ಕ್ಯಾಂಪಸ್‌

ಮಂಗಳೂರು ವಿ ವಿ ಅಂತರ್ ಕಾಲೇಜು ಮಹಿಳೆಯರ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾಟ

ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಸಂತ ಫಿಲೋಮಿನಾ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆದ ಮಹಿಳೆಯರ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾಟದಲ್ಲಿ ಬ್ರಹ್ಮಾವರದ ಎಸ್.ಎಂ.ಎಸ್. ಕಾಲೇಜಿನ ತಂಡ ಪ್ರಥಮ, ಮೂಡಬಿದಿರೆ ಆಳ್ವಾಸ್ ಕಾಲೇಜಿನ ಕ್ರಿಕೆಟ್ ತಂಡ ದ್ವಿತೀಯ, ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ತಂಡ ಹಾಗೂ ಯುನಿವರ್ಸಿಟಿ ಕಾಲೇಜು ತಂಡ ಕ್ರಮವಾಗಿ ತೃತೀಯ ಹಾಗೂ ಚತುರ್ಥ ಸ್ಥಾನಗಳನ್ನು ಪಡೆದುಕೊಂಡವು. ಸರ್ವಾಂಗೀಣ ಆಟಗಾರ್ತಿಯಾಗಿ ಬ್ರಹ್ಮಾವರ ಎಸ್ ಎಂ ಎಸ್ ಕಾಲೇಜಿನ ಲಕ್ಷ್ಮೀ, ಉತ್ತಮ ಬ್ಯಾಟರ್ ಆಗಿ ಬ್ರಹ್ಮಾವರ ಎಸ್ ಎಂ […]

ಮಂಗಳೂರು ವಿ ವಿ ಅಂತರ್ ಕಾಲೇಜು ಮಹಿಳೆಯರ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾಟ Read More »

ಸೋಲೇ ಯಶಸ್ಸಿನ ಮೂಲ : ಬಿ.ವಿ.ಸೂರ್ಯನಾರಾಯಣ | ಅಂಬಿಕಾ ಪಿಯು ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮ

ಪುತ್ತೂರು: ವಿದ್ಯಾರ್ಥಿಗಳು ಸಕಾರಾತ್ಮಕ ಮನೋಭಾವನೆ ಹೊಂದುವುದು ಅತೀ ಅಗತ್ಯವಾಗಿದೆ. ಸೋಲೇ ಗೆಲುವಿಗೆ ಸೋಪಾನ ಎನ್ನುವಂತೆ, ಸೋಲನ್ನು ಎದುರಿಸಿ ಜೀವನದ ಒಂದು ಭಾಗ ಎಂದು ಸ್ವೀಕರಿಸಿದಾಗ ಯಶಸ್ಸು ಖಂಡಿತ ಸಾಧ್ಯ. ಕಠಿಣ ಪರಿಶ್ರಮದ ಜೊತೆಗೆ ಬುದ್ಧಿವಂತಿಕೆ ಉಪಯೋಗಿಸಿ ಕಾರ್ಯ ಸಾಧಿಸಿದಾಗ ಯಶಸ್ಸು ಲಭಿಸುತ್ತದೆ ಎಂದು ವಿಶ್ರಾಂತ ಪ್ರಾಚಾರ್ಯ ಬಿ. ವಿ. ಸೂರ್ಯನಾರಾಯಣ ಹೇಳಿದರು. ಅವರು ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಪಿಯು ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ವಿದ್ಯಾರ್ಥಿ ಜೀವನದಲ್ಲಿ ಪ್ರಯತ್ನ ಅತೀ

ಸೋಲೇ ಯಶಸ್ಸಿನ ಮೂಲ : ಬಿ.ವಿ.ಸೂರ್ಯನಾರಾಯಣ | ಅಂಬಿಕಾ ಪಿಯು ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮ Read More »

ವಿಜ್ಞಾನ ಮಾದರಿ ಸ್ಪರ್ಧೆ : ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಪ್ರಶಸ್ತಿ

