ಕ್ಯಾಂಪಸ್‌

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾದವರಿಗೆ ಅಭಿನಂದನೆ

ಪುತ್ತೂರು: ದರ್ಬೆ ಲಿಟ್ಲ್ ಫ್ಲವರ್ ಶಾಲೆಯ ಬಾಲಕಿಯರ ಕಬಡ್ಡಿ ತಂಡ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದು, ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು. ಬೆಥನಿ ಸಂಸ್ಥೆಯ ಮಂಗಳೂರು ಪ್ರಾಂತ್ಯದ ಮುಖ್ಯಸ್ಥರ ಸಲಹೆಗಾರ್ತಿ, ವಂ. ರೋಶಲ್ ಬಿ.ಎಸ್. ಅಧ್ಯಕ್ಷೆತೆ ವಹಿಸಿ ತಂಡವನ್ನು ಅಭಿನಂದಿಸಿದರು. ಮುಖ್ಯ ಅತಿಥಿಗಳಾಗಿ ಬೆಥನಿ ಸಂಸ್ಥೆಯ ಮಂಗಳೂರು ಪ್ರಾಂತ್ಯದ ಲೆಕ್ಕ ಪರಿಶೋಧಕಿ ವಂ. ಸಿಬಿಲ್ ಬಿ.ಎಸ್., ಶಾಲಾ ಸಂಚಾಲಕಿ ವಂ. ಪ್ರಶಾಂತಿ ಬಿ.ಎಸ್., ಕಾರ್ಯಕ್ರಮ ಪ್ರಾಯೋಜಕರಾದ ಸುನೀತಾ ದಲ್ಮೆದಾ, ಡಾ. ಶ್ರೀಪ್ರಕಾಶ್, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ರಾಮಚಂದ್ರ […]

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾದವರಿಗೆ ಅಭಿನಂದನೆ Read More »

ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ಕನ್ನಡ ಭಾಷಾ ರಸಪ್ರಶ್ನೆ

ಪುತ್ತೂರು: ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಜಂಟಿ ಆಶ್ರಯದಲ್ಲಿ ಭಾರತೀಯ ಭಾಷಾ ಉತ್ಸವದ ಅಂಗವಾಗಿ ಕನ್ನಡ ಭಾಷಾ ರಸಪ್ರಶ್ನೆ ಕಾರ್ಯಕ್ರಮ ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ರಂಗ ಕಲಾವಿದ  ರಂಗಯ್ಯ ಬಳ್ಳಾಲ್ ಕೆದಂಬಾಡಿ ಬೀಡು ಅವರು ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಏರ್ಪಡಿಸಿದ್ದರು. ಒಂದನೇ ತರಗತಿಯಿಂದ 7ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ರಸಪ್ರಶ್ನೆ ಏರ್ಪಡಿಸಿ, ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು.

ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ಕನ್ನಡ ಭಾಷಾ ರಸಪ್ರಶ್ನೆ Read More »

