ಕ್ಯಾಂಪಸ್‌

ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ಬಲಿಷ್ಠ ಸಮಾಜ ನಿರ್ಮಾಣ‌ ಮಾಡಬೇಕಿದೆ | ಕಂಬಲದಡ್ಡ ಅಂಗನವಾಡಿ ಕೇಂದ್ರ ಉದ್ಘಾಟಿಸಿ ಶಾಸಕ ಅಶೋಕ್ ರೈ

ಪುತ್ತೂರು: ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ಬಲಿಷ್ಡ ಸಮಾಜದ ನಿರ್ಮಾಣಕ್ಕೆ ಶ್ರಮ ಪಡಬೇಕಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಆರ್ಯಾಪು ಗ್ರಾಮದ ಕಂಬಲದಡ್ಡ ಅಂಗನವಾಡಿ ಕೇಂದ್ರ ಉದ್ಘಾಟಿಸಿ ಮಾತನಾಡಿದರು. ಅಂಗನವಾಡಿಗಳಿಗೆ ಮಕ್ಕಳನ್ನು ದಾಖಲಿಸುವ ಮೂಲಕ ನಾವು ಪುಟ್ಟ ಹೃದಯಗಳಿಗೂ ಸಂಸ್ಕಾರದ ಶಿಕ್ಷಣ ಎಳೆಯದರಲ್ಲೇ ನೀಡಬೇಕು ಎಂದು ಹೇಳಿದರು. ವೇದಿಕೆಯಲ್ಲಿ ಆರ್ಯಾಪು  ಗ್ರಾಪಂ ಅಧ್ಯಕ್ಷೆ ಗೀತಾ, ಉಪಾಧ್ಯಕ್ಷೆ ಅಶೋಕ ನಾಯ್ಕ, ಅಂಗನವಾಡಿ ಮೇಲ್ವಿಚಾರಕಿ ಜಲಜಾಕ್ಷಿ, ಗ್ರಾಪಂ ಪಿಡಿಒ ನಾಗೇಶ್, ಗ್ರಾಪಂ ಸದಸ್ಯರುಗಳಾದ ಪೂರ್ಣಿಮಾ, ರತ್ನಾವತಿ, […]

ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ಬಲಿಷ್ಠ ಸಮಾಜ ನಿರ್ಮಾಣ‌ ಮಾಡಬೇಕಿದೆ | ಕಂಬಲದಡ್ಡ ಅಂಗನವಾಡಿ ಕೇಂದ್ರ ಉದ್ಘಾಟಿಸಿ ಶಾಸಕ ಅಶೋಕ್ ರೈ Read More »

ಮುರುವ ಸರಕಾರಿ ಪ್ರೌಢ ಶಾಲೆ ರಸ್ತೆಗೆ ಶಿಲಾನ್ಯಾಸ

ಪುತ್ತೂರು: ಮಾಣಿಲ ಗ್ರಾಮದ ಮುರುವ ಸರಕಾರಿ ಪ್ರೌಢ ಶಾಲೆಗೆ ತೆರಳುವ ರಸ್ತೆಗೆ ಕಾಂಕ್ರಿಟೀಕರಣಕ್ಕೆ ಗುದ್ದಲಿ ಪೂಜೆ ನಡೆಯಿತು. ಶಾಸಕ ಅಶೋಕ್ ರೈ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿ, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅನುದಾನ ನೀಡುವುದಾಗಿ ಭರವಸೆ ನೀಡಿದರು. ಮಾಣಿಲ ಗ್ರಾಪಂ ಅಧ್ಯಕ್ಷ ಶ್ರೀಧರ್ ಬಾಳೆಕಲ್ಲು ಮಾತನಾಡಿ, ಹಲವು ವರ್ಷಗಳ ಬೇಡಿಕೆ ಈ ಬಾರಿ ಈಡೇರಿದೆ. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಅನುಕೂಲಕ್ಕೆ ಈ ರಸ್ತೆ ಬಳಕೆಯಾಗಲಿದೆ ಎಂದು ಹೇಳಿದರು. ಈ ವೇಳೆ ಶಾಲೆಯ ಸ್ಥಳ ದಾನಿ ಮುರುವ ಮಹಾಬಲೆಭಟ್

ಮುರುವ ಸರಕಾರಿ ಪ್ರೌಢ ಶಾಲೆ ರಸ್ತೆಗೆ ಶಿಲಾನ್ಯಾಸ Read More »

