ಕ್ಯಾಂಪಸ್‌

ಡಿ.16: ಕೊಳ್ತಿಗೆ ಶಾಲಾ ವಾರ್ಷಿಕೋತ್ಸವ , ಹಳೆ ವಿದ್ಯಾರ್ಥಿ ಸಂಘದ ರಜತ ಸಂಭ್ರಮ | ಪುತ್ತೂರು ತಾಲೂಕಿನಲ್ಲೇ ಪ್ರಪ್ರಥಮ ಬಾರಿಗೆ ತುಳು ಹಾಸ್ಯಮಯ ನಾಟಕ ‘ಶಾಂಭವಿ’ ಪ್ರದರ್ಶನ

ಪುತ್ತೂರು: ಪುತ್ತೂರು ತಾಲೂಕಿನ ಕೊಳ್ತಿಗೆ ಶಾಲಾ ವಾರ್ಷಿಕೋತ್ಸವ ಹಾಗೂ ಹಳೆ ವಿದ್ಯಾರ್ಥಿ ಸಂಘದ ರಜತ ಸಂಭ್ರಮದ ಅಂಗವಾಗಿ ಪುತ್ತೂರು ತಾಲೂಕಿನಲ್ಲೇ ಪ್ರಪ್ರಥಮ ಬಾರಿಗೆ ಉಡುಪಿ ಅಭಿನಯ ಕಲಾವಿದರು ತಂಡದಿಂದ ಕುತೂಹಲಭರಿತ ತುಳು ಹಾಸ್ಯಮಯ ನಾಟಕ ‘ಶಾಂಭವಿ’ ಕೊಳ್ತಿಗೆ ಶಾಲಾ ಸಭಾಂಗಣದಲ್ಲಿ ಡಿ.16 ಶನಿವಾರ ರಾತ್ರಿ ಗಂಟೆ 11 ರಿಂದ ಪ್ರದರ್ಶನಗೊಳ್ಳಲಿದೆ ಎಂದು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಯತ್ ಕೆಮ್ಮಾರ ತಿಳಿಸಿದ್ದಾರೆ. ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಂಜೆ 6 ರಿಂದ ಅಂಗನವಾಡಿ ಪುಟಾಣಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, […]

ಡಿ.16: ಕೊಳ್ತಿಗೆ ಶಾಲಾ ವಾರ್ಷಿಕೋತ್ಸವ , ಹಳೆ ವಿದ್ಯಾರ್ಥಿ ಸಂಘದ ರಜತ ಸಂಭ್ರಮ | ಪುತ್ತೂರು ತಾಲೂಕಿನಲ್ಲೇ ಪ್ರಪ್ರಥಮ ಬಾರಿಗೆ ತುಳು ಹಾಸ್ಯಮಯ ನಾಟಕ ‘ಶಾಂಭವಿ’ ಪ್ರದರ್ಶನ Read More »

ಕೃಷಿಕ ಸಮಸ್ಯೆ ಪರಿಹರಿಸಲು ಎಐ ಟೆಕ್ನಾಲಜಿ! | ಮರಹತ್ತುವ ಯಂತ್ರ ಅಭಿವೃದ್ಧಿಪಡಿಸಿದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು

ಪುತ್ತೂರು: ರೋಬೋಟಿಕ್ಸ್ ಮತ್ತು ಕೃತಕ ಬುದ್ಧಿಮತ್ತೆಯ ಮೂಲಕ ಮರಹತ್ತುವ ಯಂತ್ರವನ್ನು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆರ್ಟಿಫೀಶಿಯನ್ ಇಂಟೆಲಿಜೆನ್ಸ್ ಎಂಡ್ ಮೆಷಿನ್ ಲರ್ನಿಂಗ್ ವಿಭಾಗದ  ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿದ್ದಾರೆ. ಆಧುನಿಕ ಜೀವನ ಪದ್ದತಿಗೆ ಮಾರುಹೋಗಿರುವ ಯುವ ಜನತೆ ಕೃಷಿ ಕ್ಷೇತ್ರವನ್ನು ಕಡೆಗಣಿಸಿದೆ. ಇದರಿಂದಾಗಿ ಕೆಲವು ವಿಷಯಗಳಲ್ಲಿ ನುರಿತ ಕೆಲಸಗಾರರೇ ಸಿಗುತ್ತಿಲ್ಲ. ಅಡಿಕೆಗೆ ಔಷದ ಸಿಂಪಡಣೆ ಅಡಿಕೆ ಕೊಯ್ಲು, ತೆಂಗಿನಕಾಯಿ ಕೊಯ್ಲು ಮುಂತಾದ ನಾಜೂಕಿನ ಕೆಲಸಗಳನ್ನು ಬೆರಳೆಣಿಯಷ್ಟು ಮಂದಿಯಷ್ಟೇ ಮಾಡುತ್ತಿದ್ದಾರೆ. ಈ ಸಮಸ್ಯೆಗಳನ್ನು ಮನಗಂಡು ಪುತ್ತೂರಿನ

