ಕ್ಯಾಂಪಸ್‌

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪ.ಪೂ ಕಾಲೇಜಿಗೆ ಬೆಳ್ಳಿ ಮತ್ತು ಕಂಚಿನ ಪದಕ

ಪುತ್ತೂರು: ಬಿಹಾರದ ಸರಸ್ವತಿ ವಿದ್ಯಾಮಂದಿರ ಬೆಟ್ಟಯ್ಯದಲ್ಲಿ ನಡೆಯುತ್ತಿರುವ ವಿದ್ಯಾಭಾರತಿ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಸುಶಾನ್ ಪ್ರಕಾಶ್ 400 ಮೀಟರ್ ಹರ್ಡಲ್ಸ್ ನಲ್ಲಿ ಬೆಳ್ಳಿಯ ಪದಕ ಪಡೆದುಕೊಂಡಿದ್ದಾರೆ. ಅವರು ಆರ್ಯಾಪು ಗ್ರಾಮದ ರವಿಪ್ರಕಾಶ್ ಕೆ.ಸಿ ಮತ್ತು ಚಂದ್ರಕಲಾ ಕೆ ವಿ ದಂಪತಿ ಪುತ್ರ. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ತನ್ವಿ ಎಸ್ 800 ಮೀಟರ್ ಓಟದಲ್ಲಿ ಕಂಚಿನ ಪದಕವನ್ನು ಪಡೆದುಕೊಂಡಿದ್ದಾರೆ. ಅವರು ಈಕೆ […]

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪ.ಪೂ ಕಾಲೇಜಿಗೆ ಬೆಳ್ಳಿ ಮತ್ತು ಕಂಚಿನ ಪದಕ Read More »

ಮಕ್ಕಳ ಹಕ್ಕುಗಳ ರಕ್ಷಣೆ ಸರಕಾರದ ಕರ್ತವ್ಯ | ಶಾಸಕರೊಂದಿಗೆ ಮಕ್ಕಳ ಸಂವಾದ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈ | ಬೇಡಿಕೆಯ ಸುರಿಮಳೆಗೈದ ವಿವಿಧ ಶಾಲಾ ವಿದ್ಯಾರ್ಥಿಗಳು

ಪುತ್ತೂರು: ಶಾಲಾ ಕೊಠಡಿ ಛಾವಣಿ ಸರಿಯಿಲ್ಲ, ಆವರಣ ಗೋಡೆ ಬೇಕು, ನಮಗೆ ಸ್ಮಾರ್ಟ್ ಕ್ಲಾಸ್ ಬೇಕು, ಸುಸಜ್ಜಿತ ಪ್ರಯೋಗ ಶಾಲೆ ಕೊಡಿ, ಶಿಕ್ಷಕರು ಬೇಕು, ಶಾಲೆಗೆ ಸುಣ್ಣ ಬಣ್ಣ ಬಳಿಯಬೇಕು, ಸರಿಯಾಗಿ ಶಾಲಾ ಸಮಯ ತಲುಪಲು ಬಸ್ಸಿನ ವ್ಯವಸ್ಥೆ ಮಾಡಿ ಹೀಗೆ ಬೇಡಿಕೆಯ ಸುರಿ ಮಳೆಯನ್ನೇ ಮುಂದಿಟ್ಟರು ತಾಲೂಕಿನ ವಿವಿಧ ಸರಕಾರಿ ಶಾಲಾ ಮಕ್ಕಳು. ಮಂಗಳವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಪಂಚಾಯಿತಿ, ಅಸಹಾಯಕರ ಸೇವಾ ಟ್ರಸ್ಟ್ ಹಾಗೂ ಪುತ್ತೂರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ

ಮಕ್ಕಳ ಹಕ್ಕುಗಳ ರಕ್ಷಣೆ ಸರಕಾರದ ಕರ್ತವ್ಯ | ಶಾಸಕರೊಂದಿಗೆ ಮಕ್ಕಳ ಸಂವಾದ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈ | ಬೇಡಿಕೆಯ ಸುರಿಮಳೆಗೈದ ವಿವಿಧ ಶಾಲಾ ವಿದ್ಯಾರ್ಥಿಗಳು Read More »

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ : ವಿವೇಕಾನಂದ ಪ.ಪೂ ಕಾಲೇಜಿನ ನಿಹಾಲ್ ರಾಜ್ ಗೆ ಬೆಳ್ಳಿ ಪದಕ