ಎಳವೆಯಲ್ಲಿ ಸ್ಪಷ್ಟ ಮಾರ್ಗದರ್ಶನ ಇಲ್ಲದಿರುವುದೇ ಹಿಂದೂ ಧರ್ಮಕ್ಕೆ ಸವಾಲು | ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಶೃತಿ ಭಟ್

ಪುತ್ತೂರು: ಧರ್ಮದ ಬಗೆಗೆ ಎಳವೆಯಿಂದ ಸರಿಯಾದ ಮಾರ್ಗದರ್ಶನ ಇರದಿರುವುದೇ ಹಿಂದೂ ಧರ್ಮ ಇಂದು ಎದುರಿಸುತ್ತಿರುವ ಸಮಸ್ಯೆಗಳಿಗೆ ಮೂಲವೆನಿಸಿದೆ. ಯಾವಾಗ ಸನಾತನ ಧರ್ಮದ ಉತ್ಕೃಷ್ಟತೆ ಎಳೆಯ ವಯಸ್ಸಿನಿಂದಲೇ ಅರ್ಥವಾಗುತ್ತದೋ ಆಗ ಮತಾಂತರದಂತಹ ವಿಕೃತತೆಗೆ ಅವಕಾಶವಾಗುವುದಿಲ್ಲ. ಸನಾತನ ಹಿಂದೂ ಧರ್ಮದ ಮೇರು ಸಂಗತಿಗಳನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕಾದ ಅಗತ್ಯವಿದೆ ಎಂದು ತಿರುವನಂತಪುರಂನ ಆರ್ಷ ವಿದ್ಯಾ ಸಮಾಜದ ಸ್ವಯಂಸೇವಕಿ ಶೃತಿ ಭಟ್ ಹೇಳಿದರು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಬಪ್ಪಳಿಗೆಯಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ಆಯೋಜಿಸಲಾದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಶನಿವಾರ

ಎಳವೆಯಲ್ಲಿ ಸ್ಪಷ್ಟ ಮಾರ್ಗದರ್ಶನ ಇಲ್ಲದಿರುವುದೇ ಹಿಂದೂ ಧರ್ಮಕ್ಕೆ ಸವಾಲು | ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಶೃತಿ ಭಟ್ Read More »

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಅನಾವರಣಗೊಂಡ ಫಿಲೋ ಉತ್ಸವ  

ಪುತ್ತೂರು: ಶಿಕ್ಷಣ ಜಗತ್ತನ್ನು ಬದಲಾಯಿಸುವ ಪ್ರಮುಖ ಅಸ್ತ್ರವಾಗಿದ್ದು, ವ್ಯಕ್ತಿಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುವುದರೊಂದಿಗೆ ಜ್ಞಾನವುಳ್ಳ ನಾಗರಿಕನನ್ನಾಗಿ ಮಾಡಲು ಸಹಕಾರಿಯಾಗುತ್ತದೆ ಎಂದು ಕರ್ನಾಟಕ ಸರ್ಕಾರ ಮುಖ್ಯಮಂತ್ರಿಗಳ ಉಪ ಕಾರ್ಯದರ್ಶಿ ಅರುಣ್ ಫುಟ್ರಾಡೋ ಹೇಳಿದರು. ಸಂತ ಫಿಲೋಮಿನಾ  ಪದವಿ ಪೂರ್ವ ಕಾಲೇಜಿನಲ್ಲಿ ಡಿ.23 ರಂದು ನಡೆದ ‘ಫಿಲೋ ಉತ್ಸವ ಹಾಗೂ ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು. ಶಿಕ್ಷಣ ಎಲ್ಲರನ್ನೂ ಸಬಲಗೊಳಿಸುತ್ತದೆ. ಇದು ಆಧುನಿಕ ಮತ್ತು ಕೈಗಾರಿಕೀಕರಣಗೊಂಡ ಜಗತ್ತನ್ನು ರೂಪಿಸುವ ಪ್ರಮುಖ ಅಂಶವಾಗಿದೆ. ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಅನಾವರಣಗೊಂಡ ಫಿಲೋ ಉತ್ಸವ   Read More »

