ಕ್ಯಾಂಪಸ್‌

ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

ಪುತ್ತೂರು: ಸಮಾಜವನ್ನು ಪರಿವರ್ತನೆ ಮಾಡಲು ಯುವ ಜನತೆ ಮಹತ್ವಾಕಾಂಕ್ಷೆ, ಗುರಿ ಇಟ್ಟುಕೊಂಡು ಮುನ್ನಡೆಯಬೇಕು. ಪ್ರತಿಯೊಬ್ಬ ಪ್ರಜೆಗೂ ಹುಟ್ಟಿನಿಂದ ಸಾಯುವವರೆಗೂ ಕಾನೂನಿನ ಅಗತ್ಯತೆ ಪ್ರಸ್ತುತ ಸಂದರ್ಭದಲ್ಲಿ ಅವಶ್ಯವಿದೆ, ದೇಶದ ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಅಳವಡಿಸಲಾಗಿದೆ, ಎಲ್ಲ ಕಾನೂನುಗಳನ್ನು ತಿಳಿದುಕೊಳ್ಳಲು ಸಾಧ್ಯವಾಗದೇ ಇರಬಹುದು, ಆದರೂ ನಮ್ಮ ದೈನಂದಿನ ಜೀವನ ಯಾವುದೇ ಅಡೆತಡೆಯಿಲ್ಲದೇ ನೆಮ್ಮದಿಯಿಂದ ಸಾಗಲು ಅಲ್ಪ ಪ್ರಮಾಣದಲ್ಲಾದರೂ ಕಾನೂನು ಜಾಗೃತಿ ಪಡೆಯಬೇಕು. ಎಂದು ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಪ್ರಾಧ್ಯಾಪಕಿ ಶ್ರೀರಕ್ಷಾ ಹೇಳಿದರು. ನರೇಂದ್ರ ಪದವಿ […]

ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ Read More »

ಸಿ.ಎ ಗ್ರೂಪ್ 1 ಹಾಗೂ 2 ಪರೀಕ್ಷೆ ತೇರ್ಗಡೆಯಾದ ಅಂಬಿಕಾ ಮಹಾವಿದ್ಯಾಲಯದ ಸಿಂಚನಾ

ಪುತ್ತೂರು: ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದ ಅಂತಿಮ ಬಿ.ಕಾಂ ವಿದ್ಯಾರ್ಥಿನಿ ಸಿಂಚನಾ ಎಂ. ಭಾರತೀಯ ಲೆಕ್ಕ ಪರಿಶೋಧನಾ ಮಂಡಳಿಯು (ಐಸಿಎಐ) ಮೇ 2024ರಲ್ಲಿ ನಡೆಸಿದ ಸಿ.ಎ. ಇಂಟರ್ ಗ್ರೂಪ್ ಪರೀಕ್ಷೆಯ ಗ್ರೂಪ್ 1 ಹಾಗೂ ಗ್ರೂಪ್ 2 ವಿಭಾಗದ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಅಂತಿಮ ಹಂತಕ್ಕೆ ಆಯ್ಕೆಯಾಗಿದ್ದಾರೆ. ಸಿಂಚನಾ ಅವರು ಸುಳ್ಯದ ಐವತ್ತೊಕ್ಲು ಗ್ರಾಮದ ದಿ.ಸೀತಾರಾಮ ಎಂ. ಹಾಗೂ ಸರೋಜಾ ದಂಪತಿ ಪುತ್ರಿ. ಕಳೆದ ಕೆಲವು ವರ್ಷಗಳಿಂದ ಅಂಬಿಕಾ ಪದವಿಪೂರ್ವ ಹಾಗೂ ಪದವಿ ಮಹಾವಿದ್ಯಾಲಯಗಳಲ್ಲಿ ಸಿಎ ಪರೀಕ್ಷೆಗಳಿಗೆ ತರಬೇತಿ

ಸಿ.ಎ ಗ್ರೂಪ್ 1 ಹಾಗೂ 2 ಪರೀಕ್ಷೆ ತೇರ್ಗಡೆಯಾದ ಅಂಬಿಕಾ ಮಹಾವಿದ್ಯಾಲಯದ ಸಿಂಚನಾ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಫ್ಯಾಕಲ್ಟಿ ಡೆವಲಪ್ ಮೆಂಟ್ ಕಾರ್ಯಕ್ರಮ

