ಕ್ಯಾಂಪಸ್‌

ಮಂಗಳೂರು ವಿವಿ ಮಂಗಳ ಸಭಾಂಗಣದ ಗಣೇಶ ಚತುರ್ಥಿ ಗೊಂದಲಕ್ಕೆ ಮಂಗಳ!

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಗಣೇಶೋತ್ಸವ ವಿವಾದ ಸುಖಾಂತ್ಯ ಕಂಡಿದೆ. ವಿವಿಯ ಮಂಗಳ ಸಭಾಂಗಣದಲ್ಲಿ ಈ ಬಾರಿಯ ಗಣೇಶ ಚತುರ್ಥಿಯನ್ನು ನಡೆಸಲು ಆಡಳಿತ ಮಂಡಳಿ ತೀರ್ಮಾನಿಸಿದೆ ಎಂದು ಕುಲಪತಿಗಳಾದ ಪ್ರೊ. ಜಯರಾಜ್ ಅಮಿನ್ ಹೇಳಿಕೆ ನೀಡಿದ್ದಾರೆ.ಈ ಹಿಂದಿನ ವರ್ಷಗಳಲ್ಲಿ ವಿಶ್ವವಿದ್ಯಾಲಯದ ಪುರುಷರ ಹಾಸ್ಟೆಲ್​ನಲ್ಲಿ ಗಣೇಶೋತ್ಸವವವನ್ನು ಆಚರಣೆ ಮಾಡಲಾಗುತ್ತಿತ್ತು. ಈ ಬಾರಿ ಮಂಗಳಾ ಸಭಾಂಗಣದಲ್ಲಿ ಗಣೇಶ ಚತುರ್ಥಿ ಆಚರಣೆ ಮಾಡಲು ಯೋಜನೆ ರೂಪಿಸಿದಾಗ ಇದಕ್ಕೆ ವಿರೋಧ ವ್ಯಕ್ತವಾಗಿ ಅವಕಾಶ ನೀಡಲ್ಲ ಎಂದು ಕುಲಪತಿಗಳು ಹೇಳಿದ್ದರು.ಇದು ತೀವ್ರ ಆಕ್ರೋಶಕ್ಕೆ ಮತ್ತು ಅಸಮಾಧಾನಕ್ಕೆ […]

ಮಂಗಳೂರು ವಿವಿ ಮಂಗಳ ಸಭಾಂಗಣದ ಗಣೇಶ ಚತುರ್ಥಿ ಗೊಂದಲಕ್ಕೆ ಮಂಗಳ! Read More »

ರಾಷ್ಟ್ರಪ್ರೇಮ, ಸೇವಾಭಾವನೆಯನ್ನು ಬೆಳೆಸುವುದು ಎನ್.ಎಸ್.ಎಸ್. | ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಬಿರದ ಸಮಾರೋಪದಲ್ಲಿ ವಿಜಯನಾರಾಯಣ ಕೆ.ಎಂ.

ಪುತ್ತೂರು: ಕಹಿ ಅನುಭವಗಳನ್ನು ಮರೆತು, ಸಿಹಿ ಅನುಭವಗಳನ್ನು ಮೆಲುಕು ಹಾಕುತ್ತಾ ಸಾಗುವುದೇ ಜೀವನ. ಅಂತಹ ಸಿಹಿ-ಕಹಿ ಅನುಭವ‌ಗಳ ಸಮ್ಮಿಲನವೇ ಎನ್‌.ಎಸ್‌.ಎಸ್‌ನ ವಾರ್ಷಿಕ ವಿಶೇಷ ಶಿಬಿರ ಎಂದು ನ್ಯಾಯವಾದಿ ಅಶೋಕ್ ಅರಿಗ ಬಾರಿಕೆ ಹೇಳಿದರು. ಅವರು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಸಮಾರೋಪ ಭಾಷಣ ಮಾಡಿದರು. ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಗಳಿಂದ ಗ್ರಾಮ ಜಾಗೃತಿ ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಸಾಮಾಜಿಕ ಜವಾಬ್ದಾರಿಯನ್ನು ಅರಿಯುವುದರ ಜೊತೆಗೆ ಗ್ರಾಮದ ಜನರಲ್ಲಿ

ರಾಷ್ಟ್ರಪ್ರೇಮ, ಸೇವಾಭಾವನೆಯನ್ನು ಬೆಳೆಸುವುದು ಎನ್.ಎಸ್.ಎಸ್. | ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಬಿರದ ಸಮಾರೋಪದಲ್ಲಿ ವಿಜಯನಾರಾಯಣ ಕೆ.ಎಂ. Read More »