ಪುತ್ತೂರು: ಬೆಂಗಳೂರು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಪಿಲಿಕುಳ ಅಭಿವೃದ್ದಿ ಪ್ರಾಧಿಕಾರ, ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರ, ಮಂಗಳೂರು ಇವರು ನಡೆಸಿದ ಇನ್ನೋವೇಶನ್ ಹಬ್ ವಿಜ್ಞಾನ ಮಾದರಿಗಳ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ದ್ವಿತೀಯ ಪ್ರಶಸ್ತಿ ಲಭಿಸಿದೆ. ಶಾಲೆಯ 9 ನೇ ತರಗತಿ ವಿದ್ಯಾರ್ಥಿಗಳಾದ ಚಿರಂತನ. ಕೆ. ವಿ. ಮತ್ತು ಸ್ಕಂದ ಬಳ್ಳಕ್ಕುರಾಯ ಸ್ಪರ್ಧೆಯನ್ನು ಪ್ರತಿನಿಧಿಸಿದ್ದು, ದ್ವಿತೀಯ ಬಹುಮಾನ ಪಡೆದುಕೊಂಡರು. ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಸಿಬ್ಬಂದಿ ವರ್ಗ ಅಭಿನಂದಿಸಿದೆ. 

ವಿಜ್ಞಾನ ಮಾದರಿ ಸ್ಪರ್ಧೆ : ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಪ್ರಶಸ್ತಿ Read More »

ಲಿಟ್ಲ್ ಫ್ಲವರ್ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಇನ್‌ಸ್ಪೈರ್‌ ಅವಾರ್ಡ್‌ ಗೆ ಆಯ್ಕೆ

ಪುತ್ತೂರು: ಪ್ರಾಥಮಿಕ ಹಾಗೂ ಪ್ರೌಢಶಾಲೆ ಮಕ್ಕಳಲ್ಲಿನ ವಿಜ್ಞಾನ ಪ್ರತಿಭೆ ಹೊರ ತರುವ ಉದ್ದೇಶದಿಂದ ಕೇಂದ್ರ ಸರಕಾರ ಆರಂಭಿಸಿರುವ ‘ ಇನ್‌ಸ್ಪೈರ್‌ ಅವಾರ್ಡ್’ ಕಾರ್ಯಕ್ರಮದಡಿ ದರ್ಬೆ ಲಿಟ್ಲ್ ಫ್ಲವರ್ ಶಾಲೆಯ 7 ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ‘ಹೈ ವೋಲ್ಟೇಜ್ ಡಿಟೆಕ್ಟರ್’ ಎನ್ನುವ ಪರಿಕಲ್ಪನೆಯನ್ನು ಮಂಡಿಸಿದ ಭಾರವಿ ಕೆ. ಭಟ್ ಹಾಗೂ ‘ನೂಡಲ್ಸ್ ಮೇಕಿಂಗ್ ಮಷೀನ್’ ಎನ್ನುವ ಪರಿಕಲ್ಪನೆಯನ್ನು ಮಂಡಿಸಿದ ಗಗನ್ ಇನ್‌ಸ್ಪೈರ್‌ ಅವಾರ್ಡ್ ಗೆ ಆಯ್ಕೆಯಾಗಿದ್ದಾರೆ. ಈ ಕುರಿತು ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ

ಲಿಟ್ಲ್ ಫ್ಲವರ್ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಇನ್‌ಸ್ಪೈರ್‌ ಅವಾರ್ಡ್‌ ಗೆ ಆಯ್ಕೆ Read More »

