ಕ್ಯಾಂಪಸ್‌

ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ

ಪುತ್ತೂರು: ನಮ್ಮ ಪ್ರತಿಯೊಂದು ದೈನಂದಿನ ವ್ಯವಹಾರಗಳಲ್ಲಿ ನಾವು ವಿಜ್ಞಾನ ಮತ್ತು ತಂತ್ರಜ್ಞಾನಗಳನ್ನು ಬಳಕೆ ಮಾಡುತ್ತೇವೆ. ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವ ತಂತ್ರಜ್ಞಾನಗಳನ್ನು ನಾವು ಅರಿತುಕೊಂಡರೆ ಜೀವನ ಸುಗಮವಾಗುತ್ತದೆ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಮೂಲ ವಿಜ್ಞಾನ ವಿಭಾಗ ಹಾಗೂ ಐಎಸ್‌ಟಿಇ ವಿದ್ಯಾರ್ಥಿ ವಿಭಾಗ ಇದರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಸಂದರ್ಭದಲ್ಲಿ […]

ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ Read More »

ರಾಷ್ಟ್ರಮಟ್ಟದ ತಂತ್ರಜ್ಞಾನ ಮೇಳ ‘ಅಂತರ್ಯ-2024’ ಸಮಾರೋಪ

ಪುತ್ತೂರು: ಕಾರ್ಪೋರೇಟ್ ಸಂಸ್ಥೆಗಳು ಬಯಸುವ ತಂತ್ರಜ್ಞಾನಗಳು ಪಠ್ಯಕ್ರಮದ ಮೂಲಕ ತಮ್ಮನ್ನು ತಲಪಲು ಒಂದೆರಡು ವರ್ಷಗಳು ಬೇಕಾಗುತ್ತದೆ. ಈ ಅಂತರವನ್ನು ಕಡಿಮೆ ಮಾಡಲು ವಿದ್ಯಾರ್ಥಿಗಳು ಪೂರಕ ವಿಷಯಗಳನ್ನು ಕಲಿಯುವುದು ಅತೀ ಅಗತ್ಯ ಎಂದು ಪುತ್ತೂರಿನ ವೆಬ್ ಪೀಪಲ್ ಸಂಸ್ಥೆಯ ಸಹ ಸಂಸ್ಥಾಪಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಶ್ರೀನಿವಾಸ್ ಹೇಳಿದರು. ಅವರು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಎಂಸಿಎ ವಿಭಾಗದ ಆಶ್ರಯದಲ್ಲಿ ನಡೆದ ರಾಷ್ಟ್ರ ಮಟ್ಟದ ತಂತ್ರಜ್ಞಾನ ಮೇಳ ಅಂತರ್ಯ-2024 ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ

ರಾಷ್ಟ್ರಮಟ್ಟದ ತಂತ್ರಜ್ಞಾನ ಮೇಳ ‘ಅಂತರ್ಯ-2024’ ಸಮಾರೋಪ Read More »

