ಕ್ಯಾಂಪಸ್‌

ವಿವೇಕಾನಂದ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ

ಪುತ್ತೂರು: ವಿದ್ಯಾಸಂಸ್ಥೆಯ ಕೀರ್ತಿಯನ್ನು ಎಲ್ಲೆಡೆ ಪಸರಿಸುವವರು ಹಿರಿಯ ವಿದ್ಯಾರ್ಥಿಗಳಾಗಿದ್ದು, ಅವರೇ ಕಾಲೇಜಿನ ರಾಯಭಾರಿಗಳಾಗಿದ್ದಾರೆ. ಹಿರಿಯ ವಿದ್ಯಾರ್ಥಿಗಳು ಕಾಲೇಜಿಗೆ ಭೇಟಿ ನೀಡಿ ತಮ್ಮಿಂದಾದ ಸಹಾಯವನ್ನು ನೀಡುತ್ತಾ ಬಂದಿದ್ದಾರೆ. ಸಂಸ್ಥೆಯ ಬೆಳವಣಿಗೆ ದೃಷ್ಟಿಯಿಂದ ಹಿರಿಯ ವಿದ್ಯಾರ್ಥಿಗಳ ಸಂಘ ಬಹಳ ಅಗತ್ಯ ಎಂದು ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿ. ಗಣಪತಿ ಭಟ್ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದ 2000-03 ರ ಸಾಲಿನ ಕಲಾ ಪದವಿ ವಿದ್ಯಾರ್ಥಿಗಳು ಆಯೋಜಿಸಿದ ಸ್ನೇಹ ಸಮ್ಮಿಲನ ಕಾರ್ಯಕ್ರಮದ ಅಧ್ಯಕ್ಷತೆ […]

ವಿವೇಕಾನಂದ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ Read More »

ವಿವೇಕಾನಂದ ಕಾಲೇಜಿನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ

ಪುತ್ತೂರು: ಮತದಾನ ಮಾಡುವುದು ಎಲ್ಲರ ಕರ್ತವ್ಯ. ಯಾವುದೇ ಆಸೆ, ಆಮಿಷಗಳಿಗೆ ಬಲಿಯಾಗದೆ ಸ್ವ ಇಚ್ಛೆಯಿಂದ ಮತದಾನ ಮಾಡುವುದು ಮುಖ್ಯ. ವಿದ್ಯಾರ್ಥಿಗಳಾದವರು ಸಂವಿಧಾನದ ಮೌಲ್ಯವನ್ನು ಅರಿತುಕೊಂಡು ಮುಂದೆ ಸಾಗಬೇಕು ಎಂದು ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ) ದಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾಲೇಜಿನ ಕಲಾ ವಿಭಾಗದ ಡೀನ್ ಹಾಗೂ ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ದುರ್ಗಾರತ್ನ. ಸಿ

ವಿವೇಕಾನಂದ ಕಾಲೇಜಿನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ Read More »

ದೇಶದ ಭವಿಷ್ಯ ಯುವ ಜನತೆಯ ಕೈಯಲ್ಲಿದೆ: ಸ್ವಾಮಿ ಜಿತ ಕಾಮಾನಂದಜಿ | ವಿಶೇಷ ಉಪನ್ಯಾಸ ಮಾಲಿಕೆ ವಿವೇಕ ಸ್ಮೃತಿ

