ಕ್ಯಾಂಪಸ್‌

ವಿವೇಕಾನಂದ ಶಿಶು ಮಂದಿರದಲ್ಲಿ ಮಕ್ಕಳ ಸಾಮೂಹಿಕ ಹುಟ್ಟುಹಬ್ಬ, ಮಾತೃವಂದನ ಕಾರ್ಯಕ್ರಮ

ಪುತ್ತೂರು: ವಿವೇಕಾನಂದ ಶಿಶು ಮಂದಿರದಲ್ಲಿ ಮಕ್ಕಳ ಸಾಮೂಹಿಕ ಹುಟ್ಟುಹಬ್ಬದ ಆಚರಣೆ, ಮಾತೃವಂದನ, ಸಾಮೂಹಿಕ ಭೋಜನ ಕಾರ್ಯಕ್ರಮ ಜರುಗಿತು. ಮಕ್ಕಳು ತಮ್ಮ ತಾಯಿಯ ಪಾದಪೂಜೆ ನೆರವೇರಿಸಿದ ನಂತರ ತಾಯಂದಿರು ತಮ್ಮ ಮಕ್ಕಳಿಗೆ ಆರತಿ ಬೆಳಗಿ ಸಿಹಿ ತಿನ್ನಿಸಿ ಆಶೀರ್ವಾದಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀನಿವಾಸ ಪೈ ವಹಿಸಿದ್ದರು. ಉಪನ್ಯಾಸಕ, ದೈವನರ್ತಕ ಡಾ. ರವೀಶ ಪಡುಮಲೆ ಅಭ್ಯಾಗತರಾಗಿ ಪಾಲ್ಗೊಂಡು, ವಿವೇಕಾನಂದ ಶಿಶು ಮಂದಿರದ ಈ ಕಾರ್ಯಕ್ರಮ ಅತ್ಯಂತ ಶ್ಲಾಘನೀಯ. ಎಳೆಯ ಮಕ್ಕಳಿಗೆ ಬಾಲ್ಯದಲ್ಲಿ ಕೊಡುವ ಈ ಸಂಸ್ಕಾರವು […]

ವಿವೇಕಾನಂದ ಶಿಶು ಮಂದಿರದಲ್ಲಿ ಮಕ್ಕಳ ಸಾಮೂಹಿಕ ಹುಟ್ಟುಹಬ್ಬ, ಮಾತೃವಂದನ ಕಾರ್ಯಕ್ರಮ Read More »

ಸಂತ ಫಿಲೋಮಿನಾ ಕಾಲೇಜಿನ ಉಪಪ್ರಾಂಶುಪಾಲ ಪ್ರೊ| ಗಣೇಶ್‌ಭಟ್‌ರವರಿಗೆ ಬೀಳ್ಕೊಡುಗೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನಲ್ಲಿ ಉಪನ್ಯಾಸಕರಾಗಿ 36 ವರ್ಷಗಳ ಸಾರ್ಥಕ ಸೇವೆ ಸಲ್ಲಿಸಿ ಸೇವಾನಿವೃತ್ತಿ ಹೊಂದಿದ ಉಪಪ್ರಾಂಶುಪಾಲ ಪ್ರೊ| ಗಣೇಶ್‌ಭಟ್‌ರವರಿಗೆ ಕಾಲೇಜಿನ ಸ್ಟಾಫ್‌ಅಸೋಸಿಯೇಶನ್‌ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಸಂಚಾಲಕ ಅತಿ ವಂ| ಲಾರೆನ್ಸ್‌ಮಸ್ಕರೇನಸ್‌ಮಾತನಾಡಿ, ನಿವೃತ್ತಿಯು ಹೊಸ ಜೀವನದ ಬಾಗಿಲನ್ನು ತೆರೆದಿಡುತ್ತದೆ. ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಂತೃಪ್ತ ಜೀವನ ನಡೆಸಲು ಸೇವಾ ನಿವೃತ್ತಿಯು ಅನುವು ಮಾಡಿಕೊಡುತ್ತದೆ ಎಂದು ಹೇಳಿದರು. ಮುಖ್ಯ ಅತಿಥಿಯಾಗಿ ಕಾಲೇಜಿನ ಪ್ರಿನ್ಸಿಪಾಲ್ ವಂ| ಡಾ| ಆಂಟೊನಿ ಪ್ರಕಾಶ್‌ಮೊಂತೆರೋರ ಮಾತನಾಡಿ,