ಕೃಷಿಕ ಸಮಸ್ಯೆ ಪರಿಹರಿಸಲು ಎಐ ಟೆಕ್ನಾಲಜಿ! | ಮರಹತ್ತುವ ಯಂತ್ರ ಅಭಿವೃದ್ಧಿಪಡಿಸಿದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು Read More »

ವಾರ್ಷಿಕೋತ್ಸವ ಪ್ರಯುಕ್ತ ಪೋಷಕರ, ಹಿರಿಯ ವಿದ್ಯಾರ್ಥಿಗಳ ಕ್ರೀಡಾಕೂಟ

ಕಾಣಿಯೂರು: ಚಾರ್ವಾಕ ಸ.ಉ. ಹಿ.ಪ್ರಾ. ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಶಾಲಾ ಪೋಷಕರ ಹಾಗೂ ಹಿರಿಯ ವಿದ್ಯಾರ್ಥಿಗಳ ಕ್ರೀಡಾಕೂಟ ನಡೆಯಿತು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ರಾಮಣ್ಣ ಗೌಡ ಪೊನ್ನೆತ್ತಡಿ, ಉಪಾಧ್ಯಕ್ಷೆ ಸಾರಿಕಾ ದೇವರತ್ತಿಮಾರು, ಶಾಲಾ ಮುಖ್ಯಗುರು ಪಾರ್ವತಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಂದ್ರಶೇಖರ ಎರ್ಕ, ಕಾರ್ಯದರ್ಶಿ ಪರಮೇಶ್ವರ ಗೌಡ ಇಡ್ಯಡ್ಕ ಮೊದಲಾದವರು ಉಪಸ್ಥಿತರಿದ್ದರು. ಪೋಷಕರು ಹಾಗೂ ಹಿರಿಯ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದರು.

ವಾರ್ಷಿಕೋತ್ಸವ ಪ್ರಯುಕ್ತ ಪೋಷಕರ, ಹಿರಿಯ ವಿದ್ಯಾರ್ಥಿಗಳ ಕ್ರೀಡಾಕೂಟ Read More »

ರಾಷ್ಟ್ರೀಯ ಮಹಿಳಾ ಕಬಡ್ಡಿಗೆ ಕಾಣಿಯೂರಿನ ಸೌಮ್ಯ ಪೂಜಾರಿ ಆಯ್ಕೆ

ಪುತ್ತೂರು : ಪಂಜಾಬ್‌ನ ಲ್ಯಾಮ್ರನ್ ಟೆಕ್ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ 70ನೇ ಸೀನಿಯ‌ರ್ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್‌ಶಿಪ್  ಗೆ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ಕಾಣಿಯೂರಿನ ಸೌಮ್ಯ ಪೂಜಾರಿ ಆಯ್ಕೆಯಾಗಿದ್ದಾರೆ. ಸೌಮ್ಯ ಪೂಜಾರಿ ಕಾಣಿಯೂರು ಅಬೀರ ರಾಮಣ್ಣ ಪೂಜಾರಿ ಮತ್ತು ಲಲಿತಾ ದಂಪತಿ ಪುತ್ರಿ ಹಾಗೂ ಪುತ್ತೂರಿನ ಪೊಲೀಸ್‌ ಇಲಾಖೆಯ ಸಿಬ್ಬಂದಿ ಸಂತೋಷ್ ಕುಮಾರ್ ಅವರ ಸಹೋದರಿ. ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪ್ರಗತಿ ಆಂಗ್ಲಮಾದ್ಯಮ ಶಾಲೆ ಹಾಗೂ ಆಳ್ವಾಸ್‌ ವಿದ್ಯಾಸಂಸ್ಥೆಯ ಹಿರಿಯ ವಿದ್ಯಾರ್ಥಿನಿಯಾಗಿರುವ ಸೌಮ್ಯಾ ಅವರು