ಪುತ್ತೂರು: ಶಿಕ್ಷಣ ಒಬ್ಬ ವ್ಯಕ್ತಿಯ ಚಾರಿತ್ರ್ಯ ನಿರ್ಮಾಣ ಮತ್ತು ವ್ಯಕ್ತಿತ್ವ ನಿರ್ಮಾಣಕ್ಕೆ ಕಾರಣವಾಗಬೇಕು. ಕೇವಲ ಪರೀಕ್ಷೆ ಬರೆಯಲು ಮಾತ್ರ ಸೀಮಿತವಾಗದೆ ಉತ್ತಮ ನಾಗರೀಕರನ್ನಾಗಿ ಮಾಡಬೇಕು. ಇಂದಿನ ಭಾರತದ ಭವಿಷ್ಯ ಯುವಜನತೆಯ ಕೈಯಲ್ಲಿದೆ. ಮೊದಲು ನಮ್ಮ ಮೇಲೆ ನಮಗೆ ನಂಬಿಕೆ ಇರಬೇಕು ಜವಬ್ದಾರಿಯನ್ನು ನಿಭಾಯಿಸಲು ಕಲಿಯಬೇಕು ಎಂದು ಮಂಗಳೂರು ಶ್ರೀ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತ ಕಾಮಾನಂದಜಿ ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದಲ್ಲಿ ನಡೆದ ವಿವೇಕಾನಂದ ಸಂಶೋಧನಾ ಅಧ್ಯಯನ ಕೇಂದ್ರ ಮತ್ತು

ದೇಶದ ಭವಿಷ್ಯ ಯುವ ಜನತೆಯ ಕೈಯಲ್ಲಿದೆ: ಸ್ವಾಮಿ ಜಿತ ಕಾಮಾನಂದಜಿ | ವಿಶೇಷ ಉಪನ್ಯಾಸ ಮಾಲಿಕೆ ವಿವೇಕ ಸ್ಮೃತಿ Read More »

ಪುತ್ತೂರಿಗೆ ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಭೇಟಿ

ಪುತ್ತೂರು: ಬಪ್ಪಳಿಗೆ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಹತ್ತನೇ ವರ್ಷಾಚರಣೆ – ದಶಾಂಬಿಕೋತ್ಸವದ ಸಮಾರೋಪ ಸಮಾರಂಭ ಎ.25 ರಂದು ನಡೆಯಲಿದ್ದು, ಕಾರ್ಯಕ್ರಮದಲ್ಲಿ ಶೃಂಗೇರಿ ಜಗದ್ಗುರು ಶ್ರೀ ಭಾರತೀತೀರ್ಥ ಮಹಾಸನ್ನಿಧಾನಂಗಳವರು ಸಹಿತ ತತ್ಕರಕಮಲ ಸಂಜಾತರಾದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಭಾಗವಹಿಸಲಿದ್ದಾರೆ. ಎ.24ರಂದು ಸ್ವಾಮೀಜಿಯವರನ್ನು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆ ವತಿಯಿಂದ ಪುತ್ತೂರಿಗೆ ಬರಮಾಡಿಕೊಳ್ಳಲಾಗುವುದು. ಸಂಜೆ ಬಪ್ಪಳಿಗೆ  ಶ್ರೀ ಶಂಕರ ಸಭಾಭವನದ ಶ್ರೀ ಲಲಿತಾಂಬಿಕಾ ವೇದಿಕೆಯಲ್ಲಿ ಶ್ರೀ ಚಂದ್ರಮೌಳೀಶ್ವರ ಪೂಜೆಯನ್ನು ಸ್ವಾಮೀಜಿಯವರು ನೆರವೇರಿಸಲಿದ್ದು, ಬಳಿಕ ಅಂಬಿಕಾ ಸಮೂಹ

ಪುತ್ತೂರಿಗೆ ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಭೇಟಿ Read More »

ಬಿಇಎಂ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ

ಮಂಗಳೂರು : ಬಿ ಇ ಎಂ ಪದವಿಪೂರ್ವ ಕಾಲೇಜಿನ ದ್ವಿತೀಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಇಂದು  ನಡೆಯಿತು. ಸಮಾರಂಭದಲ್ಲಿ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಭೋಜೇ ಗೌಡ ಪಾಲ್ಗೊಂಡು ಶುಭ ಹಾರೈಸಿದರು. ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿಜಯ್ ಕುಮಾರ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ವೇದಿಕೆಯಲ್ಲಿ ಪ್ರಾಚಾರ್ಯೆ ಅಪರ್ಣಾ, ತರಗತಿ ಸಲಹೆಗಾರರಾದ ರೋಷನ್ ಕುಮಾರ್, ಸಾಧನಾ, ಪ್ರೌಢ ಶಾಲಾ ಮುಖ್ಯ ಶಿಕ್ಷಕ ಯಶವಂತ ಮಾಡ, ವನಿತಾ,