ಸಂತ ಫಿಲೋಮಿನಾ ಕಾಲೇಜಿನ ಉಪಪ್ರಾಂಶುಪಾಲ ಪ್ರೊ| ಗಣೇಶ್‌ಭಟ್‌ರವರಿಗೆ ಬೀಳ್ಕೊಡುಗೆ Read More »

ಆರ್.ಡಿ.ಸಿ ಯಲ್ಲಿ ಭಾಗವಹಿಸಿದ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿಗೆ ಅಭಿನಂದನಾ ಕಾರ್ಯಕ್ರಮ

ಪುತ್ತೂರು: ರಾಜ್ಯಮಟ್ಟದಲ್ಲಿ ಕಾಲೇಜಿನ ಹೆಸರನ್ನು ಗುರುತಿಸುವಂತೆ ಮಾಡಿದ ತೃತೀಯ ಬಿಸಿಎ ವಿಭಾಗದ ವಿದ್ಯಾರ್ಥಿನಿ ತೇಜಸ್ವಿನಿ ಒಬ್ಬಳು. ಪ್ರತಿಯೊಬ್ಬ ವಿದ್ಯಾರ್ಥಿಗಳು ಸಿಗುವ ಅವಕಾಶಗಳನ್ನು ಬಳಸಿಕೊಳ್ಳಬೇಕು. ಅದಕ್ಕೆ ನಮ್ಮ ಅಧ್ಯಾಪಕರು ಉತ್ತಮ ಸಹಕಾರ ನೀಡುತ್ತಾರೆ. ಜೊತೆಗೆ ಹೆತ್ತವರ ಸಹಕಾರವು ಇರುತ್ತದೆ. ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಇನ್ನೂ ಸಾಧನೆ ಮಾಡಬೇಕು. ಆ ಮೂಲಕ ನಮ್ಮ ಕಾಲೇಜಿಗೆ ಕೀರ್ತಿಯನ್ನು ತಂದುಕೊಡಬೇಕು ಎಂದು ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿ. ಗಣಪತಿ ಭಟ್ ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)

ಆರ್.ಡಿ.ಸಿ ಯಲ್ಲಿ ಭಾಗವಹಿಸಿದ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿಗೆ ಅಭಿನಂದನಾ ಕಾರ್ಯಕ್ರಮ Read More »

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಕೃಷಿ ಕುರಿತು ವಿಶೇಷ ಉಪನ್ಯಾಸ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಐಕ್ಯೂಏಸಿ ಮತ್ತು ಇಕೋ ಕ್ಲಬ್ ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕೃಷಿಕ, ಕಡಮ್ಮಾಜೆ ಫಾರ್ಮ್ಸ್ ಮಾಲಕ ದೇವಿಪ್ರಸಾದ್ ಕಡಮ್ಮಾಜೆ ಮಾಹಿತಿ ನೀಡಿ, ಕೃಷಿಗೆ ಗಡಿ ಎಂಬುದಿಲ್ಲ. ಆದರೆ ಅದಕ್ಕೆ ಬೇಕಾದುದು ಆಸಕ್ತಿ. ಹಿಂದಿನ ಕೃಷಿ ಪದ್ಧತಿ ಮತ್ತು ಈಗಿನ ಕೃಷಿ ಪದ್ಧತಿಯನ್ನು ತುಲನಾತ್ಮಕವಾಗಿ ತಿಳಿಸಿದರು. ಈಗಿನ ಕೃಷಿ ಚಟುವಟಿಕೆಗಳೆಲ್ಲವೂ ತಂತ್ರಜ್ಞಾನದ ಮೂಲಕವೇ ನಡೆಯುತ್ತಿದೆ, ಎಲ್ಲವೂ ನೂತನ ಕ್ರಮವನ್ನು ಅನುಸರಿಸುತ್ತಾ ಇರುವಾಗ ನಾವು ಕೂಡಾ ಇದರೊಂದಿಗೆ ಈ ತಂತ್ರಜ್ಞಾನಕ್ಕೆ