ರಾಷ್ಟ್ರೀಯ ಮಹಿಳಾ ಕಬಡ್ಡಿಗೆ ಕಾಣಿಯೂರಿನ ಸೌಮ್ಯ ಪೂಜಾರಿ ಆಯ್ಕೆ Read More »

ದಶಮಾನೋತ್ಸವ ಹೊಸ್ತಿಲಲ್ಲಿರುವ ಅಂಬಿಕಾ ಸಿಬಿಎಸ್‍ಇ ವಿದ್ಯಾಲಯ | ಡಿ. 16: ‘ಅಂತರ್ಮನಸ್ಸಿನ ವಿಸ್ಮಯ ಶಕ್ತಿಗಳ’ ಕುರಿತು ವಿಶೇಷ ಕಾರ್ಯಕ್ರಮ

ಪುತ್ತೂರು: ದಶಮಾನೋತ್ಸವ ಹೊಸ್ತಿಲಲ್ಲಿರುವ ಬಪ್ಪಳಿಗೆ ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದ ‘ದಶಾಂಬಿಕೋತ್ಸವ’ ಕಾರ್ಯಕ್ರಮದ ಅಂಗವಾಗಿ ‘ಅಂತರ್ಮನಸ್ಸಿನ ವಿಸ್ಮಯ ಶಕ್ತಿಗಳ’ ಕುರಿತು ವಿಶೇಷ ಕಾರ್ಯಕ್ರಮ ಡಿ. 16 ರಂದು ಹಮ್ಮಿಕೊಳ್ಳಲಾಗಿದೆ ಎಂದು ದಶಾಂಬಿಕೋತ್ಸವ ಸಮಿತಿ ಅಧ್ಯಕ್ಷ, ನ್ಯಾಯವಾದಿ ಮಹೇಶ್ ಕಜೆ ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪುತ್ತೂರಿನಲ್ಲಿ ಪ್ರಥಮ ಬಾರಿಗೆ ಇಂತಹಾ ವಿಶೇಷ ಕಾರ್ಯಕ್ರಮ ನಡೆಯಲಿದ್ದು, ಖ್ಯಾತ ಸಮ್ಮೋಹಿನಿ ತಜ್ಞ, ಕುಂಡಲಿನಿ ಯೋಗ ಗುರು ಬೆಂಗಳೂರಿನ ಡಾ.ರಾಮಚಂದ್ರ ಗುರೂಜಿ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದು ತಿಳಿಸಿದರು. ಡಾ. ರಾಮಚಂದ್ರ ಗುರೂಜಿಯವರು ಅಂತರಾಷ್ಟ್ರೀಯ

ದಶಮಾನೋತ್ಸವ ಹೊಸ್ತಿಲಲ್ಲಿರುವ ಅಂಬಿಕಾ ಸಿಬಿಎಸ್‍ಇ ವಿದ್ಯಾಲಯ | ಡಿ. 16: ‘ಅಂತರ್ಮನಸ್ಸಿನ ವಿಸ್ಮಯ ಶಕ್ತಿಗಳ’ ಕುರಿತು ವಿಶೇಷ ಕಾರ್ಯಕ್ರಮ Read More »