ಬಿಇಎಂ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ Read More »

ಎಂದೆಂದಿಗೂ ಸಾಂಪ್ರದಾಯಿಕ ನೆಲಮೂಲದ ಸಂಸ್ಕೃತಿ ಉಳಿಯಬೇಕು : ತುಕಾರಾಮ ಪೂಜಾರಿ

ಬಿ.ಸಿ ರೋಡ್ : ಅನೇಕ ಚಮತ್ಕಾರಿಕ ಸಂಗತಿಗಳುಳ್ಳ ನಮ್ಮ ನೆಲಮೂಲದ ಸಂಸ್ಕೃತಿ ಅದೆಷ್ಟೋ ವರ್ಷಗಳ ಇತಿಹಾಸವನ್ನು ಹೊಂದಿದೆ. ನಮ್ಮ ಪೂರ್ವಜರ ಪಾಂಡಿತ್ಯ ಹಾಗೂ ಬುದ್ಧಿಮತ್ತೆಯಿಂದ ಸಮಾಜಕ್ಕೆ ಹಲವಾರು ಕೊಡುಗೆಗಳು ಸಂದಿದೆ. ಯಾವ ಕಾಲಕ್ಕೂ ಕ್ಷೇಮಕರವಾದ ನಮ್ಮ ಸಾಂಪ್ರದಾಯಿಕ ಆಚರಣೆಗಳ ಮಹತ್ವವನ್ನರಿತು ಉಳಿಸಿಕೊಂಡು ಮುಂದಿನ ತಲೆಮಾರಿಗೂ ದಾಟಿಸಬೇಕು ಎಂದು ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರದ ನಿರ್ದೇಶಕ  ಹಾಗೂ ಉಪನ್ಯಾಸಕ ತುಕಾರಾಮ ಪೂಜಾರಿ ಹೇಳಿದರು. ಅವರು ಬಿ.ಸಿ ರೋಡ್ ಸಂಜಯಗಿರಿ, ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರ, ತುಳು ವಸ್ತು ಸಂಗ್ರಹಾಲಯ

ಎಂದೆಂದಿಗೂ ಸಾಂಪ್ರದಾಯಿಕ ನೆಲಮೂಲದ ಸಂಸ್ಕೃತಿ ಉಳಿಯಬೇಕು : ತುಕಾರಾಮ ಪೂಜಾರಿ Read More »

ಸಿ ಎಂ ಪದಕಕ್ಕೆ ಯುನಿವರ್ಸಲ್ ಕಾಲೇಜಿನ  ಎನ್.ಸಿ.ಸಿ. ಕೆಡೆಟ್ ಗಳು ಆಯ್ಕೆ

ಕರ್ನಾಟಕ ಬೆಟಾಲಿಯನ್ ಆರ್ಮಿ ವಿಂಗ್ ಯುನಿವರ್ಸಲ್ ಸ್ಕೂಲ್ ಆಫ್ ಅಡ್ಮಿನಿಸ್ಟ್ರೇಷನ್ ನ ಎನ್.ಸಿ.ಸಿ. ಕೆಡೆಟ್ ಗಳಾದ ಜುವೊ ಫಜಲ್ ಎಸ್. ನದಾಫ್ ಹಾಗೂ ಜುವೊ ಸುಜಲ್ ಶಂಖಲಾ  ಮುಖ್ಯಮಂತ್ರಿಗಳ ಶ್ಲಾಘನಾ ಪದಕಕ್ಕೆ ಆಯ್ಕೆಯಾಗಿದ್ದಾರೆ. ಎನ್.ಸಿ.ಸಿ.ಯಲ್ಲಿ ಅಸಾಧಾರಣ ಸೇವೆಗಾಗಿ ಅತ್ಯಂತ ಅರ್ಹ ಕೆಡೆಟ್ ಗಳಿಗೆ  ಮುಖ್ಯಮಂತ್ರಿಗಳ ಶ್ಲಾಘನಾ ಪದಕವನ್ನು ನೀಡಲಾಗುತ್ತದೆ. ಕಾಲೇಜಿನ ಅಧ್ಯಕ್ಷ ಆರ್. ಉಪೇಂದ್ರ ಶೆಟ್ಟಿ, ಆಡಳಿತಾಧಿಕಾರಿ ಸಂತೋಷ್ ಶೆಟ್ಟಿ, ಪ್ರಾಂಶುಪಾಲ ನವೀನ್ ಪ್ರಸಾದ್, ಸಹಾಯಕ ಎನ್.ಸಿ.ಸಿ. ಅಧಿಕಾರಿ ಲೆಫ್ಟಿನೆಂಟ್ ಓಂಕಾರ್ ಇಬ್ಬರೂ ಸಾಧಕರನ್ನು ಅಭಿನಂದಿಸಿದ್ದಾರೆ