ಪುತ್ತೂರು: ಬಿಹಾರದ ಸರಸ್ವತಿ ವಿದ್ಯಾಮಂದಿರ ಬೆಟ್ಟಯ್ಯದಲ್ಲಿ ನಡೆಯುತ್ತಿರುವ ವಿದ್ಯಾಭಾರತಿ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ನಿಹಾಲ್ ರಾಜ್ ಲಾಂಗ್ ಜಂಪ್ ಸ್ಪರ್ಧೆಯಲ್ಲಿ ಬೆಳ್ಳಿಯ ಪದಕವನ್ನು ಪಡೆದುಕೊಂಡಿದ್ದಾರೆ. ಅವರು ಕಬಕ ನಿವಾಸಿ ಬಿ. ನಾಗರಾಜ್ ಹೆಗ್ಡೆ ಮತ್ತು ಭಾನುಮತಿ ದಂಪತಿ ಅವರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ : ವಿವೇಕಾನಂದ ಪ.ಪೂ ಕಾಲೇಜಿನ ನಿಹಾಲ್ ರಾಜ್ ಗೆ ಬೆಳ್ಳಿ ಪದಕ Read More »

ಸರಕಾರಿ ಶಾಲಾ ಶಿಕ್ಷಕರ ಕೊರತೆ ಪರಿಹರಿಸಲಾಗಿದೆ | ಕಕ್ಕೂರು ಸ. ಹಿ. ಪ್ರಾ. ಶಾಲಾ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ಪರಿಹರಿಸಲಾಗಿದೆ. ಮಾತ್ರವಲ್ಲದೆ ಶಾಲೆಗಳಿಗೆ ವಿಷಯವಾರು ಶಿಕ್ಷಕರ ನೇಮಕಾತಿಯೂ ನಡೆದಿದ್ದು ಗುಣಮಟ್ಡದ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಬೆಟ್ಟಂಪಾಡಿ ಗ್ರಾಮದ ಕಕ್ಕೂರು ಸರಕಾರಿ ಹಿಪ್ರಾ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ‘ಸೃಜನ ದರ್ಶನ’ ಮಕ್ಕಳ ಸಾಂಸ್ಕೃತಿಕ ಹಬ್ಬವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು. ಶಾಲೆಯಲ್ಲಿ ಶಿಕ್ಷಕರ ನಡುವೆ ಹೊಂದಾಣಿಕೆ ಇರಬೇಕಾಗಿದೆ. ಶಿಕ್ಷಕರೊಳಗೆ ಪರಸ್ಪರ ಹೊಂದಾಣಿಕೆಯ ಕೊರತೆ ಇದ್ದಲ್ಲಿ‌ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ. ಹೊಂದಾಣಿಕೆಯಲ್ಲಿ

ಸರಕಾರಿ ಶಾಲಾ ಶಿಕ್ಷಕರ ಕೊರತೆ ಪರಿಹರಿಸಲಾಗಿದೆ | ಕಕ್ಕೂರು ಸ. ಹಿ. ಪ್ರಾ. ಶಾಲಾ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈ Read More »

ಪ್ರಫುಲ್ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಕಬಡ್ಡಿ ತಂಡಕ್ಕೆ ಆಯ್ಕೆ

ಪುತ್ತೂರು: ಇಲ್ಲಿಯ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿ ಪ್ರಫುಲ್ ಯು. ಎಸ್. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಕಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಕಾಲೇಜಿನ ತೃತೀಯ ವರ್ಷದ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಷಿನ್ ಲರ್ನಿಂಗ್ ವಿಭಾಗದ ವಿದ್ಯಾರ್ಥಿಯಾಗಿರುವ ಪ್ರಫುಲ್ ಎಸ್‌ಐಟಿ ತುಮಕೂರಿನಲ್ಲಿ ನಡೆದ ಆಯ್ಕೆ ಶಿಬಿರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿ ವಿಶ್ವವಿದ್ಯಾನಿಲಯ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ನ.9 ರಿಂದ 12ರ ವರೆಗೆ  ಆಂದ್ರಪ್ರದೇಶ ಕಾಕಿನಾಡದ ಜವಾಹರ್‌ಲಾಲ್ ನೆಹರೂ ತಾಂತ್ರಿಕ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಸುರಂಪಲೆಮ್ ಆದಿತ್ಯ

ಪ್ರಫುಲ್ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಕಬಡ್ಡಿ ತಂಡಕ್ಕೆ ಆಯ್ಕೆ Read More »

