ಕ್ಯಾಂಪಸ್‌

ಮಕ್ಕಳಿಗೆ ಓದುವ ವಾತಾವರಣ ನಿರ್ಮಿಸಿದರೆ ಸಾಧನೆ ಮಾಡಲು ಸಾಧ್ಯ: ಶಾಸಕ ಅಶೋಕ್ ರೈ

ಪುತ್ತೂರು: ಮಕ್ಕಳು ಕಲಿತು ಸಾಧನೆ ಮಾಡಬೇಕಾದರೆ ಕೇವಲ ಶಾಲೆಯಲ್ಲಿ ಕಲಿತರೆ ಮಾತ್ರ ಸಾಲದು. ಮಕ್ಕಳಿಗೆ ಮನೆಯಲ್ಲಿ ಓದುವ ವಾತಾವರಣವನ್ನು ನಿರ್ಮಾಣ ಮಾಡಬೇಕಾಗಿದ್ದು,  ಅದು ಪೋಷಕರ ಕರ್ತವ್ಯವಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು.  ಶಿಕ್ಷಣ ಇಲಾಖೆ, ಮಣಿಕ್ಕರ ಸ.ಪ್ರೌಢಶಾಲೆ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಆಶ್ರಯದಲ್ಲಿ 2022-23ನೇ ಸಾಲಿನ ಎಸೆಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ, ನಿವೃತ್ತ ಶಿಕ್ಷಕರಿಗೆ, ದಾನಿಗಳಿಗೆ ಸಮ್ಮಾನ ಹಾಗೂ ಪಾಲ್ತಾಡು ನ್ಯೂ ಬ್ರದರ್ಸ್ ನವರು ಶಾಲಾ ಮಕ್ಕಳಿಗೆ ಕೊಡುಗೆಯಾಗಿ ನೀಡಿದ ಟೀ ಶರ್ಟ್ ಅನಾವರಣ […]

ಮಕ್ಕಳಿಗೆ ಓದುವ ವಾತಾವರಣ ನಿರ್ಮಿಸಿದರೆ ಸಾಧನೆ ಮಾಡಲು ಸಾಧ್ಯ: ಶಾಸಕ ಅಶೋಕ್ ರೈ Read More »

ರಾಷ್ಟ್ರಮಟ್ಟದ ಇನ್‍ಸ್ಪೆಯರ್ ಅವಾರ್ಡ್ ಮನಕ್ ಸ್ಪರ್ಧೆಯಲ್ಲಿ ಪೃಥ್ವಿರಾಜ್ ಪ್ರಭು ಭಾಗಿ

ಪುತ್ತೂರು: ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಅ.9 ರಿಂದ 11ರ ವರೆಗೆ ನವದೆಹಲಿಯಲ್ಲಿ ನಡೆಸಿದ 2021-22ನೇ ಸಾಲಿನ ಇನ್‍ಸ್ಪೆಯರ್ ಅವಾರ್ಡ್ ಮನಕ್ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಪೃಥ್ವಿರಾಜ್ ಪ್ರಭು ಭಾಗವಹಿಸಿ, ತಮ್ಮ “Medicinal wax from Kokum seeds” (Ko-Wax) ವಿಜ್ಞಾನ ಯೋಜನೆಯನ್ನು ಪ್ರಸ್ತುತಪಡಿಸಿದ್ದಾರೆ. ಪೃಥ್ವಿರಾಜ್ ಪ್ರಭು ಮುಕ್ರಂಪಾಡಿ ನಿವಾಸಿ ಪುಂಡಲೀಕ ಪ್ರಭು ಹಾಗೂ ನಾಗಮಣಿ ಪ್ರಭು ದಂಪತಿ ಪುತ್ರ. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿರುವಾಗ ವಿಜ್ಞಾನ ಯೋಜನೆಯನ್ನು ತಯಾರಿಸಿ, ಜಿಲ್ಲಾ

