ಕ್ಯಾಂಪಸ್‌

ಕಬ್ಸ್ ಚತುರ್ಥ ಚರಣ ಪರೀಕ್ಷೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 9 ವಿದ್ಯಾರ್ಥಿಗಳು ತೇರ್ಗಡೆ | ಇಂದು ರಾಜ್ಯಪಾಲರಿಂದ ಪ್ರಶಸ್ತಿ ಪ್ರದಾನ

ಪುತ್ತೂರು :ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಿಂದ ಮಂಗಳೂರಿನ ಪಿಲಿಕುಳದಲ್ಲಿ ನಡೆದ ಕಬ್ಸ್ ಚತುರ್ಥ ಚರಣ ಪರೀಕ್ಷೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ  9 ವಿದ್ಯಾರ್ಥಿಗಳು ತೇರ್ಗಡೆಗೊಂಡು ಬೆಂಗಳೂರಿನ ರಾಜ ಭವನದ ಗಾಜಿನ ಮನೆಯಲ್ಲಿ ಜ.19 ರಂದು ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ರಾಜ್ಯಪಾಲ  ಥಾವರ್ ಚಂದ್ ಗೆಹ್ಲೋಟ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. 5ನೇ ತರಗತಿ ವಿದ್ಯಾರ್ಥಿಗಳಾದ ಅದ್ವೈತ ಶಂಕರ ವೈ, ಆರ್ಯನ್ ಪಿ .ಎಲ್., ಕೃತಿಕ್ ಬಿ.ಆರ್., ಎಂ ಜಶಿತ್ ಆಚಾರ್ಯ, ಪ್ರಣವ್ […]

ಕಬ್ಸ್ ಚತುರ್ಥ ಚರಣ ಪರೀಕ್ಷೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 9 ವಿದ್ಯಾರ್ಥಿಗಳು ತೇರ್ಗಡೆ | ಇಂದು ರಾಜ್ಯಪಾಲರಿಂದ ಪ್ರಶಸ್ತಿ ಪ್ರದಾನ Read More »

ಎಸ್‍.ಎಸ್‍.ಎಲ್‍.ಸಿ., ಪಿಯುಸಿ ಅಂತಿಮ ಪರೀಕ್ಷೆ ವೇಳಾಪಟ್ಟಿ ಪ್ರಕಟ | ಎಸ್‍.ಎಸ್‍.ಎಲ್‍.ಸಿ. ಯಲ್ಲಿ ಮೂರು ಬಾರಿ ಪರೀಕ್ಷೆ ಬರೆಯಲು ಅವಕಾಶ

ಮಂಗಳೂರು: ಎಸ್‍.ಎಸ್‍.ಎಲ್‍.ಸಿ. ಹಾಗೂ ಪಿ.ಯು.ಸಿ. ಪರೀಕ್ಷೆಯ 2024 ರ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, ಎಸ್‍.ಎಸ್‍.ಎಲ್‍.ಸಿ. ಪರೀಕ್ಷೆ ಮಾ.25 ರಿಂದ ಏ.6 ರ ತನಕ ಹಾಗೂ ಪಿಯುಸಿ ಪರೀಕ್ಷೆ ಮಾ.1 ರಿಂದ 22 ರ ತನಕ ನಡೆಯಲಿದೆ. ವೇಳಾಪಟ್ಟಿ ಈ ಕೆಳಗಿನಂತಿದೆ: ಎಸ್‍.ಎಸ್‍.ಎಲ್‍.ಸಿ. ಪರೀಕ್ಷೆ ವೇಳಾಪಟ್ಟಿ ಮಾ.25 ಸೋಮವಾರ ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್ ಎನ್‍.ಸಿ.ಆರ್‍.ಟಿ. ಮಾ.27 ರಂದು ಸಮಾಜ ವಿಜ್ಞಾನ, ಮಾ.30 ರಂದು ವಿಜ್ಞಾನ, ರಾಜ್ಯಶಾಸ್ತ್ರ, ಏ.2 ರಂದು