ವಿವೇಕಾನಂದ ಕಾನೂನು ಕಾಲೇಜು ಬಳಿ ಝೀಬ್ರಾ ಪಟ್ಟಿ ಅಳವಡಿಸುವಂತೆ ನಗರಸಭೆಗೆ ಮನವಿ

ಪುತ್ತೂರು: ವಿವೇಕಾನಂದ ಕಾನೂನು ಕಾಲೇಜಿನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಘಟಕದ ವತಿಯಿಂದ ಝೀಬ್ರಾ ಪಟ್ಟಿ ಅಳವಡಿಸುವಂತೆ ನಗರಸಭೆ ಪೌರಾಯುಕ್ತ ಮಧು ಎಸ್‍. ಮನೋಹರ್ ಅವರಿಗೆ ಮನವಿ ನೀಡಲಾಯಿತು. ಕಾಲೇಜಿನ ಎದುರುಗಡೆಯ ರಸ್ತೆಯಲ್ಲಿ ದಾಟಲು ಝೀಬ್ರಾ ಪಟ್ಟಿ ಇಲ್ಲದೆ ಆಗುತ್ತಿರುವ ಸಮಸ್ಯೆ ಹಾಗೂ ರಸ್ತೆಯಲ್ಲಿ ಝೀಬ್ರಾ ಪಟ್ಟಿ ಹಾಕುವಂತೆ, ರಸ್ತೆಯ ಬದಿಯಲ್ಲಿ ವಾಹನಗಳಿಗೆ ನಿಧಾನವಾಗಿ ಚಲಿಸಲು ಫಲಕ ಹಾಕುವ ಬಗ್ಗೆ ಪುತ್ತೂರು ನಗರಸಭೆಯ ಪೌರಾಯುಕ್ತರಿಗೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಕಾನೂನು

ವಿವೇಕಾನಂದ ಕಾನೂನು ಕಾಲೇಜು ಬಳಿ ಝೀಬ್ರಾ ಪಟ್ಟಿ ಅಳವಡಿಸುವಂತೆ ನಗರಸಭೆಗೆ ಮನವಿ Read More »

ವಿಶ್ವಗುರುವಾಗುವತ್ತ ಭಾರತದ ಚಿತ್ತ – ಪ್ರೊ ವಿಷ್ಣುಕಾಂತ್ ಚಟ್ಟಪಲ್ಲಿ| ವಿವೇಕಾನಂದದಲ್ಲಿ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ

ಪುತ್ತೂರು: ವಿಕಸಿತ ಭಾರತದ ಮುನ್ನೋಟಗಳು ಜಗತ್ತಿಗೆ ಕಾಣಲಾರಂಭಿಸಿವೆ. ವಿಜ್ಞಾನ, ಸಂಶೋಧನೆ, ಕ್ರೀಡೆ, ಆರ್ಥಿಕತೆ, ಕೃಷಿ, ವ್ಯವಹಾರ ನಿರ್ವಹಣೆ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಸಮರ್ಥವಾಗಿ ಭಾರತವು ವಿಶ್ವಗುರುವಾಗುವುದರತ್ತ ಮುನ್ನಡೆಯುತ್ತಿದೆ ಎಂಬುದು ಹೆಮ್ಮೆಯ ವಿಷಯ. ಈ ಎಲ್ಲಾ ಕ್ಷೇತ್ರಗಳಲ್ಲಿಯೂ ಮಹಿಳೆಯರು ವಿಶೇಷವಾಗಿ ಮುಂಚೂಣಿಯಲ್ಲಿ ನಿಂತು ದುಡಿಯುತ್ತಿದ್ದಾರೆ. ಆದ್ದರಿಂದ ಇದನ್ನು ನಾರೀಶಕ್ತಿ ಯುಗ ಎಂದು ಗದಗ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ವಿಷ್ಣುಕಾಂತ್ ಚಟ್ಟಪಲ್ಲಿ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ

ವಿಶ್ವಗುರುವಾಗುವತ್ತ ಭಾರತದ ಚಿತ್ತ – ಪ್ರೊ ವಿಷ್ಣುಕಾಂತ್ ಚಟ್ಟಪಲ್ಲಿ| ವಿವೇಕಾನಂದದಲ್ಲಿ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ Read More »