ರಾಷ್ಟ್ರಮಟ್ಟದ ಇನ್‍ಸ್ಪೆಯರ್ ಅವಾರ್ಡ್ ಮನಕ್ ಸ್ಪರ್ಧೆಯಲ್ಲಿ ಪೃಥ್ವಿರಾಜ್ ಪ್ರಭು ಭಾಗಿ Read More »

ಕಲಿತ ಶಾಲೆಗೆ ಲಕ್ಷ ರೂ. ದೇಣಿಗೆ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಎಸ್.ಎಸ್.ಪಿ.ಯು. ಕಾಲೇಜಿಗೆ ಕಾಲೇಜಿನ ಹಿರಿಯ ವಿದ್ಯಾರ್ಥಿ ಉದ್ಯಮಿ ರಾಕೇಶ್ ಬೆಂಗಳೂರು ಅವರು 1 ಲಕ್ಷ ರೂ. ದೇಣಿಗೆ ನೀಡಿದರು. ಬುಧವಾರ ಕಾಲೇಜಿಗೆ ಆಗಮಿಸಿದ ಅವರು, ಪ್ರಾಂಶುಪಾಲ ಸೋಮಶೇಖರ್ ನಾಯಕ್ ಅವರಿಗೆ ದೇಣಿಗೆಯ ಚೆಕ್ ಹಸ್ತಾಂತರಿಸಿದರು. ಕಾಲೇಜಿನಲ್ಲಿ ನಡೆಯುವ ಸ್ಪರ್ಧಾತ್ಮಕ ಪರಿಕ್ಷಾ ತರಬೇತಿ ಕಾರ್ಯಕ್ಕೆ, ಕಾಲೇಜಿನ ಗಾರ್ಡನಿಂಗ್, ತೂಗು ಹೂದಾನಿ ಅಳವಡಿಕೆ ಮತ್ತು ಹೂದಾನಿ ಅಳವಡಿಕೆಗಾಗಿ ಈ ಮೊತ್ತವನ್ನು ದೇಣಿಗೆಯಾಗಿ ನೀಡಿದ್ದಾರೆ. ಈ ಸಂದರ್ಭ ಉಪನ್ಯಾಸಕರಾದ ಸವಿತಾ ಕೈಲಾಸ್,

ಕಲಿತ ಶಾಲೆಗೆ ಲಕ್ಷ ರೂ. ದೇಣಿಗೆ Read More »

ಸರಸ್ವತಿ ಮುಂದೆ ಹಾರ ಬದಲಿಸಿಕೊಂಡ ನವದಂಪತಿಗಳು

ಪುತ್ತೂರು: ಗುರು ಹಿರಿಯರ ಆಶೀರ್ವಾದ ಪಡೆಯುವ ವಧೂ-ವರರಿಗೆ  ಸಂಸ್ಕಾರವನ್ನು ಕೊಡುವ ಒಂದು ವಿಧಿಯೇ ಮದುವೆ. ಪ್ರಕೃತಿಯ ಶಿಶುವಾದ ಮಾನವನು ಸಂಸ್ಕೃತಿಯಿಂದ ವಿಕಸಿತನಾಗಿ, ವಿಕೃತಿಯೆಡೆಗೆ ಜಾರದಂತೆ ಧರ್ಮಾಚರಣೆಯಲ್ಲಿ ತೊಡಗಿ ಸಮೃದ್ಧಿ, ಸಂಸ್ಕೃತಿ ಎರಡರಲ್ಲೂ ಸಮತೋಲನ ಕಾಪಾಡಿಕೊಳ್ಳಬೇಕು. ಮಾತೃಧರ್ಮ ಪಾಲನೆಯೊಂದಿಗೆ  ಮಕ್ಕಳನ್ನು ಸಂಸ್ಕಾರಯುತರನ್ನಾಗಿ ಮಾಡುತ್ತಾ, ಅವರನ್ನು ಕುಟುಂಬದ, ತನ್ಮೂಲಕ ದೇಶದ ಆಸ್ತಿಯನ್ನಾಗಿ ಮಾಡಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜ್ಯೇಷ್ಠ ಪ್ರಚಾರಕ ಸು.ರಾಮಣ್ಣ ಹೇಳಿದರು. ಅವರು ಇಲ್ಲಿಯ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ನವದಂಪತಿ ಸಮಾವೇಶದಲ್ಲಿ ಮಾತನಾಡಿದರು.

