು ಮತ್ತು ದೇಹದ ಸಂಯೋಗವೇ ಯೋಗ. ಇದರ ಭಾಗವಾದ ಸುದರ್ಶನ ಕ್ರಿಯಾ ಯೋಗವನ್ನು ವಿದ್ಯಾರ್ಥಿಗಳು ನಿರಂತರ ಅಭ್ಯಾಸ ಮಾಡುವಂತೆ ತರಬೇತಿ ನೀಡಲಾಗುತ್ತದೆ. ಇದರ ಅಭ್ಯಾಸದಿಂದ ಒಬ್ಬ  ವ್ಯಕ್ತಿಯು ಸನಾತನ ಧರ್ಮದ ನಿಜವಾದ ಅನುಯಾಯಿಯಾಗುತ್ತಾನೆ ಎಂದು ಹೇಳಿದ ಅವರು, ನಕರಾತ್ಮಕ ಭಾವನೆಗಳಾದ ಸಿಟ್ಟು ಗೊಂದಲಗಳು ಮನುಷ್ಯನ ಉಸಿರಾಟದ ವೇಗವನ್ನು ಹೆಚ್ಚಿಸುತ್ತವೆ. […]

ಅಂಬಿಕಾ ಪ.ಪೂ.ವಿದ್ಯಾಲಯದಲ್ಲಿ ಯೋಗ ತರಬೇತಿ ಉದ್ಘಾಟನೆ Read More »

ಅಂಬಿಕಾ ಸಿಬಿಎಸ್‌ಇ ಸಂಸ್ಥೆಯಲ್ಲಿ ವಿದ್ಯಾರ್ಥಿ ನಾಯಕರ ಪ್ರಮಾಣವಚನ

ಪುತ್ತೂರು: ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವದ ಗುಣವಿದ್ದರೆ ಅದು ಅವರ ಮುಂದಿನ ಜೀವನಕ್ಕೆ ಪ್ರೇರಣೆ ನೀಡುತ್ತದೆ. ಹಾಗಾಗಿ ಉತ್ತಮ ನಾಯಕತ್ವದ ಲಕ್ಷಣ ಮಕ್ಕಳಲ್ಲಿ ಮೂಡಿ ಬರಬೇಕು. ಸಂವಿಧಾನದ ಮೌಲ್ಯ ಉಳಿದುಕೊಳ್ಳಬೇಕಾದರೆ ಸರಿಯಾದ ವಿರೋಧ ಪಕ್ಷದ ಅಗತ್ಯವಿದೆ. ಅಂತಹ ಕಲ್ಪನೆ ಎಳೆಯ ವಯಸ್ಸಿನಿಂದಲೇ ಮೂಡಿಬರಬೇಕು ಎಂದು ನ್ಯಾಯವಾದಿ ಮಹೇಶ್ ಕಜೆ ಹೇಳಿದರು. ಅವರು ಬಪ್ಪಳಿಗೆಯಲ್ಲಿನ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದಲ್ಲಿ ಆಯೋಜಿಸಲಾದ ಶಾಲಾ ಸಂಸತ್ತಿನ ಪ್ರಮಾಣವಚನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ

ಅಂಬಿಕಾ ಸಿಬಿಎಸ್‌ಇ ಸಂಸ್ಥೆಯಲ್ಲಿ ವಿದ್ಯಾರ್ಥಿ ನಾಯಕರ ಪ್ರಮಾಣವಚನ Read More »