ಎಸ್‍.ಎಸ್‍.ಎಲ್‍.ಸಿ., ಪಿಯುಸಿ ಅಂತಿಮ ಪರೀಕ್ಷೆ ವೇಳಾಪಟ್ಟಿ ಪ್ರಕಟ | ಎಸ್‍.ಎಸ್‍.ಎಲ್‍.ಸಿ. ಯಲ್ಲಿ ಮೂರು ಬಾರಿ ಪರೀಕ್ಷೆ ಬರೆಯಲು ಅವಕಾಶ Read More »

ಸಂತ ಫಿಲೋಮಿನಾ ಕಾಲೇಜಿಗೆ ಇಬ್ಬರು ಉಪಪ್ರಾಂಶುಪಾಲರ ನೇಮಕ

ಪುತ್ತೂರು: ಸಂತ ಫಿಲೋನಾ ಕಾಲೇಜಿನ ಉಪಪ್ರಾಂಶುಪಾಲರಾಗಿ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಪಿ ಎಸ್‌. ಕೃಷ್ಣ ಕುಮಾರ್‌ ಹಾಗೂ ಕನ್ನಡ ವಿಭಾಗದ ಮುಖ್ಯಸ್ಥ ಡಾ.ವಿಜಯಕುಮಾರ್‌ ಎಂ. ನೇಮಕಗೊಂಡಿದ್ದಾರೆ. ಡಾ.ಪಿ.ಎಸ್‌.ಕೃಷ್ಣ ಕುಮಾರ್‌ ಕಾಲೇಜಿನ ಹಿರಿಯ ವಿದ್ಯಾರ್ಥಿಯಾಗಿದ್ದು, ರಸಾಯನ ಶಾಸ್ತ್ರದಲ್ಲಿ  37 ವರ್ಷಗಳ ಬೋಧನಾನುಭವ ಹೊಂದಿರುತ್ತಾರೆ. ಕೆಮಿಕಲ್‌ ಕೈನೆಟಿಕ್ಸ್‌ನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್‌ ಪದವಿಯನ್ನು ಪಡೆದಿರುತ್ತಾರೆ. ಡಾ.ವಿಜಯಕುಮಾರ್‌ ಎಂ. ಸಂತ ಫಿಲೋಮಿನಾ ಕಾಲೇಜಿನಲ್ಲಿ ತಮ್ಮ ಪದವಿ ಶಿಕ್ಷಣವನ್ನು ಪೂರೈಸಿ ಚೆನೈನ ಮದರಾಸು ವಿಶ್ವವಿದ್ಯಾನಿಲಯದಿಂದ ಎಂ.ಎ., ಎಂ.ಫಿಲ್‌. ಪದವಿಗಳನ್ನು ಪಡೆದಿದ್ದಾರೆ. 30

ಸಂತ ಫಿಲೋಮಿನಾ ಕಾಲೇಜಿಗೆ ಇಬ್ಬರು ಉಪಪ್ರಾಂಶುಪಾಲರ ನೇಮಕ Read More »

ಪ್ರತಿಷ್ಠಿತ ಸಂಸ್ಥೆಗೆ ಪದವೀಧರ ಶಿಕ್ಷಕಿ ಬೇಕಾಗಿದ್ದಾರೆ

ಪುತ್ತೂರು: ಪ್ರತಿಷ್ಠಿತ ಸಂಸ್ಥೆಯೊಂದಕ್ಕೆ ಪದವೀಧರ ಶಿಕ್ಷಕಿ ಬೇಕಾಗಿದ್ದಾರೆ ಯಾವುದೇ ಪದವಿಯೊಂದಿಗೆ ಬಿ.ಎಡ್ ಆದವರಿಗೆ ಆದ್ಯತೆ ನೀಡಲಾಗುವುದು. ಆಸಕ್ತರು ತಕ್ಷಣ ಸಂಪರ್ಕಿಸಿ : 8904877721, 7204977721

ಪ್ರತಿಷ್ಠಿತ ಸಂಸ್ಥೆಗೆ ಪದವೀಧರ ಶಿಕ್ಷಕಿ ಬೇಕಾಗಿದ್ದಾರೆ Read More »