ಸರಸ್ವತಿ ಮುಂದೆ ಹಾರ ಬದಲಿಸಿಕೊಂಡ ನವದಂಪತಿಗಳು Read More »

ಕೆಡೆನ್ಸ್ ಡಿಸೈನ್ ಸಿಸ್ಟಮ್ಸ್ ಸಂಸ್ಥೆಗೆ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಧನ್ಯ ಪಿ. ಆಯ್ಕೆ

ಪುತ್ತೂರು: ಇಲ್ಲಿಯ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ ವಿದ್ಯಾರ್ಥಿನಿ ಧನ್ಯ.ಪಿ ಕೆಡೆನ್ಸ್ ಡಿಸೈನ್ ಸಿಸ್ಟಮ್ಸ್ ಸಂಸ್ಥೆಗೆ ಆಯ್ಕೆಯಾಗಿದ್ದಾರೆ. 2024ನೇ ಸಾಲಿನ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆಯನ್ವಯ ನಡೆದ ನೇಮಕಾತಿ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರೈಸಿ ಆಯ್ಕೆಯಾಗಿದ್ದಾರೆ. ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ಕ್ಷೇತ್ರದ ದಿಗ್ಗಜ ಕೆಡೆನ್ಸ್ ಡಿಸೈನ್ ಸಿಸ್ಟಮ್ಸ್ ಸಂಸ್ಥೆಯು ಕಾಲೇಜಿಗೆ ಭೇಟಿ ನೀಡಿತ್ತು. ಈ ನೇಮಕಾತಿ ಪ್ರಕ್ರಿಯೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ

ಕೆಡೆನ್ಸ್ ಡಿಸೈನ್ ಸಿಸ್ಟಮ್ಸ್ ಸಂಸ್ಥೆಗೆ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಧನ್ಯ ಪಿ. ಆಯ್ಕೆ Read More »

ವಿದ್ಯಾಭಾರತಿ ಕ್ರೀಡಾಕೂಟ : ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ವಿದ್ಯಾಭಾರತಿ ವತಿಯಿಂದ ತೆಲಂಗಾಣ ಹೈದರಾಬಾದ್ ಶ್ರೀ ಸರಸ್ವತಿ ವಿದ್ಯಾ ಪೀಠಂ ಶಾರದಾ ಧಾಮದಲ್ಲಿ ನಡೆದ ದಕ್ಷಿಣ  ಮಧ್ಯ ಕ್ಷೇತ್ರೀಯ ಕ್ರೀಡಾಕೂಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ವಿದ್ಯಾರ್ಥಿಗಳಾದ ಕೀರ್ತಿ  ಎತ್ತರ ಜಿಗಿತ (ಪ್ರಥಮ) ಗುಣಶ್ರೀ 80ಮೀ ಹರ್ಡಲ್ಸ್ (ಪ್ರಥಮ), ವಿಕೃತಿ ಕುಮಾರಿ ನಡಿಗೆಯಲ್ಲಿ ದ್ವಿತೀಯ ಹಾಗೂ 14 ರ ವಯೋಮಾನದ ಬಾಲಕಿಯರ  4*100  ಮೀ ರಿಲೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ದಾಮೋದರ್,

ವಿದ್ಯಾಭಾರತಿ ಕ್ರೀಡಾಕೂಟ : ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಸಾಧನೆಗೆ ಪ್ರಾಮಾಣೀಕತೆ, ಯೋಜನೆ, ಶ್ರಮವೇ ಬಂಡವಾಳ | ಕೊಂಬೆಟ್ಟು ಶ್ರೀ ಮಹಾಲಿಂಗೇಶ್ವರ ಐಟಿಐಯ ವಾರ್ಷಿಕ ಘಟಿಕೋತ್ಸವದಲ್ಲಿ ಶಾಸಕ ಅಶೋಕ್ ರೈ