ಕ್ರೀಡಾ ಮನೋಭಾವ ವ್ಯಕ್ತಿಯ ವ್ಯಕ್ತಿತ್ವ ಅರಳಿಸುತ್ತದೆ | ಜಿಲ್ಲಾ ಪ್ರೌಢ ವಿಭಾಗದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಡಾ. ಕೃಷ್ಣ ಭಟ್ ಕೊಂಕೋಡಿ | ಬಾಲಕರ ವಿಭಾಗದಲ್ಲಿ ಶ್ರೀ ರಾಮಕುಂಜೆಶ್ವರ ಪ್ರೌಢಶಾಲೆ ಪ್ರಥಮ, ಬಾಲಕಿಯರ ವಿಭಾಗದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಪ್ರಥಮ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಛೇರಿ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಹಾಗೂ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಸಹಯೋಗದಲ್ಲಿ ಪ್ರೌಢಶಾಲಾ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ  ಒಳಾಂಗಣ ಕ್ರೀಡಾಂಗಣದಲ್ಲಿ ಜರುಗಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೃಷ್ಣ ಭಟ್ ಕೊಂಕೋಡಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಅನ್ಯಾನ್ಯ ಕಾರ್ಯಕ್ರಮಗಳಿಗೆ ವಿವೇಕಾನಂದ ವಿದ್ಯಾಸಂಸ್ಥೆಗಳ ಸಹಾಯ ಸದಾ ಇದ್ದು ಇಂದು ನಡೆಯುತ್ತಿರುವ ಪಂದ್ಯಾಟವು

ಕ್ರೀಡಾ ಮನೋಭಾವ ವ್ಯಕ್ತಿಯ ವ್ಯಕ್ತಿತ್ವ ಅರಳಿಸುತ್ತದೆ | ಜಿಲ್ಲಾ ಪ್ರೌಢ ವಿಭಾಗದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಡಾ. ಕೃಷ್ಣ ಭಟ್ ಕೊಂಕೋಡಿ | ಬಾಲಕರ ವಿಭಾಗದಲ್ಲಿ ಶ್ರೀ ರಾಮಕುಂಜೆಶ್ವರ ಪ್ರೌಢಶಾಲೆ ಪ್ರಥಮ, ಬಾಲಕಿಯರ ವಿಭಾಗದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಪ್ರಥಮ Read More »

ತ್ರೋಬಾಲ್ ಪಂದ್ಯಾಟ: ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

ಪುತ್ತೂರು: ವಿದ್ಯಾಭಾರತಿ ಕರ್ನಾಟಕ ಮತ್ತು ಎಲಿಮಲೆ ಜ್ಞಾನದೀಪ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ  ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಬೆಂಗಳೂರಿನಲ್ಲಿ ನಡೆಯಲಿರುವ  ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದೆ. ಬಾಲಕರ ವಿಭಾಗವನ್ನು ಕಾಲೇಜಿನ ವಿದ್ಯಾರ್ಥಿಗಳಾದ ಶರತ್ ಶೆಟ್ಟಿ, ಮೋಕ್ಷಿತ್ ಪಿ ಶೆಟ್ಟಿ, ಕೌಶಿಕ್, ಪ್ರಜ್ವಲ್, ಗಗನ್, ಪ್ರಜ್ವಲ್, ಶಮಿತ್ ಪ್ರಸಾದ್ ಪಿ, ಸುಜಿತ್, ರೋಶಿತ್ ಆರ್, ಲಕ್ಷ್ಮೀದಾಸ್ ಎನ್,

ತ್ರೋಬಾಲ್ ಪಂದ್ಯಾಟ: ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ Read More »

ಮಕ್ಕಳ ಕಲಿಕೆಯಲ್ಲಿ ಶಿಕ್ಷಕರಷ್ಟೇ ಜವಾಬ್ದಾರಿ ಪೋಷಕರಿಗಿದೆ | ಮೇನಾಲ ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ವಿವೇಕ ಕೊಠಡಿ ಉದ್ಘಾಟಿಸಿ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಶಾಲೆಗೆ ಮಕ್ಕಳನ್ನು ಕಳುಹಿಸಿದ ಮಾತ್ರಕ್ಕೆ ಪೋಷಕರ ಜವಾಬ್ದಾರಿ ಕೊನೆಗೊಳ್ಳುವುದಿಲ್ಲ. ಮಕ್ಕಳ ಕಲಿಕೆಯಲ್ಲಿ ಶಿಕ್ಷಕರಷ್ಟೇ ಜವಾಬ್ದಾರಿ ಪೋಷಕರಿಗೂ ಇದೆ ಎಂದು ಶಾಸಕ ಅಶೋಕ್ ರೈ ಹೇಳಿದರು. ನೆಟ್ಟಣಿಗೆ ಮುಡ್ನೂರು ಗ್ರಾಮದ ಮೇನಾಲ ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ವಿವೇಕ ಕೊಠಡಿ ಉದ್ಘಾಟಿಸಿ ಅವರು ಮಾತನಾಡಿದರು. ನಾವು ಮಕ್ಕಳಿಗಾಗಿ ಎಲ್ಲವನ್ನೂ ತ್ಯಾಗ ಮಾಡುತ್ತೇವೆ, ಸಹಿಸಿಕೊಳ್ಳುತ್ತೇವೆ. ಆದರೆ ಅವರ ವಿದ್ಯಾಭ್ಯಾಸದ ಕಡೆ ಗಮನಕೊಡುವುದರಲ್ಲಿ ಸ್ವಲ್ಪ ಹಿಂದೆ ಇದ್ದೇವೆ. ಶಾಲೆಗೆ ಹೋದ ಮಗು ಕಲಿಯುತ್ತಿದೆಯೇ ಎಂಬುದನ್ನು ನಾವು ತಿಳಿದುಕೊಳ್ಳಬೇಕು. ಶಾಲೆಗೆ ಭೇಟಿ ಮಾಡಿ

