ಕ್ಯಾಂಪಸ್‌

ಭಾರೀ ಮಳೆ : ಇಂದು ಶಾಲಾ-ಕಾಲೇಜುಗಳಿಗೆ ರಜೆ

ಪುತ್ತೂರು: ಭಾರೀ ಮಳೆಯ ಹಿನ್ನಲೆಯಲ್ಲಿ ಇಂದು ದ.ಕ.ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಈ ಕುರಿತು ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶ ಹೊರಡಿಸಿದ್ದಾರೆ. ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ;ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.ಮಳೆಯ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ರೆಡ್ ಅಲರ್ಟ್‍ ಘೋಷಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ತಗ್ಗು ಪ್ರದೇಶವಾದ ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಸಾರ್ವಜನಿಕರು ಹೋಗದಂತೆ, ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.

ಭಾರೀ ಮಳೆ : ಇಂದು ಶಾಲಾ-ಕಾಲೇಜುಗಳಿಗೆ ರಜೆ Read More »

ಬೆಥನಿ ಆಂಗ್ಲ ಮಾಧ್ಯಮ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ

ಪುತ್ತೂರು: ದರ್ಬೆ ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2024-25 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ ಸ್ವೀಕಾರ ಮತ್ತು ಉದ್ಘಾಟನಾ ಸಮಾರಂಭ ಶಾಲಾ ಸಭಾಂಗಣದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರು ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್ ಮಾತನಾಡಿ, ಇಂದಿನ ಎಳೆಯರು ನಾಡಿನ ನಾಳಿನ ನಾಯಕರು. ಆ ನಿಟ್ಟಿನಲ್ಲಿ ಬಾಲ್ಯದಲ್ಲಿಯೇ ಅವರಿಗೆ ಪ್ರಜಾಪ್ರಭುತ್ವದ ನೈಜ ಅನುಭವ, ಮತದಾನದ ಅವಶ್ಯಕತೆ ಹಾಗೂ ಸಂವಿಧಾನ ಬಗೆಗಿನ ಗೌರವ ಶಾಲಾ

ಬೆಥನಿ ಆಂಗ್ಲ ಮಾಧ್ಯಮ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ Read More »

ಕಾರ್ಗಿಲ್ ವಿಜಯೋತ್ಸವಕ್ಕೆ ಇಪ್ಪತ್ತೈದು ವರ್ಷ ತುಂಬಿದ ಸಂಭ್ರಮ |ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಅಂತರ್ ಜಿಲ್ಲಾ ಭಾಷಣ, ದೇಶಭಕ್ತಿಗೀತೆ ಸ್ಪರ್ಧೆ

ಪುತ್ತೂರು: ಕಾರ್ಗಿಲ್ ವಿಜಯೋತ್ಸವಕ್ಕೆ 25 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು, ಶಾಲಾ ಶಿಕ್ಷಣ ಇಲಾಖೆ ಹಾಗೂ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಜಂಟಿ ಆಶ್ರಯದಲ್ಲಿ ದಕ್ಷಿಣ ಕನ್ನಡ, ಕೊಡಗು ಹಾಗೂ ಕಾಸರಗೋಡು ಜಿಲ್ಲೆಗಳ ಹೈಸ್ಕೂಲ್ ವಿದ್ಯಾರ್ಥಿಗಳಿಗಾಗಿ ಭಾಷಣ ಹಾಗೂ ದೇಶಭಕ್ತಿ ಗೀತೆ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಎರಡೂ ಸ್ಪರ್ಧೆಗಳಲ್ಲಿ ಪ್ರಥಮ ಬಹುಮಾನ ಐದು ಸಾವಿರ ರೂ. ಹಾಗೂ ದ್ವಿತೀಯ ಬಹುಮಾನ ಮೂರು ಸಾವಿರ ರೂ. ನೀಡಲಾಗುತ್ತದೆ. ಭಾಷಣ ಸ್ಪರ್ಧೆಗೆ ಭಾರತೀಯ ಸೈನ್ಯ – ಸಾಧನೆ

ಕಾರ್ಗಿಲ್ ವಿಜಯೋತ್ಸವಕ್ಕೆ ಇಪ್ಪತ್ತೈದು ವರ್ಷ ತುಂಬಿದ ಸಂಭ್ರಮ |ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಅಂತರ್ ಜಿಲ್ಲಾ ಭಾಷಣ, ದೇಶಭಕ್ತಿಗೀತೆ ಸ್ಪರ್ಧೆ Read More »

ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಸ್ಪರ್ಧೆ | ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಇಬ್ಬರು ವಿದ್ಯಾರ್ಥಿಗಳಿಗೆ ಬಹುಮಾನ

