ಕ್ಯಾಂಪಸ್‌

ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

ಪುತ್ತೂರು: ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಜೂ.13 ರಂದು ಕಾಲೇಜಿನ ದಿ.ಶ್ರೀ ಮಂಜುನಾಥ ಶೆಟ್ಟಿ ಮಲಾರು ಬೀಡು ಸಭಾಭವನದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪಾಲ್ಗೊಂಡು ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಸವಣೂರು ಜಿನಮಂದಿರದ ಆಡಳಿತ ಮಂಡಳಿ ಅಧ್ಯಕ್ಷ ಶತ್ರುಂಜಯ ಆರಿಗ ಮಾತನಾಡಿ, ಸಾಮಾಜಿಕ ಮಾಧ್ಯಮಗಳು ಯುವಜನತೆಯ ಮೇಲೆ ಬೀರುವ ದುಷ್ಪರಿಣಾಮಗಳ ಕುರಿತು ಎಚ್ಚರಿಕೆಯಿಂದ ಇರಬೇಕು ಎಂದು ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದರು. ಪ್ರವೀಣ್ ಕುಮಾರ್ ಕೆಡೆಂಜಿಗುತ್ತು ಮಾತನಾಡಿ, ಕಾಲೇಜಿನ […]

ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿಶ್ವ ಪರಿಸರ ಮತ್ತು ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ ಮತ್ತು ಪರಿಸರ ಕ್ಲಬ್ ಗಳ ಸಹಯೋಗದೊಂದಿಗೆ ವಿಶ್ವ ಪರಿಸರ ಹಾಗೂ ಅಂತರಾಷ್ಟ್ರೀಯ ಜೀವವೈವಿಧ್ಯ ದಿನವನ್ನು ಆಚರಿಸಲಾಯಿತು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಲತಾ ಜಿ. ಭಟ್ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ನಾವು ಸಂಪನ್ಮೂಲಗಳನ್ನು ಸಂರಕ್ಷಿಸುವ ಜತೆಗೆ ಹಲವಾರು ವಸ್ತುಗಳನ್ನು ಮರುಬಳಕೆ ಮಾಡಬೇಕು. ಹಸಿ ತ್ಯಾಜ್ಯವಸ್ತುಗಳನ್ನು ಕಾಂಪೋಸ್ಟ್ ಮಾಡಿ ಭೂಮಿಯ ಫಲವತ್ತತೆಯನ್ನು ಉಳಿಸುವಲ್ಲಿ ನೆರವಾಗಬೇಕು. ಭೂಮಿಯು ಮುಂದಿನ ಪೀಳಿಗೆಗೆ ಸೇರಿದೆ. ಅದರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಎಂದರು. ಮುಖ್ಯ ಅತಿಥಿಯಾಗಿ ಪುತ್ತೂರು

ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿಶ್ವ ಪರಿಸರ ಮತ್ತು ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ Read More »

ಮಕ್ಕಳು ಹೆತ್ತವರ ಕಣ್ಣೀರಿಗೆ ಕಾರಣರಾಗಬಾರದು :  ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ಪಾರಂಪರಿಕ ದಿನಾಚರಣೆಯಲ್ಲಿ ಸುರೇಶ ಶೆಟ್ಟಿ

ಪುತ್ತೂರು: ಪಾರಂಪರಿಕ ದಿನಾಚರಣೆ ಕೇವಲ ಒಂದು ದಿನದ ಪ್ರೇರಣೆಯಾಗದೆ, ನಿತ್ಯ ಜೀವನದಲ್ಲಿ ನಮ್ಮ ಬದುಕಿನ ಮೇಲೆ ಪ್ರಭಾವ ಬೀರುವ ಆಚರಣೆ ಎನಿಸಬೇಕು. ನಮ್ಮ ಜೀವನಪದ್ಧತಿ, ಆಚಾರ ವಿಚಾರಗಳು ಸಂಸ್ಕಾರದ ನೆಲೆಯಲ್ಲಿ ಬೆಳೆದು ಬಂದಾಗ ನಮ್ಮ ವ್ಯಕ್ತಿತ್ವ ಬೆಳಗುವುದಕ್ಕೆ ಸಾಧ್ಯ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಸರೇಶ ಶೆಟ್ಟಿ ಹೇಳಿದರು. ಅವರು ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಆಯೋಜಿಸಲಾದ ಪಾರಂಪರಿಕ ದಿನಾಚರಣೆ ಹಾಗೂ ಬಹುಮಾನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಅಂಬಿಕಾ

ಮಕ್ಕಳು ಹೆತ್ತವರ ಕಣ್ಣೀರಿಗೆ ಕಾರಣರಾಗಬಾರದು :  ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ಪಾರಂಪರಿಕ ದಿನಾಚರಣೆಯಲ್ಲಿ ಸುರೇಶ ಶೆಟ್ಟಿ Read More »

ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ. ಸೀತಾರಾಮ ರೈಯವರ 77ನೇ ಹುಟ್ಟುಹಬ್ಬ ಆಚರಣೆ | ಅಂತಿಮ ಪದವಿಯ ವಿದ್ಯಾರ್ಥಿಗಳಿಗೆ ವಿದಾಯಕೂಟ ಸಮಾರಂಭ

ಸವಣೂರು: ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಕೆ ಸೀತಾರಾಮ ರೈ ಸವಣೂರು ಅ಻ವರ ಹುಟ್ಟುಹಬ್ಬದ ಆಚರಣೆ ಮತ್ತು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ಪದವಿಯ ವಿದ್ಯಾರ್ಥಿಗಳಿಗೆ ವಿದಾಯಕೂಟ ಸಮಾರಂಭ ಕಾಲೇಜಿನಲ್ಲಿ ನಡೆಯಿತು. ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಕೆ ಸೀತಾರಾಮ ರೈ ಸವಣೂರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,  ವಿದ್ಯಾರ್ಥಿಗಳು ಒಂದು ಸಂಸ್ಥೆಯ ರಾಯಭಾರಿಗಳಿದ್ದಂತೆ ಎನ್ನುವುದರ ಮೂಲಕ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದರು, ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಇಂಜಿನಿಯರ್ ಅಶ್ವಿನ್

ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ. ಸೀತಾರಾಮ ರೈಯವರ 77ನೇ ಹುಟ್ಟುಹಬ್ಬ ಆಚರಣೆ | ಅಂತಿಮ ಪದವಿಯ ವಿದ್ಯಾರ್ಥಿಗಳಿಗೆ ವಿದಾಯಕೂಟ ಸಮಾರಂಭ Read More »

ಸುಳ್ಯ ಕೆವಿಜಿ ಆಯುರ್ವೇದ ಕಾಲೇಜಿಲ್ಲಿ ನಡೆದ ಮೂರು ದಿನಗಳ ರಾಷ್ಟ್ರಮಟ್ಟದ ಕಾರ್ಯಾಗಾರ “ಸೈನ್ಸಿಫಿಕ್ ರೈಟಿಂಗ್, ರಿಸರ್ಚ್ ಇಂಟೆಗ್ರಿಟಿ ಮತ್ತು ಪಬ್ಲಿಕೇಶನ್ ಎಥಿಕ್ಸ್’ ಸಂಪನ್ನ