ರಾಮನ ಪ್ರತಿಷ್ಠೆಯಂದು ಹಳ್ಳಿ ಹಳ್ಳಿಗಳಲ್ಲಿ ಸಂಭ್ರಮ ಪಡಬೇಕು | ಕಥನ ಶ್ರೀರಾಮ ಕಥಾವೈಭವ ಕಾರ್ಯಕ್ರಮ ಉದ್ಘಾಟಿಸಿ ಡಾ.ಕಲ್ಲಡ್ಕ ಪ್ರಭಾಕರ ಭಟ್

ಪುತ್ತೂರು: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿದ್ದು, ರಾಮ ಪ್ರತಿಷ್ಠೆಯಂದು ಹಳ್ಳಿ ಹಳ್ಳಿಗಳಲ್ಲಿ ಸಂಭ್ರಮ ಪಡಬೇಕು. ರಾಮ ಪ್ರತಿಷ್ಠೆಯಿಂದ ಮನುಷ್ಯನ ಜತೆ ಜೀವ ಸಂಕುಲಕ್ಕೂ ಒಳಿತಾಗಲಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು. ಅವರು ತೆಂಕಿಲದಲ್ಲಿ ಶ್ರೀರಾಮ ಕಥಾವೈಭವ ಸಾಂಸ್ಕೃತಿಕ ಸಮಿತಿ ಮತ್ತು ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ವೈಭವದ ಅಯೋಧ್ಯೆಯ ಸಮಗ್ರ ಕಥನ ಶ್ರೀರಾಮ ಕಥಾವೈಭವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಬೆಂಗಳೂರು ಎಂ.ಆರ್. ಜಿ. ಗ್ರೂಪ್ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ

ರಾಮನ ಪ್ರತಿಷ್ಠೆಯಂದು ಹಳ್ಳಿ ಹಳ್ಳಿಗಳಲ್ಲಿ ಸಂಭ್ರಮ ಪಡಬೇಕು | ಕಥನ ಶ್ರೀರಾಮ ಕಥಾವೈಭವ ಕಾರ್ಯಕ್ರಮ ಉದ್ಘಾಟಿಸಿ ಡಾ.ಕಲ್ಲಡ್ಕ ಪ್ರಭಾಕರ ಭಟ್ Read More »

ಮನುಷ್ಯನನ್ನು ದೇವರಾಗಿಸುವ ನೀತಿಯೇ ರಾಮನೀತಿ: ರಾಧಾಕೃಷ್ಣ ಕಲ್ಚಾರ್ | ಶ್ರೀರಾಮೋತ್ಸವ – ಶ್ರೀರಾಮ ಭಾವ ಪೂಜೆಯ ಉದ್ಘಾಟನಾ ಸಮಾರಂಭ

ಪುತ್ತೂರು: ನೈತಿಕತೆ ಬೇರೆ ಅಲ್ಲ, ಶ್ರೀರಾಮ ಬೇರೆ ಅಲ್ಲ. ರಾಮನ ವ್ಯಕ್ತಿತ್ವ ಎಲ್ಲರಿಗಿಂತ ವ್ಯತ್ಯಸ್ತವಾಗಿ, ಜನರಿಗೆ ಆದರ್ಶವಾಗಿ ಕಾಣಿಸಿಕೊಳ್ಳುತ್ತದೆ ಎಂದು ಯಕ್ಷಗಾನ ಅರ್ಥಧಾರಿ, ಪ್ರಾಧ್ಯಾಪಕ ರಾಧಾಕೃಷ್ಣ ಕಲ್ಚಾರ್ ಹೇಳಿದರು. ಅವರು ಶನಿವಾರ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದಲ್ಲಿ ನಡೆದ ಶ್ರೀರಾಮೋತ್ಸವ – ಶ್ರೀರಾಮಭಾವ ಪೂಜೆಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ವೈಚಾರಿಕತೆ ಎಂದರೆ ಸರಿಯಾಗಿ ಅಧ್ಯಯನ ಮಾಡಿ,