ವಿದ್ಯಾರಶ್ಮಿ ಶಾಲಾ ವಿಭಾಗದ ಪ್ರಾಂಶುಪಾಲೆಯಾಗಿ  ಶಶಿಕಲಾ ಆಳ್ವ

ಸವಣೂರು: ವಿದ್ಯಾರಶ್ಮಿ ವಿದ್ಯಾಲಯದ ಎಲ್.ಕೆ.ಜಿ.ಯಿಂದ ಹತ್ತನೇ ತರಗತಿವರೆಗಿನ ವಿಭಾಗಕ್ಕೆ ನೂತನ ಪ್ರಾಂಶುಪಾಲೆಯಾಗಿ ಶ್ರೀಮತಿ ಶಶಿಕಲಾ ಆಳ್ವ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಬಿ. ಎ., ಬಿ. ಎಡ್. ಪದವಿಗಳೊಂದಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ಕನ್ನಡ ಭಾಷಾ ಸ್ನಾತಕೋತ್ತರ ಪದವಿಯನ್ನು ಹೊಂದಿರುವ ಇವರು ಉತ್ತಮ ಚದುರಂಗ ಆಟಗಾರ್ತಿಯೂ ಆಗಿದ್ದಾರೆ. ಶಾಲಾ ಸಂಚಾಲಕ ಸವಣೂರು ಸೀತಾರಾಮ ರೈ ಅವರು ನೂತನ ಪ್ರಾಂಶುಪಾಲೆಯವರಿಗೆ ಅಧಿಕಾರ ವಹಿಸಿಕೊಡುವ ಸಂದರ್ಭದಲ್ಲಿ ಹಿರಿಯ ಟ್ರಸ್ಟಿ ಎನ್ . ಸುಂದರ ರೈ, ಟ್ರಸ್ಟಿ ಶ್ರೀಮತಿ ರಶ್ಮಿ ಅಶ್ವಿನ್,

ವಿದ್ಯಾರಶ್ಮಿ ಶಾಲಾ ವಿಭಾಗದ ಪ್ರಾಂಶುಪಾಲೆಯಾಗಿ  ಶಶಿಕಲಾ ಆಳ್ವ Read More »

ವಿವೇಕಾನಂದ ಕಾಲೇಜಿನಲ್ಲಿ ಸಂಶೋಧನಾ ವಿಧಿವಿಧಾನಗಳು ಮತ್ತು ಪ್ರಬಂಧ ರಚನೆ ಕಾರ್ಯಗಾರ

ಪುತ್ತೂರು: ಸಂಶೋಧನ ವರದಿ ತಯಾರಿಸುವುದರಲ್ಲಿ ವಿದ್ಯಾರ್ಥಿಗಳು ಆರಂಭಿಕ ಹಂತದಲ್ಲಿ ಸಮಸ್ಯೆಗಳನ್ನು ಎದುರಿಸುವುದು ಸಹಜ. ಇದನ್ನು ಮಾರ್ಗದರ್ಶಕರೊಂದಿಗೆ ಸಮಾಲೋಚನೆ ಮಾಡಿ ಪರಿಹರಿಸಿಕೊಳ್ಳಬೇಕು. ತಳಮಟ್ಟದ ಅಧ್ಯಯನ, ವಿಷಯಗಳ ಆಸಕ್ತಿ ನಮ್ಮ ಅಧ್ಯಯನಗಳನ್ನು ಬಲಗೊಳಿಸುತ್ತದೆ ಎಂದು ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಎಂಬಿಎ ವಿಭಾಗದ ನಿರ್ದೇಶಕ ಡಾ. ರಾಬಿನ್ ಮನೋಹರ್ ಶಿಂದೆ ತಿಳಿಸಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ವಿವೇಕಾನಂದ ಸಂಶೋಧನಾ ಕೇಂದ್ರ ಸಹಯೋಗದಲ್ಲಿ ನಡೆದ ಸಂಶೋಧನೆಯ ವಿಧಿ ವಿಧಾನಗಳು ಮತ್ತು

ವಿವೇಕಾನಂದ ಕಾಲೇಜಿನಲ್ಲಿ ಸಂಶೋಧನಾ ವಿಧಿವಿಧಾನಗಳು ಮತ್ತು ಪ್ರಬಂಧ ರಚನೆ ಕಾರ್ಯಗಾರ Read More »

ಅಂಬಿಕಾ ಮಹಾವಿದ್ಯಾಲಯದಲ್ಲಿ ವಾರ್ಷಿಕೋತ್ಸವ  ‘ಉದ್ಘೋಷ-2024’