ವಿಜ್ಞಾನದಿಂದ ಬದುಕು ಸುಲಲಿತ | ವಿಜ್ಞಾನ ರಶ್ಮಿ ಉದ್ಘಾಟಿಸಿ ಸವಣೂರು ಸೀತಾರಾಮ ರೈ

ಪುತ್ತೂರು: ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ 2023ನೇ ಸಾಲಿನ ಗ್ರಾಮೀಣ ವಿಜ್ಞಾನ ಮೇಳವಾದ ವಿಜ್ಞಾನ ರಶ್ಮಿ ಜರುಗಿತು. ಸಂಸ್ಥೆಯ ಸಂಚಾಲಕ ಸವಣೂರು ಸೀತಾರಾಮ ರೈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜೀವನವೇ ಒಂದು ವಿಜ್ಞಾನ. ವಿಜ್ಞಾನವನ್ನು ಸಮರ್ಪಕವಾಗಿ ತಿಳಿದುಕೊಂಡಾಗ ಬದುಕು ಸುಲಲಿತವಾಗುತ್ತದೆ. ಆದ್ದರಿಂದ ವಿಜ್ಞಾನವನ್ನು ಹೆಚ್ಚು ಅಧ್ಯಯನ ಮಾಡಬೇಕು ಎಂದು ಹೇಳಿದರು. ಮುಖ್ಯ ಅತಿಥಿಯಾಗಿದ್ದ ಭಕ್ತಕೋಡಿಯ ಎಸ್.ಜಿ.ಎಂ. ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಮೋಹನ್ ಕುಮಾರ್ ಮಾತನಾಡಿ, ವಿದ್ಯಾರಶ್ಮಿಯ ಸಾರ್ವಜನಿಕ ಕಾಳಜಿ ಅಭಿನಂದನೀಯ. ಸಂಸ್ಥೆಯ ಬಹುಮುಖಿ ಕಾರ್ಯಚಟುಟಿಕೆಗಳು ಗ್ರಾಮೀಣ ಭಾಗದ ಮಕ್ಕಳಿಗೆ ಒಂದು

ವಿಜ್ಞಾನದಿಂದ ಬದುಕು ಸುಲಲಿತ | ವಿಜ್ಞಾನ ರಶ್ಮಿ ಉದ್ಘಾಟಿಸಿ ಸವಣೂರು ಸೀತಾರಾಮ ರೈ Read More »

ಡಿ. 9: ವಿದ್ಯಾಸರಸ್ವತಿ ಮಂದಿರದ ಕ್ರೀಡಾಕೂಟ, ಕ್ರೀಡಾ ಕೊಠಡಿ ಉದ್ಘಾಟನೆ

ಪುತ್ತೂರು: ನರಿಮೊಗರು ಸರಸ್ವತಿ ವಿದ್ಯಾ ಮಂದಿರದ ವಾರ್ಷಿಕ ಕ್ರೀಡಾಕೂಟ ಹಾಗೂ ನೂತನ ಕ್ರೀಡಾ ಕೊಠಡಿ ಉದ್ಘಾಟನಾ ಸಮಾರಂಭ ಡಿ. 9ರ ಶನಿವಾರ ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ. ಉದ್ಯಮಿ ಸಂತೋಷ್ ಕುಮಾರ್ ಕೈಕಾರ ಕ್ರೀಡಾಕೂಟ ಉದ್ಘಾಟಿಸಲಿದ್ದು, ಪುಂಡಿಕಾಯಿ ಪುರೋಹಿತರಾದ ಕೃಷ್ಣ ಶಗ್ರಿತ್ತಾಯ ಕ್ರೀಡಾ ಕೊಠಡಿಯನ್ನು ಉದ್ಘಾಟಿಸುವರು. ವಿದ್ಯಾ ಮಂದಿರದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಶಿವನಾಥ ರೈ ಮೇಗಿನಗುತ್ತು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

ಡಿ. 9: ವಿದ್ಯಾಸರಸ್ವತಿ ಮಂದಿರದ ಕ್ರೀಡಾಕೂಟ, ಕ್ರೀಡಾ ಕೊಠಡಿ ಉದ್ಘಾಟನೆ Read More »

ತಾಲೂಕು ಮಟ್ಟದ ಶಾಂತಿವನ ಟ್ರಸ್ಟ್ ಸ್ಪರ್ಧೆ | ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

ಪುತ್ತೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಜ್ಞಾನಶರಧಿ/ ಜ್ಞಾನವಾರಿಧಿ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧರಿತ ವಿವಿಧ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಹಲವು ಪ್ರಶಸ್ತಿ ಗಳಿಸಿದ್ದಾರೆ. ಪ್ರಾಥಮಿಕ ವಿಭಾಗದಲ್ಲಿ ವಿದ್ಯಾರ್ಥಿಗಳಾದ ಸಾನ್ವಿ ಎಸ್. ಭಾಷಣದಲ್ಲಿ ಪ್ರಥಮ, ಆಧ್ಯನ್ ಆರ್. ಚಿತ್ರಕಲೆಯಲ್ಲಿ ಪ್ರಥಮ,

ತಾಲೂಕು ಮಟ್ಟದ ಶಾಂತಿವನ ಟ್ರಸ್ಟ್ ಸ್ಪರ್ಧೆ | ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ Read More »

