ಅಕ್ಷಯ ಕಾಲೇಜಿನಲ್ಲಿ ಎನ್‌ಎಸ್‌ಎಸ್ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ಎನ್‌ಎಸ್‌ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಪುತ್ತೂರು: ಅಕ್ಷಯ ಕಾಲೇಜು, ಪುತ್ತೂರಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕ ಹಾಗೂ ಆಂತರಿಕ ಗುಣಮಟ್ಟ ಭರವಸೆ ಘಟಕ (ಐಕ್ಯೂಎಸಿ) ಸಹಯೋಗದೊಂದಿಗೆ ಆಯೋಜಿಸಲಾದ ಎನ್ ಎಸ್ ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಆಗಸ್ಟ್ 12, 2025ರಂದು ಕಾಲೇಜು ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮವನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು, ಜಿಡೆಕಲ್ಲಿನ ಪ್ರಾಂಶುಪಾಲರಾದ ಪ್ರೊ. ಸುಬ್ಬಪ್ಪ ಕೈಕಂಬ ಉದ್ಘಾಟಿಸಿದರು. ಉದ್ಘಾಟನಾ ಭಾಷಣದಲ್ಲಿ ಅವರು “ಎನ್ ಎಸ್ ಎಸ್ ಕೇವಲ ಒಂದು ಘಟಕವಲ್ಲ, ಅದು ವ್ಯಕ್ತಿತ್ವ ನಿರ್ಮಾಣದ ಪಾಠಶಾಲೆ. ಇಲ್ಲಿ […]