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಕೃಷಿ ಕುರಿತು ವಿಶೇಷ ಉಪನ್ಯಾಸ Read More »

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಆರ್ಟ್ ಆಫ್ ಲಿವಿಂಗ್ ನಡುವೆ ಒಪ್ಪಂದ

ಪುತ್ತೂರು : ನಗರದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ನಡುವೆ ಯೋಗ ಶಿಕ್ಷಣದ ಕುರಿತು ಒಪ್ಪಂದ ಮಾಡಿಕೊಳ್ಳಲಾಗಿದೆ. ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಆರ್ಟ್ ಆಫ್ ಲಿವಿಂಗ್ ಮುಖ್ಯಸ್ಥ ರವಿಶಂಕರ ಗುರೂಜಿ ಹಾಗೂ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಒಪ್ಪಂದ ಪತ್ರಕ್ಕೆ ಸಹಿ ಹಾಕಿದರು. ಕಳೆದ ಹದಿನಾಲ್ಕು ವರ್ಷಗಳಿಂದ ಅಂಬಿಕಾ ಶಿಕ್ಷಣ ಸಂಸ್ಥೆಗಳಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಮೂಲಕ ಯೋಗ ಶಿಕ್ಷಣ ಒದಗಿಸಲಾಗುತ್ತಿದೆ. ಪ್ರತಿ ವರ್ಷ

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಆರ್ಟ್ ಆಫ್ ಲಿವಿಂಗ್ ನಡುವೆ ಒಪ್ಪಂದ Read More »

ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಂತನಾ ದಿನಾಚರಣೆ

ಪುತ್ತೂರು: ದರ್ಬೆ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಕೌಟ್, ಗೈಡ್ ಚಳವಳಿಯ ಸಂಸ್ಥಾಪಕ ಲಾರ್ಡ್ ಬ್ಯಾಡನ್ ಪೊವೆಲ್ ಅವರ ಜನ್ಮ ದಿನಾಚರಣೆ “ಚಿಂತನಾ ದಿನ”ವನ್ನು ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ. ಎಸ್. ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಧ್ವಜ ವಂದನೆಯೊಂದಿಗೆ ಆಚರಿಸಲಾಯಿತು. ಬಳಿಕ ಶಾಲಾ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಲಾರ್ಡ್ ಬ್ಯಾಡನ್ ಪೊವೆಲ್ ರವರ ಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಸ್ಕೌಟ್ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್ ಲಾರ್ಡ್ ಬ್ಯಾಡನ್ ಪೊವೆಲ್

ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಂತನಾ ದಿನಾಚರಣೆ Read More »

ಶಾಲೆ ಹೊರತು ಬೇರೆ ಯಾವುದೇ ಕಟ್ಟಡ ನಿರ್ಮಿಸಬಾರದು | 159 ವರ್ಷಗಳ ಇತಿಹಾಸ ಹೊಂದಿರುವ ನೆಲ್ಲಿಕಟ್ಟೆ ಶಾಲಾ ಎಸ್‍.ಡಿ.ಎಂ.ಸಿ, ಪೋಷಕರಿಂದ ಆಗ್ರಹ