ಸುಳ್ಯ: ಕೆವಿಜಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನ್ಯಾಷನಲ್ ಕೌನ್ಸಿಲ್ ಆಫ್ ಇಂಡಿಯನ್ ಸಿಸ್ಟಮ್ ಆಫ್ ಮೆಡಿಸಿನ್ ಸಹಯೋಗದೊಂದಿಗೆ ಮೂರು ದಿನಗಳ ಕಾಲ ನಡೆದ ರಾಷ್ಟ್ರೀಯ ಮಟ್ಟದ “ಸೈನ್ಸಿಫಿಕ್ ರೈಟಿಂಗ್, ರಿಸರ್ಚ್ ಇಂಟೆಗ್ರಿಟಿ ಮತ್ತು ಪಬ್ಲಿಕೇಶನ್ ಎಥಿಕ್ಸ್’ನ ಸ್ನಾತಕೋತ್ತರ ಪದವಿ ಮಾರ್ಗದರ್ಶಕರ ಕಾರ್ಯಾಗಾರ ಕಾಲೇಜು ಸಭಾಂಗಣದಲ್ಲಿ  ಸಮಾರೋಪಗೊಂಡಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ವಹಿಸಿದ್ದರು. ಅತಿಥಿಗಳಾಗಿ ಕೆವಿಜಿ ಮೆಡಿಕಲ್ ಕಾಲೇಜಿನ ವೈದ್ಯಕೀಯ ಅಧೀಕ್ಷಕ ಡಾ. ಸಿ. ರಾಮಚಂದ್ರ ಭಟ್,

ಸುಳ್ಯ ಕೆವಿಜಿ ಆಯುರ್ವೇದ ಕಾಲೇಜಿಲ್ಲಿ ನಡೆದ ಮೂರು ದಿನಗಳ ರಾಷ್ಟ್ರಮಟ್ಟದ ಕಾರ್ಯಾಗಾರ “ಸೈನ್ಸಿಫಿಕ್ ರೈಟಿಂಗ್, ರಿಸರ್ಚ್ ಇಂಟೆಗ್ರಿಟಿ ಮತ್ತು ಪಬ್ಲಿಕೇಶನ್ ಎಥಿಕ್ಸ್’ ಸಂಪನ್ನ Read More »

ವಿವೇಕಾನಂದ ಕಾಲೇಜಿನಲ್ಲಿ ವಿವರ್ಥನ – 2024 ರಾಷ್ಟ್ರೀಯ ಮಟ್ಟದ ಪ್ರತಿಭಾನ್ವೇಷಣಾ ಕಾರ್ಯಕ್ರಮ

ಪುತ್ತೂರು: ಯಶಸ್ಸನ್ನು ತಲುಪುವ ಛಲ ಇರುವವನು ಎಂದೂ ಅನುಕೂಲಗಳನ್ನು ಬಯಸುವುದಿಲ್ಲ, ಅನಾನುಕೂಲಗಳನ್ನು ಅವಕಾಶಗಳನ್ನಾಗಿ ಬದಲಿಸಿ ಮುನ್ನಡೆಯುವುದು ಯಶಸ್ವಿ ವ್ಯಕ್ತಿಗಳ ಲಕ್ಷಣ ಎಂದು ಉದ್ಯಮಿ, ಹುಬ್ಬಳ್ಳಿ ಅನನ್ಯ ಫೀಡ್ಸ್ ನ ಸ್ಥಾಪಕ ದಿವಾನ್ ಗೋವಿಂದ ಭಟ್ ಅಭಿಪ್ರಾಯಪಟ್ಟರು. ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದ ಸ್ನಾತಕೋತ್ತರ ವಾಣಿಜ್ಯ ವಿಭಾಗ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ಆಯೋಜಿಸಿದ್ದ ವಿವರ್ಥನ-2024 ಪ್ರತಿಭಾನ್ವೇಷಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಾಡುವ ಕೆಲಸದ ಬಗ್ಗೆ ಶ್ರದ್ಧೆ, ಛಲ ಮತ್ತು ವಿಧೇಯತೆ ಇದ್ದರೆ ಯಶಸ್ಸು ನಿಮ್ಮ ಸಮೀಪಕ್ಕೆ

ವಿವೇಕಾನಂದ ಕಾಲೇಜಿನಲ್ಲಿ ವಿವರ್ಥನ – 2024 ರಾಷ್ಟ್ರೀಯ ಮಟ್ಟದ ಪ್ರತಿಭಾನ್ವೇಷಣಾ ಕಾರ್ಯಕ್ರಮ Read More »