ರಾಜ್ಯಮಟ್ಟದ ದಸರಾ ಸಿ.ಎಂ. ಕಪ್ – ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಪವಿತ್ರ ಜಿ. ಗೆ ಚಿನ್ನದ ಪದಕ

ಪುತ್ತೂರು: ಇಲ್ಲಿಯ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಎಂಬಿಎ ವಿಭಾಗದ ವಿದ್ಯಾರ್ಥಿನಿ ಪವಿತ್ರ.ಜಿ ರಾಜ್ಯ ಮಟ್ಟದ ದಸರಾ ಸಿ.ಎಂ ಕಪ್ ಅತ್ಪೆಟಿಕ್ ಸ್ಪರ್ಧೆ-2023 ರಲ್ಲಿ ಟ್ರಿಪಲ್‌ಜಂಪ್ ನಲ್ಲಿ ಚಿನ್ನದ ಪದಕ ಜಯಿಸಿದ್ದಾರೆ. ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಿಂಪಿಕ್ ಅಸೋಸಿಯೇಶನ್ ಮತ್ತು ಮೈಸೂರು ಜಿಲ್ಲಾಡಳಿತದ ಸಂಯುಕ್ತ ಆಶ್ರಯದಲ್ಲಿ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ಈ ಸ್ಪರ್ಧೆಯಲ್ಲಿ 12.90 ಮೀಟರ್ ದೂರ ಜಿಗಿದು ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ.

ರಾಜ್ಯಮಟ್ಟದ ದಸರಾ ಸಿ.ಎಂ. ಕಪ್ – ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಪವಿತ್ರ ಜಿ. ಗೆ ಚಿನ್ನದ ಪದಕ Read More »

ನಾಡು ನುಡಿಯ ಅಭಿಮಾನ ಹೊಂದುವುದು ಮನದಾಳದ ಸಂಕಲ್ಪವಾಗಲಿ | ಎಸ್‌ಎಸ್‌ಪಿಯು ಕಾಲೇಜಿನ ಕನ್ನಡ ರಾಜ್ಯೋತ್ಸವ ದಿನಾಚರಣೆಯಲ್ಲಿ ಸೋಮಶೇಖರ್ ನಾಯಕ್

ಸುಬ್ರಹ್ಮಣ್ಯ: ಸ್ಪರ್ಧಾತ್ಮಕ ಜಗತ್ತಿನಲ್ಲಿ ಬಹು ಭಾಷೆಗಳಲ್ಲಿ ಪರಿಣಿತರಾದರೆ ಮಾತ್ರ ಯಶ ಗಳಿಸಲು ಸಾಧ್ಯ. ನಾವು ನಮ್ಮ ನಾಡಭಾಷೆಯ ಬಗ್ಗೆ ಪ್ರೀತಿಯನ್ನು ಬೆಳೆಸಿಕೊಳ್ಳಬೇಕು. ಕನ್ನಡವನ್ನು ಪ್ರೀತಿಸುತ್ತಾ ಇತರ ಭಾಷೆಗಳ ಮೇಲೆ ಅಭಿಮಾನ ಹೊಂದಬೇಕು. ನಾಡು ನುಡಿಯ ಮೇಲೆ ಅಭಿಮಾನ ಹೊಂದುವುದು ಮನದಾಳದ ಸಂಕಲ್ಪವಾಗಬೇಕು ಎಂದು ಎಸ್ ಎಸ್‌ಪಿಯು ಕಾಲೇಜಿನ ಪ್ರಾಂಶುಪಾಲ ಸೋಮಶೇಖರ ನಾಯಕ್ ಹೇಳಿದರು. ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾದ ಆಡಳಿತಕ್ಕೊಳಪಟ್ಟ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು

ನಾಡು ನುಡಿಯ ಅಭಿಮಾನ ಹೊಂದುವುದು ಮನದಾಳದ ಸಂಕಲ್ಪವಾಗಲಿ | ಎಸ್‌ಎಸ್‌ಪಿಯು ಕಾಲೇಜಿನ ಕನ್ನಡ ರಾಜ್ಯೋತ್ಸವ ದಿನಾಚರಣೆಯಲ್ಲಿ ಸೋಮಶೇಖರ್ ನಾಯಕ್ Read More »