ಪುತ್ತೂರು: ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಅಂಗವಾಗಿ ನಡೆದ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಅದ್ವಿತ್ ಜಿ. ಹಾಗೂ ಗಾನವಿ ಎನ್‍. ಬಹುಮಾನ ಪಡೆದುಕೊಂಡಿದ್ದಾರೆ. ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಒಕ್ಕಲಿಗ ಗೌಡ ಸೇವಾ  ಸಂಘದ  ಸಂಯುಕ್ತ ಆಶ್ರಯದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ ದಿನಾಚರಣೆ ಅಂಗವಾಗಿ ಸ್ಪರ್ಧೆ ಏರ್ಪಡಿಸಿತ್ತು. ಅದ್ವಿತ್ ಜಿ -ಪ್ರಾಥಮಿಕ ವಿಭಾಗದ ಚಿತ್ರಕಲೆಯಲ್ಲಿ ದ್ವಿತೀಯ ಹಾಗೂ ಗಾನವಿ ಎನ್  ಪ್ರಾಥಮಿಕ ಶಾಲಾ ಪ್ರಬಂಧ ಸ್ಪರ್ಧೆಯಲ್ಲಿ

ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಸ್ಪರ್ಧೆ | ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಇಬ್ಬರು ವಿದ್ಯಾರ್ಥಿಗಳಿಗೆ ಬಹುಮಾನ Read More »

ನರೇಂದ್ರ ಪ.ಪೂ. ಕಾಲೇಜಿನಲ್ಲಿ ಯುವಜನತೆ ಮತ್ತು ಭಾರತೀಯತೆ ವಿಚಾರದ ಬಗ್ಗೆ ವಿಶೇಷ ಉಪನ್ಯಾಸ

ಪುತ್ತೂರು: ಯಾವುದೇ ಒಂದು ದೇಶದ ಅಭಿವೃದ್ಧಿಯಲ್ಲಿ ಅಲ್ಲಿಯ ಯುವಶಕ್ತಿಯ ಕೊಡುಗೆ ನಿರ್ಣಾಯಕ, ಸಂಶೋಧನೆಗಳು, ಹೊಸತನದ ಹುಡುಕಾಟಗಳು, ಅನ್ವೇಷಣೆ, ಆವಿಷ್ಕಾರಗಳು-ಹೀಗೆ ಎಲ್ಲ ರಂಗಗಳಲ್ಲೂ ಯುವಜನತೆಯ ಉತ್ಸಾಹ, ಪ್ರಾಮಾಣಿಕತೆ ಹಾಗೂ ಸಾಹಸಗಳೇ ದೇಶಗಳ ನಿಜವಾದ ಬಂಡವಾಳವಾಗಿವೆ ಎಂದು ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಪ್ರಾಂತ ಪ್ರಮುಖ್ ಗಣರಾಜ್ ಭಟ್‍ ಕೆದಿಲ ಹೇಳಿದರು. ನರೇಂದ್ರ ಪ.ಪೂ. ಕಾಲೇಜಿನಲ್ಲಿ ನಡೆದ ಯುವಜನತೆ ಮತ್ತು ಭಾರತೀಯತೆ ಎಂಬ ವಿಚಾರದ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಯುವಕರೇ ದೇಶದ ಶಕ್ತಿ. ಇವರು ತಮ್ಮ

ನರೇಂದ್ರ ಪ.ಪೂ. ಕಾಲೇಜಿನಲ್ಲಿ ಯುವಜನತೆ ಮತ್ತು ಭಾರತೀಯತೆ ವಿಚಾರದ ಬಗ್ಗೆ ವಿಶೇಷ ಉಪನ್ಯಾಸ Read More »

ರಾಜ್ಯಾದ್ಯಂತ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧ | ರಾಜ್ಯ ಸರಕಾರದಿಂದ ಸುತ್ತೋಲೆ