ಮಕ್ಕಳ ಕಲಿಕೆಯಲ್ಲಿ ಶಿಕ್ಷಕರಷ್ಟೇ ಜವಾಬ್ದಾರಿ ಪೋಷಕರಿಗಿದೆ | ಮೇನಾಲ ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ವಿವೇಕ ಕೊಠಡಿ ಉದ್ಘಾಟಿಸಿ ಶಾಸಕ ಅಶೋಕ್ ಕುಮಾರ್ ರೈ Read More »

ಪರಿಸ್ಥಿತಿಯನ್ನು ಅರ್ಥೈಸಿಕೊಂಡರೆ ಜೀವನದಲ್ಲಿ ಯಶಸ್ಸು | ಅಕ್ಷಯ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟಿಸಿ ಶೇಖರ್ ರೈ ಕೆ.

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಪ್ಯ ಅಕ್ಷಯ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿದ ರಾಮಚಂದ್ರ ಪಿಯು ಕಾಲೇಜಿನ ಪ್ರಾಂಶುಪಾಲ ಶೇಖರ್ ರೈ ಕೆ., ಹುಟ್ಟುತ್ತಾ ಯಾರೂ ನಾಯಕನಾಗುವುದಿಲ್ಲ. ಪರಿಸ್ಥಿತಿ ಅವನನ್ನು ನಾಯಕನನ್ನಾಗಿ ಮಾಡುತ್ತದೆ. ಪರಿಸ್ಥಿತಿಯನ್ನು ಅರ್ಥೈಸಿಕೊಂಡು ನಡೆದರೆ ಜೀವನದಲ್ಲಿ ಯಶಸ್ಸು ಗಳಿಸಬಹುದು ಎಂದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಸಂಚಾಲಕ ಜಯಂತ ನಡುಬೈಲು ಮಾತನಾಡಿ, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ಶೈಕ್ಷಣಿಕ

ಪರಿಸ್ಥಿತಿಯನ್ನು ಅರ್ಥೈಸಿಕೊಂಡರೆ ಜೀವನದಲ್ಲಿ ಯಶಸ್ಸು | ಅಕ್ಷಯ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟಿಸಿ ಶೇಖರ್ ರೈ ಕೆ. Read More »

ಅಗಲಿದ ಸುಧಾಕರ ಶೆಟ್ಟಿಯವರಿಗೆ ಅಂಬಿಕಾದಲ್ಲಿ ನುಡಿನಮನ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ, ಸಾಮಾಜಿಕ ಹಾಗೂ ಧಾರ್ಮಿಕ ಕೆಲಸಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದ ಎನ್. ಸುಧಾಕರ ಶೆಟ್ಟಿಯವರ ನಿಧನದಿಂದ ಅಪಾರ ನೋವುಂಟಾಗಿದೆ. ಅಂಬಿಕಾ ವಿದ್ಯಾಲಯ ಪ್ರಾರಂಭವಾಗುವಂದಿನಿಂದ ಅವರ ಸಹಕಾರ ಅವಿಸ್ಮರಣೀಯ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿ ಸಿಗಲಿ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ತಿಳಿಸಿದ್ದಾರೆ. ಅವರು ಅಗಲಿದ ಎನ್. ಸುಧಾಕರ ಶೆಟ್ಟಿಯವರಿಗೆ ಅಂಬಿಕಾ ವಿದ್ಯಾಲಯ ನೆಲ್ಲಿಕಟ್ಟೆಯಲ್ಲಿ ನುಡಿನಮನ ಸಲ್ಲಿಸಿ

ಅಗಲಿದ ಸುಧಾಕರ ಶೆಟ್ಟಿಯವರಿಗೆ ಅಂಬಿಕಾದಲ್ಲಿ ನುಡಿನಮನ Read More »