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ರಾಜ್ಯಮಟ್ಟದ ವಿಚಾರ ಸಂಕಿರಣ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯ ಮತ್ತು ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ ರಾಜ್ಯಮಟ್ಟದ ವಿಚಾರ ಸಂಕಿರಣವು ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ನಡೆಯಿತು. ವಿಚಾರ ಸಂಕಿರಣವನ್ನು ದೀಪ ಬೆಳಿಗಿಸಿ ಉದ್ಘಾಟಿಸಿದ ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆಯ ನಿರ್ದೇಶಕ ಕೆ. ದ್ವಾರಕನಾಥ್ ಬಾಬು ಮಾತನಾಡಿ, ಅಪರಾಧಿಕ ನ್ಯಾಯ ವ್ಯವಸ್ಥೆಯ ಅಪರಾಧಿಕ ವಿಚಾರಣೆಯಲ್ಲಿ ಸಂತ್ರಸ್ತರು ಅಥವಾ ನೊಂದವರು ಪ್ರಧಾನ ಸಾಕ್ಷಿಗಳಾಗಿರುತ್ತಾರೆ. ಯಾವುದೇ ರೀತಿಯ ಪಕ್ಷಪಾತವಿಲ್ಲದೇ ನ್ಯಾಯ ಪ್ರಕ್ರಿಯೆ ನಡೆಸುವಲ್ಲಿ ಈ

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ರಾಜ್ಯಮಟ್ಟದ ವಿಚಾರ ಸಂಕಿರಣ Read More »

ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಗೆ ಕರ್ನಾಟಕ ಬ್ಯಾಂಕ್‍ ವತಿಯಿಂದ ಶಾಲಾ ಬಸ್ ಕೊಡುಗೆ

ಪುತ್ತೂರು: ಮಂಗಳೂರಿನ ಕರ್ನಾಟಕ ಬ್ಯಾಂಕ್ ಪ್ರಧಾನ ಕಛೇರಿ ವತಿಯಿಂದ ನರಿಮೊಗರಿನ ಸಾಂದೀಪನಿ ವಿದ್ಯಾಸಂಸ್ಥೆಗೆ ಭಾರತ್ ಬೆಂಜ್ ಕಂಪೆನಿಯ ಶಾಲಾ ಬಸ್ಸನ್ನು ಕೊಡುಗೆಯಾಗಿ ನೀಡಿದ್ದಾರೆ. ಬ್ಯಾಂಕ್‍ ನ ಮುಖ್ಯ ವ್ಯವಸ್ಥಾಪಕ ರಾಜ ಬಿ.ಎಸ್‍. ವಿದ್ಯಾಸಂಸ್ಥೆಯ ಅಧ್ಯಕ್ಷ ಜಯರಾಮ ಕೆದಿಲಾಯ ಅವರಿಗೆ ಬಸ್‍ ಕೀಯನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಬ್ಯಾಂಕ್ ನ ಮುಖ್ಯ ವ್ಯವಸ್ಥಾಪಕರಾದ ನಿರ್ಮಲ ಕುಮಾರ್,. ಸಾಂಡ್ರಾ..ಎಂ.ಲೊರೇನಾ, ನಿರಂಜನ್ ಕುಮಾರ್, ಶ್ರೀಹರಿ.ಪಿ,  ಉಪ ವ್ಯವಸ್ಥಾಪಕರಾದ ವನಂತ ಆರ್. ಹೇರಳೆ, ಸಹಾಯಕ ವ್ಯವಸ್ಥಾಪಕರಾದ ಮಾಧವ ನಾವಡ, ಶ್ರೀಶ, ವಿದ್ಯಾಸಂಸ್ಥೆಯ ಸಂಚಾಲಕ

ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಗೆ ಕರ್ನಾಟಕ ಬ್ಯಾಂಕ್‍ ವತಿಯಿಂದ ಶಾಲಾ ಬಸ್ ಕೊಡುಗೆ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ  ‘ಆದಿಯೋ ಬ್ಲಾಸಮ್ಸ್ ‘ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ

ಪುತ್ತೂರು: ವಿದ್ಯಾರ್ಥಿಗಳು ತಮ್ಮ ಸ್ವಾತಂತ್ರ್ಯವನ್ನು ಜವಾಬ್ದಾರಿಯಿಂದ ಉಪಯೋಗಿಸಬೇಕು. ನಮ್ಮ ಸಂತೋಷ, ಇನ್ನೊಬ್ಬರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಈ ಸಂಸ್ಥೆಯಿಂದ ಹೊರಹೋದ ಮೇಲೂ ಹಿರಿಯ ವಿದ್ಯಾರ್ಥಿಗಳಾಗಿ ಕಾಲೇಜಿನ ಅಭಿವೃದ್ಧಿಯಲ್ಲಿ ಕೈಜೋಡಿಸಬೇಕು ಎಂದು ಪ್ರಾಂಶುಪಾಲ ವಂ. ಡಾ. ಆ್ಯಂಟನಿ ಪ್ರಕಾಶ್‌ ಮೊಂತೇರೊ ಹೇಳಿದರು . ಸಂತ ಫಿಲೋಮಿನಾ ಕಾಲೇಜಿನ ಮಾನವಿಕ ವಿಭಾಗದ ಆಶ್ರಯದಲ್ಲಿ  ಆಯೋಜಿಸಿದ ‘ಆದಿಯೋ ಬ್ಲಾಸಮ್ಸ್’   ಬಿಎ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಾನವಿಕ ವಿಭಾಗದ ಮುಖ್ಯಸ್ಥ  ಡಾ. ನಾಬರ್ಟ್  ಮಸ್ಕರೇನ್ಸಸ್ ಮಾತನಾಡಿ, ವಿದ್ಯಾರ್ಥಿಗಳು ಬದುಕಿನಲ್ಲಿ

ಸಂತ ಫಿಲೋಮಿನಾ ಕಾಲೇಜಿನಲ್ಲಿ  ‘ಆದಿಯೋ ಬ್ಲಾಸಮ್ಸ್ ‘ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ Read More »

ವಿವೇಕಾನಂದ ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ, ಹಿರಿಯ ವಿದ್ಯಾರ್ಥಿ ಸಂಘದ ದಿನಾಚರಣೆ

ಪುತ್ತೂರು: ದೀಪವು ಪ್ರಗತಿಯ ಸಂಕೇತ. ದೀಪದಂತೆ ವಿದ್ಯಾರ್ಥಿಗಳ ಬದುಕಿನಲ್ಲಿಯೂ ರಾಷ್ಟ್ರೀಯತೆ ಹಾಗೂ ಹೊಸ ಚಿಂತನೆಗಳು ಬೆಳಗಲಿ. ಯುವಜನತೆ ದೇಶದ ಸರ್ವತೋಮುಖ ಬೆಳವಣಿಗೆಯತ್ತ ಗಮನ ಹರಿಸಬೇಕಾಗಿದೆ. ವಿದ್ಯಾರ್ಥಿಗಳ ಭವಿಷ್ಯಕ್ಕೆ ಬೇಕಾದ ಉತ್ತಮ ಆಚಾರ ವಿಚಾರಗಳನ್ನು, ಆದರ್ಶ ಹಾಗೂ ಧ್ಯೇಯವನ್ನಿಟ್ಟುಕೊಂಡು ಈ ಸಂಸ್ಥೆ ಬೆಳೆದು ಬಂದಿದೆ. ಹಾಗಾಗಿ ಸದ್ವಿಚಾರಗಳನ್ನು ಮೈಗೂಡಿಸಿಕೊಂಡು ತಮ್ಮ ಗುರಿಗಳನ್ನು ಸಾಧಿಸುವತ್ತ ಗಮನಹರಿಸಿ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ ಪ್ರಭಾಕರ್ ಭಟ್ ಕಲ್ಲಡ್ಕ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ

ವಿವೇಕಾನಂದ ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ, ಹಿರಿಯ ವಿದ್ಯಾರ್ಥಿ ಸಂಘದ ದಿನಾಚರಣೆ Read More »

error: Content is protected !!
Scroll to Top