ಪುತ್ತೂರು: ಸುಮಾರು 159 ವರ್ಷಗಳ ಇತಿಹಾಸವಿರುವ ನೆಲ್ಲಿಕಟ್ಟೆ ಸರಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಶಾಲಾ ಕಟ್ಟಡವಲ್ಲದೆ ಬೇರೆ ಯಾವುದೇ ಕಟ್ಟಡ ನಿರ್ಮಿಸಬಾರದು ಎಂದು ಶಾಲಾ ಎಸ್‍. ಡಿ.ಎಂ.ಸಿ, ಮಕ್ಕಳ ಪೋಷಕರು ಹಾಗೂ ಸ್ಥಳೀಯರು ಬುಧವಾರ ಸಭೆ ಸೇರಿ ಆಗ್ರಹಿಸಿದರು. ಈ ಶಾಲಾ ಆವರಣದಲ್ಲಿ ಬೇರೆ ಸರಕಾರಿ ಕಟ್ಟಡ ನಿರ್ಮಾಣಕ್ಕೆ ಹುನ್ನಾರ ನಡೆಯುತ್ತಿದ್ದು, ಈ ನೆಪವಿಟ್ಟುಕೊಂಡು ರಾತ್ರಿ ಶಾಲಾ ಆವರಣದಲ್ಲಿ ತಡರಾತ್ರಿ ವರೆಗೂ ಬೇರೆ ಬೇರೆ ಚಟುವಟಿಕೆಗಳು ನಡೆಸಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕುವುದರ ಜತೆಗೆ ಶಾಲಾ ಕಟ್ಟಡ ಹೊರತುಪಡಿಸಿ

ಶಾಲೆ ಹೊರತು ಬೇರೆ ಯಾವುದೇ ಕಟ್ಟಡ ನಿರ್ಮಿಸಬಾರದು | 159 ವರ್ಷಗಳ ಇತಿಹಾಸ ಹೊಂದಿರುವ ನೆಲ್ಲಿಕಟ್ಟೆ ಶಾಲಾ ಎಸ್‍.ಡಿ.ಎಂ.ಸಿ, ಪೋಷಕರಿಂದ ಆಗ್ರಹ Read More »

ವಿಕಿಪೀಡಿಯ ಜ್ಞಾನವನ್ನು ತಿಳಿದುಕೊಳ್ಳುವ ಜೊತೆ ಹಂಚುವ ಕೆಲಸ ಮಾಡುತ್ತಿದೆ : ದುರ್ಗಾ ಪ್ರಸನ್ನ

ಪುತ್ತೂರು:  ಮಾಹಿತಿ ಎಲ್ಲಿಂದ, ಯಾವ ಮೂಲದಿಂದ ಹಂಚುತ್ತೇವೆ ಎನ್ನುವುದನ್ನು ತಿಳಿಯುವುದು ಮುಖ್ಯ. ಅಕ್ಷರ ದೋಷಗಳ ತಿದ್ದುಪಡಿ ಮಾಡುವುದು, ಸರಳಭಾಷೆಯಲ್ಲಿ ವಿಷಯವನ್ನು ತಲುಪಿಸುವ ಕೆಲಸ ಎಂದು ಆಧುನಿಕ ತಂತ್ರಜ್ಞಾನದ ಮೂಲಕ ಪಡೆದುಕೊಳ್ಳಲು ಸಹಾಯಕವಾಗಿದೆ ಎಂದು ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಸಹಪ್ರಾಧ್ಯಪಕಿ  ದುರ್ಗಾ ಪ್ರಸನ್ನ  ಹೇಳಿದರು. ಅವರು ವಿವೇಕಾನಂದ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಮತ್ತು ಐ ಕ್ಯೂ ಎ ಸಿ ಇದರ ಆಶ್ರಯದಲ್ಲಿ ನಡೆದ ವಿಕಿಪೀಡಿಯ ಕಾರ್ಯಗಾರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ವಿಕಿಪೀಡಿಯ ಜ್ಞಾನ

ವಿಕಿಪೀಡಿಯ ಜ್ಞಾನವನ್ನು ತಿಳಿದುಕೊಳ್ಳುವ ಜೊತೆ ಹಂಚುವ ಕೆಲಸ ಮಾಡುತ್ತಿದೆ : ದುರ್ಗಾ ಪ್ರಸನ್ನ Read More »