ಎನ್ನೆಂಸಿಯ ಕನ್ನಡ ಭಾಷಾ ವಿದ್ಯಾರ್ಥಿಗಳಿಂದ ಬಂಟ್ವಾಳ ಕಂಬಳಕ್ಕೆ ಅಧ್ಯಯನ ಭೇಟಿ

ಸುಳ್ಯ: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಭಾಷೆಯನ್ನು ಅಧ್ಯಯನ ಮಾಡುವ ವಿದ್ಯಾರ್ಥಿಗಳು ಬಂಟ್ವಾಳ ಕಂಬಳಕ್ಕೆ ಅಧ್ಯಯನ ಭೇಟಿಗೆ ತೆರಳಿದ್ದರು. ದ್ವಿತೀಯ ಬಿ ಎ ಮತ್ತು ಬಿ ಎಸ್ ಡಬ್ಲ್ಯೂ ವಿದ್ಯಾರ್ಥಿಗಳಿಗೆ ಕೋಟ ಶಿವರಾಮ ಕಾರಂತರ “ಕಂಬಳ”ದ ಕುರಿತಾದ ಪಠ್ಯವನ್ನು ಅಧ್ಯಯನ ಮಾಡುವ ನಿಟ್ಟಿನಲ್ಲಿ ಅದನ್ನು ಪ್ರಾಯೋಗಿಕವಾಗಿ ವೀಕ್ಷಿಸುವ ಸಲುವಾಗಿ ಬಂಟ್ವಾಳದಲ್ಲಿ ನಡೆದ  ಹದಿಮೂರನೇ ವರ್ಷದ ಹೊನಲು ಬೆಳಕಿನ “ಮೂಡೂರು- ಪಡೂರು” ಜೋಡುಕರೆ ಬಯಲು ಕಂಬಳವನ್ನು ವೀಕ್ಷಿಸಲು ಕಾಲೇಜಿನ  ಪ್ರಥಮ ಬಿ ಎ,  ಬಿ ಎಸ್ ಡಬ್ಲ್ಯೂ 

ಎನ್ನೆಂಸಿಯ ಕನ್ನಡ ಭಾಷಾ ವಿದ್ಯಾರ್ಥಿಗಳಿಂದ ಬಂಟ್ವಾಳ ಕಂಬಳಕ್ಕೆ ಅಧ್ಯಯನ ಭೇಟಿ Read More »

ರಾಜ್ಯಮಟ್ಟದ ಅಂತರ್ ಕಾಲೇಜು ವಾಲಿಬಾಲ್ ಪಂದ್ಯಾಟ | ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಪುರುಷರ ತಂಡ ದ್ವಿತೀಯ

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಪುರುಷರ ವಾಲಿಬಾಲ್ ತಂಡವು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ರಾಜ್ಯಮಟ್ಟದ ಅಂತರ್ ಕಾಲೇಜು ವಾಲಿಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಉಜಿರೆಯ ಎಸ್‌ಡಿಎಂಐಟಿ ಯಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಕಾಲೇಜಿನ ತಂಡವು ಉತ್ತಮ ಸಾಧನೆಯೊಂದಿಗೆ ದ್ವಿತೀಯ ಸ್ಥಾನಿಯಾಗಿ ಹೊರಹೊಮ್ಮಿದ್ದು ಈ ಮೂಲಕ ವಾಲಿಬಾಲ್ ಸ್ಪರ್ಧೆಯಲ್ಲಿ ಕಾಲೇಜು ಪ್ರಥಮ ಬಾರಿಗೆ ರಾಜ್ಯಮಟ್ಟದ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ. ವಿಶ್ವವಿದ್ಯಾನಿಲಯ ಮಟ್ಟದ 8 ವಿಭಾಗಗಳ ಒಟ್ಟು 16 ತಂಡಗಳು ಈ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದವು.

ರಾಜ್ಯಮಟ್ಟದ ಅಂತರ್ ಕಾಲೇಜು ವಾಲಿಬಾಲ್ ಪಂದ್ಯಾಟ | ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಪುರುಷರ ತಂಡ ದ್ವಿತೀಯ Read More »

ಅಕ್ಷಯ ಕಾಲೇಜು ಇನ್ವಿಕ್ತ ಕಾಮರ್ಸ್ ಅಸೋಸಿಯೇಷನ್ ನಿಂದ ‘ಬ್ಯಾಂಕಿಂಗ್ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ’