ಪುತ್ತೂರು: ಇಂದು ಐಎಎಸ್, ಐಪಿಎಸ್ ಪರೀಕ್ಷೆಗಳನ್ನು ಕನ್ನಡದಲ್ಲಿಯೇ ಬರೆಯುವುದಕ್ಕೆ ಮತ್ತು ಕನ್ನಡದಲ್ಲೇ ಸಂದರ್ಶನ ಎದುರಿಸುವುದಕ್ಕೆ ಅವಕಾಶವಿದೆ. ನಮ್ಮ ಭಾಗದ ವಿದ್ಯಾರ್ಥಿಗಳು ಈ ಅವಕಾಶಗಳನ್ನು ಬಳಸಿಕೊಳ್ಳಬೇಕು. ಆಡಳಿತ ವ್ಯವಸ್ಥೆಗೆ ನಮ್ಮನ್ನು ನಾವು ಒಡಮೂಡಿಸಿಕೊಂಡು ಉತ್ಕೃಷ್ಟ ರಾಷ್ಟ್ರ ನಿರ್ಮಾಣದಲ್ಲಿ ಭಾಗಿಗಳಾಗಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಪುತ್ತೂರು ಘಟಕದ ಅಧ್ಯಕ್ಷ ಉಮೇಶ್ ನಾಯಕ್ ಹೇಳಿದರು. ಅವರು ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ವಾರ್ಷಿಕೋತ್ಸವ ಸಮಾರಂಭ  ‘ಉದ್ಘೋಷ=2024’ ೨ನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಸಂಸ್ಕೃತಿ, ಸಂಸ್ಕಾರ, ಆಚಾರ ವಿಚಾರಗಳಿಂದ ದೂರ ಸರಿಯದೆ ರಾಷ್ಟ್ರಭಕ್ತರಾಗಿ

ಅಂಬಿಕಾ ಮಹಾವಿದ್ಯಾಲಯದಲ್ಲಿ ವಾರ್ಷಿಕೋತ್ಸವ  ‘ಉದ್ಘೋಷ-2024’ Read More »

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ, ಅಭಿನಂದನಾ ಸಮಾರಂಭ

ಪುತ್ತೂರು: ವಿದ್ಯಾರ್ಥಿಗಳು ಭವಿಷ್ಯದ ಜೀವನದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕಾದರೆ ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಮತ್ತು ಶ್ರದ್ಧೆಯಿಂದ ಕಲಿಕೆಯಲ್ಲಿ ತೊಡಗಿಕೊಳ್ಳಬೇಕು.ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿನ ಪ್ರತಿಭೆಯನ್ನು ಗುರುತಿಸಿ ಉತ್ತಮ ವಾತಾವರಣ ಕಲ್ಪಿಸಿಕೊಟ್ಟಾಗ ಪ್ರತಿಭೆ ವಿಕಸನಗೊಳ್ಳುತ್ತದೆ. ಭವಿಷ್ಯದ ಬಗ್ಗೆ ಸ್ಪಷ್ಟ ಗುರಿ ಇಟ್ಟುಕೊಂಡು ಮುನ್ನುಗ್ಗಬೇಕು ಎಂದು ಮುಕ್ರಂಪಾಡಿಯಲ್ಲಿರುವ ಎಸ್. ಆರ್. ಕೆ. ಲ್ಯಾಡರ್ಸ್ ನ ಮಾಲಕರಾದ ಕೇಶವ ಅಮೈ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳ ಸನ್ಮಾನ ಮತ್ತು ಅಭಿನಂದನಾ ಸಮಾರಂಭದಲ್ಲಿ ಅವರು

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ, ಅಭಿನಂದನಾ ಸಮಾರಂಭ Read More »

ರಾಷ್ಟ್ರಮಟ್ಟದ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಗೆ ವಿವೇಕಾನಂದದ ರಕ್ಷಾ ಜಿ. ಆಯ್ಕೆ