ಸಂಪ್ಯ ಅಕ್ಷಯ ಕಾಲೇಜಿನಿಂದ ಸಂವಿಧಾನ ಜಾಗೃತಿ ಜಾಥಾ-2024

ಪುತ್ತೂರು: ಸಂಪ್ಯ ಅಕ್ಷಯ ಕಾಲೇಜು ವತಿಯಿಂದ ಸಂವಿಧಾನ ಜಾಗೃತಿ ಜಾಥಾ -2024 ಆರ್ಯಾಪು ಗ್ರಾಮ ಪಂಚಾಯಿತಿಯಲ್ಲಿ ನಡೆಯಿತು. ಅಕ್ಷಯ ಕಾಲೇಜಿನ ಸುಮಾರು 50ಕ್ಕೂ ಹೆಚ್ಚು ಸ್ವಯಂಸೇವಕರು ಭಾಗವಹಿಸಿದ್ದು, ಜಾಥಾವನ್ನು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರೊಂದಿಗೆ ಪ್ರಾರಂಭಿಸಿ ಸಂವಿಧಾನದ ಕುರಿತು ಮಾಹಿತಿ ನೀಡಲಾಯಿತು.ಬಳಿಕ ಸಂವಿಧಾನ ಮಾಹಿತಿ ಜಾಥಾ ಗ್ರಾಮ ಪಂಚಾಯಿತಿಯಿಂದ ಹೊರಟು ಗ್ರಾಮಾಂತರ ಆರಕ್ಷಕ ಠಾಣೆವರೆಗೆ ನಡೆಸಲಾಯಿತು. ಕಾಲೇಜಿನ ಅಧ್ಯಕ್ಷ ಜಯಂತ್ ನಡುಬೈಲು, ಆಡಳಿತಾಧಿಕಾರಿ ಅರ್ಪಿತ್ ಟಿ.ಎ, ರಾಷ್ಟ್ರೀಯ ಸೇವಾ ಯೋಜನೆ ಸಹಕಾರ್ಯಕ್ರಮಾಧಿಕಾರಿ ಮೇಘಶ್ರೀ ಹಾಗೂ ಕಾಲೇಜಿನ

ಸಂಪ್ಯ ಅಕ್ಷಯ ಕಾಲೇಜಿನಿಂದ ಸಂವಿಧಾನ ಜಾಗೃತಿ ಜಾಥಾ-2024 Read More »

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ರಥಸಪ್ತಮಿ ಆಚರಣೆ

ಪುತ್ತೂರು:  ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ರಥಸಪ್ತಮಿ ಆಚರಣೆಯನ್ನು ಶುಕ್ರವಾರ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅಶ್ವಿನಿ ಕೃಷ್ಣ ಮುಳಿಯ ಮಾತನಾಡಿ, ಪ್ರತೀ ವರ್ಷ ರಥ ಬದಲಿಸಿ ತನ್ನ ಕಾರ್ಯವನ್ನು ಚುರುಕುಗೊಳಿಸುವ ಸೂರ್ಯ ತನ್ನ ಮೂಲಕ ಭುವಿಯ ನಿವಾಸಿಗಳಿಗೆ ಚೈತನ್ಯ ನೀಡುತ್ತಾನೆ. ಈ ಹಿನ್ನೆಲೆಯಲ್ಲಿ ಆತನನ್ನು ಗೌರವಿಸುವ ಸಲುವಾಗಿ ಮೇಘಮಾಸ, ಶುಕ್ಲ ಪಕ್ಷ, ಸಪ್ತಮಿಯಾದ ಇಂದು ರಥಸಪ್ತಮಿ ಆಚರಿಸಲಾಗುತ್ತದೆ. ಸೂರ್ಯ ಆರೋಗ್ಯದಾಯಿ. ವೈಜ್ಞಾನಿಕವಾಗಿ ಇದು ಸತ್ಯ. ಈತನ ಕಿರಣಗಳಲ್ಲಿ ವಿಟಮಿನ್ ” ಡಿ ” ಹೇರಳವಾಗಿದೆ ಹಾಗೂ

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ರಥಸಪ್ತಮಿ ಆಚರಣೆ Read More »

error: Content is protected !!
Scroll to Top