ಮನುಷ್ಯನನ್ನು ದೇವರಾಗಿಸುವ ನೀತಿಯೇ ರಾಮನೀತಿ: ರಾಧಾಕೃಷ್ಣ ಕಲ್ಚಾರ್ | ಶ್ರೀರಾಮೋತ್ಸವ – ಶ್ರೀರಾಮ ಭಾವ ಪೂಜೆಯ ಉದ್ಘಾಟನಾ ಸಮಾರಂಭ Read More »

ಅಂಬಿಕಾದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

ಪುತ್ತೂರು: ಸನ್ಯಾಸಿಯಾದವನು ಸಮಾಜದಿಂದ ಬೇರೆ ಇರಬಾರದು. ಜನರ ಜೊತೆಗಿರಬೇಕು. ಜನರಿಗಾಗಿ ಸನ್ಯಾಸಿಯ ಜ್ಞಾನ, ಹಸಿದವರಿಗೆ ಅನ್ನ ಕೊಡುವುದೇ ನಿಜವಾದ ಧರ್ಮ ಎಂದು ಖ್ಯಾತವಾಗ್ಮಿ, ಅಂಕಣಕಾರ ಪ್ರಕಾಶ ಮಲ್ಪೆ ಹೇಳಿದರು. ಅವರು ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ನಡೆದ ವಿವೇಕಾನಂದ ಜಯಂತಿ ಆಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ನಟ್ಟೋಜ ಫೌಂಡೇಶನ್ ಟ್ರಸ್ಟಿನ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜರು ಮಾತನಾಡಿ,  ವಿವೇಕಾನಂದರು ಸ್ತ್ರೀಯರಿಗೆ ತುಂಬಾ ಗೌರವ ಕೊಟ್ಟಿದ್ದಾರೆ. ಈ ನಿಟ್ಟಿನಲ್ಲಿ ನಾವೂ ಭಾರತೀಯತೆಯನ್ನು ಸಾಧಿಸಬೇಕಾಗಿದೆ. ಈ ಮೂಲಕ ಭಾರತೀಯತೆಯನ್ನು ಪ್ರಪಂಚದಲ್ಲೆಲ್ಲಾ

ಅಂಬಿಕಾದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ Read More »

ಜ.13ರಂದು ಕನ್ಯಾನ ದೇಲಂತಬೆಟ್ಟು ಶಾಲೆಯ ಅಮೃತ ಮಹೋತ್ಸವ

ವಿಟ್ಲ: ಕನ್ಯಾನ ಗ್ರಾಮದ ದೇಲಂತಬೆಟ್ಟು ಹಿ. ಪ್ರಾ. ಶಾಲೆಯ ಅಮೃತ ಮಹೋತ್ಸವ ‘ಅಮೃತ ಸಿಂಚನ’ ಕಾರ್ಯಕ್ರಮ ಜ.13ರಂದು ನಡೆಯಲಿದೆ.1948 ಜೂ.1ರಂದು ಆರಂಭವಾದ ಈ ಶಾಲೆಗೆ 75 ವರ್ಷ ತುಂಬಿದ್ದು, ಹಳೆ ವಿದ್ಯಾರ್ಥಿಗಳು, ಅಮೃತ ಮಹೋತ್ಸವ ಸಮಿತಿ ಮತ್ತು ಶಾಲಾಭಿವೃದ್ಧಿ ಸಮಿತಿ ಜತೆಗೂಡಿ ಅಮೃತ ಮಹೋತ್ಸವವವನ್ನು ಆಚರಿಸಲಿದೆ ಎಂದು ಸಮಿತಿಯ ಅಧ್ಯಕ್ಷ ಡಿ. ಶ್ರೀನಿವಾಸ್ ತಿಳಿಸಿದ್ದಾರೆ.ಪುತ್ತೂರು ವಿವೇಕಾನಂದ ಮಹಾವಿದ್ಯಾಲಯದ ನಿವೃತ್ತ ಉಪನ್ಯಾಸಕ ಡಿ. ನಾರಾಯಣ ರಾವ್ ಧ್ವಜಾರೋಹಣ ನೆರವೇರಿಸಲಿದ್ದಾರೆ. ಬಳಿಕ ಬಯಲು ನೃತ್ಯ, ಪ್ರತಿಭಾ ಪುರಸ್ಕಾರ, ಪುಟಾಣಿಗಳ ಹಬ್ಬ