ಪುತ್ತೂರು: ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಲ್ಲಿ ಜರುಗಿದ  ರಾಜ್ಯ ಮಟ್ಟದ  ಜೂನಿಯರ್ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ +87 ವಿಭಾಗದಲ್ಲಿ ಭಾಗವಹಿಸಿದ ಪುತ್ತೂರಿನ ವಿವೇಕಾನಂದ ಕಾಲೇಜಿನ  ವಿದ್ಯಾರ್ಥಿನಿ ರಕ್ಷಾ.ಜಿ ರಾಷ್ಟ್ರೀಯ ಮಟ್ಟದ ಚಾಂಪಿಯನ್ ಶಿಪ್ ಗೆ ಆಯ್ಕೆಯಾಗಿದ್ದಾರೆ. ಜೂ.18 ರಿಂದ 21 ರ ತನಕ ಮಧ್ಯಪ್ರದೇಶದ ಇಂಧೊರ್ ನಲ್ಲಿ ನಡೆಯಲಿರುವ ’ಅಸ್ಮಿತಾ ಖೇಲೊ ಇಂಡಿಯಾ’ ರಾಷ್ಟ್ರೀಯ ಮಟ್ಟದ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಲಿದ್ದಾರೆ. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ  ರವಿಶಂಕರ್ ಹಾಗೂ ಯತೀಶ್

ರಾಷ್ಟ್ರಮಟ್ಟದ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಗೆ ವಿವೇಕಾನಂದದ ರಕ್ಷಾ ಜಿ. ಆಯ್ಕೆ Read More »

ಪಿಯು ಅತಿಥಿ ಉಪನ್ಯಾಸಕರ ನೇಮಕಾತಿಗೆ ಬಿಇಡಿ ಕಡ್ಡಾಯ | ಆದೇಶ ರದ್ದುಗೊಳಿಸುವಂತೆ ಶಾಸಕರಿಗೆ ಮನವಿ

ಪುತ್ತೂರು; ಪಿಯು ಅತಿಥಿ ಉಪನ್ಯಾಸಕರ ನೇಮಕಾತಿ ಮಾಡುವಲ್ಲಿ ಬಿಇಡಿ ಕಡ್ಡಾಯಗೊಳಿಸಿ ಶಿಕ್ಷಣ ಇಲಾಖೆ ಸುತ್ತೋಲೆಯನ್ನು ಹೊರಡಿಸಿದ್ದು ಈ ಸುತ್ತೋಲೆಯನ್ನು ರದ್ದು ಮಾಡುವಂತೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈಯವರಿಗೆ ಉಪನ್ಯಾಸಕರು ಮನವಿ ಮಾಡಿದ್ದಾರೆ. ಈಗಾಗಲೇ ಪಿಜಿ ಪದವಿಧರರು ಅತಿಥಿ ಉಪನ್ಯಾಸಕರಾಗಿ ಕರ್ತವ್ಯದಲ್ಲಿದ್ದಾರೆ. ಹಲವು ವರ್ಷಗಳಿಂದ ಉಪನ್ಯಾಸವನ್ನು ಮಾಡುತ್ತಿದ್ದಾರೆ. ಇವರು ಮುಂದಿನ ದಿನಗಳಲ್ಲಿ ಉಪನ್ಯಾಸಕರಾಗಿ ಮುಂದುವರೆಯಬೇಕಾದಲ್ಲಿ ಬಿಇಡಿ ಕಡ್ಡಾಯವಾಗಿ ಮಾಡಬೇಕಿದೆ ಎಂಬುದು ಶಿಕ್ಷಣ ಇಲಾಖೆಯ ಆದೇಶವಾಗಿದೆ. ಈ ಆದೇಶ ಜಾರಿಯಾದಲ್ಲಿ ಹಲವು ಮಂದಿ ಉಪನ್ಯಾಸಕರು ಕೆಲಸವನ್ನು ಕಳೆದುಕೊಳ್ಳಲಿದ್ದೇವೆ. ಅತಿಥಿ

ಪಿಯು ಅತಿಥಿ ಉಪನ್ಯಾಸಕರ ನೇಮಕಾತಿಗೆ ಬಿಇಡಿ ಕಡ್ಡಾಯ | ಆದೇಶ ರದ್ದುಗೊಳಿಸುವಂತೆ ಶಾಸಕರಿಗೆ ಮನವಿ Read More »