ತ್ರೋಬಾಲ್ ಪಂದ್ಯಾಟ | ಬೆಥನಿ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಹಾಸನದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ದರ್ಬೆ ಬೆಥನಿ ಆಂಗ್ಲ ಮಾಧ್ಯಮ ಶಾಲೆ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ಆಯಿಷತ್ ಹಿಬಾ, ನಿರೀಕ್ಷಾ ಎಚ್. ಶೆಟ್ಟಿ, ವೈಗಾ ಎಂ. ರಾಜ್ಯಮಟ್ಟವನ್ನು ಪ್ರತಿನಿಧಿಸಲಿದ್ದು, ಹನ ನಫೀಸ, ಫಾತಿಮಾತ್ ಅಲ್ ಶಿಫಾ, ನದ ಆಯಿಷಾ, ಶಾನ್ವಿ  ಪ್ರೀಷ್ಮ ಮೊಂತೆರೊ, ಪೂರ್ವಿಕ, ಸಿಂಚನ, ಅಲಂಕ್ರಿತ ಮುಂತಾದವರು ಸ್ಪರ್ಧಾಕೂಟದಲ್ಲಿ ಭಾಗವಹಿಸಿದ್ದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ

ತ್ರೋಬಾಲ್ ಪಂದ್ಯಾಟ | ಬೆಥನಿ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ Read More »

ಫಿಲೋಮಿನಾ ಪ. ಪೂ ಕಾಲೇಜಿನ ವಿಂಧ್ಯಾಶ್ರೀ ರೈ ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಮಂಡ್ಯ ಕೊಮ್ಮೇರಹಳ್ಳಿ ವಿಶ್ವಮಾನವ ಪ. ಪೂ ಕಾಲೇಜಿನಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಕನ್ನಡ ಚರ್ಚಾ ಸ್ಪರ್ಧೆಯಲ್ಲಿ  ಪುತ್ತೂರು ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿಂಧ್ಯಾಶ್ರೀ ರೈ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅವರು ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನ ಶಿರಸಿ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯವರು ಶ್ರೀ ಮದ್ ಭಗವದ್ಗೀತಾ ಜಯಂತಿ ಪ್ರಯುಕ್ತ ನಡೆಸಿದ ಜಿಲ್ಲಾ ಮಟ್ಟದ

ಫಿಲೋಮಿನಾ ಪ. ಪೂ ಕಾಲೇಜಿನ ವಿಂಧ್ಯಾಶ್ರೀ ರೈ ರಾಜ್ಯಮಟ್ಟಕ್ಕೆ ಆಯ್ಕೆ Read More »

ಡಾ.ಬಿ.ಆರ್.ಅಂಬೇಡ್ಕರ್ ಪುಣ್ಯತಿಥಿ : ಮಹಾಪರಿನಿರ್ವಾಣ ದಿನ ಆಚರಣೆ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಡಾ.ಬಿ. ಆರ್ ಅಂಬೇಡ್ಕರ್ ರವರ ಪುಣ್ಯತಿಥಿಯ ಪ್ರಯುಕ್ತ ಮಹಾಪರಿನಿರ್ವಾಣ ದಿನವನ್ನು ಬುಧವಾರ ಆಚರಿಸಲಾಯಿತು. ಸಂಸ್ಥೆಯ ಹಳೆಯ ವಿದ್ಯಾರ್ಥಿ, ವಕೀಲ ತೇಜಸ್ ಕೊಂಬೆಟ್ಟು ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು, ಡಾ.ಬಿ. ಆರ್ ಅಂಬೇಡ್ಕರ್ ರವರ ಜೀವನ ಶೈಲಿ, ಅವರ ರಾಷ್ಟ್ರೀಯ ಚಿಂತನೆಗಳು ಎಲ್ಲರಿಗೂ ಸ್ಪೂರ್ತಿ. ಅವರು ಉತ್ತಮ ನ್ಯಾಯವಾದಿಯೂ ಆಗಿದ್ದು ಸಮಾಜದಲ್ಲಿದ್ದ ಲಿಂಗ ತಾರತಮ್ಯದ ಕುರಿತಾಗಿ ಧ್ವನಿ ಎತ್ತಿದವರಲ್ಲಿ ಒಬ್ಬರು. ಜೊತೆಗೆ ರಾಷ್ಟ್ರ ವಿಭಜನೆಯ ಸಂದರ್ಭದಲ್ಲಿ ತಮ್ಮ ನಿಲುವನ್ನು ಪ್ರತಿಪಾದಿಸುತ್ತಾ ಹೋರಾಟ ನಡೆಸಿದವರು ಎಂದು