ಪುತ್ತೂರು: ಬದಲಾವಣೆ ನಮ್ಮ ಕೌಶಲ್ಯಗಳನ್ನು ಹೆಚ್ಚಿಸಲು, ಹೊಸ ಮತ್ತು ನಮ್ಮ ಅಭ್ಯಾಸಗಳನ್ನು ಸುಧಾರಿಸಲು ಅನುವು ಮಾಡಿಕೊಡುತ್ತದೆ.  ಬದಲಾವಣೆಗೆ ಧನಾತ್ಮಕವಾಗಿ ಸ್ಪಂದಿಸುವ ಮೂಲಕ ನಾವು ನಿರಂತರ ಸುಧಾರಣೆಯ ಸಂಸ್ಕೃತಿಯನ್ನು ಬೆಳೆಸಬಹುದು. ವಿಚಾರಗಳನ್ನು ಮುಕ್ತವಾಗಿ ಹಂಚಿಕೊಳ್ಳುವ ಮತ್ತು ಪ್ರತಿಕ್ರಿಯೆಯನ್ನು ರಚನಾತ್ಮಕವಾಗಿ ಸ್ವಾಗತಿಸುವ ವಾತಾವರಣವನ್ನು ನಾವು ಬೆಳೆಸಬೇಕಾಗಿದೆ. ಎಂದು ಸಂತ ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲ ವಂ. ಡಾ. ಆ್ಯಂಟನಿ ಪ್ರಕಾಶ್ ಮೊಂತೇರೊ ಹೇಳಿದರು. ಅವರು “ಅಂಗ ಸಂಸ್ಥೆಯಿಂದ ಸ್ವಾಯತ್ತ ಸಂಸ್ಥೆಯಾಗಿ ಪರಿವರ್ತನೆಗೆ ತಯಾರಿ” ಫ್ಯಾಕಲ್ಟಿ ಡೆವಲಪ್ ಮೆಂಟ್ ಸರಣಿ ಕಾರ್ಯಕ್ರಮದ ದ್ವಿತೀಯ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಫ್ಯಾಕಲ್ಟಿ ಡೆವಲಪ್ ಮೆಂಟ್ ಕಾರ್ಯಕ್ರಮ Read More »

ವೈಟ್ ಲಿಫ್ಟಿಂಗ್ ಸ್ಪರ್ಧೆ : ನರೇಂದ್ರ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ಸಿಂಚನಾ ಬಿ. 5ನೇ ಸ್ಥಾನ

ಪುತ್ತೂರು: ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದ ವೈಟ್‌ ಲಿಫ್ಟಿಂಗ್ ಸ್ಪರ್ಧೆಯಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿನಿ ಸಿಂಚನಾ ಬಿ. ಐದನೇ ಸ್ಥಾನ ಪಡೆದಿದ್ದಾರೆ. ಮಧ್ಯಪ್ರದೇಶದ ಇಂದೋರ್ ನ ಶ್ರೀರಾಮ್ ಜಿಮ್ನಾಸಿಯಮ್ ನಲ್ಲಿ 5 ದಿನಗಳ ಕಾಲ ನಡೆದ ಎಎಸ್ ಎಂಐಟಿಎ ಖೇಲೋ ಇಂಡಿಯಾ ಮಹಿಳೆಯರ ಯೂತ್ ವಿಭಾಗದ 76 ಕೆಜಿ  ವೈಟ್‌ ಲಿಫ್ಟಿಂಗ್ ಝೋನಲ್ ಲೀಗ್ ಸ್ಪರ್ಧೆಯಲ್ಲಿ ನರೇಂದ್ರ ಪ.ಪೂ. ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಿಂಚನಾ ಬಿ. ಭಾಗವಹಿಸಿ ಐದನೇ ಸ್ಥಾನವನ್ನು ಪಡೆದಿರುತ್ತಾರೆ. ಇವರು ಬೆಟ್ಟಂಪಾಡಿಯ

ವೈಟ್ ಲಿಫ್ಟಿಂಗ್ ಸ್ಪರ್ಧೆ : ನರೇಂದ್ರ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ಸಿಂಚನಾ ಬಿ. 5ನೇ ಸ್ಥಾನ Read More »

ಭಾರೀ ಮಳೆ : ನಾಳೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ

ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ನಾಳೆ (ಜು.9) ದ.ಕ.. ಜಿಲ್ಲೆಯ ಶಾಲಾ-ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು ಉಡುಪಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದು, ದ.ಕ.ಜಿಲ್ಲೆಯಲ್ಲಿ ರೆಡ್ ಅಲರ್ಟ್‍ ಘೋಷಣೆ ಮಾಡಲಾಗಿದೆ. ದ.ಕ.ಜಿಲ್ಲಾದ್ಯಂತ  ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು ಸೇರಿದಂತೆ ಮೀನುಗಾರರು ನದಿ ತೀರಕ್ಕೆ ತೆರಳುವುದು, ಮೀನುಗಾರಿಕೆ ಮಾಡುವುದು ನಿಷೇಧಿಸಲಾಗಿದೆ.