ಪಾಪೆಮಜಲು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ರಚನೆ, ವೈಜ್ಞಾನಿಕ ಚಟುವಟಿಕೆ ಆಯೋಜನೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಹಾಗೂ ಸಮಾಜಕಾರ್ಯ ವಿಭಾಗಗಳ ಸಹಯೋಗದಲ್ಲಿ  ಪಾಪೆಮಜಲು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ರಚನೆ ಹಾಗೂ ವಿವಿಧ ಬಗೆಯ ವೈಜ್ಞಾನಿಕ ಚಟುವಟಿಕೆಗಳನ್ನು ನಡೆಸಲಾಯಿತು. ಪಾಪೆಮಜಲು ಪ್ರೌಢಶಾಲಾ ಮುಖ್ಯ ಶಿಕ್ಷಕ ಮೋನಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ವೈಜ್ಞಾನಿಕ ಮನೋಧರ್ಮವನ್ನು ಬೆಳೆಸಿಕೊಳ್ಳಬೇಕು. ಪ್ರತಿಯೊಂದನ್ನೂ ವೈಜ್ಞಾನಿಕ ನೆಲೆಯಲ್ಲಿ ಪ್ರಶ್ನಿಸಿ ವಿಶ್ಲೇಷಿಸುವ ಗುಣವನ್ನು ಈ ಕಾರ್ಯಕ್ರಮದ ಮೂಲಕ ಬೆಳೆಸಿ ಕೊಳ್ಳಬೇಕು ಎಂದು ಹೇಳಿದರು.  ಪಾಪೆಮಜಲು ಪ್ರೌಢಶಾಲೆಯ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.

ಪಾಪೆಮಜಲು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ರಚನೆ, ವೈಜ್ಞಾನಿಕ ಚಟುವಟಿಕೆ ಆಯೋಜನೆ Read More »

ಜಿಲ್ಲಾಮಟ್ಟದ ಇನ್‍ ಸ್ಪೈರ್ ಅವಾರ್ಡ್ ಗೆ ಕುದ್ಮಾರು ಶಾಲಾ ವಿದ್ಯಾರ್ಥಿ ಕುಶನ್ ಕೆ. ಆಯ್ಕೆ

ಕಾಣಿಯೂರು: ಡಿಪಾರ್ಟೆಂಟ್ ಆಫ್ ಸೈನ್ಸ್ ಆಂಡ್ ಟೆಕ್ನಾಲಜಿ ಆಂಡ್ ನ್ಯಾಷನಲ್ ಫೌಂಡೇಶನ್ ಆಫ್ ಇಂಡಿಯಾ ಇದರ ವತಿಯಿಂದ ನಡೆದ ಜಿಲ್ಲಾಮಟ್ಟದ INSPIRE AWARD 2022-23 ಸ್ಪರ್ಧೆಯಲ್ಲಿ ಕುದ್ಮಾರು ಹಿರಿಯ ಪ್ರಾಥಮಿಕ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಭಾಗವಹಿಸಿದ್ದು ಅದರಲ್ಲಿ ಎಂಟನೇ ತರಗತಿಯ ವಿದ್ಯಾರ್ಥಿ  ಕುಶನ್ ಕೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರೌಢಶಾಲಾ ಸಹ ಶಿಕ್ಷಕಿ ಶ್ರೀಲತಾ ಇವರ ಮಾರ್ಗದರ್ಶನದಲ್ಲಿ ತಯಾರಿಸಿದ Foldable and potable solar nest to dry areca nuts ಎಂಬ ಮಾದರಿಯು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ಶಾಲಾ

ಜಿಲ್ಲಾಮಟ್ಟದ ಇನ್‍ ಸ್ಪೈರ್ ಅವಾರ್ಡ್ ಗೆ ಕುದ್ಮಾರು ಶಾಲಾ ವಿದ್ಯಾರ್ಥಿ ಕುಶನ್ ಕೆ. ಆಯ್ಕೆ Read More »

error: Content is protected !!
Scroll to Top