ಪುತ್ತೂರು: ಟೆಕ್ನಿಕಲ್ ಕೋರ್ಸ್ ಪಾಸ್ ಆದ ಬಳಿಕ ಜೀವನದಲ್ಲಿ ಅಚ್ಯುವ್‌ಮೆಂಟ್ ಮಾಡಬೇಕು. ಇಂತಹ ಅಚ್ಯುವ್‌ಮೆಂಟ್‌ಗೆ ಪ್ರಾಮಾಣಿಕತೆ, ಯೋಜನೆ, ಶ್ರಮವಿದ್ದರೆ ಯಶಸ್ಸು ಖಂಡಿತಾ ಸಿಗುತ್ತದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಸೋಮವಾರ ನಡೆದ ಕೊಂಬೆಟ್ಟು ಶ್ರೀ ಮಹಾಲಿಂಗೇಶ್ವರ ಐಟಿಐಯ ವಾರ್ಷಿಕ ಘಟಿಕೋತ್ಸವದಲ್ಲಿ ಅವರು ಸಂಸ್ಥೆಯ ಕೌಶಲ್ಯ ಸಭಾವನದಲ್ಲಿನ ಡಿ.ವಿ ಸದಾನಂದ ಗೌಡ ಮತ್ತು ಸಂಜೀವ ಮಠಂದೂರು ವೇದಿಕೆಯಲ್ಲಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವೃತ್ತಿ ಪ್ರಮಾಣ ಪತ್ರ ವಿತರಣೆ ಮಾಡಿ ಮಾತನಾಡಿದರು. ಇಂಜಿನಿಯರಿಂಗ್ ಮಾಡಿದವರು ತುಂಬಾ ಜನ ಕೆಲಸ

ಸಾಧನೆಗೆ ಪ್ರಾಮಾಣೀಕತೆ, ಯೋಜನೆ, ಶ್ರಮವೇ ಬಂಡವಾಳ | ಕೊಂಬೆಟ್ಟು ಶ್ರೀ ಮಹಾಲಿಂಗೇಶ್ವರ ಐಟಿಐಯ ವಾರ್ಷಿಕ ಘಟಿಕೋತ್ಸವದಲ್ಲಿ ಶಾಸಕ ಅಶೋಕ್ ರೈ Read More »

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಇಬ್ಬರು ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ವಿಜ್ಞಾನ ಮೇಳಕ್ಕೆ ಆಯ್ಕೆ

ಪುತ್ತೂರು: ವಿಜಯವಾಡದ ಗುಂಟೂರು – ನೂತಕ್ಕಿ ವಿಜ್ಞಾನ ವಿಹಾರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆದ ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರೀಯ ಮಟ್ಟದ ಜ್ಞಾನ ವಿಜ್ಞಾನ ಮೇಳದ ಸ್ಪರ್ಧೆಗಳಲ್ಲಿ ಪುತ್ತೂರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 8ನೇ ತರಗತಿಯ ಶಮನ್ ಎನ್.  ತ್ಯಾಜ್ಯ ನಿರ್ವಹಣಾ ವಿಜ್ಞಾನ ಮಾದರಿಯಲ್ಲಿ ಪ್ರಥಮ, ಕುಮಾರಿ ಪ್ರೀತಿ ಪ್ರಭು ಗಣಿತ ಪ್ರಯೋಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಮೂಲಕ ಪಂಜಾಬಿನ ಅಮೃತಸರ ಮತ್ತು ಉತ್ತರಪ್ರದೇಶದ ಗಾಜಿಯಾಬಾದ್ ನಲ್ಲಿ