ಡಾ.ಬಿ.ಆರ್.ಅಂಬೇಡ್ಕರ್ ಪುಣ್ಯತಿಥಿ : ಮಹಾಪರಿನಿರ್ವಾಣ ದಿನ ಆಚರಣೆ Read More »

ಚಿಣ್ಣರ ಕ್ರೀಡೋತ್ಸವ-2023-24

ಪುತ್ತೂರು: ಬಾಲ್ಯದಿಂದಲೇ ಕ್ರೀಡಾ ಮನೋಭಾವ ಮೂಡಿಸಿಕೊಂಡು ಸದೃಢ ಶರೀರ ಬೆಳೆಸಿಕೊಳ್ಳುವುದು ಮಗುವಿನ ಶಾರೀರಿಕ ಹಾಗೂ ಮಾನಸಿಕ ಬೆಳವಣಿಗೆಗೆ ಪೂರಕ ಎಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಹರಿಣಾಕ್ಷಿ. ಜೆ. ಶೆಟ್ಟಿ ಹೇಳಿದರು. ಅವರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚಿಣ್ಣರ ಕ್ರೀಡೋತ್ಸವ-2023-24 ಉದ್ಘಾಟಿಸಿ ಮಾತನಾಡಿ, ಇಂತಹ ಚಟುವಟಿಕೆಗಳಿಂದ ಮಗುವಿನ ನೈಜ ಪ್ರತಿಭೆ ಬೆಳಕಿಗೆ ಬರುತ್ತದೆ ಎಂದು ಹೇಳಿದರು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಡಾ. ಶಿವಪ್ರಕಾಶ್ ಎಂ. ಅಧ್ಯಕ್ಷತೆ ವಹಿಸಿದ್ದರು. ಸದಸ್ಯೆ ಮಾಲಾ

ಚಿಣ್ಣರ ಕ್ರೀಡೋತ್ಸವ-2023-24 Read More »

ಶಾಂತಿವನ ಟ್ರಸ್ಟ್ ಪುಸ್ತಕಾಧಾರಿತ ಸ್ಪರ್ಧೆಯಲ್ಲಿ ಪ್ರಶಸ್ತಿ

ಪುತ್ತೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ  ಯೋಜನೆ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಪುಸ್ತಕಾಧಾರಿತ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಮಂಗಳದುರ್ಗಾ ಟಿ.ಆರ್ ಶ್ಲೋಕ ಕಂಠಪಾಠ (ಜ್ಞಾನವಾರಿಧಿ)ದಲ್ಲಿ ದ್ವಿತೀಯ ಸ್ಥಾನ ಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜ್ಞಾನ ಶರಧಿ ಪುಸ್ತಕಾಧಾರಿತ ಭಾಷಣ ಸ್ಪರ್ಧೆಯಲ್ಲಿ 5ನೇ ತರಗತಿಯ ಶ್ರೀಕೃಷ್ಣ.ಬಿ ತೃತೀಯ ಸ್ಥಾನ ಗಳಿಸಿದ್ದಾನೆ. ಪ್ರಶಸ್ತಿ ಪಡೆದ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಶಿಕ್ಷಕೇತರ

ಶಾಂತಿವನ ಟ್ರಸ್ಟ್ ಪುಸ್ತಕಾಧಾರಿತ ಸ್ಪರ್ಧೆಯಲ್ಲಿ ಪ್ರಶಸ್ತಿ Read More »

error: Content is protected !!
Scroll to Top