ಅಗ್ನಿ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮ

ಪುತ್ತೂರು: ಬೆಂಕಿ ಇಲ್ಲದೆ ಬದುಕಿಲ್ಲ. ಆದರೆ ಬಳಕೆಯಲ್ಲಿ ವ್ಯತ್ಯಯ ಉಂಟಾದರೆ ಅದರಿಂದಾಗುವ ಅನಾಹುತ ಅಪಾರ ಎಂದು ಪುತ್ತೂರು ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ರುಕ್ಮಯ ಗೌಡ ಹೇಳಿದರು. ಅವರು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ಎಂಬಿಎ ವಿಭಾಗದ ವತಿಯಿಂದ ಏರ್ಪಡಿಸಲಾದ ಅಗ್ನಿ ಸುರಕ್ಷತೆಯ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಹುಲ್ಲು ಕಟ್ಟಿಗೆಗಳಿಂದ, ಎಣ್ಣೆಯಿಂದ, ಅನಿಲದಿಂದ, ವಿದ್ಯುತ್ತಿನಿಂದ ಹಾಗೂ ಇನ್ನಿತರ ವಿಧಗಳಿಂದ ಬೆಂಕಿ ಸಂಭವಿಸಬಹುದು. ಎಲ್ಲಾ ಬಗೆಯ ಬೆಂಕಿ ಅನಾಹುತಗಳಿಗೆ ನೀರು ಹಾಯಿಸುವುದೇ ಪರಿಹಾರವಲ್ಲ ಬದಲಿಗೆ ವಿವಿಧ ರೀತಿಯ

ಅಗ್ನಿ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಓಪ್ಟಮ್ ಕಂಪನಿಯ ಕ್ಯಾಂಪಸ್ ನೇಮಕಾತಿ ಕಾರ್ಯಕ್ರಮ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ನೇಮಕಾತಿ ಕೋಶದ ವತಿಯಿಂದ  ಯುನೈಟೆಡ್ ಸ್ಟೇಟ್ಸ್ ಮೂಲದ ಬಹುರಾಷ್ಟ್ರೀಯ ಹೆಲ್ತ್ ಕೇರ್ ಮತ್ತು ಇನ್ಶೂರೆನ್ಸ್ ಕಂಪನಿ ಓಪ್ಟಮ್ ನ ಮೆಡಿಕಲ್ ಕೋಡರ್ ಹುದ್ದೆಗಳಿಗಾಗಿ ಕ್ಯಾಂಪಸ್ ನೇಮಕಾತಿ ಕಾರ್ಯಕ್ರಮ ಆಯೋಜಿಸಲಾಯಿತು. ಲಿಖಿತ ಪರೀಕ್ಷೆ ನಡೆಸುವ ಮೊದಲು ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಉಪ-ಪ್ರಾಂಶುಪಾಲ  ಡಾ| ವಿಜಯ ಕುಮಾರ್ ಎಂ. ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಗೂ ಜೀವನದಲ್ಲಿ ಅವಕಾಶಗಳು ಬಂದೊದಗುತ್ತವೆ. ಅವಕಾಶಗಳ ಸದ್ಬಳಕೆಯಿಂದ ಯಶಸ್ಸನ್ನು ಸಾಧಿಸಬಹುದು, ಅಭ್ಯರ್ಥಿಳು ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಿರುವಾಗ ಆತ್ಮವಿಶ್ವಾಸ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಓಪ್ಟಮ್ ಕಂಪನಿಯ ಕ್ಯಾಂಪಸ್ ನೇಮಕಾತಿ ಕಾರ್ಯಕ್ರಮ Read More »

ಅಜ್ಞಾನದ ಹಾದಿಯಿಂದ ಬೆಳಕಿನ ವಿಜಯವನ್ನು ಸಾಧಿಸುವ ಹಬ್ಬ ಮಹಾಶಿವರಾತ್ರಿ | ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ವೀಣಾ ಸರಸ್ವತಿ