ಪುತ್ತೂರು ಶ್ರೀ ಸತ್ಯಸಾಯಿ ಸೇವಾ ಸಮಿತಿ ಹಾಗೂ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಆಧ್ಯಾತ್ಮಿಕ ಶಿಕ್ಷಣ ಶಿಬಿರ

ಸವಣೂರು : ಪುತ್ತೂರು ಶ್ರೀ ಸತ್ಯಸಾಯಿ ಸೇವಾ ಸಮಿತಿ ಹಾಗೂ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಭಗವಾನ್ ಶ್ರೀಸತ್ಯಸಾಯಿ ಬಾಬಾರವರ ದಿವ್ಯ ಅನುಗ್ರಹದೊಂದಿಗೆ ವಿದ್ಯಾರಶ್ಮಿ ಪದವಿ ಕಾಲೇಜಿನ ವಿದ್ಯಾಸಿಂಚನ ಸಭಾಂಗಣದಲ್ಲಿ ಎರಡು ದಿನಗಳ ಆಧ್ಯಾತ್ಮಿಕ ಶಿಕ್ಷಣ ಶಿಬಿರ ನಡೆಯಿತು. ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ  ಅಶ್ವಿನ್ ಎಲ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳ ವೈಯಕ್ತಿಕ ಬೆಳವಣಿಗೆಗೆ ಆಧ್ಯಾತ್ಮಿಕ ಶಿಕ್ಷಣವು ಪೂರಕವಾದದ್ದು ಇದು ನಮ್ಮನ್ನು ಸನ್ಮಾರ್ಗದ ಕಡೆಗೆ ಕೊಂಡೊಯ್ಯುತ್ತದೆ ಎಂದರು. ಸತ್ಯಸಾಯಿ

ಪುತ್ತೂರು ಶ್ರೀ ಸತ್ಯಸಾಯಿ ಸೇವಾ ಸಮಿತಿ ಹಾಗೂ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಆಧ್ಯಾತ್ಮಿಕ ಶಿಕ್ಷಣ ಶಿಬಿರ Read More »

ಪುತ್ತೂರು ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಫುಟ್ಬಾಲ್ ಪಂದ್ಯಾಟ ಉದ್ಘಾಟನೆ

ಪುತ್ತೂರು: ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ಫುಟ್ಬಾಲ್ ಪಂದ್ಯಾಟ ಕಬಕ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಕಬಕ ಗ್ರಾಪಂ ಅಧ್ಯಕ್ಷೆ ಸುಶೀಲಾ ಪಂದ್ಯಾಟ ಉದ್ಘಾಟಿಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎಂ.ಪಿ. ಅಬ್ಬಾಸ್ ಅಧ್ಯಕ್ಷತೆ ವಹಿಸಿದ್ದರು. ಕಬಕ ಗ್ರಾಪಂ ಉಪಾಧ್ಯಕ್ಷರು, ಸದಸ್ಯರು, ತಾಲೂಕು ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ವಿಷ್ಣುಪ್ರಸಾದ್ ಸಿ, ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಬ್ರಾಹಂ ಮತ್ತಿತರರು ಉಪಸ್ಥಿತರಿದ್ದರು. ಶಾಲಾ ಮುಖ್ಯಶಿಕ್ಷಕಿ ಸುರೇಖಾ ಸ್ವಾಗತಿಸಿದರು. ಶಿಕ್ಷಕಿ ಸುಮಿತ್ರಾ ವಂದಿಸಿದರು. ಶಿಕ್ಷಕಿ

ಪುತ್ತೂರು ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಫುಟ್ಬಾಲ್ ಪಂದ್ಯಾಟ ಉದ್ಘಾಟನೆ Read More »

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ನರಿಮೊಗರು ಸರಸ್ವತಿ ವಿದ್ಯಾಮಂದಿರಕ್ಕೆ ಪ್ರಶಸ್ತಿ

ಪುತ್ತೂರು: ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರದ 10ನೇ ತರಗತಿಯ ವಿದ್ಯಾರ್ಥಿಗಳಾದ ಮೋಕ್ಷಿತ್ ದ್ವಿತೀಯ ಸ್ಥಾನ ಮತ್ತು ವಿಸ್ಮಯ್ ತೃತೀಯ ಸ್ಥಾನ ಪಡೆದಿದ್ದಾರೆ.ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ದೇರಳಕಟ್ಟೆಯಲ್ಲಿ ಸ್ಪರ್ಧೆ ನಡೆದಿತ್ತು.ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ನರಿಮೊಗರು ಸರಸ್ವತಿ ವಿದ್ಯಾಮಂದಿರಕ್ಕೆ ಪ್ರಶಸ್ತಿ Read More »

error: Content is protected !!
Scroll to Top