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಇಬ್ಬರು ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ವಿಜ್ಞಾನ ಮೇಳಕ್ಕೆ ಆಯ್ಕೆ Read More »

ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ ಇಸ್ರೋ ʻವಿಶ್ವ ಅಂತರಿಕ್ಷ ಸಪ್ತಾಹʼ

ಪುತ್ತೂರು: ಚಂದ್ರಯಾನ -3 ಮತ್ತು ಆದಿತ್ಯ ಎಲ್‌1ʼ ಬಾಹ್ಯಾಕಾಶ ಯೋಜನೆ ಮೂಲಕ ದೇಶದ ಮನೆಮಾತಾಗಿರುವ ಇಸ್ರೋ ವಿಜ್ಞಾನಿಗಳ ತಂಡ ಪುತ್ತೂರಿನಲ್ಲಿ ʻವಿಶ್ವ ಅಂತರಿಕ್ಷ ಸಪ್ತಾಹ -23ʼ ಕಾರ್ಯಕ್ರಮವನ್ನು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಯಾದವಶ್ರೀ ಅಡಿಟೋರಿಯಂನಲ್ಲಿ ಆಯೋಜಿಸಿತ್ತು. ಇಸ್ರೋ ಯು.ಆರ್. ರಾವ್ ಸ್ಯಾಟಲೈಟ್ ಸೆಂಟರ್ ವತಿಯಿಂದ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಹಯೋಗದೊಂದಿಗೆ ದಿನವಿಡೀ ಸ್ಪರ್ಧೆ, ಇಸ್ರೋ ಮಾದರಿಗಳ ಪ್ರದರ್ಶನ, ರಸಪ್ರಶ್ನೆ, ವಿಚಾರ ಸಂಕಿರಣಗಳ ಮೂಲಕ ಶಾಲೆಯಲ್ಲಿ ಬಾಹ್ಯಾಕಾಶ ವಿಜ್ಞಾನದ ವಾತಾವರಣ ಸೃಷ್ಟಿಸಿತು. ಬೆಳಿಗ್ಗೆ ರಾಷ್ಟ್ರೀಯ

ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ ಇಸ್ರೋ ʻವಿಶ್ವ ಅಂತರಿಕ್ಷ ಸಪ್ತಾಹʼ Read More »

ವಲಯ ಮಟ್ಟದ ಕ್ರೀಡಾಕೂಟ: ನರಿಮೊಗರು ಸರಸ್ವತಿ ಶಾಲೆಗೆ ಹಲವು ಪ್ರಶಸ್ತಿ

ಪುತ್ತೂರು: ನರಿಮೊಗರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ನರಿಮೊಗರು ಸರಸ್ವತಿ ಶಾಲೆಯ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಶಾಲಾ ಶಿಕ್ಷಣ ಇಲಾಖೆ ಏರ್ಪಡಿಸಿದ ಸ್ಪರ್ಧೆಯಲ್ಲಿ 8ನೇ ತರಗತಿಯ ವರ್ಷಿಣಿ 600 ಮೀ. ಓಟದಲ್ಲಿ ಪ್ರಥಮ ಸ್ಥಾನ ಮತ್ತು 400 ಮೀ. ಓಟದಲ್ಲಿ ದ್ವಿತೀಯ ಸ್ಥಾನ, 7ನೇ ತರಗತಿಯ ಧನುಷಾ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ, 7ನೇ ತರಗತಿಯ ಮಹಮ್ಮದ್ ಸುಹೈಲ್ 200 ಮೀ. ಓಟದಲ್ಲಿ ದ್ವಿತೀಯ ಸ್ಥಾನ, 9ನೇ ತರಗತಿಯ

ವಲಯ ಮಟ್ಟದ ಕ್ರೀಡಾಕೂಟ: ನರಿಮೊಗರು ಸರಸ್ವತಿ ಶಾಲೆಗೆ ಹಲವು ಪ್ರಶಸ್ತಿ Read More »

error: Content is protected !!
Scroll to Top