ಪುತ್ತೂರು: ಶಿವರಾತ್ರಿ ಎಂದರೆ ಇಡೀ ರಾತ್ರಿ ಶಿವನಾಮ ಸ್ಮರಣೆಯೊಂದಿಗೆ ಶಿವನ ಬಗ್ಗೆ ಚಿಂತಿಸುತ್ತಾ ಕತ್ತಲೊಳಗೆ ಬೆಳಕನ್ನು ಕಾಣುವ ದಿನ. ಅಜ್ಞಾನದ ಹಾದಿಯಿಂದ ಬೆಳಕಿನ ವಿಜಯವನ್ನು ಸಾಧಿಸುವ ಹಬ್ಬ ಇದಾಗಿದೆ. ಈ ಹಬ್ಬದ ಆಚರಣೆಯಿಂದ ಮನುಷ್ಯನ ಮಾನಸಿಕ ಪರಿವರ್ತನೆ ಜೊತೆಗೆ ಉತ್ತಮ ಸಂಸ್ಕಾರವನ್ನು ಮೈಗೂಡಿಸಿಕೊಳ್ಳಬೇಕು ಎಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಶಿಕ್ಷಕಿ ವೀಣಾ ಸರಸ್ವತಿ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ಶಿವರಾತ್ರಿ ಆಚರಣೆಯ ಮಹತ್ವದ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಭಗವಾನ್ ಶಿವ ಶಾಶ್ವತ

ಅಜ್ಞಾನದ ಹಾದಿಯಿಂದ ಬೆಳಕಿನ ವಿಜಯವನ್ನು ಸಾಧಿಸುವ ಹಬ್ಬ ಮಹಾಶಿವರಾತ್ರಿ | ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ವೀಣಾ ಸರಸ್ವತಿ Read More »

ಸಂತ ಫಿಲೋಮಿನಾ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದಿಂದ ಕಾರ್ಯಗಾರ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಬ್ಯುಸಿನೆಸ್‌ ಅಡ್ಮಿನಿಸ್ಟ್ರೇಶನ್‌ವಿಭಾಗ, ಮ್ಯಾನೇಜ್ಮೆಂಟ್‌ ಅನೋಸಿಯೇಶನ್‌ ಹಾಗೂ ಕಾಲೇಜಿನ ಇನ್ಸ್ಟಿಟ್ಯೂಶನ್ಸ್‌ ಇನ್ನೊವೇಶನ್‌ ಕೌನ್ಸಿಲ್‌ಗಳ ಸಂಯುಕ್ತ ಆಶ್ರಯದಲ್ಲಿ “ಇನ್ನೋವೇಟ್ ಫಾರ್ ಇಂಪ್ಯಾಕ್ಟ್: ಎ ಜರ್ನಿ ಇನ್ ಸೋಶಿಯಲ್ ಎಂಟರ್‌ಪ್ರೆನ್ಯೂರ್‌ಶಿಪ್” ಕುರಿತು ಒಂದು ದಿನದ ಕಾರ್ಯಾಗಾರ ಆಯೋಜಿಸಲಾಯಿತು. ಕಾಲೇಜಿನ ಹಿರಿಯ ವಿದ್ಯಾರ್ಥಿ ಜೆ.ಸಿ.ಕೃಷ್ಣ ಮೋಹನ್ ಪಿ.ಎಸ್, ದೀಪ ಬೆಳಗಿಸಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಭಾರತದಲ್ಲಿ ಸ್ಟಾರ್ಟಪ್ ಅವಕಾಶಗಳು ಮತ್ತು ಸಾಮಾಜಿಕ ಉದ್ಯಮಶೀಲತೆಗಾಗಿ ಲಭ್ಯವಿರುವ ವಿವಿಧ ಯೋಜನೆಗಳ ಬಗ್ಗೆ ಚರ್ಚಿಸಿದರು. ವಿದ್ಯಾರ್ಥಿಗಳಿಗಾಗಿ ವಿನೂತನ ಕೌಶಲ್ಯ ವರ್ಧಕ ಕಾರ್ಯಾಗಾರವನ್ನು

ಸಂತ ಫಿಲೋಮಿನಾ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದಿಂದ ಕಾರ್ಯಗಾರ Read More »

error: Content is protected !!
Scroll to Top