ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ, ಅಭಿನಂದನಾ ಸಮಾರಂಭ
ಪುತ್ತೂರು: ವಿದ್ಯಾರ್ಥಿಗಳು ಭವಿಷ್ಯದ ಜೀವನದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕಾದರೆ ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಮತ್ತು ಶ್ರದ್ಧೆಯಿಂದ ಕಲಿಕೆಯಲ್ಲಿ ತೊಡಗಿಕೊಳ್ಳಬೇಕು.ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿನ ಪ್ರತಿಭೆಯನ್ನು ಗುರುತಿಸಿ ಉತ್ತಮ ವಾತಾವರಣ ಕಲ್ಪಿಸಿಕೊಟ್ಟಾಗ ಪ್ರತಿಭೆ ವಿಕಸನಗೊಳ್ಳುತ್ತದೆ. ಭವಿಷ್ಯದ ಬಗ್ಗೆ ಸ್ಪಷ್ಟ ಗುರಿ ಇಟ್ಟುಕೊಂಡು ಮುನ್ನುಗ್ಗಬೇಕು ಎಂದು ಮುಕ್ರಂಪಾಡಿಯಲ್ಲಿರುವ ಎಸ್. ಆರ್. ಕೆ. ಲ್ಯಾಡರ್ಸ್ ನ ಮಾಲಕರಾದ ಕೇಶವ ಅಮೈ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳ ಸನ್ಮಾನ ಮತ್ತು ಅಭಿನಂದನಾ ಸಮಾರಂಭದಲ್ಲಿ ಅವರು […]