ವಿದ್ಯಾರ್ಥಿಯ ಅತಿರೇಕ ವರ್ತನೆ : ಮಕ್ಕಳ ಪೋಷಕರಿಂದ ವಿದ್ಯಾರ್ಥಿಯ ವಿರುದ್ಧ ಪ್ರತಿಭಟನೆ

ಪುತ್ತೂರು: ವಿದ್ಯಾರ್ಥಿಯೊಬ್ಬನ ಕಿರುಕುಳ ಸಹಿಸದೆ ವಿದ್ಯಾರ್ಥಿಗಳ ಪೋಷಕರು ಶಾಲೆಯ 6ನೇ ತರಗತಿ ವಿದ್ಯಾರ್ಥಿಯೊಬ್ಬನ ವಿರುದ್ಧ ಪ್ರತಿಭಟನೆ ನಡೆಸಿದ ಘಟನೆ ಮೇನಾಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನಡೆದಿದೆ. ಶಾಲೆಯ 6ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಯೊಬ್ಬನ ವಿರುದ್ದ ಮಕ್ಕಳ ಪೋಷಕರು ಒಂದಾಗಿ ಶಾಲಾ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮಕ್ಕಳಿಗೆ ಹೊಡೆಯುವ ಅಧ್ಯಾಪಕರ ವಿರುದ್ಧ ಪೋಷಕರು ಪ್ರತಿಭಟನೆ ಮಾಡುವುದನ್ನು ಕೇಳಿದ್ದೇವೆ. ಆದರೆ ಇದು ಹಾಗಲ್ಲ ಬದಲಾಗಿ ಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಯೊಬ್ಬನ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ. ತುಂಟಾಟ, ಕೀಟಲೆ, ಪೋಕರಿತನದಿಂದ ಶಾಲೆಯಲ್ಲಿ

ವಿದ್ಯಾರ್ಥಿಯ ಅತಿರೇಕ ವರ್ತನೆ : ಮಕ್ಕಳ ಪೋಷಕರಿಂದ ವಿದ್ಯಾರ್ಥಿಯ ವಿರುದ್ಧ ಪ್ರತಿಭಟನೆ Read More »

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾದವರಿಗೆ ಅಭಿನಂದನೆ

ಪುತ್ತೂರು: ದರ್ಬೆ ಲಿಟ್ಲ್ ಫ್ಲವರ್ ಶಾಲೆಯ ಬಾಲಕಿಯರ ಕಬಡ್ಡಿ ತಂಡ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದು, ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು. ಬೆಥನಿ ಸಂಸ್ಥೆಯ ಮಂಗಳೂರು ಪ್ರಾಂತ್ಯದ ಮುಖ್ಯಸ್ಥರ ಸಲಹೆಗಾರ್ತಿ, ವಂ. ರೋಶಲ್ ಬಿ.ಎಸ್. ಅಧ್ಯಕ್ಷೆತೆ ವಹಿಸಿ ತಂಡವನ್ನು ಅಭಿನಂದಿಸಿದರು. ಮುಖ್ಯ ಅತಿಥಿಗಳಾಗಿ ಬೆಥನಿ ಸಂಸ್ಥೆಯ ಮಂಗಳೂರು ಪ್ರಾಂತ್ಯದ ಲೆಕ್ಕ ಪರಿಶೋಧಕಿ ವಂ. ಸಿಬಿಲ್ ಬಿ.ಎಸ್., ಶಾಲಾ ಸಂಚಾಲಕಿ ವಂ. ಪ್ರಶಾಂತಿ ಬಿ.ಎಸ್., ಕಾರ್ಯಕ್ರಮ ಪ್ರಾಯೋಜಕರಾದ ಸುನೀತಾ ದಲ್ಮೆದಾ, ಡಾ. ಶ್ರೀಪ್ರಕಾಶ್, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ರಾಮಚಂದ್ರ

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾದವರಿಗೆ ಅಭಿನಂದನೆ Read More »

ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ಕನ್ನಡ ಭಾಷಾ ರಸಪ್ರಶ್ನೆ

ಪುತ್ತೂರು: ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಜಂಟಿ ಆಶ್ರಯದಲ್ಲಿ ಭಾರತೀಯ ಭಾಷಾ ಉತ್ಸವದ ಅಂಗವಾಗಿ ಕನ್ನಡ ಭಾಷಾ ರಸಪ್ರಶ್ನೆ ಕಾರ್ಯಕ್ರಮ ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ರಂಗ ಕಲಾವಿದ  ರಂಗಯ್ಯ ಬಳ್ಳಾಲ್ ಕೆದಂಬಾಡಿ ಬೀಡು ಅವರು ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಏರ್ಪಡಿಸಿದ್ದರು. ಒಂದನೇ ತರಗತಿಯಿಂದ 7ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ರಸಪ್ರಶ್ನೆ ಏರ್ಪಡಿಸಿ, ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು.

ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ಕನ್ನಡ ಭಾಷಾ ರಸಪ್ರಶ್ನೆ Read More »

ವಿಜ್ಞಾನದಿಂದ ಬದುಕು ಸುಲಲಿತ | ವಿಜ್ಞಾನ ರಶ್ಮಿ ಉದ್ಘಾಟಿಸಿ ಸವಣೂರು ಸೀತಾರಾಮ ರೈ

ಪುತ್ತೂರು: ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ 2023ನೇ ಸಾಲಿನ ಗ್ರಾಮೀಣ ವಿಜ್ಞಾನ ಮೇಳವಾದ ವಿಜ್ಞಾನ ರಶ್ಮಿ ಜರುಗಿತು. ಸಂಸ್ಥೆಯ ಸಂಚಾಲಕ ಸವಣೂರು ಸೀತಾರಾಮ ರೈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜೀವನವೇ ಒಂದು ವಿಜ್ಞಾನ. ವಿಜ್ಞಾನವನ್ನು ಸಮರ್ಪಕವಾಗಿ ತಿಳಿದುಕೊಂಡಾಗ ಬದುಕು ಸುಲಲಿತವಾಗುತ್ತದೆ. ಆದ್ದರಿಂದ ವಿಜ್ಞಾನವನ್ನು ಹೆಚ್ಚು ಅಧ್ಯಯನ ಮಾಡಬೇಕು ಎಂದು ಹೇಳಿದರು. ಮುಖ್ಯ ಅತಿಥಿಯಾಗಿದ್ದ ಭಕ್ತಕೋಡಿಯ ಎಸ್.ಜಿ.ಎಂ. ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಮೋಹನ್ ಕುಮಾರ್ ಮಾತನಾಡಿ, ವಿದ್ಯಾರಶ್ಮಿಯ ಸಾರ್ವಜನಿಕ ಕಾಳಜಿ ಅಭಿನಂದನೀಯ. ಸಂಸ್ಥೆಯ ಬಹುಮುಖಿ ಕಾರ್ಯಚಟುಟಿಕೆಗಳು ಗ್ರಾಮೀಣ ಭಾಗದ ಮಕ್ಕಳಿಗೆ ಒಂದು

ವಿಜ್ಞಾನದಿಂದ ಬದುಕು ಸುಲಲಿತ | ವಿಜ್ಞಾನ ರಶ್ಮಿ ಉದ್ಘಾಟಿಸಿ ಸವಣೂರು ಸೀತಾರಾಮ ರೈ Read More »

ಡಿ. 9: ವಿದ್ಯಾಸರಸ್ವತಿ ಮಂದಿರದ ಕ್ರೀಡಾಕೂಟ, ಕ್ರೀಡಾ ಕೊಠಡಿ ಉದ್ಘಾಟನೆ

ಪುತ್ತೂರು: ನರಿಮೊಗರು ಸರಸ್ವತಿ ವಿದ್ಯಾ ಮಂದಿರದ ವಾರ್ಷಿಕ ಕ್ರೀಡಾಕೂಟ ಹಾಗೂ ನೂತನ ಕ್ರೀಡಾ ಕೊಠಡಿ ಉದ್ಘಾಟನಾ ಸಮಾರಂಭ ಡಿ. 9ರ ಶನಿವಾರ ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ. ಉದ್ಯಮಿ ಸಂತೋಷ್ ಕುಮಾರ್ ಕೈಕಾರ ಕ್ರೀಡಾಕೂಟ ಉದ್ಘಾಟಿಸಲಿದ್ದು, ಪುಂಡಿಕಾಯಿ ಪುರೋಹಿತರಾದ ಕೃಷ್ಣ ಶಗ್ರಿತ್ತಾಯ ಕ್ರೀಡಾ ಕೊಠಡಿಯನ್ನು ಉದ್ಘಾಟಿಸುವರು. ವಿದ್ಯಾ ಮಂದಿರದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಶಿವನಾಥ ರೈ ಮೇಗಿನಗುತ್ತು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

ಡಿ. 9: ವಿದ್ಯಾಸರಸ್ವತಿ ಮಂದಿರದ ಕ್ರೀಡಾಕೂಟ, ಕ್ರೀಡಾ ಕೊಠಡಿ ಉದ್ಘಾಟನೆ Read More »

error: Content is protected !!
Scroll to Top