ಸಾರ್ವಜನಿಕ ಆಸ್ಪತ್ರೆ ಆರೋಗ್ಯ ಇಲಾಖೆಗೆ ಮಂಜೂರಾದ ಜಮೀನು ರದ್ದುಪಡಿಸಿ ಪ್ರಿಯದರ್ಶಿನಿ ಚಾರಿಟೇಬಲ್ ಟ್ರಸ್ಟ್ ಗೆ ಮಂಜೂರು ಹುನ್ನಾರ | ಸರಕಾರಿ ಜಾಗ ಕಬಳಿಕೆಗೆ ಯತ್ನ : ಶಾಸಕ ಸಂಜೀವ ಮಠಂದೂರು
ಪುತ್ತೂರು : ಪುತ್ತೂರು ಸಾರ್ವಜನಿಕ ಆಸ್ಪತ್ರೆ ಆರೋಗ್ಯ ಇಲಾಖೆಗೆ ಮಂಜೂರಾದ ಜಮೀನನ್ನು ರದ್ದು ಪಡಿಸಿ ಪುತ್ತೂರು ಪ್ರಿಯದರ್ಶಿನಿ ಚಾರಿಟೇಬಲ್ ಟ್ರಸ್ಟ್ ಗೆ ಮಂಜೂರು ಮಾಡುವ ಹುನ್ನಾರ ನಡೆಯುತ್ತಿದ್ದು, ಇದರ ವಿರುದ್ಧ ಬಿಜೆಪಿಯಿಂದ ಬೃಹತ್ ಹೋರಾಟ ನಡೆಸಲಾಗುವುದು ಎಂದು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ವಕ್ಫ್ ನಂತೆ ಸರಕಾರಿ ಜಮೀನನ್ನು ನುಂಗುವ ಕೆಲಸ ನಡೆಯುತ್ತಿದೆ. ಇದೇ ರೀತಿ ಮುಂದುವರಿದರೆ ವಿಧಾನಸೌಧದ ಜಾಗವನ್ನು ಕಬಳಿಸುವುದರಲ್ಲಿ ಯಾವುದೇ ಸಂಶಯವಿಲ್ಲ. ಈ ನಿಟ್ಟಿನಲ್ಲಿ ಪುತ್ತೂರು ಸರಕಾರಿ […]