ಸಿ ಎಂ ಪದಕಕ್ಕೆ ಯುನಿವರ್ಸಲ್ ಕಾಲೇಜಿನ  ಎನ್.ಸಿ.ಸಿ. ಕೆಡೆಟ್ ಗಳು ಆಯ್ಕೆ Read More »

ವಿವಿಧ ಶಾಲೆಗಳಿಗೆ ಪದವೀಧರ ಶಿಕ್ಷಕರ ನೇಮಕಾತಿ | ಶಶಿರೇಖಾ ಪಿ.ಕೆ. ಸರಳೀಕಟ್ಟೆ ಹಿರಿಯ ಪ್ರಾಥಮಿಕ ಶಾಲೆಗೆ ನೇಮಕ

ಕಾಣಿಯೂರು: ಕರ್ನಾಟಕ ಸರಕಾರದ ಶಾಲಾ ಶಿಕ್ಷಣ ಇಲಾಖೆ 2022-23ನೇ ಸಾಲಿನಲ್ಲಿ ಪ್ರಾಥಮಿಕ ಶಾಲೆಗಳಿಗೆ ಆಯ್ಕೆಯಾದ ಪದವೀಧರ ಪ್ರಾಥಮಿಕ ಶಿಕ್ಷಕರ(6ರಿಂದ 8ನೇ ತರಗತಿ)ನ್ನು ವಿವಿಧ ಶಾಲೆಗಳಿಗೆ ನೇಮಕಾತಿ ಮಾಡಿ ಆದೇಶ ಹೊರಡಿಸಿದೆ. ಅದರಂತೆ ಶಶಿರೇಖಾ ಪಿ ಕೆ ಅವರು ಬೆಳ್ತಂಗಡಿ ತಾಲೂಕಿನ ಸರಳೀಕಟ್ಟೆ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಪದವೀಧರ ಪ್ರಾಥಮಿಕ ಶಿಕ್ಷಕಿಯಾಗಿ ಆಯ್ಕೆಯಾಗಿದ್ದು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಕಡಬ ತಾಲೂಕಿನ ಕಾಣಿಯೂರು ಗ್ರಾಮದ ಪುಣ್ಚತ್ತಾರು ನಿವಾಸಿ ಪುಟ್ಟು ಪಿ ಅವರ ಪುತ್ರಿಯಾಗಿರುವ ಶಶಿರೇಖಾ ಪಿ. ಕೆ. ಅವರು ಕಾಣಿಯೂರು

ವಿವಿಧ ಶಾಲೆಗಳಿಗೆ ಪದವೀಧರ ಶಿಕ್ಷಕರ ನೇಮಕಾತಿ | ಶಶಿರೇಖಾ ಪಿ.ಕೆ. ಸರಳೀಕಟ್ಟೆ ಹಿರಿಯ ಪ್ರಾಥಮಿಕ ಶಾಲೆಗೆ ನೇಮಕ Read More »