ಪುತ್ತೂರು: ಸಂಪ್ಯ ಅಕ್ಷಯ ಕಾಲೇಜಿನ ಇನ್ವಿಕ್ತ ಕಾಮರ್ಸ್ ಅಸೋಸಿಯೇಷನ್ ವತಿಯಿಂದ ದ್ವಿತೀಯ ಮತ್ತು ತೃತೀಯ ಪದವಿ ವಿದ್ಯಾರ್ಥಿಗಳಿಗೆ “ಬ್ಯಾಂಕಿಂಗ್ ಹಾಗೂ ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ” ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಸ್ಮಾರ್ಟ್ ಕ್ಲಾಸ್ಸಸ್ ಅಕಾಡೆಮಿ ತರಬೇತುದಾರೆ ಡಾ.ಸರಸ್ವತಿ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಸವಾಲುಗಳು ಮತ್ತು ಅದರ ತಯಾರಿಗಳ ಬಗ್ಗೆ ಮಾಹಿತಿ ನೀಡಿದರು. ತೃತೀಯ ಬಿ.ಕಾಂ ವಿದ್ಯಾರ್ಥಿನಿಯರಾದ ಸಾಕ್ಷಿ ಸ್ವಾಗತಿಸಿ, ಅಂಜಲಿ ವಂದಿಸಿದರು. ಕಾಲೇಜಿನ ಉಪನ್ಯಾಸಕರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಅಕ್ಷಯ ಕಾಲೇಜು ಇನ್ವಿಕ್ತ ಕಾಮರ್ಸ್ ಅಸೋಸಿಯೇಷನ್ ನಿಂದ ‘ಬ್ಯಾಂಕಿಂಗ್ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ’ Read More »

ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ಪುತ್ತೂರು: ನಿರಂತರ ಅಭ್ಯಾಸದಿಂದ ಸಾಮಾನ್ಯ ಮನುಷ್ಯ ಕೂಡ ಅಸಾಮಾನ್ಯ ಸಾಧನೆ ಮಾಡಲು ಸಾಧ್ಯ. ವಿದ್ಯಾರ್ಥಿಗಳು ನಿರಂತರ ಅಭ್ಯಾಸ ಮಾಡಿದಲ್ಲಿ ಸಾಧನೆಯ ಶಿಖರವನ್ನು ಏರಬಹುದು. ಕಾಲೇಜಿನಲ್ಲಿ ನಿರಂತರವಾಗಿ ಲಭಿಸಿದ ಪ್ರೇರಣಾತ್ಮಕ ವಿಚಾರಗಳು ಹಾಗು ಗುಣಾತ್ಮಕ ಶಿಕ್ಷಣವನ್ನು ಭವಿಷ್ಯತ್ತಿನಲ್ಲಿ ಬಳಕೆ ಮಾಡಿಕೊಳ್ಳಬೇಕು. ಭವಿಷ್ಯದ ಬಗ್ಗೆ ಗುರಿಯನ್ನು ಇಟ್ಟುಕೊಂಡು ತಮ್ಮ ಜೀವನದಲ್ಲಿ ಅಭಿವೃದ್ಧಿ ಸಾಧಿಸಲು ಯೋಚನೆ ಹಾಗೂ ಯೋಜನೆ ರೂಪಿಸಿಕೊಂಡು ಅದನ್ನು ಕಾರ್ಯಗತ ಮಾಡಬೇಕು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ, ವಿಶ್ರಾಂತ ಪ್ರಾಚಾರ್ಯ ಡಾ. ಎಚ್.

ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ Read More »