ಕ್ಯಾಂಪ್ಕೋ ನೇಮಕಾತಿ ಲಿಖಿತ ಪರೀಕ್ಷೆ : ವಿದ್ಯಾಮಾತಾ ಅಕಾಡೆಮಿಯಲ್ಲಿ ಆನ್ಲೈನ್ ತರಗತಿ ಪ್ರಾರಂಭ

ಪುತ್ತೂರು: ಡಿ31ರಂದು ನಡೆಯಲಿರುವ ಕ್ಯಾಂಪ್ಕೋ ನೇಮಕಾತಿಯ ಲಿಖಿತ ಪರೀಕ್ಷೆ ಎದುರಿಸುವ ಅಭ್ಯರ್ಥಿಗಳಿಗೆ ವಿದ್ಯಾಮಾತಾ ಅಕಾಡೆಮಿ ಡಿ.25 ರಿಂದ ಡಿ.30ರ ವರೆಗೆ ಆನ್ಲೈನ್ ತರಗತಿಯನ್ನು ಆರಂಭಿಸಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಈ ತರಗತಿಗಳ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ಅಕಾಡೆಮಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ತರಗತಿಗಳು ರಾತ್ರಿ ಆನ್ಲೈನ್ ಮೂಲಕ 7.00ರಿಂದ 9.00ರವರೆಗೆ 2 ಗಂಟೆಗಳ ಅವಧಿಯದ್ದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ವಿದ್ಯಾಮಾತಾ ಅಕಾಡೆಮಿ, ಹಿಂದೂಸ್ತಾನ್ ಕಾಂಪ್ಲೆಕ್ಸ್,ಎ.ಪಿ.ಯಂ.ಸಿ ರೋಡ್, ಸಿಟಿ ಆಸ್ಪತ್ರೆ ಹತ್ತಿರ, ಪುತ್ತೂರು, ಫೋನ್: 96204

ಕ್ಯಾಂಪ್ಕೋ ನೇಮಕಾತಿ ಲಿಖಿತ ಪರೀಕ್ಷೆ : ವಿದ್ಯಾಮಾತಾ ಅಕಾಡೆಮಿಯಲ್ಲಿ ಆನ್ಲೈನ್ ತರಗತಿ ಪ್ರಾರಂಭ Read More »

ಮಾಧ್ಯಮ ಜಗತ್ತು ಊಹೆಗೂ ಮೀರಿ ಬದಲಾಗಿದೆ | ಮಾಧ್ಯಮಗಳ ಸವಾಲು ಮತ್ತು ಸಾಧ್ಯತೆಗಳ ಕುರಿತು ಸಂವಾದ ಕಾರ್ಯಕ್ರಮದಲ್ಲಿ ಪ್ರೊ. ವಿ. ಬಿ ಅರ್ತಿಕಜೆ

ಪುತ್ತೂರು: ಸಂವಾದ ಕಾರ್ಯಕ್ರಮಗಳು ಪತ್ರಿಕೋದ್ಯಮ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕಾರಣವಾಗುತ್ತವೆ. ಪತ್ರಿಕೋದ್ಯಮ ವಿದ್ಯಾರ್ಥಿಯಾದವನು ಪ್ರಶ್ನಿಸುವ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು. ಸಮಾಜದಲ್ಲಿ ಪತ್ರಿಕೋದ್ಯಮ ಬೆಳೆಯಬೇಕಾದರೆ ಪ್ರೋತ್ಸಾಹ ಬಹಳ ಮುಖ್ಯ ಎಂದು ವಿಶ್ರಾಂತ ಇತಿಹಾಸ ಪ್ರಾಧ್ಯಾಪಕ ಹಾಗೂ ಹಿರಿಯ ಪತ್ರಕರ್ತ ಪ್ರೊ. ವಿ. ಬಿ ಅರ್ತಿಕಜೆ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಸ್ವಾಯತ್ತ ಮಹಾವಿದ್ಯಾಲಯ, ಸ್ನಾತಕೋತ್ತರ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗ, ಐಕ್ಯೂಎಸಿ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಪುತ್ತೂರು ಇವುಗಳ ಸಂಯುಕ್ತ ಆಶ್ರಯದಲ್ಲಿ

ಮಾಧ್ಯಮ ಜಗತ್ತು ಊಹೆಗೂ ಮೀರಿ ಬದಲಾಗಿದೆ | ಮಾಧ್ಯಮಗಳ ಸವಾಲು ಮತ್ತು ಸಾಧ್ಯತೆಗಳ ಕುರಿತು ಸಂವಾದ ಕಾರ್ಯಕ್ರಮದಲ್ಲಿ ಪ್ರೊ. ವಿ. ಬಿ ಅರ್ತಿಕಜೆ Read More »

