ಧನಾತ್ಮಕವಾಗಿ ಚಿಂತಿಸಿದಲ್ಲಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ | ಪಿನ್ಯಾಕಲ್ ಐಟಿ ಕ್ಲಬ್‌ನ ಕಾರ್ಯಕ್ರಮಗಳನ್ನು ಉದ್ಘಾಟಿಸಿ ವಂ.ಡಾ.ಆಂಟೋನಿ ಪ್ರಕಾಶ್
ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಗಣಕವಿಜ್ಞಾನ ವಿಭಾಗವು ನಡೆಸುತ್ತಿರುವ ಪಿನ್ಯಾಕಲ್ ಐಟಿ ಕ್ಲಬ್‌ನ ವತಿಯಿಂದ 2023-24ನೇ ಶೈಕ್ಷಣಿಕ ವರ್ಷದಲ್ಲಿ ಆಯೋಜಿಸಲ್ಪಡುವ ಕಾರ್ಯಕ್ರಮಗಳಿಗೆ ಕಾಲೇಜಿನ ಬೆಳ್ಳಿಹಬ್ಬ ಸಭಾಭವನದಲ್ಲಿ ಚಾಲನೆ ನೀಡಲಾಯಿತು. ಕಾಲೇಜಿನ ಪ್ರಾಚಾರ್ಯ ವಂ. ಡಾ. ಆಂಟೊನಿ ಪ್ರಕಾಶ್ ಮೊಂತೆರೋ ದೀಪ ಬೆಳಗಿಸಿ ಉದ್ಘಾಟಿಸಿ, ಇಂದಿನ ಡಿಜಿಟಲ್ ಯುಗದಲ್ಲಿ ಯುವಜನರು ಬೇಗನೆ ಭಾವೋದ್ವೇಗಕ್ಕೆ ಒಳಗಾಗುತ್ತಾರೆ. ಇದರಿಂದಾಗುವ ಅನಾಹುತಗಳನ್ನು ತಡೆಗಟ್ಟುವ ಸಲುವಾಗಿ ಮಾನಸಿಕ ಪ್ರಥಮ ಚಿಕಿತ್ಸೆ ನೀಡಲಾಗುತ್ತದೆ. ಮನಸ್ಸಿನಲ್ಲಿ ಋಣಾತ್ಮಕ ಭಾವನೆಗಳನ್ನು ಬೆಳೆಸದೆ ಧನಾತ್ಮಕವಾಗಿ ಚಿಂತಿಸಿದಲ್ಲಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಪಿನ್ಯಾಕಲ್ […]