ವಿವೇಕಾನಂದ ಶಿಶು ಮಂದಿರದಲ್ಲಿ ಮಕ್ಕಳ ಸಾಮೂಹಿಕ ಹುಟ್ಟುಹಬ್ಬ, ಮಾತೃವಂದನ ಕಾರ್ಯಕ್ರಮ

ಪುತ್ತೂರು: ವಿವೇಕಾನಂದ ಶಿಶು ಮಂದಿರದಲ್ಲಿ ಮಕ್ಕಳ ಸಾಮೂಹಿಕ ಹುಟ್ಟುಹಬ್ಬದ ಆಚರಣೆ, ಮಾತೃವಂದನ, ಸಾಮೂಹಿಕ ಭೋಜನ ಕಾರ್ಯಕ್ರಮ ಜರುಗಿತು. ಮಕ್ಕಳು ತಮ್ಮ ತಾಯಿಯ ಪಾದಪೂಜೆ ನೆರವೇರಿಸಿದ ನಂತರ ತಾಯಂದಿರು ತಮ್ಮ ಮಕ್ಕಳಿಗೆ ಆರತಿ ಬೆಳಗಿ ಸಿಹಿ ತಿನ್ನಿಸಿ ಆಶೀರ್ವಾದಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀನಿವಾಸ ಪೈ ವಹಿಸಿದ್ದರು. ಉಪನ್ಯಾಸಕ, ದೈವನರ್ತಕ ಡಾ. ರವೀಶ ಪಡುಮಲೆ ಅಭ್ಯಾಗತರಾಗಿ ಪಾಲ್ಗೊಂಡು, ವಿವೇಕಾನಂದ ಶಿಶು ಮಂದಿರದ ಈ ಕಾರ್ಯಕ್ರಮ ಅತ್ಯಂತ ಶ್ಲಾಘನೀಯ. ಎಳೆಯ ಮಕ್ಕಳಿಗೆ ಬಾಲ್ಯದಲ್ಲಿ ಕೊಡುವ ಈ ಸಂಸ್ಕಾರವು

ವಿವೇಕಾನಂದ ಶಿಶು ಮಂದಿರದಲ್ಲಿ ಮಕ್ಕಳ ಸಾಮೂಹಿಕ ಹುಟ್ಟುಹಬ್ಬ, ಮಾತೃವಂದನ ಕಾರ್ಯಕ್ರಮ Read More »

ಸಂತ ಫಿಲೋಮಿನಾ ಕಾಲೇಜಿನ ಉಪಪ್ರಾಂಶುಪಾಲ ಪ್ರೊ| ಗಣೇಶ್‌ಭಟ್‌ರವರಿಗೆ ಬೀಳ್ಕೊಡುಗೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನಲ್ಲಿ ಉಪನ್ಯಾಸಕರಾಗಿ 36 ವರ್ಷಗಳ ಸಾರ್ಥಕ ಸೇವೆ ಸಲ್ಲಿಸಿ ಸೇವಾನಿವೃತ್ತಿ ಹೊಂದಿದ ಉಪಪ್ರಾಂಶುಪಾಲ ಪ್ರೊ| ಗಣೇಶ್‌ಭಟ್‌ರವರಿಗೆ ಕಾಲೇಜಿನ ಸ್ಟಾಫ್‌ಅಸೋಸಿಯೇಶನ್‌ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಸಂಚಾಲಕ ಅತಿ ವಂ| ಲಾರೆನ್ಸ್‌ಮಸ್ಕರೇನಸ್‌ಮಾತನಾಡಿ, ನಿವೃತ್ತಿಯು ಹೊಸ ಜೀವನದ ಬಾಗಿಲನ್ನು ತೆರೆದಿಡುತ್ತದೆ. ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಂತೃಪ್ತ ಜೀವನ ನಡೆಸಲು ಸೇವಾ ನಿವೃತ್ತಿಯು ಅನುವು ಮಾಡಿಕೊಡುತ್ತದೆ ಎಂದು ಹೇಳಿದರು. ಮುಖ್ಯ ಅತಿಥಿಯಾಗಿ ಕಾಲೇಜಿನ ಪ್ರಿನ್ಸಿಪಾಲ್ ವಂ| ಡಾ| ಆಂಟೊನಿ ಪ್ರಕಾಶ್‌ಮೊಂತೆರೋರ ಮಾತನಾಡಿ,

ಸಂತ ಫಿಲೋಮಿನಾ ಕಾಲೇಜಿನ ಉಪಪ್ರಾಂಶುಪಾಲ ಪ್ರೊ| ಗಣೇಶ್‌ಭಟ್‌ರವರಿಗೆ ಬೀಳ್ಕೊಡುಗೆ Read More »