ಬೆಳಂದೂರು ಸರಕಾರಿ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ

ಬೆಳಂದೂರು: ಬೆಳಂದೂರು :ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಬುಧವಾರ ಆಚರಿಸಲಾಯಿತು. ಕಾಲೇಜು ಪ್ರಾಂಶುಪಾಲ ಡಾ|ಶಂಕರ್ ಭಟ್ ಶುಭ ಹಾರೈಸಿದರು. ಬಳಿಕ ವಿದ್ಯಾರ್ಥಿಗಳಿಂದ ಗೀತ ಗಾಯನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಬೆಳಂದೂರು ಸರಕಾರಿ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ Read More »

ನರಿಮೊಗರು ಸರಸ್ವತಿ ವಿದ್ಯಾ ಮಂದಿರದಲ್ಲಿ ಕನ್ನಡ ರಾಜ್ಯೋತ್ಸವ

ಪುತ್ತೂರು: ನರಿಮೊಗರು ಸರಸ್ವತಿ ವಿದ್ಯಾ ಮಂದಿರದಲ್ಲಿ ಕನ್ನಡ ರಾಜ್ಯೋತ್ಸವವನ್ನು ಬುಧವಾರ ಆಚರಿಸಲಾಯಿತು. ಶಾಲಾ ಸಂಚಾಲಕ ಅವಿನಾಶ್ ಕೊಡಂಕಿರಿ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಶಾಲಾ ಆಡಳಿತಾಧಿಕಾರಿ ಶುಭಾ ಅವಿನಾಶ್ ಕನ್ನಡ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಷಾರ್ಚನೆಗೈದರು. ಬಳಿಕ ವಿದ್ಯಾರ್ಥಿಗಳಿಂದ ಗೀತ ಗಾಯನ ಕಾರ್ಯಕ್ರಮ ನಡೆಯಿತು. ಶಾಲಾ ಮುಖ್ಯ ಶಿಕ್ಷಕರು,  ಶಿಕ್ಷಕರು, ಶಿಕ್ಷಕೇತರರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ನರಿಮೊಗರು ಸರಸ್ವತಿ ವಿದ್ಯಾ ಮಂದಿರದಲ್ಲಿ ಕನ್ನಡ ರಾಜ್ಯೋತ್ಸವ Read More »

ಉಜಿರೆ ಎಸ್‍ಡಿಎಂ ಪಾಲಿಟೆಕ್ನಿಕ್‍ನಲ್ಲಿ ‘ಗೃಹ ಟೆಕ್ನಿಕಲ್ ಎಕ್ಸ್ಪೋ’

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗವು ‘ಗೃಹ ‘ಟೆಕ್ನಿಕಲ್ ಎಕ್ಸ್ಪೋ’ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ಆಯೋಜಿಸಿತ್ತು. ಮುಖ್ಯ ಅತಿಥಿಯಾಗಿ ಇಂಜಿನಿಯರ್ ವಿಜಯ ವಿಷ್ಣು ಮಯ್ಯ ಮಾತನಾಡಿ, ಭವಿಷ್ಯದ ಸಿವಿಲ್ ಇಂಜಿನಿಯರಿಂಗ್ ಕ್ಷೇತ್ರದ ಅವಶ್ಯಕತೆಯನ್ನು ಹಾಗೂ ಯುವ ಎಂಜಿನೀಯರುಗಳಿಗೆ    ಶಿಸ್ತು ಮತ್ತು ಕೌಶಲ್ಯಗಳ ಅಗತ್ಯತೆಯನ್ನು ವಿವರಿಸಿದರು . ಇನ್ನೋರ್ವ ಅತಿಥಿಯಾಗಿ ಕಾಂತಾರ ಖ್ಯಾತಿಯ ನಟ ದೀಪಕ್ ರೈ  ಪಾಣಾಜೆ, ಇಂಜಿನಿಯರ್ ಜಗದೀಶ್ ಪ್ರಸಾದ್ ಯುವ ಇಂಜಿನಿಯರ್ ಗಳಿಗೆ ಶುಭಹಾರೈಸಿದರು. ಎಸ್ ಡಿ ಎಂ ಶಿಕ್ಷಣ

ಉಜಿರೆ ಎಸ್‍ಡಿಎಂ ಪಾಲಿಟೆಕ್ನಿಕ್‍ನಲ್ಲಿ ‘ಗೃಹ ಟೆಕ್ನಿಕಲ್ ಎಕ್ಸ್ಪೋ’ Read More »

error: Content is protected !!
Scroll to Top