ಭಾರೀ ಮಳೆ : ನಾಳೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ Read More »

ಭಾರೀ ಮಳೆ : ನಾಳೆ ಉಡುಪಿ ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ

ಉಡುಪಿ: ಭಾರೀ ಮಳೆಯ ಹಿನ್ನಲೆಯಲ್ಲಿ ನಾಳೆ (ಜು.9) ಉಡುಪಿ ಜಿಲ್ಲೆಯ ಶಾಲಾ-ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು ಉಡುಪಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದು, ಉಡುಪಿ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು ಸೇರಿದಂತೆ ಮೀನುಗಾರರು ನದಿ ತೀರಕ್ಕೆ ತೆರಳುವುದು, ಮೀನುಗಾರಿಕೆ ಮಾಡುವುದು ನಿಷೇಧಿಸಲಾಗಿದೆ.

ಭಾರೀ ಮಳೆ : ನಾಳೆ ಉಡುಪಿ ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ Read More »

ವಿದ್ಯಾರ್ಥಿಗಳು ಮನಸ್ಸನ್ನು ನಿಯಂತ್ರಿಸುವ ಕಲೆ ಸಿದ್ಧಿಸಬೇಕು | ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಬೋಧನಾ ಸಾಮರ್ಥ್ಯ ಉತ್ತೇಜನ ಕಾರ್ಯಕ್ರಮದಲ್ಲಿ ರಾಮಚಂದ್ರ ಗುರೂಜಿ

ಪುತ್ತೂರು: ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ಪಾಠ ಮಾಡಬೇಕಾದರೆ ಮನಸ್ಸಿನ ಸ್ಥಿತಿಗಳನ್ನು ಮೊದಲಿಗೆ ಅರ್ಥಮಾಡಿಕೊಳ್ಳಬೇಕು. ನಮ್ಮೆದುರಿಗಿರುವ ಮಕ್ಕಳ ಮನಸ್ಸನ್ನು ಹತೋಟಿಗೆ ತೆಗೆದುಕೊಂಡರೆ ನಾವು ಬೋಧಿಸಿದ ಸಂಗತಿಗಳು ಸುಲಭ ಸಾಧ್ಯವಾಗಿ ಮಕ್ಕಳ ತಲೆಯೊಳಗೆ ಅಚ್ಚೊತ್ತಿಬಿಡುತ್ತವೆ. ಹಾಗಾಗಿ ಶಿಕ್ಷಕರಾದವರು ಮನಸ್ಸನ್ನು ಅರ್ಥ ಮಾಡಿಕೊಳ್ಳುವ ಶಕ್ತಿ ಬೆಳೆಸಿಕೊಳ್ಳಬೇಕು ಎಂದು ಬೆಂಗಳೂರಿನ ಸಮ್ಮೋಹಿನಿ ತಜ್ಞ, ಕುಂಡಲಿನಿ ಯೋಗಗುರು ಡಾ.ರಾಮಚಂದ್ರ ಗುರೂಜಿ ಹೇಳಿದರು.        ಅವರು ನಗರದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಅಂಬಿಕಾ ಹಾಗೂ ನರಿಮೊಗರಿನ ಸಾಂದೀಪನಿ ಶಿಕ್ಷಣ ಸಂಸ್ಥೆಗಳ ಬೋಧಕರಿಗಾಗಿ ಆಯೋಜಿಸಲಾದ ಎರಡು ದಿನಗಳ

ವಿದ್ಯಾರ್ಥಿಗಳು ಮನಸ್ಸನ್ನು ನಿಯಂತ್ರಿಸುವ ಕಲೆ ಸಿದ್ಧಿಸಬೇಕು | ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಬೋಧನಾ ಸಾಮರ್ಥ್ಯ ಉತ್ತೇಜನ ಕಾರ್ಯಕ್ರಮದಲ್ಲಿ ರಾಮಚಂದ್ರ ಗುರೂಜಿ Read More »

ನರೇಂದ್ರ ಕಾಲೇಜಿನಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೂತನ ಘಟಕ ಉದ್ಘಾಟನೆ