ಆರ್.ಡಿ.ಸಿ ಯಲ್ಲಿ ಭಾಗವಹಿಸಿದ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿಗೆ ಅಭಿನಂದನಾ ಕಾರ್ಯಕ್ರಮ

ಪುತ್ತೂರು: ರಾಜ್ಯಮಟ್ಟದಲ್ಲಿ ಕಾಲೇಜಿನ ಹೆಸರನ್ನು ಗುರುತಿಸುವಂತೆ ಮಾಡಿದ ತೃತೀಯ ಬಿಸಿಎ ವಿಭಾಗದ ವಿದ್ಯಾರ್ಥಿನಿ ತೇಜಸ್ವಿನಿ ಒಬ್ಬಳು. ಪ್ರತಿಯೊಬ್ಬ ವಿದ್ಯಾರ್ಥಿಗಳು ಸಿಗುವ ಅವಕಾಶಗಳನ್ನು ಬಳಸಿಕೊಳ್ಳಬೇಕು. ಅದಕ್ಕೆ ನಮ್ಮ ಅಧ್ಯಾಪಕರು ಉತ್ತಮ ಸಹಕಾರ ನೀಡುತ್ತಾರೆ. ಜೊತೆಗೆ ಹೆತ್ತವರ ಸಹಕಾರವು ಇರುತ್ತದೆ. ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಇನ್ನೂ ಸಾಧನೆ ಮಾಡಬೇಕು. ಆ ಮೂಲಕ ನಮ್ಮ ಕಾಲೇಜಿಗೆ ಕೀರ್ತಿಯನ್ನು ತಂದುಕೊಡಬೇಕು ಎಂದು ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿ. ಗಣಪತಿ ಭಟ್ ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)

ಆರ್.ಡಿ.ಸಿ ಯಲ್ಲಿ ಭಾಗವಹಿಸಿದ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿಗೆ ಅಭಿನಂದನಾ ಕಾರ್ಯಕ್ರಮ Read More »

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಕೃಷಿ ಕುರಿತು ವಿಶೇಷ ಉಪನ್ಯಾಸ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಐಕ್ಯೂಏಸಿ ಮತ್ತು ಇಕೋ ಕ್ಲಬ್ ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕೃಷಿಕ, ಕಡಮ್ಮಾಜೆ ಫಾರ್ಮ್ಸ್ ಮಾಲಕ ದೇವಿಪ್ರಸಾದ್ ಕಡಮ್ಮಾಜೆ ಮಾಹಿತಿ ನೀಡಿ, ಕೃಷಿಗೆ ಗಡಿ ಎಂಬುದಿಲ್ಲ. ಆದರೆ ಅದಕ್ಕೆ ಬೇಕಾದುದು ಆಸಕ್ತಿ. ಹಿಂದಿನ ಕೃಷಿ ಪದ್ಧತಿ ಮತ್ತು ಈಗಿನ ಕೃಷಿ ಪದ್ಧತಿಯನ್ನು ತುಲನಾತ್ಮಕವಾಗಿ ತಿಳಿಸಿದರು. ಈಗಿನ ಕೃಷಿ ಚಟುವಟಿಕೆಗಳೆಲ್ಲವೂ ತಂತ್ರಜ್ಞಾನದ ಮೂಲಕವೇ ನಡೆಯುತ್ತಿದೆ, ಎಲ್ಲವೂ ನೂತನ ಕ್ರಮವನ್ನು ಅನುಸರಿಸುತ್ತಾ ಇರುವಾಗ ನಾವು ಕೂಡಾ ಇದರೊಂದಿಗೆ ಈ ತಂತ್ರಜ್ಞಾನಕ್ಕೆ

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಕೃಷಿ ಕುರಿತು ವಿಶೇಷ ಉಪನ್ಯಾಸ Read More »

error: Content is protected !!
Scroll to Top