ಡಿ.29-30: ಕಾವು ಬುಶ್ರಾ ವಿದ್ಯಾಸಂಸ್ಥೆಗಳ ಬೆಳ್ಳಿ ಹಬ್ಬ ಸಂಭ್ರಮ ‘ಬುವಿ ಉತ್ಸವ-2023’ | ನವೀಕೃತ ಸಭಾಂಗಣ ‘ಬುಶ್ರಾ ಅಡಿಟೋರಿಯಂ’ ಉದ್ಘಾಟನೆ

ಪುತ್ತೂರು: ಬೆಳ್ಳಿಹಬ್ಬದ ಹೊಸ್ತಿಲಲ್ಲಿರುವ ಪುತ್ತೂರಿನ ಗ್ರಾಮೀಣ ಪ್ರದೇಶದ ಕಾವು ಬುಶ್ರಾ ವಿದ್ಯಾಸಂಸ್ಥೆಯಲ್ಲಿ ಬೆಳ್ಳಿಹಬ್ಬ ಸಂಭ್ರಮ “ಬುವಿ ಉತ್ಸವ-2023” ಹಾಗೂ ನವೀಕೃತಗೊಂಡ ಸಭಾಂಗಣ “ಬುಶ್ರಾ ಅಡಿಟೋರಿಯಂ”ನ ಉದ್ಘಾಟನಾ ಸಮಾರಂಭ ಡಿ.29 ಹಾಗೂ 30 ರಂದು ವಿದ್ಯಾಸಂಸ್ಥೆಯ ಆವರಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಶೈಕ್ಷಣಿಕ ಸಲಗಹೆಗಾರರಾದ ಕೃಷ್ಣಪ್ರಸಾದ್ ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬೆಳಿಗ್ಗೆ 9.45 ಕ್ಕೆ ಧ್ವಜಾರೋಹಣವನ್ನು ಕಾವು ಬುಶ್ರಾ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷ ಜ.ಅಬ್ದುಲ್ ಅಝೀಝ್‍ನೆರವೇರಿಸಲಿದ್ದು, ಶ್ರೀ ರಾಮಕೃಷ್ಣ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ

ಡಿ.29-30: ಕಾವು ಬುಶ್ರಾ ವಿದ್ಯಾಸಂಸ್ಥೆಗಳ ಬೆಳ್ಳಿ ಹಬ್ಬ ಸಂಭ್ರಮ ‘ಬುವಿ ಉತ್ಸವ-2023’ | ನವೀಕೃತ ಸಭಾಂಗಣ ‘ಬುಶ್ರಾ ಅಡಿಟೋರಿಯಂ’ ಉದ್ಘಾಟನೆ Read More »

ಬೆಳಿಯೂರುಕಟ್ಟೆ ಸರಕಾರಿ  ಪ ಪೂ ಕಾಲೇಜು ವಾರ್ಷಿಕೋತ್ಸವ

ಪುತ್ತೂರು: ಮಕ್ಕಳನ್ನು ತಿದ್ದುವ ಮತ್ತು ಉತ್ತಮ ದಾರಿ ತೋರಿಸುವ ಕೆಲಸ ಕೇವಲ ಶಿಕ್ಷಕರಿಂದ ‌ಮಾತ್ರವಲ್ಲ ಪೋಷಕರಿಂದಲೂ ಆಗಬೇಕು ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಬೆಳಿಯೂರು ಕಟ್ಟೆ ಸರಕಾರಿ ಪ ಪೂ ಕಾಲೇಜಿನಲ್ಲಿ ನಡೆದ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸರಕಾರಿ ಶಾಲೆಯಲ್ಲಿ ಶಿಸ್ತು ಕಡಿಮೆ ಎಂದು ಕೆಲವರು ಆಪಾದನೆ ಮಾಡುತ್ತಾರೆ. ಸರಕಾರಿ ಶಾಲೆಯಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲಾಗುತ್ತದೆ. ಶಿಸ್ತು ಪಾಲನೆ ಮಾಡಬೇಕಾದರೆ ಪೋಷಕರ ಸಹಕಾರ ಅತೀ ಅಗತ್ಯವಾಗಿದೆ ಎಂದ ಅವರು,