ಪುತ್ತೂರು: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಎನ್ನುವುದು ಭಾರತದ ಅತಿದೊಡ್ಡ ವಿದ್ಯಾರ್ಥಿ ಸಂಘಟನೆಯಾಗಿದೆ. ಇಂದಿನ ಯುವ ವಿದ್ಯಾರ್ಥಿಗಳು ತಮ್ಮ  ಇಚ್ಛಾಶಕ್ತಿ, ಸಂಕಲ್ಪಶಕ್ತಿ, ಕ್ರಿಯಾಶಕ್ತಿಗಳನ್ನು ಉಪಯೋಗಿಸಿಕೊಂಡು, ಸೃಜನಶೀಲತೆಯಿಂದ ಮುಂದುವರಿದು, ತಮ್ಮ ಜವಾಬ್ದಾರಿ ಅರಿತು ವ್ಯಕ್ತಿತ್ವ ವಿಕಸನದ ಜೊತೆಗೆ ರಾಷ್ಟ್ರ ಪುನರ್ ನಿರ್ಮಾಣದ ಕೈಂಕರ್ಯದಲ್ಲಿ ಶ್ರಮಿಸಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯ ಕಾರ್‍ಯಕಾರಿಣಿ ಸದಸ್ಯ ಶ್ರೀರಾಮ್ ಅಂಗಿರಸ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೂತನ ಘಟಕ ಉದ್ಘಾಟಿಸಿ ಅವರು ಮಾತನಾಡಿದರು. ಘಟಕದ

ನರೇಂದ್ರ ಕಾಲೇಜಿನಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೂತನ ಘಟಕ ಉದ್ಘಾಟನೆ Read More »

ವನಮಹೋತ್ಸವ ಒಂದು ದಿನಕ್ಕೆ ಸೀಮಿತವಾಗಿರಬಾರದು | ಎ.ವಿ.ಜಿ. ಶಾಲೆಯಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಟಿ.ಜಿ.ಗೌಡ

ಪುತ್ತೂರು: ಬನ್ನೂರಿನ ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮವು ನಡೆಯಿತು. ನಿವೃತ್ತ ಬ್ಯಾಂಕ್ ಮ್ಯಾನೇಜರ್ ಟಿ. ಜಿ. ಗೌಡ ಗಿಡ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳಲ್ಲಿ ಎಳವೆಯಿಂದಲೇ ಪರಿಸರದ ಪ್ರಜ್ಞೆ ಮೂಡಿ ಬರಬೇಕು, ಇದು ಕೇವಲ ಶಾಲೆಗಳಲ್ಲಿ ನಡೆಯುವ ಒಂದು ದಿನದ ವನಮಹೋತ್ಸವಕ್ಕೆ ಸೀಮಿತವಾಗಿರದೆ ನಮ್ಮ ದಿನನಿತ್ಯದ ಬದುಕಿನಲ್ಲಿ ಹಾಸು ಹೊಕ್ಕಾಗಿರಬೇಕು ಎಂದು ಹೇಳಿದರು. ಆಡಳಿತ ಮಂಡಳಿ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪರಿಸರದ ಬಗ್ಗೆ ಎಚ್ಚೆತ್ತುಕೊಳ್ಳೋಣ

ವನಮಹೋತ್ಸವ ಒಂದು ದಿನಕ್ಕೆ ಸೀಮಿತವಾಗಿರಬಾರದು | ಎ.ವಿ.ಜಿ. ಶಾಲೆಯಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಟಿ.ಜಿ.ಗೌಡ Read More »

ನರೇಂದ್ರ ಕಾಲೇಜು ವಿದ್ಯಾರ್ಥಿಗಳಿಂದ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ

ಪುತ್ತೂರು: ಸ್ವಚ್ಛತೆ ಎಂಬುದು ಭಾರತೀಯ ಸಂಸ್ಕೃತಿಯ ಒಂದು ಅಂಗವಾಗಿದ್ದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಇಡೀ ದೇಶವೇ ಮತ್ತೊಮ್ಮೆ ಸ್ಪೂರ್ತಿ ಪಡೆದುಕೊಂಡು ದೇಶ ಸ್ವಚ್ಛತೆಯತ್ತ ಕಾಲಿಡುತ್ತಿದೆ ಎಂದು ಕುರಿಯ ಗ್ರಾಮದ ಉಳ್ಳಾಲ ಶ್ರೀ ಮಹಾವಿಷ್ಣು ಸೇವಾ ಸಮಿತಿ ಅಧ್ಯಕ್ಷ ಮಧು ನರಿಯೂರು ಹೇಳಿದರು. ನರೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಕುರಿಯ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆದ ಸ್ವಚ್ಛತಾ ಕಾರ್ಯದ ಸಂದರ್ಭ ಅವರು ಮಾತನಾಡಿದರು. ಕುರಿಯ ಉಳ್ಳಾಲ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನ, ಶ್ರೀ ಮಹಾವಿಷ್ಣು

ನರೇಂದ್ರ ಕಾಲೇಜು ವಿದ್ಯಾರ್ಥಿಗಳಿಂದ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ Read More »

error: Content is protected !!
Scroll to Top