ಜ.13ರಂದು ಕನ್ಯಾನ ದೇಲಂತಬೆಟ್ಟು ಶಾಲೆಯ ಅಮೃತ ಮಹೋತ್ಸವ Read More »

ಸಿ.ಎ ಗ್ರೂಪ್-2 ಪರೀಕ್ಷೆ ತೇರ್ಗಡೆಯಾದ ತೇಜಸ್ವಿನಿ

ಪುತ್ತೂರು: ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದ ಅಂತಿಮ ಬಿ.ಕಾಂ ವಿದ್ಯಾರ್ಥಿನಿ ತೇಜಸ್ವಿನಿ ಅವರು ಭಾರತೀಯ ಲೆಕ್ಕ ಪರಿಶೋಧನಾ ಮಂಡಳಿಯು (ಐಸಿಎಐ) ನವೆಂಬರ್ 2023 ರಲ್ಲಿ ನಡೆಸಿದ ಸಿ.ಎ. ಇಂಟರ್ ಗ್ರೂಪ್ ಪರೀಕ್ಷೆಯ ಗ್ರೂಪ್ – 2 ವಿಭಾಗದ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಅಂತಿಮ ಹಂತಕ್ಕೆ ಆಯ್ಕೆಯಾಗಿದ್ದಾರೆ. ಅವರು ಅಂಬಿಕಾ ಸಂಸ್ಥೆಯಲ್ಲಿ ಸಿಎ ಪರೀಕ್ಷೆಗಳಿಗೆ ತರಬೇತಿ ಪಡೆಯುತ್ತಿದ್ದರು. ತೇಜಸ್ವಿನಿ ಅವರು ಬಂಟ್ವಾಳದ ನಾರಾಯಣ ಮೂಲ್ಯ ಹಾಗೂ ಹೇಮಾವತಿ ದಂಪತಿ ಪುತ್ರಿ.

ಸಿ.ಎ ಗ್ರೂಪ್-2 ಪರೀಕ್ಷೆ ತೇರ್ಗಡೆಯಾದ ತೇಜಸ್ವಿನಿ Read More »

ಏಷ್ಯಾ ಬುಕ್ ಆಫ್ ರೆಕಾರ್ಡ್’ಗೆ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಹೆಸರು

ಕಾಣಿಯೂರು: ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿನಿ ರಾಶಿ ಕೆ.ಸಿ.  ಅವರ ಹೆಸರು ಏಷ್ಯಾ ಬುಕ್‌ ಆಫ್‌ ರೆಕಾರ್ಡ್‍ ನಲ್ಲಿ ದಾಖಲಾಗಿದೆ. ರಾಷ್ಟ್ರಗೀತೆಯನ್ನು 1 ಗಂಟೆ 40 ನಿಮಿಷ, 26 ಸೆಕೆಂಡ್ ನಲ್ಲಿ ಗರಿಷ್ಠ 116 ಬಾರಿ ನಿರಂತರವಾಗಿ ಹಾಡುವ ಮೂಲಕ ಈ ಸಾಧನೆ ಮಾಡಿದ್ದಾರೆ. ರಾಶಿ ಈ ಹಿಂದೆ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಮತ್ತು ವರ್ಲ್ಡ್ ರೆಕಾರ್ಡ್ಸ್ ಯುನಿವರ್ಸಿಟಿ ಸಾಧನೆಯನ್ನು ಮಾಡಿರುತ್ತಾರೆ. ಸಂಗೀತ, ನೃತ್ಯ, ಭಾಷಣ, ಏಕಪಾತ್ರಾಭಿನಯ, ನಾಟಕ, ಯೋಗ, ಕಲಿಕೆಯಲ್ಲಿಯೂ ಪ್ರತಿಭಾನ್ವಿತ

ಏಷ್ಯಾ ಬುಕ್ ಆಫ್ ರೆಕಾರ್ಡ್’ಗೆ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಹೆಸರು Read More »

error: Content is protected !!
Scroll to Top