ಬೆಂಗಳೂರು: ಶಾಲಾ ಕಾಲೇಜುಗಳಲ್ಲಿ ಶಾಲಾವಧಿಯಲ್ಲಿ ಮೊಬೈಲ್ ಬಳಕೆ ಮಾಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಶಾಲಾ ಕಾಲೇಜುಗಳಲ್ಲಿ ದಿನೇ ದಿನೇ ಹೆಚ್ಚಾಗುತ್ತಿದ್ದು, ಇದು ಶೈಕ್ಷಣಿಕ ವಾತಾವರಣವನ್ನು ಹದಗೆಡಿಸುತ್ತಿದೆ. ಇದರ ದುಷ್ಪರಿಣಾಮ ಮಕ್ಕಳ ಮೇಲೆ ಬೀರುತ್ತಿದೆಯಲ್ಲದೇ, ಇದರಿಂದ ಕಲಿಕೆಯ ಅಮೂಲ್ಯ ಸಮಯವನ್ನು ಮೊಬೈಲ್ ಮಾತುಗಾರಿಕೆಯಲ್ಲಿ ವ್ಯಯವಾಗುತ್ತಿದೆಯೆಂಬ ಅಂಶ ಇಲಾಖೆಯ ಗಮನಕ್ಕೆ ಬಂದಿದೆ. ಅಲ್ಲದೇ ವಿದ್ಯಾರ್ಥಿಗಳು ತರಗತಿಗಳಲ್ಲಿ ಮೊಬೈಲ್ ಬಳಸಿ ಸಂಗೀತ ಕೇಳುವುದು ಆಟವಾಡುವು ಹಾಗೂ ಎಸ್‌ಎಂಎಸ್ ಕಳುಹಿಸುವುದು ಮಾಡುತ್ತಿದ್ದು ಇದರಿಂದ ತರಗತಿಗಳಲ್ಲಿ ಅಹಿತಕರ ವಾತಾವರಣ ಉಂಟಾಗಿ

ರಾಜ್ಯಾದ್ಯಂತ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧ | ರಾಜ್ಯ ಸರಕಾರದಿಂದ ಸುತ್ತೋಲೆ Read More »

ಅಂಬಿಕಾದ ವಿದ್ಯಾರ್ಥಿಗಳಿಂದ ಕೈಗಾರಿಕಾ ಭೇಟಿ

ಪುತ್ತೂರು: ನಗರದ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಇಂಡಸ್ಟ್ರೀಯಲ್ ಭೇಟಿ ಕಾರ್ಯಕ್ರಮ ನಡೆಯಿತು. ವಿಟ್ಲದ ಸಮೀಪದ ಬಲಿಪಗುಳಿಯಲ್ಲಿರುವ ’ಇಕೊ ಬ್ಲಿಸ್ಸ್’ ಅಡಿಕೆ ಹಾಳೆ ತಟ್ಟೆ ತಯಾರಿಕಾ ಕಾರ್ಖಾನೆಗೆ ಭೇಟಿ ನೀಡಿ ಕಾರ್ಯವೈಖರಿ ವೀಕ್ಷಿಸಿದರು. ಈ ಮೂಲಕ ಸಣ್ಣ ಕೈಗಾರಿಕೆಯ ನಿರ್ವಹಣೆಯನ್ನು ವಿದ್ಯಾರ್ಥಿಗಳು ಅರಿತುಕೊಂಡರು. ಉಪನ್ಯಾಸಕಿಯರಾದ ಅಕ್ಷತಾ ಆರ್, ಆಶಾದೇವಿ ಟಿ, ವಿದ್ಯಾ ಸರಸ್ವತಿ, ಉಪನ್ಯಾಸಕರಾದ ವಿಷ್ಣು ಪ್ರದೀಪ್, ಯತೀಶ್ ವಿದ್ಯಾರ್ಥಿಗಳನ್ನು ಮುನ್ನಡೆಸಿದರು.

ಅಂಬಿಕಾದ ವಿದ್ಯಾರ್ಥಿಗಳಿಂದ ಕೈಗಾರಿಕಾ ಭೇಟಿ Read More »

ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ರಾಜ್ಯಮಟ್ಟದ ಅಂತರ್ ಕಾಲೇಜು ಅತ್ಲೆಟಿಕ್ | ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಪುರುಷರ ವಿಭಾಗದಲ್ಲಿ ಚಾಂಪಿಯನ್, ಮಹಿಳೆಯರ ವಿಭಾಗದಲ್ಲಿ ರನ್ನರ್ ಅಪ್

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ರಾಜ್ಯಮಟ್ಟದ 25 ನೇ ಅಂತರ್ ಕಾಲೇಜು ಅತ್ಲೆಟಿಕ್ ಸ್ಪರ್ಧೆಯಲ್ಲಿ ಪುರುಷರ ವಿಭಾಗದ ಚಾಂಪಿಯನ್‌ಶಿಪ್ ಟ್ರೋಫಿ ಹಾಗೂ ಮಹಿಳೆಯರ ವಿಭಾಗದ ಚಾಂಪಿಯನ್‌ಶಿಪ್‌ನಲ್ಲಿ ರನ್ನರ್ ಅಪ್ ಟ್ರೋಫಿಯೊಂದಿಗೆ ಸತತ ಮೂರನೇ ಬಾರಿ ಕೂಟದ ಸಮಗ್ರ ಪ್ರಶಸ್ತಿಯನ್ನು ಪಡೆದು ದಾಖಲೆ ನಿರ್ಮಿಸಿದ್ದಾರೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಮೈಸೂರು ವಿಭಾಗದ ಆಶ್ರಯದಲ್ಲಿ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಾಲ್ಕು ದಿನಗಳ ಕಾಲ ನಡೆದ ಈ ಕ್ರೀಡಾಕೂಟದಲ್ಲಿ

ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ರಾಜ್ಯಮಟ್ಟದ ಅಂತರ್ ಕಾಲೇಜು ಅತ್ಲೆಟಿಕ್ | ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಪುರುಷರ ವಿಭಾಗದಲ್ಲಿ ಚಾಂಪಿಯನ್, ಮಹಿಳೆಯರ ವಿಭಾಗದಲ್ಲಿ ರನ್ನರ್ ಅಪ್ Read More »

ಮಾಣಿಲ ಸರಕಾರಿ ಪ್ರೌಢ ಶಾಲೆಯಲ್ಲಿ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಉದ್ಘಾಟನೆ

ಮಾಣಿಲ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಪ್ರಾಯೋಜಿತ ಯಕ್ಷ ಶಿಕ್ಷಣ ನಾಟ್ಯ ತರಬೇತಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮ ಮಾಣಿಲ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು. ಯಕ್ಷ ಧ್ರುವ ಪಟ್ಲ ಫೌಂಡೇಶನ್ ವಿಟ್ಲ ಘಟಕದ ಅಧ್ಯಕ್ಷ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು. ಪ್ರಧಾನ ಕಾರ್ಯದರ್ಶಿ ಪೂವಪ್ಪ ಶೆಟ್ಟಿ ಮಾತನಾಡಿ, ಅಳಿಕೆ ಪಟ್ಲ ಫೌಂಡೇಶನ್ ನ ಕಾರ್ಯಚಟುವಟಿಕೆಗಳು, ಧ್ಯೇಯೋದ್ದೇಶಗಳ ಬಗ್ಗೆ ಸವಿವರ ಮಾಹಿತಿ ನೀಡಿ ನಾಟ್ಯ ತರಬೇತಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕಲಾ ನೈಪುಣ್ಯತೆ ಪಡೆಯುವಂತೆ

ಮಾಣಿಲ ಸರಕಾರಿ ಪ್ರೌಢ ಶಾಲೆಯಲ್ಲಿ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಉದ್ಘಾಟನೆ Read More »

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಅನ್ ಬೌಂಡ್’ ತಾಂತ್ರಿಕ ಉತ್ಸವ

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಅನ್ ಬೌಂಡ್ ಎನ್ನುವ 3 ದಿನಗಳ ತಾಂತ್ರಿಕ ಉತ್ಸವ ಕಾರ್ಯಕ್ರಮ ಆಯೋಜಿಸಲಾಯಿತು. ಬದಲಾದ ತಾಂತ್ರಿಕತೆಯೊಂದಿಗೆ ಹೆಜ್ಜೆ ಹಾಕುತ್ತಾ ತನ್ನಲ್ಲಿರುವ ತಾಂತ್ರಿಕ ಜ್ಞಾನವನ್ನು ಇತರರಿಗೆ ಹಂಚಿಕೊಳ್ಳುವುದಕ್ಕೆ ಸೂಕ್ತ ವೇದಿಕೆಯನ್ನು ನೀಡುವುದಕ್ಕಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ರೀಸರ್ಚ್ ಎಂಡ್ ಪ್ರೆಸೆಂಟೇಶನ್, ಪ್ರಾಬ್ಲೆಮ್ ಸಾಲ್ವಿಂಗ್, ಮೆಷಿನ್ ಲರ್ನಿಂಗ್, ಡೇಟಾ ಪ್ರಾಸೆಸಿಂಗ್, ಸರ್ಕ್ಯೂಟ್ ಡಿಸೈನ್ ಎಂಡ್ ಡಿಬಗ್ಗಿಂಗ್, ಸರ್ವೆ, ಮಾಡೆಲಿಂಗ್, ಯುನಿಟ್ಸ್ ಎಂಡ್ ಮೆಶರ್‌ಮೆಂಟ್ಸ್ ಹೀಗೆ ಕಂಪ್ಯೂಟರ್ ವಿಭಾಗಕ್ಕೆ ಸಂಬಂಧಿಸಿದಂತೆ 4, ಇಲೆಕ್ಟ್ರಾನಿಕ್ಸ್

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಅನ್ ಬೌಂಡ್’ ತಾಂತ್ರಿಕ ಉತ್ಸವ Read More »

error: Content is protected !!
Scroll to Top