ಬೆಳಿಯೂರುಕಟ್ಟೆ ಸರಕಾರಿ  ಪ ಪೂ ಕಾಲೇಜು ವಾರ್ಷಿಕೋತ್ಸವ Read More »

ಶ್ರೀ ಸೀತಾ ರಾಘವ ಪದವಿಪೂರ್ವ, ಪ್ರೌಢಶಾಲಾ ವಿಭಾಗದ ಸಾಂಸ್ಕೃತಿಕ ಉತ್ಸವ-2023

ಪೆರ್ನಾಜೆ: ಪೆಟ್ಟು ತಿಂದ ಕಲ್ಲು ಹೇಗೆ ಸುಂದರ ವಿಗ್ರಹವಾಗುತ್ತದೋ ಹಾಗೆ ವಿದ್ಯಾರ್ಥಿಗಳನ್ನು ಎಳವೆಯಲ್ಲೇ ತಿದ್ದಿ ತೀಡಿ ರೂಪ ನೀಡುವ ಶಿಕ್ಷಕರು ಆದರ್ಶ ಗುರು ಎಂದು ಹಿರಿಯ ವಿದ್ಯಾರ್ಥಿ ಕುಮಾರ್ ಪೆರ್ನಾಜೆ ಹೇಳಿದರು. ಅವರು ಪೆರ್ನಾಜೆ ಶ್ರೀ ಸೀತಾರಾಘವ ಪದವಿಪೂರ್ವ ಹಾಗೂ ಪ್ರೌಢಶಾಲಾ ಸಾಂಸ್ಕೃತಿಕ ಉತ್ಸವದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಗಾಳಿ ನಮಗೆಷ್ಟು ಮುಖ್ಯವೋ ಗಾಳಿಮಾತು ಅಷ್ಟೇ ಅಪಾಯಕಾರಿ. ನಂಬಿಕೆ ಅನ್ನೋದು ಬೆಲೆಕಟ್ಟಲಾಗದ ಅಮೂಲ್ಯ ರತ್ನ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸ್ಪಷ್ಟಗುರಿ, ಒಳ್ಳೆಯ ಸಂಸ್ಕೃತಿಯನ್ನು ಮೈಗೂಡಿಸಿಕೊಳ್ಳಬೇಕು

ಶ್ರೀ ಸೀತಾ ರಾಘವ ಪದವಿಪೂರ್ವ, ಪ್ರೌಢಶಾಲಾ ವಿಭಾಗದ ಸಾಂಸ್ಕೃತಿಕ ಉತ್ಸವ-2023 Read More »

ಕೊಳ್ತಿಗೆ ಶಾಲಾ ವಾರ್ಷಿಕೋತ್ಸವ, ಹಳೆ ವಿದ್ಯಾರ್ಥಿ ಸಂಘದ ರಜತ ಸಂಭ್ರಮಕ್ಕೆ ಚಾಲನೆ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ, ಕೊಳ್ತಿಗೆ ಹಿರಿಯ ಪ್ರಾಥಮಿಕ ಶಾಲೆ, ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ ಹಾಗೂ ರಜತ ಸಂಭ್ರಮ ಸಮಿತಿ ಸಂಯುಕ್ತ ಆಶ್ರಯದಲ್ಲಿ ಕೊಳ್ತಿಗೆ ಶಾಲಾ ವಾರ್ಷಿಕೋತ್ಸವ ಹಾಗೂ ಹಳೆ ವಿದ್ಯಾರ್ಥಿ ಸಂಘದ ರಜತ ಸಂಭ್ರಮ ಶನಿವಾರ ಶಾಲಾ ಸಭಾಂಗಣದಲ್ಲಿ ನಡೆಯಿತು. ಕೊಳ್ತಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಕ್ಕಮ್ಮ ದೀಪ ಪ್ರಜ್ವಲನೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಕೊಳ್ತಿಗೆ ಗ್ರಾಮ ಪಂಚಾಯಿತಿ ಸದಸ್ಯರಾದ ಶಾಮ್‍ ಸುಂದರ

ಕೊಳ್ತಿಗೆ ಶಾಲಾ ವಾರ್ಷಿಕೋತ್ಸವ, ಹಳೆ ವಿದ್ಯಾರ್ಥಿ ಸಂಘದ ರಜತ ಸಂಭ್ರಮಕ್ಕೆ ಚಾಲನೆ Read More »

error: Content is protected !!
Scroll to Top