ಸಂತ ಫಿಲೋಮಿನಾ ಕಾಲೇಜಿನ ದತ್ತು ಗ್ರಾಮದಲ್ಲಿ ಚಂದ್ರಾನ್ವೇಷಣೆ ಕಾರ್ಯಕ್ರಮ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಹವ್ಯಾಸಿ ಖಗೋಳ ವೀಕ್ಷಕರ ಸಂಘ ಹಾಗೂ   ಕೆದಂಬಾಡಿಯ ಗ್ರಾಮ ಪಂಚಾಯಿತಿ ಜಂಟಿ ಆಶ್ರಯದಲ್ಲಿ ‘ಚಂದ್ರಾನ್ವೇಷಣೆ’ ಖಗೋಳ ವೀಕ್ಷಣೆ ಕಾರ್ಯಕ್ರಮ  ತಿಂಗಳಾಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕಾಲೇಜಿನ ದತ್ತು ಗ್ರಾಮವಾದ ಕೆದಂಬಾಡಿಯ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಆಸಕ್ತ ಸಾರ್ವಜನಿಕರಿಗಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪೂರ್ಣಚಂದ್ರನ ರೂಪವನ್ನು ಅತ್ಯಾಧುನಿಕ ದೂರದರ್ಶಕದ ಮೂಲಕ ವೀಕ್ಷಿಸಲಾಯಿತು. ಕಾಲೇಜಿನ ವಿಶ್ರಾಂತ ಉಪ-ಪ್ರಾಂಶುಪಾಲ ಡಾ।ಎ. ಪಿ. ರಾಧಾಕೃಷ್ಣರವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಖಗೋಳ ವಿದ್ಯಮಾನಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಸಂತ ಫಿಲೋಮಿನಾ ಕಾಲೇಜಿನ ದತ್ತು ಗ್ರಾಮದಲ್ಲಿ ಚಂದ್ರಾನ್ವೇಷಣೆ ಕಾರ್ಯಕ್ರಮ Read More »

ಅಂಗನವಾಡಿ ಉಳಿಸುವ ಕೆಲಸ ಮಾಡಬೇಕು | ನೂತನ ಅಂಗನವಾಡಿ ಕಟ್ಟಡ ಉದ್ಘಾಟಿಸಿ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ತೆಂಕಿಲದಲ್ಲಿ ನೂತನವಾಗಿ ನಿರ್ಮಾಣವಾದ ಅಂಗನವಾಡಿ ಕೇಂದ್ರದ ಉದ್ಘಾಟನಾ ಸಮಾರಂಭ ಇಂದು ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಅಂಗನವಾಡಿ ಕಟ್ಟಡ ಉದ್ಘಾಟಿಸಿ, ಅಂಗನವಾಡಿಯಲ್ಲಿ ತಾಯಿಯ ಶಿಕ್ಷಣ ಮಕ್ಕಳಿಗೆ ದೊರೆಯುತ್ತಿದೆ. ಪೌಷ್ಠಿಕ ಆಹಾರದ ಜೊತೆಗೆ ಮಕ್ಕಳ ಬೆಳವಣಿಗೆಗೆ ಪೂರಕವಾದ ವ್ಯವಸ್ಥೆಗಳು ಅಂಗನವಾಡಿಗಳಲ್ಲಿ ಇದ್ದು ಪೋಷಕರು ಮಕ್ಕಳನ್ನು ಅಂಗನವಾಡಿಗೆ ದಾಖಲಿಸುವ ಮೂಲಕ ಕೇಂದ್ರಗಳನ್ನು ಉಳಿಸುವ ಕೆಲಸವನ್ನು ಮಾಡಬೇಕು ಎಂದರು. ಈ ಭಾಗದಲ್ಲಿ ಅಂಗನವಾಡಿ ಕಟ್ಟಡದ ಕೊರತೆ ಇರುವ ಬಗ್ಗೆ ಸ್ಥಳೀಯ ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದರು. ಸುಮಾರು 13 ಲಕ್ಷ

ಅಂಗನವಾಡಿ ಉಳಿಸುವ ಕೆಲಸ ಮಾಡಬೇಕು | ನೂತನ ಅಂಗನವಾಡಿ ಕಟ್ಟಡ ಉದ್ಘಾಟಿಸಿ ಶಾಸಕ ಅಶೋಕ್ ಕುಮಾರ್ ರೈ Read More »

error: Content is protected !!
Scroll to Top